ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಕಳೆದ ವಾರವಷ್ಟೇ ರೆನಾಲ್ಟ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಟ್ರೈಬರ್ ಎಂಟ್ರಿ ಲೆವಲ್ ಎಂಪಿವಿ ಆವೃತ್ತಿಯನ್ನು ಬಿಡುಗಡೆ ಮಾಡಿದ್ದು, ಹೊಸ ಕಾರಿನಲ್ಲಿ ಶೀಘ್ರದಲ್ಲೇ ಆಟೋಮ್ಯಾಟಿಕ್ ವರ್ಷನ್ ಕೂಡಾ ಖರೀದಿ ಲಭ್ಯವಾಗುವ ಕುರಿತು ಸುಳಿವು ಸಿಕ್ಕಿದೆ.

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಟ್ರೈಬರ್ ಎಂಪಿವಿ ಕಾರಿನಲ್ಲಿ ಸದ್ಯ 1-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಮ್ಯಾನುವಲ್ ಆವೃತ್ತಿಯನ್ನು ಬಿಡಗಡೆ ಮಾಡಲಾಗಿದ್ದು, ಹೊಸ ಕಾರು ಖರೀದಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಆಟೋಮ್ಯಾಟಿಕ್ ಮಾದರಿಯ ಖರೀದಿಗೆ ಆಸಕ್ತಿ ತೋರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಟರ್ಬೋ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಸೌಲಭ್ಯವನ್ನು ಆಯ್ಕೆಯಾಗಿ ನೀಡಲು ಸಜ್ಜುಗೊಳ್ಳುತ್ತಿದೆ.

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಮಾಹಿತಿಗಳ ಪ್ರಕಾರ, ಟ್ರೈಬರ್ ಎಎಂಟಿ ಮಾದರಿಯು ಕ್ವಿಡ್ ಫೇಸ್‌ಲಿಫ್ಟ್ ಬಿಡುಗಡೆಯ ನಂತರವಷ್ಟೇ ಮಾರುಕಟ್ಟೆಗೆ ಪ್ರವೇಶಿಸಲಿದ್ದು, ಮುಂಬರುವ ನವೆಂಬರ್ ಅಥವಾ ಡಿಸೆಂಬರ್ ಹೊತ್ತಿಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಪ್ರೇರಿತ ಟ್ರೈಬರ್ ಖರೀದಿ ಮಾಡಬಹುದಾಗಿದೆ.

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಇನ್ನು ವ್ಯಯಕ್ತಿಕ ಕಾರು ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ಅಗ್ಗದ ಬೆಲೆಯಲ್ಲಿ ಉತ್ತಮ ಫೀಚರ್ಸ್ ಸೌಲಭ್ಯವುಳ್ಳ ಹೊಸ ಎಂಪಿವಿ ಅಭಿವೃದ್ಧಿಗೊಳಿಸಲು ಯತ್ನಿಸಿರುವ ರೆನಾಲ್ಟ್ ಸಂಸ್ಛೆಯು ಟ್ರೈಬರ್ ಕಾರನ್ನು ಅಭಿವೃದ್ದಿಗೊಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿದೆ.

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ರೆನಾಲ್ಟ್ ಸಂಸ್ಥೆಯು ಫೇಸ್‌ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವನ್ನು ಸಂಪೂರ್ಣ ಬದಲಾವಣೆಗೊಳಿಸಿದ್ದು, ಫೇಸ್‌ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಟ್ರೈಬರ್ ಎಂಪಿವಿ ಕಾರು ಕೂಡಾ ಹೊಸ ತಂತ್ರಜ್ಞಾನದಡಿಯಲ್ಲೇ ಅಭಿವೃದ್ಧಿಗೊಳಿಸಿದೆ. ಹೊಸ ಕಾರುಗಳ ಅಭಿವೃದ್ಧಿಗಾಗಿ ರೆನಾಲ್ಟ್ ಸಂಸ್ಥೆಯ ಸಿಎಂಎಫ್-ಎ ಪ್ಲಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಕ್ವಿಡ್ ಮಾದರಿಯಲ್ಲೇ ಇರುವ ಟ್ರೈಬರ್ ಕಾರಿನಲ್ಲಿ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ.

