ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಕಳೆದ ವಾರವಷ್ಟೇ ರೆನಾಲ್ಟ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಟ್ರೈಬರ್ ಎಂಪಿವಿ ಕಾರನ್ನು ಅನಾವರಣಗೊಳಿಸಿದ್ದು, ಮುಂದಿನ ಸೆಪ್ಟೆಂಬರ್ ಹೊತ್ತಿಗೆ ಬಿಡುಗಡೆಗಾಗಿ ಸಿದ್ದವಾಗುತ್ತಿದೆ. ಹೀಗಿರುವಾಗ ಹೊಸ ಕಾರಿನ ಅಧಿಕೃತ ಬೆಲೆ ಮಾಹಿತಿ ಸೋರಿಕೆಯಾಗಿದ್ದು, ಎಂಪಿವಿ ಕಾರುಗಳಲ್ಲೇ ಅತಿ ಕಡಿಮೆ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುವುದು ಖಚಿತವಾಗಿದೆ.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಕಾರುಗಳಿಗೆ ವಿಶೇಷ ಬೇಡಿಕೆಯಿದ್ದು, ಕುಟುಂಬ ಸಮೇತರಾಗಿ ಪ್ರಯಾಣಿಸುವುದಕ್ಕಾಗಿ ಎಂಪಿವಿ ಕಾರುಗಳು ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿವೆ. ಹೀಗಾಗಿಯೇ ವ್ಯಯಕ್ತಿಕ ಕಾರು ಬಳಕೆದಾರರನ್ನು ಗಮನದಲ್ಲಿಟ್ಟು ಅಗ್ಗದ ಬೆಲೆಯಲ್ಲಿ ಉತ್ತಮ ಫೀಚರ್ಸ್ ಸೌಲಭ್ಯವುಳ್ಳ ಹೊಸ ಎಂಪಿವಿ ಅಭಿವೃದ್ಧಿಗೊಳಿಸಲು ಯತ್ನಿಸಿರುವ ರೆನಾಲ್ಟ್ ಸಂಸ್ಛೆಯು ಟ್ರೈಬರ್ ಎನ್ನುವ ಹೊಸ ಕಾರು ಮಾದರಿಯನ್ನು ರಸ್ತೆಗಿಳಿಸುತ್ತಿದೆ.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಸೋರಿಕೆಯಾಗಿರುವ ಮಾಹಿತಿಗಳ ಪ್ರಕಾರ, ಹೊಸ ಟ್ರೈಬರ್ ಕಾರು ತಾಂತ್ರಿಕ ಸೌಲಭ್ಯಗಳ ಜೋಡಣೆಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.4.4 ಲಕ್ಷಕ್ಕೆ ಮತ್ತು ಟಾಪ್ ಎಂಡ್ ಆವೃತ್ತಿಯು ರೂ. 5.8 ಲಕ್ಷ ಬೆಲೆ ಪಡೆದುಕೊಂಡಿದ್ದು, ಮೂರನೇ ಸಾಲಿನ ಆಸನ ವ್ಯವಸ್ಥೆಯನ್ನು ಖರೀದಿಸುವ ಆಸಕ್ತ ಗ್ರಾಹಕರು ಹೆಚ್ಚುವರಿ ರೂ.6 ಸಾವಿರ ಪಾವತಿಸಬೇಕಿದೆ ಎನ್ನಲಾಗಿದೆ.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಪ್ರಸ್ತುತ ಮಾರುಕಟ್ಟೆಯಲ್ಲಿ ಕ್ವಿಡ್, ಡಸ್ಟರ್, ಕ್ಯಾಚ್ಚರ್ ಮತ್ತು ಲೊಡ್ಜಿ ಕಾರುಗಳನ್ನು ಮಾರಾಟ ಮಾಡುತ್ತಿರುವ ರೆನಾಲ್ಟ್ ಸಂಸ್ಥೆಯು ಕ್ವಿಡ್ ಮತ್ತು ಡಸ್ಟರ್ ಹೊರತುಪಡಿಸಿ ಇನ್ನುಳಿದ ಕಾರುಗಳ ಮಾರಾಟದಲ್ಲಿ ಅಷ್ಟಾಗಿ ಯಶಸ್ಸು ಸಾಧಿಸಿಲ್ಲ. ಇದಕ್ಕಾಗಿಯೇ ಕಾರುಗಳ ವಿನ್ಯಾಸವನ್ನು ಬದಲಿಸುತ್ತಿರುವ ರೆನಾಲ್ಟ್ ಸಂಸ್ಥೆಯು ಫೇಸ್‌ಲಿಫ್ಟ್ ಆವೃತ್ತಿಗಳನ್ನು ಅಭಿವೃದ್ದಿಗೊಳಿಸುತ್ತಿದೆ.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಹೀಗಾಗಿ ರೆನಾಲ್ಟ್ ಫೇಸ್‌ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವು ಸಂಪೂರ್ಣ ಬದಲಾವಣೆಗೊಂಡಿದ್ದು, ಫೇಸ್‌ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಅನಾವರಣಗೊಳಿಸಲಾದ ಟ್ರೈಬರ್ ಎಂಪಿವಿ ಕಾರು ಕೂಡಾ ಅಭಿವೃದ್ಧಿ ಹೊಂದಿದೆ. ಹೊಸ ಕಾರುಗಳ ಅಭಿವೃದ್ಧಿಗಾಗಿ ರೆನಾಲ್ಟ್ ಸಿಎಂಎಫ್-ಎ ಪ್ಲಾಟ್‌ಫಾರ್ಮ್ ಬಳಕೆ ಮಾಡುತ್ತಿದ್ದು, ಕ್ವಿಡ್ ಮಾದರಿಯಲ್ಲೇ ಇರುವ ಟ್ರೈಬರ್ ಕಾರಿನಲ್ಲಿ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ.

