ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಎಂಪಿವಿ ಕಾರುಗಳಿಗೆ ಉತ್ತಮವಾದ ಬೇಡಿಕೆಯಿದ್ದು, ಹಲವಾರು ಸಂಸ್ಥೆಯ ಎಂಪಿವಿ ಕಾರುಗಳು ಮಾರುಕಟ್ಟೆಯಲ್ಲಿವೆ. ಹೀಗಿರುವಾಗ ಮಾರುತಿ ಸುಜುಕಿ ಸಂಸ್ಥೆಯು ಅಗ್ಗದ ಬೆಲೆಯಲ್ಲಿ ತಮ್ಮ ಎರ್ಟಿಗಾ ಎಂಪಿವಿ ಕಾರುಗಳನ್ನು ಬಿಡುಗಡೆ ಮಾಡಲಾಗಿದ್ದು, ನವೆಂಬರ್ 2018ರಂದು ಮತ್ತಷ್ಟು ಹೊಸತನದೊಂದಿಗೆ ಎರಡನೆಯ ತಲೆಮಾರಿನ ಎರ್ಟಿಗಾ ಕಾರುಗಳನ್ನು ಬಿಡುಗಡೆ ಮಾಡಲಾಗಿತ್ತು.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಎರಡನೆಯ ತಲೆಮಾರಿನ ಎರ್ಟಿಗಾ ಎಂಪಿವಿ ಕಾರು ಮಾರಾಟವಾಗುವ ಸಮಯದಲ್ಲಿಯೇ ಮಹೀಂದ್ರಾ ಸಂಸ್ಥೆಯು ತಮ್ಮ ಮರಾಜೋ ಎಂಪಿವಿ ಕಾರನ್ನು ಬಿಡಗಡೆ ಮಾಡಲಾಗಿತ್ತು. ಆದರೆ ಮಾರುಕಟ್ಟೆಯಲ್ಲಿ ಎಷ್ಟೇ ಎಂಪಿವಿ ಕಾರುಗಳಿದ್ದರೂ ಸಹ ಗ್ರಾಹಕರು ಮಾರುತಿ ಸುಜುಕಿ ಎರ್ಟಿಗಾ ಕಾರನ್ನೆ ಮೊದಲನೆ ಆಯ್ಕೆಯನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದರೆ ನೀವು ನಂಬಲೇಬೇಕು.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಏಕೆಂದರೆ ನವೆಂಬರ್ 2018ರಲ್ಲಿ ಬಿಡುಗಡೆಯಾದ ಮಾರುತಿ ಸುಜುಕಿ ಎರ್ಟಿಗಾ ಎಂಪಿವಿ ಕಾರು ಇಲ್ಲಿಯವರೆಗೂ ಸುಮಾರು 61,000ಕ್ಕು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿದ್ದು, ಅಂಕಿ ಅಂಶಗಳ ಪ್ರಕಾರ ಪ್ರತೀ ತಿಂಗಳು ಸುಮಾರು 8000ಕ್ಕು ಹೆಚ್ಚಿನ ಸಂಖ್ಯೆಯಲ್ಲಿ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ಮಾರಾಟವಾಗುತ್ತಿದೆಯಂತೆ.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಹೀಗಾಗಿ ಈ ಧಾಖಲೆಯ ಮಾರಾಟವನ್ನು ಸಂಭ್ರಮಿಸಲು ಮಾರುತಿ ಸುಜುಕಿ ಸಂಸ್ಥೆಯು ತಮ್ಮ ಎರ್ಟಿಗಾ ಕಾರಿನ ಸಿಎನ್‍ಜಿ ಮಾದರಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಸಿಎನ್‍ಜಿ ಮಾದರಿಯು ಕಾರಿನ ವಿಎಕ್ಸ್ಐ ವೇರಿಯೆಂಟ್‍ನಲ್ಲಿ ಮಾತ್ರ ಖರೀದಿಗೆ ಲಭ್ಯವಿದೆ. ಸಿಎನ್‍ಜಿ ಆಧಾರಿತ ಮಾರುತಿ ಸುಜುಕಿ ಎರ್ಟಿಗಾ ಕಾರುಗಳು ರೂ. 8.88 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಕಾರಿನ ಬೆಲೆ

