Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ರೆನಾಲ್ಟ್ ಕಾರು ಮಾರಾಟದಲ್ಲಿ ಟ್ರೈಬರ್ ಎಂಪಿವಿಗೆ ಅಗ್ರಸ್ಥಾನ
ಆಕರ್ಷಕ ಬೆಲೆಗಳಲ್ಲಿ ಮಾರುಕಟ್ಟೆಗೆ ಲಗ್ಗೆಯಿಟ್ಟಿರುವ ಟ್ರೈಬರ್ ಎಂಪಿವಿ ಆವೃತ್ತಿಯು ರೆನಾಲ್ಟ್ ಕಾರು ಮಾರಾಟದಲ್ಲಿ ಅಗ್ರಸ್ಥಾನಕ್ಕೇರಿದ್ದು, ಕ್ವಿಡ್ ಮತ್ತು ಡಸ್ಟರ್ ಕಾರುಗಳನ್ನು ಮಾರಾಟ ಪ್ರಮಾಣದಲ್ಲಿ ಹಿಂದಿಕ್ಕಿದೆ. ಅಗಸ್ಟ್ ಅವಧಿಯಲ್ಲಿ 2,090 ಯುನಿಟ್ ಮಾರಾಟವಾಗುವ ಮೂಲಕ ಎಂಟ್ರಿ ಲೆವೆಲ್ ಎಂಪಿವಿ ಕಾರುಗಳಲ್ಲಿ ಉತ್ತಮ ಬೇಡಿಕೆ ದಾಖಲಿಸಿದೆ.

ವ್ಯಯಕ್ತಿಕ ಕಾರು ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ಅಗ್ಗದ ಬೆಲೆಯಲ್ಲಿ ಉತ್ತಮ ಫೀಚರ್ಸ್ ಸೌಲಭ್ಯವುಳ್ಳ ಹೊಸ ಎಂಪಿವಿ ಅಭಿವೃದ್ಧಿಗೊಳಿಸಲು ಯತ್ನಿಸಿರುವ ರೆನಾಲ್ಟ್ ಸಂಸ್ಛೆಯು ಟ್ರೈಬರ್ ಕಾರನ್ನು ಅಭಿವೃದ್ದಿಗೊಳಿಸುವಲ್ಲಿ ಯಶಸ್ವಿಯಾಗಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿದೆ.

ರೆನಾಲ್ಟ್ ಸಂಸ್ಥೆಯು ಫೇಸ್‌ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವನ್ನು ಸಂಪೂರ್ಣ ಬದಲಾವಣೆಗೊಳಿಸಿದ್ದು, ಫೇಸ್‌ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಟ್ರೈಬರ್ ಎಂಪಿವಿ ಕಾರು ಕೂಡಾ ಹೊಸ ತಂತ್ರಜ್ಞಾನದಡಿಯಲ್ಲೇ ಅಭಿವೃದ್ಧಿಗೊಳಿಸಿದೆ.

ಹೊಸ ಕಾರುಗಳ ಅಭಿವೃದ್ಧಿಗಾಗಿ ರೆನಾಲ್ಟ್ ಸಂಸ್ಥೆಯ ಸಿಎಂಎಫ್-ಎ ಪ್ಲಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಕ್ವಿಡ್ ಮಾದರಿಯಲ್ಲೇ ಇರುವ ಟ್ರೈಬರ್ ಕಾರಿನಲ್ಲಿ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ.

ಈ ಮೂಲಕ ಎಂಟ್ರಿ ಲೆವಲ್ ಕಾರುಗಳಲ್ಲಿ ವಿಭಿನ್ನ ಎನ್ನಿಸುವ ಹೊಸ ಕಾರು ತಾಂತ್ರಿಕವಾಗಿ ಬಲಿಷ್ಠವಾಗಿದ್ದು, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಸ್, ಪವರ್ ವಿಂಡೋ, ಕೀ ಲೆಸ್ ಎಂಟ್ರಿ, ಮೂರು ಸಾಲುಗಳಲ್ಲೂ ಎಸಿ ವೆಂಟ್ಸ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮೊಬೈಲ್ ಫೋನ್ ಚಾರ್ಜ್ ಸಾಕೆಟ್ ಮತ್ತು ರಿಯರ್ ವಾಷ್ ವೈಪರ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಟ್ರೈಬರ್ ವೈಶಿಷ್ಟ್ಯತೆಗಳು
ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌ಪ್ಲೇ, 8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

ಇನ್ನು ಹೊಸ ಟ್ರೈಬರ್ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

ಆಸನ ಸೌಲಭ್ಯ
7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದು. ಹೀಗಾಗಿ ಮೂರನೇ ಸಾಲನ್ನು ಮಡಿಕೆ ಮಾಡಿದ್ದಲ್ಲಿ 625-ಲೀಟರ್‌ನಷ್ಟು ಸ್ಥಳಾವಕಾಶ ಮಾಡಿಕೊಳ್ಳಬಹುದಾಗಿದ್ದು, ಬೇಡವಾದಲ್ಲಿ 84-ಲೀಟರ್‌ನಷ್ಟು ಸ್ಥಳಾವಕಾಶ ಸಿಗಲಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಎಂಜಿನ್ ಸಾಮರ್ಥ್ಯ
ಸದ್ಯಕ್ಕೆ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಟರ್ಬೋ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿದೆ.
MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಸುರಕ್ಷಾ ಸೌಲಭ್ಯಗಳು
ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.

ಇದರಿಂದ ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ವೈಯಕ್ತಿಕ ಬಳಕೆಯ ಎಂಪಿವಿ ಕಾರು ಮಾದರಿಯಾಗಿ ಮಾರುಕಟ್ಟೆ ಪ್ರವೇಶಿಸಿರುವ ರೆನಾಲ್ಟ್ ಟ್ರೈಬರ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ದಟ್ಸನ್ ಗೊ ಪ್ಲಸ್ ಮತ್ತು ಮಾರುತಿ ಸುಜುಕಿ ಎರ್ಟಿಗಾ ಕಾರಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.