Just In
Don't Miss!
- News
ಜನಸೇವಕ್ ಸಮಾವೇಶದಲ್ಲಿ ಅಮಿತ್ ಶಾ ಭಾಷಣ; ಮುಖ್ಯಾಂಶಗಳು
- Movies
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Sports
ಆಸಿಸ್ ಬೌಲರ್ಗಳಿಗೆ ಪಾಂಟಿಂಗ್ ಚಾಟಿ: ಶಾರ್ದೂಲ್- ಸುಂದರ್ ಆಟಕ್ಕೆ ಮೆಚ್ಚುಗೆ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೈ ಸ್ಪೀಡ್ನಲ್ಲಿ ರೋಡ್ ಟೆಸ್ಟಿಂಗ್ ನಡೆಸಿದ ರೆನಾಲ್ಟ್ ಟ್ರೈಬರ್
ರೆನಾಲ್ಟ್ ಬಹನೀರಿಕ್ಷಿತ ಟ್ರೈಬರ್ ಎಂಪಿವಿ ಆವೃತ್ತಿಯು ಮುಂದಿನ ತಿಂಗಳು ಅಗಸ್ಟ್ ಆರಂಭದಲ್ಲಿ ಬಿಡುಗಡೆಯಾಗುತ್ತಿದ್ದು, ಕೊನೆಯ ಹಂತದ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದೆ. ನಿನ್ನೆ ಕೂಡಾ ಟ್ರೈಬರ್ ಕಾರು ರೋಡ್ ಟೆಸ್ಟಿಂಗ್ ನಡೆಸಿದ್ದು, ಹೈ ಸ್ಪೀಡ್ನಲ್ಲಿ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದೆ.

ರೋಡ್ ಟೆಸ್ಟಿಂಗ್ನಲ್ಲಿ ಟ್ರೈಬರ್ ಕಾರು 150ಕಿ.ಮಿ ಟಾಪ್ ಸ್ಪೀಡ್ ತಲುಪಿದ್ದು, ರೋಡ್ ಟೆಸ್ಟಿಂಗ್ ವೇಳೆ ಮತ್ತೊಂದು ಕಾರಿನಲ್ಲಿ ಟ್ರೈಬರ್ ಚಾಲನಾ ವೈಖರಿಯ ಕುರಿತಾಗಿ ಮಾಹಿತಿ ಸಂಗ್ರಹಿಸಲಾಗಿದೆ. ಆದ್ರೆ ಇದು ಸಾರಿಗೆ ನಿಯಮಗಳಿಗೆ ವಿರುದ್ಧವಾಗಿದ್ದರೂ 1.0-ಲೀಟರ್ ಪೆಟ್ರೋಲ್ ಎಂಜಿನ್ನಲ್ಲಿ ಗರಿಷ್ಠ ಮಟ್ಟದ ಸ್ಪೀಡ್ ತುಲುಪಿರುವದು ಕಾರು ಮಾಲೀಕರಲ್ಲಿ ಕುತೂಹಲ ಕಾರಣವಾಗಿದೆ. ಹಾಗಾದ್ರೆ ಬಿಡುಗಡೆಯಾಗಲಿರುವ ಟ್ರೈಬರ್ ತಾಂತ್ರಿಕವಾಗಿ ಎಷ್ಟು ಬಲಿಷ್ಠವಾಗಿದೆ ಎನ್ನುವುದನ್ನು ಮುಂದೆ ತಿಳಿಯಿರಿ.

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಕಾರುಗಳಿಗೆ ವಿಶೇಷ ಬೇಡಿಕೆಯಿದ್ದು, ಕುಟುಂಬ ಸಮೇತರಾಗಿ ಪ್ರಯಾಣಿಸುವುದಕ್ಕಾಗಿ ಎಂಪಿವಿ ಕಾರುಗಳು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿಯೇ ವ್ಯಯಕ್ತಿಕ ಕಾರು ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ಅಗ್ಗದ ಬೆಲೆಯಲ್ಲಿ ಉತ್ತಮ ಫೀಚರ್ಸ್ ಸೌಲಭ್ಯವುಳ್ಳ ಹೊಸ ಎಂಪಿವಿ ಅಭಿವೃದ್ಧಿಗೊಳಿಸಲು ಯತ್ನಿಸಿರುವ ರೆನಾಲ್ಟ್ ಸಂಸ್ಛೆಯು ಟ್ರೈಬರ್ ಎನ್ನುವ ಹೊಸ ಕಾರು ಮಾದರಿಯನ್ನು ರಸ್ತೆಗಿಳಿಸುತ್ತಿದೆ.

