ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ರೆನಾಲ್ಟ್ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಕಾರು ಮಾರಾಟ ನೀತಿಯನ್ನು ಬದಲಿಸಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವು ಹೊಸ ಕಾರುಗಳನ್ನು ಅಭಿವೃದ್ಧಿಗೊಳಿಸುತ್ತಿದೆ. ಇವುಗಳಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದ ಟ್ರೈಬರ್ ಎಂಪಿವಿ ಮಾದರಿಯು ಇಂದು ಅನಾವರಣಗೊಳಿಸಲಾಗಿದ್ದು, ಬಜೆಟ್ ಬೆಲೆಯಲ್ಲಿ ಪ್ರೀಮಿಯಂ ಸೌಲಭ್ಯಗಳನ್ನು ಪಡೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಕಾರುಗಳಿಗೆ ವಿಶೇಷ ಬೇಡಿಕೆಯಿದ್ದು, ಕುಟುಂಬ ಸಮೇತರಾಗಿ ಪ್ರಯಾಣಿಸುವುದಕ್ಕಾಗಿ ಎಂಪಿವಿ ಕಾರುಗಳ ಬಳಕೆ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿಯೇ ವ್ಯಯಕ್ತಿಕ ಕಾರು ಬಳಕೆದಾರರನ್ನು ಗಮನದಲ್ಲಿಟ್ಟು ಅಗ್ಗದ ಬೆಲೆಯಲ್ಲಿ ಉತ್ತಮ ಫೀಚರ್ಸ್ ಸೌಲಭ್ಯವುಳ್ಳ ಹೊಸ ಎಂಪಿವಿ ಅಭಿವೃದ್ಧಿಗೊಳಿಸಲು ಯತ್ನಿಸಿರುವ ರೆನಾಲ್ಟ್ ಸಂಸ್ಛೆಯು ಟ್ರೈಬರ್ ಎನ್ನುವ ಹೊಸ ಕಾರು ಮಾದರಿಯನ್ನು ರಸ್ತೆಗಿಳಿಸಿದೆ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಪ್ರಸ್ತುತ ಮಾರುಕಟ್ಟೆಯಲ್ಲಿ ಕ್ವಿಡ್, ಡಸ್ಟರ್, ಕ್ಯಾಚ್ಚರ್ ಮತ್ತು ಲೊಡ್ಜಿ ಕಾರುಗಳನ್ನು ಮಾರಾಟ ಮಾಡುತ್ತಿರುವ ರೆನಾಲ್ಟ್ ಸಂಸ್ಥೆಯು ಕ್ವಿಡ್ ಮತ್ತು ಡಸ್ಟರ್ ಹೊರತುಪಡಿಸಿ ಇನ್ನುಳಿದ ಕಾರುಗಳ ಮಾರಾಟದಲ್ಲಿ ಅಷ್ಟಾಗಿ ಯಶಸ್ಸು ಸಾಧಿಸಿಲ್ಲ. ಹೀಗಾಗಿ ಕಾರುಗಳ ವಿನ್ಯಾಸವನ್ನು ಬದಲಿಸುತ್ತಿರುವ ರೆನಾಲ್ಟ್ ಸಂಸ್ಥೆಯು ಫೇಸ್‌ಲಿಫ್ಟ್ ಆವೃತ್ತಿಗಳನ್ನು ಅಭಿವೃದ್ದಿಗೊಳಿಸುತ್ತಿದೆ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಹೀಗಾಗಿ ರೆನಾಲ್ಟ್ ಫೇಸ್‌ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವು ಸಂಪೂರ್ಣ ಬದಲಾವಣೆಗೊಂಡಿದ್ದು, ಫೇಸ್‌ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಅನಾವರಣಗೊಳಿಸಲಾದ ಟ್ರೈಬರ್ ಎಂಪಿವಿ ಕಾರು ಕೂಡಾ ಅಭಿವೃದ್ಧಿ ಹೊಂದಿದೆ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ರೆನಾಲ್ಟ್ ಸಂಸ್ಥೆಯು ಹೊಸ ಕಾರುಗಳ ಅಭಿವೃದ್ಧಿಗಾಗಿ ಸಿಎಂಎಫ್-ಎ ಪ್ಲಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಕ್ವಿಡ್ ಮಾದರಿಯಲ್ಲೇ ಇರುವ ಟ್ರೈಬರ್ ಕಾರಿನಲ್ಲಿ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ. ಇದರಿಂದ ಈ ಹೊಸ ಕಾರು ಕೇವಲ ಕುಟುಂಬದ ಸದಸ್ಯರೊಂದಿಗೆ ಪ್ರಯಾಣಿಸಲು ಮಾತ್ರವೇ ಅನುಕೂಲಕರವಾಗಿದ್ದು, ವಾಣಿಜ್ಯ ಬಳಕೆಯ ಕಾರು ಮಾದರಿಯಾಗಿ ಬಳಕೆ ಮಾಡಲು ಅಷ್ಟಾಗಿ ಅನುಕೂಲಕರವಾಗಿಲ್ಲ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಕಾರಿನ ಉದ್ದಳತೆ

