ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಎಂಟ್ರಿ ಲೆವಲ್ ಮಲ್ಟಿ ಪ್ಯಾಸೆಂಜರ್ ವೆಹಿಕಲ್ ವಿಭಾಗದಲ್ಲಿ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಟ್ರೈಬರ್ ಕಾರು ಮಾದರಿಯು ಸದ್ಯ ಸಾಮಾನ್ಯ ಪೆಟ್ರೋಲ್ ಮಾದರಿಯಲ್ಲಿ ಮಾತ್ರವೇ ಮಾರಾಟವಾಗುತ್ತಿದ್ದು, ಶೀಘ್ರದಲ್ಲೇ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲು ರೆನಾಲ್ಟ್ ಭರ್ಜರಿ ಸಿದ್ದತೆ ನಡೆಸಿದೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಕಳೆದ ಅಗಸ್ಟ್ 28 ರಂದು ಬಿಡುಗಡೆಯಾಗಿರುವ ಟ್ರೈಬರ್ ಕಾರಿನಲ್ಲಿ 1.0-ಲೀಟರ್ ಪೆಟ್ರೋಲ್ ಎಂಜಿನ್ ಮಾತ್ರವೇ ಖರೀದಿಗೆ ಲಭ್ಯವಿದ್ದು, ಅಧಿಕ ಪರ್ಫಾಮೆನ್ಸ್ ನೀಡಬಲ್ಲ ಟರ್ಬೋ ಎಂಜಿನ್‌ಗಾಗಿ ಹೆಚ್ಚಿನ ಸಂಖ್ಯೆಯ ಗ್ರಾಹಕರು ಬೇಡಿಕೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಟರ್ಬೋ ಎಂಜಿನ್ ನೀಡಲು ಮುಂದಾಗಿರುವ ರೆನಾಲ್ಟ್ ಸಂಸ್ಥೆಯು ಹೊಸ ಎಂಜಿನ್ ಮಾದರಿಯನ್ನು 2020ರ ಮಾರ್ಚ್ ನಂತರ ಬಿಡುಗಡೆ ಮಾಡಲಿದ್ದು, ಇದೇ ಎಂಜಿನ್ ಮಾದರಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲೂ ಜೋಡಣೆ ಮಾಡಲಿಯೆಂತೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಇನ್ನು ಪ್ರಸ್ತುತ ಮಾರುಕಟ್ಟೆಯಲ್ಲಿ ಟ್ರೈಬರ್ ಕಾರು 1.0-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸಹಾಯದೊಂದಿಗೆ 71-ಬಿಎಚ್‌ಪಿ ಮತ್ತು 96-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.95 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯು 6.49 ಲಕ್ಷ ಬೆಲೆ ಹೊಂದಿರುವ ಟ್ರೈಬರ್ ಕಾರು ಎಲ್ಲಾ ವರ್ಗದ ಗ್ರಾಹಕರನ್ನು ಸೆಳೆಯುವ ಹಲವು ವಿಭಿನ್ನ ವೈಶಿಷ್ಟಯತೆಗಳನ್ನು ಹೊಂದಿದ್ದು, 4 ಮೀಟರ್‌ನಲ್ಲಿಯೇ ಅತ್ಯಂತ ವ್ಯವಸ್ಥಿತವಾಗಿ 7 ಸೀಟರ್ ಸೌಲಭ್ಯವನ್ನು ಜೋಡಿಸಲಾಗಿದೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ರೆನಾಲ್ಟ್ ಸಂಸ್ಥೆಯು ಫೇಸ್‌ಲಿಫ್ಟ್ ಕಾರುಗಳ ಚಾರ್ಸಿ ತಂತ್ರಜ್ಞಾನವನ್ನು ಸಂಪೂರ್ಣ ಬದಲಾವಣೆಗೊಳಿಸಿದ್ದು, ಫೇಸ್‌ಲಿಫ್ಟ್ ಕ್ವಿಡ್ ಮಾದರಿಯಲ್ಲೇ ಇದೀಗ ಟ್ರೈಬರ್ ಎಂಪಿವಿ ಕಾರು ಕೂಡಾ ಹೊಸ ತಂತ್ರಜ್ಞಾನದಡಿಯಲ್ಲೇ ಅಭಿವೃದ್ಧಿಗೊಳಿಸಿ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಇದರಿಂದಲೇ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಭಾರೀ ಬೇಡಿಕೆ ಪಡೆದುಕೊಂಡಿರುವ ಹೊಸ ಕಾರು ಇದುವರೆಗೆ 18,500 ಯುನಿಟ್ ಮಾರಾಟ ದಾಖಲಿಸಿದೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಹೊಸ ಕಾರು ತಾಂತ್ರಿಕವಾಗಿ ಬಲಿಷ್ಠವಾಗಿದ್ದು, ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಎಲ್‌ಇಡಿ ಡಿಆರ್‌ಎಸ್, ಪವರ್ ವಿಂಡೋ, ಕೀ ಲೆಸ್ ಎಂಟ್ರಿ, ಮೂರು ಸಾಲುಗಳಲ್ಲೂ ಎಸಿ ವೆಂಟ್ಸ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಮೊಬೈಲ್ ಫೋನ್ ಚಾರ್ಜ್ ಸಾಕೆಟ್‌ ಮತ್ತು ರಿಯರ್ ವಾಷ್ ವೈಪರ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಟ್ರೈಬರ್ ಕಾರು ಡ್ಯುಯಲ್ ಟೋನ್ ಇಂಟಿರಿಯರ್ ಜೋಡಣೆ ಹೊಂದಿದ್ದು, ಡ್ಯಾಶ್‌ಬೋರ್ಡ್ ಮೇಲೆ ಸಿಲ್ವರ್ ಟ್ರಿಮ್, ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್, 3.5-ಇಂಚಿನ ಮಲ್ಟಿ ಇನ್ಪಾಮೆಷನ್ ಡಿಸ್‌‌ಪ್ಲೇ, 8-ಇಂಚಿನ ಟಚ್‌ಸ್ಕ್ರೀನ್ ಸಿಸ್ಟಂ ಜೊತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯ ನೀಡಲಾಗಿದೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಹಾಗೆಯೇ ಹೊಸ ಕಾರಿನಲ್ಲಿ 15-ಇಂಚಿನ ಅಲಾಯ್ ವೀಲ್ಹ್‌ಗಳನ್ನು ಜೋಡಿಸಲಾಗಿದ್ದು, ರೂಫ್ ರೈಲ್ಸ್, ಮ್ಯಾಟೆ ಬ್ಲ್ಯಾಕ್ ಕ್ಲ್ಯಾಡಿಂಗ್, ವೀಲ್ಹ್ ಆರ್ಚ್, ಸಿಗ್ನಲ್ ಇಂಡಿಕೇಟರ್, ರೀವರ್ಸ್ ಲ್ಯಾಂಪ್ ಮತ್ತು ಟೈಲ್ ಲ್ಯಾಂಪ್ ಗಮನಸೆಳೆಯಲಿದ್ದು, ಒಟ್ಟು 5 ವಿವಿಧ ಆಕರ್ಷಕ ಬಣ್ಣಗಳಲ್ಲಿ(ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್, ಎಲೆಕ್ಟ್ರಿಕ್ ಬ್ಲ್ಯೂ, ಫ್ಲೈರಿ ರೆಡ್, ಆರೇಂಜ್) ಖರೀದಿಗೆ ಲಭ್ಯವಿರಲಿದೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಆಸನ ಸೌಲಭ್ಯ