ಹೊಸ ಟ್ರೈಬರ್ ಕಾರು ತಾಂತ್ರಿಕ ಸೌಲಭ್ಯಗಳ ಜೋಡಣೆಗೆ ಅನುಗುಣವಾಗಿ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.4.4 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಆವೃತ್ತಿಯು ರೂ. 5.8 ಲಕ್ಷ ಬೆಲೆ ಪಡೆದುಕೊಳ್ಳಲಿದೆ ಎಂದು ಹೇಳಲಾಗಿದ್ದು, ಮೂರನೇ ಸಾಲಿನ ಆಸನ ವ್ಯವಸ್ಥೆಯನ್ನು ಖರೀದಿಸುವ ಆಸಕ್ತ ಗ್ರಾಹಕರು ಹೆಚ್ಚುವರಿ ರೂ.6 ಸಾವಿರ ಪಾವತಿಸಬೇಕಂತೆ.

ಸದ್ಯ ರೆನಾಲ್ಟ್ ಫೇಸ್ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವು ಸಂಪೂರ್ಣ ಬದಲಾವಣೆಗೊಂಡಿದ್ದು, ಫೇಸ್ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಅನಾವರಣಗೊಳಿಸಲಾದ ಟ್ರೈಬರ್ ಎಂಪಿವಿ ಕಾರು ಕೂಡಾ ಹೊಸ ತಂತ್ರಜ್ಞಾನದಡಿಯಲ್ಲೇ ಅಭಿವೃದ್ಧಿ ಹೊಂದಿದೆ. ಹೊಸ ಕಾರುಗಳ ಅಭಿವೃದ್ಧಿಗಾಗಿ ರೆನಾಲ್ಟ್ ಸಿಎಂಎಫ್-ಎ ಪ್ಲಾಟ್ಫಾರ್ಮ್ ಬಳಕೆ ಮಾಡುತ್ತಿದ್ದು, ಕ್ವಿಡ್ ಮಾದರಿಯಲ್ಲೇ ಇರುವ ಟ್ರೈಬರ್ ಕಾರಿನಲ್ಲಿ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ.

ಟ್ರೈಬರ್ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ನಿರ್ಮಾಣ ಮಾಡಿಕೊಳ್ಳಬಹುದು. ಮೂರನೇ ಸಾಲನ್ನು ಮಡಿಕೆ ಮಾಡಿದ್ದಲ್ಲಿ 625-ಲೀಟರ್ನಷ್ಟು ಸ್ಥಳಾವಕಾಶ ಮಾಡಿಕೊಳ್ಳಬಹುದಾಗಿದ್ದು, ಬೇಡವಾದಲ್ಲಿ 84-ಲೀಟರ್ನಷ್ಟು ಸ್ಥಳಾವಕಾಶ ಸಿಗಲಿದೆ.
ಎಂಜಿನ್ ಸಾಮರ್ಥ್ಯ
1.0-ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಸಹಾಯದೊಂದಿಗೆ 71-ಬಿಎಚ್ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಬಿಡುಗಡೆಯಾದ ನಂತರವಷ್ಟೇ ಗ್ರಾಹಕರ ಬೇಡಿಕೆ ಮೇರೆಗೆ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯನ್ನು ನೀಡಲಿದೆ. ಹೀಗಿರುವಾಗ ಟ್ರೈಬರ್ 150ಕಿ.ಮಿ ಟಾಪ್ ಸ್ಪೀಡ್ ಅನ್ನು ಅತಿ ಸುಲಭ ಪಡೆದುಕೊಳ್ಳುತ್ತದೆ.

ಸುರಕ್ಷಾ ಸೌಲಭ್ಯಗಳು
ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್ಬ್ಯಾಗ್ಗಳು, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್, ಕೀ ಲೆಸ್ ಎಂಟ್ರಿ, ಮೊಬೈಲ್ ಫೋನ್ ಚಾರ್ಜ್ ಸಾಕೆಟ್ಗಳನ್ನು ನೀಡಲಾಗಿದೆ.

ಈ ಮೂಲಕ ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ವೈಯಕ್ತಿಕ ಬಳಕೆಯ ಎಂಪಿವಿ ಕಾರು ಮಾದರಿಯಾಗಿ ಹೊರಹೊಮ್ಮಿರುವ ರೆಲಾನ್ಟ್ ಟ್ರೈಬರ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ವ್ಯಾಗನ್ಆರ್, ಸ್ವಿಫ್ಟ್, ಹ್ಯುಂಡೈ ಗ್ರಾಂಡ್ ಐ10 ಮತ್ತು ಎಂಪಿವಿ ಮಾದರಿಯಾದ ಎರ್ಟಿಗಾ ಕಾರಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.