ಹೊಸ ಕಾರಿನ ಮೇಲೆ ತೆರಿಗೆ ತಗ್ಗಿಸಲು ಹೊಸ ಕಾರನ್ನು 4 ಮೀಟರ್‌ಗಿಂತಲೂ ಹೆಚ್ಚು ವಿಸ್ತರಣೆ ಮಾಡಲು ನಿರ್ಧರಿಸಿರುವ ರೆನಾಲ್ಟ್ ಸಂಸ್ಥೆಯು 3,990-ಎಂಎಂ ಉದ್ದ, 1,739-ಎಂಎಂ ಅಗಲ, 1,643-ಎಂಎಂ ಎತ್ತರ, 2,636-ಎಂಎಂ ವೀಲ್ಹ್‌ಬೆಸ್ ಮತ್ತು 182-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಕಾರಿನ ವೈಶಿಷ್ಟ್ಯತೆ

ಟ್ರೈಬರ್ ಎಂಪಿವಿ ಕಾರು ಗಾತ್ರದಲ್ಲಿ ಚಿಕ್ಕದಾಗಿದ್ದರೂ ಸಹ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದ್ದು, ಆಕರ್ಷಕ ಬಂಪರ್, ಸ್ವೆಪ್ಟ್ ಬ್ಲ್ಯಾಕ್ ಎಲ್ಇಡಿ ಡಿಆರ್‌ಎಸ್ ಹೆಡ್‌ಲ್ಯಾಂಪ್ ಸೌಲಭ್ಯವು ಟ್ರೈಬರ್‌ ಆಕರ್ಷಣೆಗೆ ಕಾರಣವಾಗಿವೆ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಹಾಗೆಯೇ ಹೊಸ ಟ್ರೈಬರ್ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯುತ್ತವೆ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಕಾರಿನ ಒಳಾಂಗಣ ವಿನ್ಯಾಸ

ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಿಸಲಾಗಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 7.8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

MOST READ: ಲೋನ್ ಚಿಂತೆ ಬೇಡವೇ ಬೇಡ- ಇನ್ಮುಂದೆ ಲೀಸ್‌ಗೆ ಸಿಗಲಿವೆ ಹ್ಯುಂಡೈ ಕಾರುಗಳು..!

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಆಸನ ಸೌಲಭ್ಯ

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ನಿರ್ಮಾಣ ಮಾಡಿಕೊಳ್ಳಬಹುದು.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಎಂಜಿನ್ ಸಾಮರ್ಥ್ಯ

1.0-ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಬಿಡುಗಡೆಯಾದ ನಂತರವಷ್ಟೇ ಗ್ರಾಹಕರ ಬೇಡಿಕೆ ಮೇರೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಿದೆ.

MOST READ: ಹೊಸ ಕಾರು ವಿತರಣೆಯಲ್ಲಿ ವಿಳಂಬ- ಜೀಪ್ ಡೀಲರ್ಸ್‌ಗೆ ಬಿತ್ತು ರೂ. 50 ಸಾವಿರ ದಂಡ..!

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಸುರಕ್ಷಾ ಸೌಲಭ್ಯ

ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್, ಕೀ ಲೆಸ್ ಎಂಟ್ರಿ, ಮೊಬೈಲ್ ಫೋನ್ ಚಾರ್ಜರ್ ಸಾಕೆಟ್‌ಗಳನ್ನು ನೀಡಲಾಗಿದೆ.

ರೆನಾಲ್ಟ್ ಅಗ್ಗದ ಬೆಲೆಯ 7 ಸೀಟರ್ ಟ್ರೈಬರ್ ಕಾರು ಅನಾವರಣ

ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)

ರೆನಾಲ್ಟ್ ಸಂಸ್ಥೆಯು ಹೊಸ ಕಾರನ್ನು ಸೆಪ್ಟೆಂಬರ್ ಅಥವಾ ಅಕ್ಟೋಬರ್ ಆರಂಭದಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರು ತಾಂತ್ರಿಕ ಸೌಲಭ್ಯಗಳಿಗೆ ಅನುಗುಣವಾಗಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8 ಲಕ್ಷ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ.

Article Published On: Wednesday, June 19, 2019, 17:58 [IST]
English summary
Renault Triber MPV Unveiled In India For Global Markets. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+