ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ರೆನಾಲ್ಟ್ ಇಂಡಿಯಾ ಸಂಸ್ಥೆಯು ಇದೇ ಮೊದಲ ಬಾರಿಗೆ ಎಂಟ್ರಿ ಲೆವಲ್ ಎಂಪಿವಿ ಆವೃತ್ತಿಯಲ್ಲಿ ಟ್ರೈಬರ್ ಕಾರನ್ನು ಅಭಿವೃದ್ಧಿಗೊಳಿಸಿ ಬಿಡುಗಡೆ ಮಾಡಿದ್ದು, ಹೊಸ ಕಾರು ಸಬ್ 4 ಮೀಟರ್ ವಿನ್ಯಾಸದೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಸದ್ಯ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಕಾರುಗಳಿಗೆ ದೇಶಿಯ ಮಾರುಕಟ್ಟೆಯಲ್ಲಿ ವಿಶೇಷ ಬೇಡಿಕೆಯಿದ್ದು, ಕುಟುಂಬ ಸಮೇತರಾಗಿ ಪ್ರಯಾಣಿಸುವುದಕ್ಕಾಗಿ ಎಂಪಿವಿ ಕಾರುಗಳಿಗೆ ಹೆಚ್ಚು ಬೇಡಿಕೆ ಹರಿದುಬರುತ್ತಿದೆ. ಹೀಗಾಗಿಯೇ ವ್ಯಯಕ್ತಿಕ ಕಾರು ಬಳಕೆದಾರರನ್ನು ಗಮನದಲ್ಲಿಟ್ಟುಕೊಂಡು ಅಗ್ಗದ ಬೆಲೆಯಲ್ಲಿ ಉತ್ತಮ ಫೀಚರ್ಸ್ ಸೌಲಭ್ಯವುಳ್ಳ ಹೊಸ ಎಂಪಿವಿ ಅಭಿವೃದ್ಧಿಗೊಳಿಸಲು ಯತ್ನಿಸಿರುವ ರೆನಾಲ್ಟ್ ಸಂಸ್ಛೆಯು ಟ್ರೈಬರ್ ಕಾರನ್ನು ರಸ್ತೆಗಿಳಿಸಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಟ್ರೈಬರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಎಸ್ ಮತ್ತು ಎರ್‌ಎಕ್ಸ್‌ಜೆಡ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಟ್ರೈಬರ್ ವೆರಿಯೆಂಟ್‌ಗಳು ಮತ್ತು ಬೆಲೆ(ದೆಹಲಿ ಎಕ್ಸ್‌ಶೋರೂಂ ಪ್ರಕಾರ)

ವೆರಿಯೆಂಟ್ ಬೆಲೆ
ಆರ್‌ಎಕ್ಸ್‌ಇ ರೂ. 4.95 ಲಕ್ಷ
ಆರ್‌ಎಕ್ಸ್ಎಲ್ ರೂ. 5.49 ಲಕ್ಷ
ಆರ್‌‌ಎಕ್ಸ್‌ಟಿ ರೂ. 5.99 ಲಕ್ಷ
ಆರ್‌ಎಕ್ಸ್‌ಜೆಡ್ ರೂ. 6.49 ಲಕ್ಷ
ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ರೆನಾಲ್ಟ್ ಸಂಸ್ಥೆಯು ಫೇಸ್‌ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವನ್ನು ಸಂಪೂರ್ಣ ಬದಲಾವಣೆಗೊಳಿಸಿದ್ದು, ಫೇಸ್‌ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಟ್ರೈಬರ್ ಎಂಪಿವಿ ಕಾರು ಕೂಡಾ ಹೊಸ ತಂತ್ರಜ್ಞಾನದಡಿಯಲ್ಲೇ ಅಭಿವೃದ್ಧಿಗೊಳಿಸಿದೆ. ಹೊಸ ಕಾರುಗಳ ಅಭಿವೃದ್ಧಿಗಾಗಿ ರೆನಾಲ್ಟ್ ಸಂಸ್ಥೆಯ ಸಿಎಂಎಫ್-ಎ ಪ್ಲಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಕ್ವಿಡ್ ಮಾದರಿಯಲ್ಲೇ ಇರುವ ಟ್ರೈಬರ್ ಕಾರಿನಲ್ಲಿ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಈ ಮೂಲಕ ಎಂಟ್ರಿ ಲೆವಲ್ ಕಾರುಗಳಲ್ಲಿ ವಿಭಿನ್ನ ಎನ್ನಿಸುವ ಹೊಸ ಕಾರು ತಾಂತ್ರಿಕವಾಗಿ ಬಲಿಷ್ಠವಾಗಿದ್ದು, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಸ್, ಪವರ್ ವಿಂಡೋ, ಕೀ ಲೆಸ್ ಎಂಟ್ರಿ, ಮೂರು ಸಾಲುಗಳಲ್ಲೂ ಎಸಿ ವೆಂಟ್ಸ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮೊಬೈಲ್ ಫೋನ್ ಚಾರ್ಜ್ ಸಾಕೆಟ್‌ ಮತ್ತು ರಿಯರ್ ವಾಷ್ ವೈಪರ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಟ್ರೈಬರ್ ವೈಶಿಷ್ಟ್ಯತೆಗಳು

ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಇನ್ನು ಹೊಸ ಟ್ರೈಬರ್ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಆಸನ ಸೌಲಭ್ಯ

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದು. ಹೀಗಾಗಿ ಮೂರನೇ ಸಾಲನ್ನು ಮಡಿಕೆ ಮಾಡಿದ್ದಲ್ಲಿ 625-ಲೀಟರ್‌ನಷ್ಟು ಸ್ಥಳಾವಕಾಶ ಮಾಡಿಕೊಳ್ಳಬಹುದಾಗಿದ್ದು, ಬೇಡವಾದಲ್ಲಿ 84-ಲೀಟರ್‌ನಷ್ಟು ಸ್ಥಳಾವಕಾಶ ಸಿಗಲಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಕಾರಿನ ಉದ್ದಳತೆ ಮತ್ತು ತೂಕ

ಕಾರಿನ ಮೇಲಿನ ತೆರಿಗೆ ಹೊರೆ ತಗ್ಗಿಸುವ ಸಂಬಂಧ 4 ಮೀಟರ್‌ಗಿಂತಲೂ ಹೆಚ್ಚು ವಿಸ್ತರಣೆ ಮಾಡದಿರಲು ನಿರ್ಧರಿಸಿರುವ ರೆನಾಲ್ಟ್ ಸಂಸ್ಥೆಯು 3,990-ಎಂಎಂ ಉದ್ದ, 1,739-ಎಂಎಂ ಅಗಲ, 1,637-ಎಂಎಂ ಎತ್ತರ, 2,636-ಎಂಎಂ ವೀಲ್ಹ್‌ಬೆಸ್ ಮತ್ತು 182-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಒದಗಿಸಿದ್ದು, ಸಿಎಂಎಫ್-ಎ ಪ್ಲಾಟ್‌ಫಾರ್ಮ್ ಬಳಕೆಯಿಂದಾಗಿ ಹೊಸ ಟ್ರೈಬರ್ ಕಾರು 947 ಕೆಜಿ ತೂಕ ಪಡೆದುಕೊಂಡಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಎಂಜಿನ್ ಸಾಮರ್ಥ್ಯ

ಸದ್ಯಕ್ಕೆ 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಮುಂಬರುವ ದಿನಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಟರ್ಬೋ ಪೆಟ್ರೋಲ್ ಎಂಜಿನ್ ಜೊತೆಗೆ 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದಲಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಸುರಕ್ಷಾ ಸೌಲಭ್ಯಗಳು

ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.

ಮಾರುತಿ ಎರ್ಟಿಗಾ ಪೈಪೋಟಿ ರೆನಾಲ್ಟ್ ಟ್ರೈಬರ್ ಎಂಪಿವಿ ಬಿಡುಗಡೆ

ಇದರಿಂದ ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ವೈಯಕ್ತಿಕ ಬಳಕೆಯ ಎಂಪಿವಿ ಕಾರು ಮಾದರಿಯಾಗಿ ಮಾರುಕಟ್ಟೆ ಪ್ರವೇಶಿಸಿರುವ ರೆನಾಲ್ಟ್ ಟ್ರೈಬರ್ ಕಾರು ಸದ್ಯ ಮಾರುಕಟ್ಟೆಯಲ್ಲಿರುವ ದಟ್ಸನ್ ಗೊ ಪ್ಲಸ್ ಮತ್ತು ಮಾರುತಿ ಸುಜುಕಿ ಎರ್ಟಿಗಾ ಕಾರಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

Article Published On: Wednesday, August 28, 2019, 13:16 [IST]
English summary
All-New Renault Triber MPV Launched In India: Prices Start At Rs 4.95 Lakh.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+