ಇನ್ನು ಸಾಧಾರಣ ಮಾರುತಿ ಸುಜುಕಿ ಸಂಸ್ಥೆಯು ಕೆಲವು ತಿಂಗಳುಗಳ ಹಿಂದಷ್ಟೆ ತಮ್ಮ ಹೊಸ ತಲೆಮಾರಿನ ಎರ್ಟಿಗಾ ಎಂಪಿವಿ ಕಾರನ್ನು ಬಿಡುಗಡೆಗೊಳಿಸಿದ್ದು, ದೆಹಲಿಯ ಎಕ್ಸ್ ಶೋರುಂ ಪ್ರಕಾರ ರೂ. 7.44 ಲಕ್ಷದ ಪ್ರಾರಂಭಿಕ ಬಲೆಯನ್ನು ನೀಡಲಾಗಿದ್ದು, ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಮರಾಜೋ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತಿದೆ.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ನೆಕ್ಸ್ಟ್ ಜನರೇಷನ್ ಮಾರುತಿ ಸುಜುಕಿ ಎರ್ಟಿಗಾ ಕಾರು ವಿಶ್ವದರ್ಜೆ ಕಾರು ಉತ್ಪಾದನಾ ಮಾದರಿಯಾದ 'ಹಾರ್ಟ್‍ಟೆಕ್ಟ್' ಪ್ಲಾಟ್‍‍ಫಾರ್ಮ್‍ನ ಅಡಿಯಲ್ಲಿ ವಿನ್ಯಾಸ ಮಾಡಲಾಗಿದ್ದು, ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರ ಆಸನ ವಿನ್ಯಾಸವನ್ನು ಈ ಬಾರಿ ತುಸು ವಿಸ್ತರಿಸಲಾಗಿದೆ.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಕಾರಿನ ವಿನ್ಯಾಸ

ನೆಕ್ಸ್ಟ್ ಜನರೇಷನ್ ಎರ್ಟಿಗಾ ಎಂ‍ಪಿವಿ ಕಾರಿನ ಮುಂಭಾಗದಲ್ಲಿ ಕ್ರೋಮ್ ಸ್ಟ್ರಿಪ್‍‍ನೊಂದಿಗೆ ಜೋಡಿಸಲಾದ ಹೊಸ ಗ್ರಿಲ್ ಮತ್ತು ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ಪಡೆದುಕೊಂಡಿದ್ದು, ಹಾಗೆಯೇ ಕಾರಿನ ಸೈಡ್‍‍ನಲ್ಲಿ ಫ್ಲೋಟಿಂಗ್ ರೂಫ್ ವಿನ್ಯಾಸ, 15-ಇಂಚಿನ ಅಲಾಯ್ ಚಕ್ರಗಳು ಮತ್ತು ಕಾರಿನ ಹಿಂಭಾಗದಲ್ಲಿ 'ಎಲ್' ಆಕಾರದ ಟೈಲ್ ಲೈಟ್ ಅನ್ನು ಪಡೆದಿದೆ.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ತಾಂತ್ರಿಕ ವೈಶಿಷ್ಟ್ಯತೆಗಳು

ಮಾರುತಿ ಸುಜುಕಿ ಡಿಜೈರ್ ಕಾರಿನಲ್ಲಿರುವ 7-ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಅನ್ನು ಹೊಸ ಎರ್ಟಿಗಾದಲ್ಲೂ ಬಳಕೆ ಮಾಡಲಾಗಿದ್ದು, ಆಂಡ್ರಾಯ್ಡ್ ಆಟೋ, ಆ್ಯಪಲ್ ಕಾರ್ ಪ್ಲೇ ಮತ್ತು ಬ್ಲೂಟೂಥ್ ಕನೆಕ್ಟಿವಿಟಿಯನ್ನು ಸಪೋರ್ಟ್ ಮಾಡುತ್ತದೆ. ಇದಲ್ಲದೇ ಕಪ್ ಹೋಲ್ಡರ್ಸ್ ಅನ್ನೂ ಕೂಡಾ ನೀಡಲಾಗುತ್ತಿದ್ದು, ಇನ್ಫೋಟೈನ್ಮೆಂಟ್ ಸಿಸ್ಟಮ್‍‍‍ಗೆ ಸಹಾಯವಾಗುವ ಹಲವಾರು ಬಟನ್‍‍ಗಳೊಂದಿಗೆ ಲೆದರ್‍ ಹೊದಿಕೆಯಿಂದ ಸಜ್ಜುಗೊಂಡ ಸ್ಟೀರಿಂಗ್ ವ್ಹೀಲ್ ಜೋಡಿಸಲಾಗಿದೆ.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಸುರಕ್ಷಾ ವೈಶಿಷ್ಟ್ಯತೆಗಳು

