Just In
Don't Miss!
- News
ಕೊಟ್ಟ ಮಾತು ಉಳಿಸಿಕೊಂಡ ಬೈಡನ್, ಸಂಪುಟದಲ್ಲಿ ಭಾರತೀಯರೇ ಮಿಂಚಿಂಗ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Finance
ಸಿಲಿಂಡರ್ ಬುಕ್ ಮಾಡಿದ ಎರಡು ಗಂಟೆಯೊಳಗೆ ಮನೆ ಬಾಗಿಲಿಗೆ ಡೆಲಿವರಿ
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಭಾರತದಲ್ಲೂ ರೋಲ್ಸ್ ರಾಯ್ಸ್ ಕಲಿನಿಯನ್ ಅಬ್ಬರಕ್ಕೆ ಭರ್ಜರಿ ಚಾಲನೆ..!
ಜಗತ್ತಿನ ಶ್ರೇಷ್ಠ ಆಟೋ ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾಗಿರುವ ರೋಲ್ಸ್ ರಾಯ್ಸ್ ಸಂಸ್ಥೆಯು ಕಳೆದ ಕೆಲ ತಿಂಗಳ ಹಿಂದಷ್ಟೇ ಜಾಗತಿಕ ಮಾರುಕಟ್ಟೆಗಳಲ್ಲಿ ತನ್ನ ಬಹುನೀರಿಕ್ಷಿತ ಕಲಿನಿಯನ್ ಕಾರನ್ನು ಬಿಡುಗಡೆ ಮಾಡಿದ್ದು, ಇದೀಗ ಭಾರತದಲ್ಲೂ ಹೊಸ ಕಾರಿನ ಮಾರಾಟಕ್ಕೆ ಭರ್ಜರಿಯಾಗಿ ನೀಡಲಾಗಿದೆ.

ಚೆನ್ನೈನಲ್ಲಿರುವ ಕೆಯುನ್ ಎಕ್ಸ್‌ಕ್ಲೂಸಿವ್ ರೋಲ್ಸ್ ರಾಯ್ಸ್ ಮಾರಾಟ ಮಳಿಗೆಯಲ್ಲಿ ಕಲಿನಿಯನ್ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಾಗಿದ್ದು, ಭಾರತದಲ್ಲಿ ಕಲಿನಿಯನ್ ಕಾರು ಖರೀದಿಗೆ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಸದ್ಯದಲ್ಲೇ ಹೊಸ ಕಾರು ಕೈಸೇರುವ ಸುಳಿವು ನೀಡಿದೆ. ಹೊಸ ಕಾರು ಭಾರತದಲ್ಲಿ ಎಕ್ಸ್‌ಶೋರೂಂ ಪ್ರಕಾರ ರೂ.6.95 ಕೋಟಿ ಬೆಲೆ ಹೊಂದಿದ್ದು, ಆರ್ಕಿಟೆಕ್ಚರ್ ಆಫ್ ಲಗ್ಷುರಿ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಉತ್ಪಾದನೆಗೊಂಡಿರುವ ಕಲಿನಿಯನ್ ಮಾದರಿಯು ಸದ್ಯ ಮಾರುಕಟ್ಟೆಯಲ್ಲಿರುವ ಫ್ಯಾಂಟಮ್ VIII ಕಾರಿಗಿಂತಲೂ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿದೆ.

ಐಷಾರಾಮಿ ಸೆಡಾನ್ ಕಾರುಗಳ ನಿರ್ಮಾಣದಲ್ಲಿ ಹೆಸರುವಾಸಿವಾಗಿರುವ ರೋಲ್ಸ್ ರಾಯ್ಸ್ ಸಂಸ್ಥೆಯು ಇದೇ ಮೊದಲ ಬಾರಿಗೆ ಎಸ್‌ಯುವಿ ಕಾರು ಮಾದರಿಗಳ ನಿರ್ಮಾಣಕ್ಕೆ ಕೈಹಾಕಿದ್ದು, ಕೇವಲ ಐಷಾರಾಮಿ ಅಷ್ಟೇ ಅಲ್ಲದೇ ಆಪ್ ರೋಡ್ ವೈಶಿಷ್ಟ್ಯತೆಗಳನ್ನು ಹೊತ್ತು ಬಂದಿರುವ ಕಲಿನಿಯನ್ ಕಾರು ನೂರಕ್ಕೂ ಹೆಚ್ಚು ವಿನೂತನ ಸೌಲಭ್ಯಗಳೊಂದಿಗೆ ಜಗತ್ತಿನಲ್ಲಿ ಇದುವರೆಗೆ ಉತ್ಪಾದನೆಯಾದ ಇತರೆ ಐಷಾರಾಮಿ ಎಸ್‌ಯುವಿ ಕಾರುಗಳಿಂತಲೂ ಇದು ವಿಶೇಷ ಎನ್ನಿಸಲಿದೆ.