ಕಾರಿನ ಉದ್ದಳತೆ ಮತ್ತು ತೂಕ

ಹೊಸ ಕಾರಿನ ಮೇಲೆ ತೆರಿಗೆ ತಗ್ಗಿಸಲು ಹೊಸ ಕಾರನ್ನು 4 ಮೀಟರ್‌ಗಿಂತಲೂ ಹೆಚ್ಚು ವಿಸ್ತರಣೆ ಮಾಡದಿರಲು ನಿರ್ಧರಿಸಿರುವ ರೆನಾಲ್ಟ್ ಸಂಸ್ಥೆಯು ಟ್ರೈಬರ್ ಕಾರನ್ನು 3,990-ಎಂಎಂ ಉದ್ದ, 1,739-ಎಂಎಂ ಅಗಲ, 1,643-ಎಂಎಂ ಎತ್ತರ, 2,636-ಎಂಎಂ ವೀಲ್ಹ್‌ಬೆಸ್ ಮತ್ತು 182-ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಒದಗಿಸಿದ್ದು, ಸಿಎಂಎಫ್-ಎ ಪ್ಲಾಟ್‌ಫಾರ್ಮ್ ಬಳಕೆಯಿಂದಾಗಿ ಹೊಸ ಕಾರು 947 ಕೆಜಿ ತೂಕ ಪಡೆದುಕೊಂಡಿದೆ.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಇನ್ನು ಹೊಸ ಟ್ರೈಬರ್ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಕಾರಿನ ಒಳಾಂಗಣ ವಿನ್ಯಾಸ ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಿಸಲಾಗಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 7.8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಆಸನ ಸೌಲಭ್ಯ

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ನಿರ್ಮಾಣ ಮಾಡಿಕೊಳ್ಳಬಹುದು.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಎಂಜಿನ್ ಸಾಮರ್ಥ್ಯ

1.0-ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿರುವ ಟ್ರೈಬರ್ ಕಾರು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದ್ದು, ಬಿಡುಗಡೆಯಾದ ನಂತರವಷ್ಟೇ ಗ್ರಾಹಕರ ಬೇಡಿಕೆ ಮೇರೆಗೆ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಿದೆ.

ರೆನಾಲ್ಟ್ ಟ್ರೈಬರ್ ಬೆಲೆ ಮಾಹಿತಿ ಸೋರಿಕೆ- ಇದುವೇ ದೇಶದ ಅಗ್ಗದ ಎಂಪಿವಿ ಕಾರು..!

ಸುರಕ್ಷಾ ಸೌಲಭ್ಯಗಳು

ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್, ಕೀ ಲೆಸ್ ಎಂಟ್ರಿ, ಮೊಬೈಲ್ ಫೋನ್ ಚಾರ್ಜರ್ ಸಾಕೆಟ್‌ಗಳನ್ನು ನೀಡಲಾಗಿದೆ.

Source:cartoq

Most Read Articles

Kannada
English summary
Renault Triber Prices Leaked Ahead Of Launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X