ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಎಲೆಕ್ಟ್ರಿಕ್ ವಾಹನಗಳ ಅಭಿವೃದ್ದಿ ಮತ್ತು ಮಾರಾಟ ಪ್ರಕ್ರಿಯೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಫೇಮ್ 2 ಯೋಜನೆಯನ್ನು ಘೋಷಿಸಿದ್ದು, ಆಟೋ ಉತ್ಪಾದನಾ ಸಂಸ್ಥೆಗಳಿಗಷ್ಟೇ ಅಲ್ಲದೇ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವ ಗ್ರಾಹಕರಿಗೂ ಭರ್ಜರಿ ಆಫರ್‌ಗಳನ್ನು ನೀಡಲಾಗುತ್ತಿದೆ.

ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

2030ರ ವೇಳೆಗೆ ದೇಶದಲ್ಲಿ ಶೇ.100ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ರಸ್ತೆಗಿಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಹಲವು ಬೃಹತ್ ಯೋಜನೆಗಳನ್ನು ರೂಪಿಸಿದ್ದು, ಇದೀಗ ಎಲೆಕ್ಟ್ರಿಕ್ ವಾಹನಾ ಉತ್ಪಾದನಾ ಸಂಸ್ಥೆಗಳಿಗೆ ಮತ್ತು ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ವಿಶೇಷ ಸೌಲಭ್ಯಗಳನ್ನು ಘೋಷಣೆ ಮಾಡುತ್ತಿರುವ ಕೇಂದ್ರ ಸರ್ಕಾರವು ಭವಿಷ್ಯದ ಭಾರತಕ್ಕಾಗಿ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.

ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಪರಿಸರ ಸ್ನೇಹಿ ಎಲೆಕ್ಟ್ರಿಕ್ ಕಾರುಗಳ ಮಾರಾಟವನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸರ್ಕಾರವು ಈಗಾಗಲೇ ಕೆಲವು ವಿಶೇಷ ಸೌಲಭ್ಯಗಳನ್ನು ಘೋಷಣೆ ಮಾಡಿದ್ದು, ಇದೀಗ ಎಲೆಕ್ಟ್ರಿಕ್ ಕಾರುಗಳ ಖರೀದಿಸುವ ಗ್ರಾಹಕರಿಗೆ ಅತಿ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸುವುದಲ್ಲದೇ ಪ್ರತಿ ಎಲೆಕ್ಟ್ರಿಕ್ ಕಾರಿನ ಮೇಲೂ ರೂ.50 ಸಾವಿರ ತೆರಿಗೆ ವಿನಾಯ್ತಿ ನೀಡುವುದಾಗಿ ಅಧಿಕೃತ ಸುತ್ತೋಲೆ ಹೊರಡಿಸಿದೆ.

ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಈ ಹಿನ್ನೆಲೆಯಲ್ಲಿ ದೇಶದ ಅತಿ ದೊಡ್ಡ ಬ್ಯಾಂಕ್ ಎಸ್‌ಬಿಐ ಸಂಸ್ಥೆಯು ಸಹ ತನ್ನ ಗ್ರಾಹಕರಿಗೆ ವಿಶೇಷ ರಿಯಾಯ್ತಿಗಳನ್ನು ಘೋಷಣೆ ಮಾಡಿದ್ದು, ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಕಡಿಮೆ ದರದಲ್ಲಿ ಬಡ್ಡಿಸಾಲಗಳ ಜೊತೆಗೆ ದೀರ್ಘಾವಧಿಯ ಸಾಲಸೌಲಭ್ಯಗಳನ್ನು ನೀಡುವುದಾಗಿ ಅಧಿಕೃತ ಪ್ರಕಟಣೆ ಹೊರಡಿಸಿದೆ.

ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಹೀಗಾಗಿ ಇಷ್ಟು ದಿನಗಳ ಕಾಲ ಇದ್ದ ಗರಿಷ್ಠ ಏಳು ವರ್ಷಗಳ ಸಾಲ ಮರುಪಾವತಿ ಅವಧಿಯು ಹೆಚ್ಚಿದ್ದು, ಮಾಸಿಕ ಕಂತುಗಳ ಮೊತ್ತದಲ್ಲೂ ಸಾಕಷ್ಟು ಇಳಿಕೆಯಾಗಲಿದೆ. ಈ ಬಗ್ಗೆ ಮಾತನಾಡಿರುವ ಎಸ್‌ಬಿಐ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ ಗುಪ್ತಾ ಅವರು, ಭವಿಷ್ಯದ ಯೋಜನೆಗಾಗಿ ಈಗಾಗಲೇ ಹಲವಾರು ಯೋಜನೆಗಳು ರೂಪಗೊಳ್ಳುತ್ತಿದ್ದು, ಫೇಮ್ 2 ಯೋಜನೆಯು ಬಹುದೊಡ್ಡ ಬದಲಾಣೆಗೆ ಕಾರಣವಾಗಲಿದೆ ಎಂದಿದ್ದಾರೆ.

ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಇನ್ನು ಕೇಂದ್ರ ಸರ್ಕಾರವು 2017ರಿಂದಲೇ ಎಲೆಕ್ಟ್ರಿಕ್ ಕಾರುಗಳ ಅಭಿವೃದ್ಧಿ ಮತ್ತು ಮಾರಾಟವನ್ನು ಪ್ರೋತ್ಸಾಹಿಸಲು FAME ಯೋಜನೆಯನ್ನು ಜಾರಿಗೆ ಮಾಡಲಾಗಿದ್ದು, ಮೊದಲ ಹಂತದಲ್ಲಿ ರೂ. 1700 ಕೋಟಿ ಖರ್ಚು ಮಾಡಿರುವ ಕೇಂದ್ರವು ಎರಡನೇ ಹಂತದ ಯೋಜನೆಗಾಗಿ ಬರೋಬ್ಬರಿ ರೂ. 10 ಸಾವಿರ ಕೋಟಿ ಹಣವನ್ನು ಮೀಸಲು ಇರಿಸಿದೆ.

MOST READ: ಜಾವಾ ಬೈಕ್ ಸಂಸ್ಥೆಯ ವಿರುದ್ದ ಸಿಡಿದೆದ್ದ ಗ್ರಾಹಕರು

ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಮುಂದಿನ ಮೂರು ವರ್ಷಗಳ ಅವಧಿಗೆ FAME ಎರಡನೇ ಹಂತದ ಯೋಜನೆಯು ಅನುಷ್ಠಾನಗೊಳ್ಳಲಿದ್ದು, ಎಲೆಕ್ಟ್ರಿಕ್ ಕಾರು ಖರೀದಿಸುವ ಗ್ರಾಹಕರಿಗೆ ಸಬ್ಸಡಿ, ಆಕರ್ಷಕ ಬಡ್ಡಿದರಗಳಲ್ಲಿ ಸಾಲ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುವ ಚಾರ್ಜಿಂಗ್ ಸ್ಟೆಷನ್‌ಗಳಿಗೂ ಸಬ್ಸಡಿಯನ್ನು ಈ ಯೋಜನೆ ಅಡಿ ನೀಡಲಾಗುತ್ತೆ.

ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಕೇಂದ್ರ ಸರ್ಕಾರದ ಯೋಜನೆಗೆ ಪೂರಕವಾಗಿ ಆಟೋ ಉತ್ಪಾದನಾ ಸಂಸ್ಥೆಗಳು ಎಲೆಕ್ಟ್ರಿಕ್ ಕಾರುಗಳ ನಿರ್ಮಾಣ ಮತ್ತು ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೆ ವಿಶೇಷ ಆಸಕ್ತಿ ವಹಿಸುತ್ತಿದ್ದು, 2020ರ ವೇಳೆಗೆ ಕನಿಷ್ಠ ಶೇ.25ರಷ್ಟು ವಾಹನಗಳನ್ನು ಮಾರಾಟ ಮಾಡಬೇಕೆಂಬ ಧ್ಯೇಯ ಹೊಂದಲಾಗಿದೆ.

MOST READ: ತುಕ್ಕು ಹಿಡಿದ ಕಾರನ್ನು ಮಾರಾಟ ಮಾಡಿದ್ದ ಡೀಲರ್ಸ್‌ಗೆ ಬಿತ್ತು ಭಾರೀ ದಂಡ

ಎಲೆಕ್ಟ್ರಿಕ್ ಕಾರು ಖರೀದಿದಾರರಿಗೆ ಎಸ್‌ಬಿಐನಿಂದ ಬಂಪರ್ ಆಫರ್

ಭಾರತೀಯ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಟಾಟಾ ಮೋಟಾರ್ಸ್, ಮಹೀಂದ್ರಾ, ಮಾರುತಿ ಸುಜುಕಿ, ಹ್ಯುಂಡೈ, ರೆನಾಲ್ಟ್, ನಿಸ್ಸಾನ್, ಅಥೆರ್, ಟೊಯೊಟಾ, ಹೀರೋ, ಹೋಂಡಾ ಸಂಸ್ಥೆಗಳು ವಿವಿಧ ಎಲೆಕ್ಟ್ರಿಕ್ ಆವೃತ್ತಿ ವಾಹನಗಳನ್ನು ಅಭಿವೃದ್ಧಿಗೊಳಿಸಿದ್ದು, 2020ರ ಆರಂಭದಲ್ಲಿ ಬಹುತೇಕ ವಾಹನ ಸಂಸ್ಥೆಯು ಎಲೆಕ್ಟ್ರಿಕ್ ವರ್ಷನ್ ವಾಹನಗಳ ಮಾರಾಟಕ್ಕೆ ಭರ್ಜರಿಯಾಗಿ ಚಾಲನೆ ನೀಡಲಿದೆ.

Most Read Articles

Kannada
English summary
SBI has cut rates on auto loans for purchase of electric cars.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X