ಕಾರಿನ ಡಿಸೈನ್
ಕಲಿನಿಯನ್ ಕಾರುಗಳು ಮುಂಭಾಗದಿಂದ ಫ್ಯಾಂಟಮ್ ಸೆಡಾನ್ ಕಾರಿನ ಹೋಲಿಕೆಯಿದ್ದರೂ ಸ್ಟೈನ್ ಲೆಸ್ ಸ್ಟೀಲ್ ಗ್ರಿಲ್, ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಸ್ಲಾಟ್ ವಿನ್ಯಾಸಗಳಲ್ಲಿ ಸಾಕಷ್ಟು ಬದಲಾವಣೆ ಪಡೆದಿದ್ದು, ಫ್ರಂಟ್ ಬಂಪರ್ ಮತ್ತು ಲೋಗೋ ಡಿಸೈನ್‌ಗಳು ವಿಶೇಷ ಎನ್ನಿಸಲಿವೆ.

ಕಲಿನಿಯನ್ ಕಾರುಗಳು 5-ಸೀಟರ್ ಸೌಲಭ್ಯ ಹೊಂದಿರುವ ಎಸ್‌ಯುವಿ ಮಾದರಿಯಾಗಿದ್ದು, 22 ಇಂಚಿನ ಚಕ್ರಗಳನ್ನು ಹೊಂದಿದೆ. ಜೊತೆಗೆ ಅಲ್ಯೂಮಿನಿಯಂ ಪ್ಯಾಟ್‌ಫಾರ್ಮ್ ಮೇಲೆ ಸಿದ್ದವಾಗಿರುವ ಕಲ್ಲಿನನ್ ಕಾರುಗಳು ಫ್ಯಾಂಟಮ್ ಮಾದರಿಯಲ್ಲೇ ಎಂಜಿನ್ ಡಿಸೈನ್ ಪಡೆದಿದೆ.
ಜೊತೆಗೆ ಆಧುನಿಕ ಐಷಾರಾಮಿ ಎಸ್‌ಯುವಿ ಎಂದೇ ಬಿಂಬಿತವಾಗಿರುವ ಕಲಿನಿಯನ್ ಕಾರುಗಳು ಸೈಡ್ ಪ್ರೋಫೈಲ್‌ನಲ್ಲಿ ಬಲವಾದ ಭುಜ ರೇಖೆಗಳನ್ನು ಹೊಂದಿದ್ದು, ಇದು ಈ ಹಿಂದೆ 1930ರಲ್ಲಿ ನಿರ್ಮಾಣವಾಗಿದ್ದ 'ಡಿ ಬ್ಲ್ಯಾಕ್' ಕಾರಿನ ಕೆಲವು ವಿನ್ಯಾಸಗಳನ್ನು ಸಹ ಇದರಲ್ಲಿ ಎರವಲು ಪಡೆದುಕೊಳ್ಳಲಾಗಿದೆ.

ಕಲಿನಿಯನ್ ಕಾರಿನ ಉದ್ದಳತೆ
ಎಸ್‌ಯುವಿ ಹೆಸರಿಗೆ ತಕ್ಕಂತೆ ಅತಿ ಎತ್ತರದ ಬಾಡಿ ಕಿಟ್ ಹೊಂದಿರುವ ಕಲಿನಿಯನ್ ಕಾರುಗಳು 5,341ಎಂಎಂ ಉದ್ದ, 2,164ಎಂಎಂ ಅಗಲ, 1,834ಎಂಎಂ ಎತ್ತರದೊಂದಿಗೆ 3,295ಎಂಎಂ ವೀಲ್ಹ್ ಬೆಸ್ ಸೌಲಭ್ಯ ಹೊಂದಿದೆ.