ಹೊಸ ಎರ್ಟಿಗಾ ಕಾರಿನಲ್ಲಿ ಈ ಬಾರಿ ಪ್ರಯಾಣಿಕರ ಸುರಕ್ಷತೆಗಾಗಿ ಹೆಚ್ಚಿನ ಒತ್ತು ನೀಡಲಾಗಿದ್ದು, ಎಬಿಎಸ್, ಇಬಿಡಿ, ಐಎಸ್‍ಓಫಿಕ್ಸ್ ಚೈಲ್ಡ್ ಸೀಟ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ಕಾರಿನ ಎಲ್ಲಾ ಮಾದರಿಗಳಲ್ಲಿ ನೀಡಲಾಗಿದೆ. ಇದಲ್ಲದೆ ಹೈ ಎಂಡ್ ಮಾದರಿಗಳಲ್ಲಿ ಸೇಫ್ಟಿ ಸೀಟ್ ಬೆಲ್ಟ್ ರಿಮೈಂಡರ್, ಸ್ಪೀಡ್ ವಾರ್ನಿಂಗ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸಾರ್ ಅನ್ನು ಒದಗಿಸಲಾಗಿದೆ.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಎಂಜಿನ್ ಸಾಮರ್ಥ್ಯ

ಹೊಸ ಎರ್ಟಿಗಾ ಕಾರಿನಲ್ಲಿ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಈ ಹಿಂದಿನ 1.4-ಲೀಟರ್ ಪೆಟ್ರೋಲ್ ಎಂಜಿನ್ ಬದಲಾಗಿ 1.5-ಲೀಟರ್ ಕೆ-ಸೀರಿಸ್ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದೆ. ಹಾಗೆಯೇ ಡೀಸೆಲ್ ಕಾರು 1.3-ಲೀಟರ್ ಎಂಜಿನ್ ಪಡೆದಿದ್ದು, ಇಂಧನ ದಕ್ಷತೆ ಹೆಚ್ಚಿಸಲು ಎಸ್‍‍ಹೆಚ್‍‍ವಿಎಸ್ ಮೈಲ್ಡ್-ಹೈಬ್ರಿಡ್ ಟೆಕ್ನಾಲಜಿ ಬಳಕೆ ಮಾಡಲಾಗಿದೆ. ಜೊತೆಗೆ ಬೇಡಿಕೆಗೆ ಅನುಗುಣವಾಗಿ 4-ಸ್ಪೀಡ್ ಆಟೋಮ್ಯಾಟಿಕ್ ಮತ್ತು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಪಡೆದಿದೆ.

ದಾಖಲೆಯ ಮಾರಾಟ ಕಂಡ ಹೊಸ ತಲೆಮಾರಿನ ಮಾರುತಿ ಸುಜುಕಿ ಎರ್ಟಿಗಾ

ಮೈಲೇಜ್

ಮಾರುತಿ ಸುಜುಕಿ ಸಂಸ್ಥೆಯು ಹೇಳಿಕೊಂಡಿರುವ ಪ್ರಕಾರ, ಡಿಸೇಲ್ ವರ್ಷನ್‌ಗಳು ಪ್ರತಿ ಲೀಟರ್‌ಗೆ 25 ಕಿ.ಮಿ ಮೈಲೇಜ್ ನೀಡಿದ್ದಲ್ಲಿ ಪೆಟ್ರೋಲ್ ಮಾದರಿಯ ಮ್ಯಾನುವಲ್ ಆವೃತ್ತಿಯು ಪ್ರತಿ ಲೀಟರ್‌ಗೆ 19 ಕಿ.ಮಿ ಮತ್ತು ಆಟೋಮ್ಯಾಟಿಕ್ ಆವೃತ್ತಿಯು ಪ್ರತಿ ಲೀಟರ್‌ಗೆ 18 ಕಿ.ಮಿ ಮೈಲೇಜ್ ಹಿಂದಿರುಗಿಸಲಿದೆ.

Source: IndianAutosBlog

Most Read Articles

Kannada
English summary
Second Generation Maruti Suzuki Ertiga Bags 61000 Sales. Read In Kannada
Story first published: Tuesday, July 30, 2019, 17:31 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X