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಈ ಮೂಲಕ ಎಂಟ್ರಿ ಲೆವಲ್ ಕಾರುಗಳಲ್ಲಿ ವಿಭಿನ್ನ ಎನ್ನಿಸುವ ಹೊಸ ಕಾರು ತಾಂತ್ರಿಕವಾಗಿ ಬಲಿಷ್ಠವಾಗಿದ್ದು, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಸ್, ಪವರ್ ವಿಂಡೋ, ಕೀ ಲೆಸ್ ಎಂಟ್ರಿ, ಮೂರು ಸಾಲುಗಳಲ್ಲೂ ಎಸಿ ವೆಂಟ್ಸ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮೊಬೈಲ್ ಫೋನ್ ಚಾರ್ಜ್ ಸಾಕೆಟ್‌ ಮತ್ತು ರಿಯರ್ ವಾಷ್ ವೈಪರ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಟ್ರೈಬರ್ ವೈಶಿಷ್ಟ್ಯತೆಗಳು

ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

MOST READ: ಹೆಚ್ಚಿದ ಟ್ರಾಫಿಕ್ ದಟ್ಟಣೆ- ಬೆಂಗಳೂರಿನಲ್ಲಿ ವಾಹನಗಳ ಸರಾಸರಿ ವೇಗ ಎಷ್ಟು ಗೊತ್ತಾ?

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಇನ್ನು ಹೊಸ ಟ್ರೈಬರ್ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

MOST READ: ಇನ್ಮುಂದೆ ಪೆಟ್ರೋಲ್ ಎಂಜಿನ್‍‍ನಲ್ಲಿ ಮಾತ್ರ ಮಾರಾಟವಾಗುವ ಕಾರುಗಳಿವು

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಆಸನ ಸೌಲಭ್ಯ

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದು. ಹೀಗಾಗಿ ಮೂರನೇ ಸಾಲನ್ನು ಮಡಿಕೆ ಮಾಡಿದ್ದಲ್ಲಿ 625-ಲೀಟರ್‌ನಷ್ಟು ಸ್ಥಳಾವಕಾಶ ಮಾಡಿಕೊಳ್ಳಬಹುದಾಗಿದ್ದು, ಬೇಡವಾದಲ್ಲಿ 84-ಲೀಟರ್‌ನಷ್ಟು ಸ್ಥಳಾವಕಾಶ ಸಿಗಲಿದೆ.

MOST READ: ಮಾರುತಿ ಎರ್ಟಿಗಾ ಕಾರಿಗೆ ಪೈಪೋಟಿಯಾಗಿ ವಿನೂತನ ಎಂಪಿವಿ ಬಿಡುಗಡೆ ಮಾಡಲಿದೆ ಹ್ಯುಂಡೈ

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಸುರಕ್ಷಾ ಸೌಲಭ್ಯಗಳು

ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.

ಟ್ರೈಬರ್ ಎಂಪಿವಿಯಲ್ಲಿ ಎಎಂಟಿ ವರ್ಷನ್ ಬಿಡುಗಡೆ ಮಾಡಲಿದೆ ರೆನಾಲ್ಟ್

ಇದರಿಂದ ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ವೈಯಕ್ತಿಕ ಬಳಕೆಯ ಎಂಪಿವಿ ಕಾರು ಮಾದರಿಯಾಗಿ ಮಾರುಕಟ್ಟೆ ಪ್ರವೇಶಿಸಿರುವ ರೆನಾಲ್ಟ್ ಟ್ರೈಬರ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ದಟ್ಸನ್ ಗೊ ಪ್ಲಸ್ ಮತ್ತು ಮಾರುತಿ ಸುಜುಕಿ ಎರ್ಟಿಗಾ ಕಾರಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Renault Triber Automatic (AMT) India Launch Expected Early Next Year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X