ಕಾರಿನ ಒಳವಿನ್ಯಾಸ
ಆಧುನಿಕ ಒಳವಿನ್ಯಾಸದೊಂದಿಗೆ ಸಿದ್ದವಾಗಿರುವ ರೋಲ್ಸ್ ರಾಯ್ಸ್ ಕಲಿನಿಯನ್ ಕಾರುಗಳಲ್ಲಿ ಬಳಕೆ ಮಾಡಿರುವ ಐಷಾರಾಮಿ ವೈಶಿಷ್ಟ್ಯತೆಗಳು ಹಲವು ವಿಶೇಷತೆಗಳಿಗೆ ಕಾರಣವಾಗಿದ್ದು, ಕಾರಿನ ಒಳಗೆ ಪ್ರವೇಶ ಮಾಡಿದ್ದಲ್ಲಿ ಸ್ಪರ್ಗಕ್ಕೆ ಮೂರೇ ಗೇಣು ಎನ್ನುವ ಭಾವನೆ ಮೂಡದೇ ಇರಲಾರದು.

5-ಸೀಟರ್ ಸಾಮರ್ಥ್ಯವಿರುವ ಈ ಕಾರಿನಲ್ಲಿ ಪ್ರತಿ ಸೀಟುಗಳು ಸಹ ಪ್ರತ್ಯೇಕವಾಗಿ ಎಲೆಕ್ಟ್ರಿಕ್ ಆಪರೇಟ್ ಸೌಲಭ್ಯ ಹೊಂದಿದ್ದು, ನಿಮಗೆ ಬೇಕಾದ ರೀತಿಯಲ್ಲಿ ಹೋಂದಾಣಿಕೆ ಮಾಡಿಕೊಳ್ಳಬಹುದು. ಜೊತೆಗೆ ಬೆರಳುಗಳ ತುದಿಯಲ್ಲೇ ನಿಯಂತ್ರಣ ಮಾಡಬಹುದಾದ ಇನ್ಪೋಟೈನ್‌ಮೆಂಟ್ ಮತ್ತು ಎಂಟರ್‌ಟೈನ್‌ಮೆಂಟ್ ಸೌಲಭ್ಯ ಇದಲ್ಲಿದೆ.
MOST READ: 8.50 ಕೋಟಿ ಮೌಲ್ಯದ ರೋಲ್ಸ್ ರಾಯ್ಸ್ ಕಲಿನಿಯನ್ ಒಡತಿಯಾದ ಭಾರತದ ಮೊದಲ ಮಹಿಳೆ..!

ಇದು ತ್ರಿ ಬಾಕ್ಸ್ ಎಸ್‌ಯುವಿ!
ಹೌದು, ಕಲಿನಿಯನ್ ಕಾರುಗಳನ್ನು ರೋಲ್ಸ್ ರಾಯ್ಸ್ ಸಂಸ್ಥೆಯು ತ್ರಿ ಬಾಕ್ಸ್ ಎಸ್‌ಯುವಿ ಎಂದು ಕರೆದಿದೆ. ಇದಕ್ಕೆ ಕಾರಣ, ಈ ಕಾರಿನಲ್ಲಿ ಎಂಜಿನ್ ರೂಂ, ಕ್ಯಾಬಿನ್ ಮತ್ತು ಬೂಟ್ ಎಂದು ಮೂರು ವಿಭಾಗಗಳನ್ನು ಪ್ರತ್ಯೇಕಿಸಿದೆ. ಇದನ್ನೇ ತ್ರಿ ಬಾಕ್ಸ್ ಎಸ್‌ಯುವಿ ಎನ್ನಲಾಗಿದೆ. ಇದು ಇತರೆ ಎಸ್‌ಯುವಿಗಳಲ್ಲಿ ಎಂಜಿನ್ ರೂಂ ಮತ್ತು ಕ್ಯಾಬಿನ್‌ಗಳು ಮಾತ್ರ ಇರುತ್ತವೆ. ಕ್ಯಾಬಿನ್‌ಗಳ ಒಳಗೆಯೇ ಬೂಟ್ ಇರುತ್ತದೆ. ಹೀಗಾಗಿ ಅವು ಟು ಬಾಕ್ಸ್ ಎಸ್‌ಯುವಿಗಳಾಗಿವೆ.