7-ಸೀಟರ್ ಸೀಟರ್ ಮಾದರಿಯಾಗಿರುವ ಟ್ರೈಬರ್ ಕಾರು ದೂರದ ಪ್ರಯಾಣಕ್ಕೆ ಅಷ್ಟಾಗಿ ಅನುಕೂಲಕರವಾಗಿಲ್ಲವಾದರೂ 5 ಜನ ಯಾವುದೇ ತೊಂದರೆ ಇಲ್ಲದೇ ಪ್ರಯಾಣಿಸಬಹುದಾಗಿದ್ದು, 3ನೇ ಸಾಲಿನ ಆಸನಗಳನ್ನು ಮಡಿಕೆ ಮಾಡಿ ಲಗೇಜ್‌ಗಾಗಿ ಹೆಚ್ಚುವರಿ ಬೂಟ್ ಸ್ಪೆಸ್ ಅನುಕೂಲ ಮಾಡಿಕೊಳ್ಳಬಹುದು.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಹೀಗಾಗಿ ಮೂರನೇ ಸಾಲನ್ನು ಮಡಿಕೆ ಮಾಡಿದ್ದಲ್ಲಿ 625-ಲೀಟರ್‌ನಷ್ಟು ಸ್ಥಳಾವಕಾಶ ಮಾಡಿಕೊಳ್ಳಬಹುದಾಗಿದ್ದು, ಬೇಡವಾದಲ್ಲಿ 84-ಲೀಟರ್‌ನಷ್ಟು ಸ್ಥಳಾವಕಾಶ ಸಿಗಲಿದೆ.

ಟ್ರೈಬರ್‌ ಎಂಪಿವಿನಲ್ಲಿ ಶೀಘ್ರದಲ್ಲೇ ಟರ್ಬೋ ಎಂಜಿನ್ ನೀಡಲಿದೆ ರೆನಾಲ್ಟ್

ಸುರಕ್ಷಾ ಸೌಲಭ್ಯಗಳು

ಹೊಸ ಸುರಕ್ಷಾ ನಿಯಮಗಳಿಗೆ ಅನುಗುಣವಾಗಿ ಟ್ರೈಬರ್ ಕಾರಿನಲ್ಲಿ ನಾಲ್ಕು ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರಿಯರ್ ಪಾರ್ಕಿಂಗ್ ಸೆನ್ಸಾರ್, ಸ್ಪೀಡ್ ವಾರ್ನಿಂಗ್ ಸೌಲಭ್ಯಗಳನ್ನು ನೀಡಲಾಗಿದೆ.

Source:AutoCarIndia

Article Published On: Tuesday, December 10, 2019, 8:45 [IST]
English summary
According to media report, Renault is planning to introduce new turbo petrol engine option in Triber MPV car in India.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+