ಇನ್ನು ಮುಂದುವರೆದು, ಕಲಿನಿಯನ್ ಕಾರುಗಳಲ್ಲಿ ಸೂಟ್ ಪ್ಯಾಕೇಜ್ ಸೌಲಭ್ಯವನ್ನು ಸಹ ಸೇರಿಸಲಾಗಿದ್ದು, ಕಾರಿನ ಬೂಟ್ ಸ್ಪೆಸ್ ಬಳಿ ಬಟನ್ ಒತ್ತಿದ್ರೆ ಸಾಕು ಎರಡು ಐಷಾರಾಮಿ ಚೇರ್‌ಗಳು ಸಣ್ಣದೊಂದು ಸಭೆ ನಡೆಸಲು ಅನೂಕಲಕರ ಮಾಡಿಕೊಡುತ್ತವೆ.
MOST READ: ರೂ. 1,300 ಕೋಟಿ ವೆಚ್ಚದಲ್ಲಿ ಐಷಾರಾಮಿ ಖಾಸಗಿ ಜೆಟ್ ಖರೀದಿಸಿದ ರ‍್ಯಾಪ್ ಸಿಂಗರ್

ಎಂಜಿನ್ ಸಾಮರ್ಥ್ಯ
ಕಲಿನಿಯನ್ ಕಾರು 6.75-ಲೀಟರ್(6,750 ಸಿಸಿ) ಟ್ವಿನ್ ಟರ್ಬೋ ವಿ12 ಪೆಟ್ರೋಲ್ ಎಂಜಿನ್ ಹೊಂದಿದ್ದು, 571-ಬಿಎಚ್‌ಪಿ ಮತ್ತು 650-ಎನ್ಎಂ ಟಾರ್ಕ್ ಉತ್ಪಾದಿಸಬಲ್ಲವು. ಹೀಗಾಗಿ ಕಾರಿನ ವೇಗವನ್ನು ಪ್ರತಿ ಗಂಟೆಗೆ 250 ಕಿ.ಮೀ ಟಾಪ್ ಸ್ಪೀಡ್ ಇರಿಸಲಾಗಿದೆ.

ಇದಲ್ಲದೇ ರೋಲ್ಸ್ ರಾಯ್ಸ್ ಸಂಸ್ಥೆಯು ಮೊದಲ ಬಾರಿಗೆ ಕಲಿನಿಯನ್ ಕಾರುಗಳನ್ನು ಆಲ್ ವೀಲ್ಹ್ ಡ್ರೈವ್ ಸಿಸ್ಟಂನೊಂದಿಗೆ ಬಿಡುಗಡೆ ಮಾಡಿದ್ದು, ಆಪ್ ರೋಡ್‌ಗಳಲ್ಲೂ ಇದು ತನ್ನ ಕೌಶಲ್ಯ ಪ್ರದರ್ಶನ ಮಾಡಬಲ್ಲದು. ಇದಕ್ಕಾಗಿಯೇ ಕಾರಿನಲ್ಲಿ ವಿವಿಧ ರೀತಿಯ ಡ್ರೈವಿಂಗ್ ಮೊಡ್‌ಗಳನ್ನು ಒದಗಿಸಲಾಗಿದೆ.

ಹೀಗಾಗಿ ಸದ್ಯದ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟಗೊಳ್ಳುತ್ತಿರುವ ಬೆಂಟ್ಲಿ ಬೆಂಟಾಗಾ ಎಸ್‌ಯುವಿ ಮತ್ತು ಲಂಬೋರ್ಗಿನಿ ಉರಸ್ ಎಸ್‌ಯುವಿ ಕಾರುಗಳಿಗೆ ಕುಲಿನಿಯನ್ ಕಾರುಗಳು ತೀವ್ರ ಪೈಪೋಟಿ ನೀಡಲಿದ್ದು, ಭಾರತೀಯ ಮಾರುಕಟ್ಟೆಯಲ್ಲೂ ಸಹ ಕಲಿನಿಯನ್ ಖರೀದಿಗಾಗಿ ನೂರಕ್ಕೂ ಹೆಚ್ಚು ಉದ್ಯಮಿಗಳು ಮತ್ತು ರಾಜಕಾರಣಿಗಳು ಬುಕ್ಕಿಂಗ್ ಮಾಡಿದ್ದಾರೆ ಎನ್ನಲಾಗಿದೆ.