ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಹೊಸ ಕಾರುಗಳ ಉತ್ಪಾದನೆದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಸ್ಕೋಡಾ ಇಂಡಿಯಾ ಸಂಸ್ಥೆಯು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆ ಅನುಗುಣವಾಗಿ ಮುಂಬರುವ ಎರಡು ವರ್ಷದ ಅವಧಿಯಲ್ಲಿ ವಿವಿಧ ಮಾದರಿಯ ಆರು ಹೊಸ ಕಾರು ಮಾದರಿಗಳನ್ನು ಪರಿಚಯಿಸುವ ಯೋಜನೆಯಲ್ಲಿದೆ.

ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಸ್ಕೋಡಾ ಇಂಡಿಯಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳ ಮಾರಾಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಫೋಕ್ಸ್‌ವ್ಯಾಗನ್ ಸಂಸ್ಥೆ ಜೊತೆಗೂಡಿ ಇಂಡಿಯಾ 2.0 ಎನ್ನುವ ಯೋಜನೆಗೆ ಚಾಲನೆ ನೀಡಿದ್ದು, ಕಾರು ಉತ್ಪಾದನೆಯಲ್ಲಿ ಸುಧಾರಿತ ತಂತ್ರಜ್ಞಾನ ಅಳವಡಿಕೆ ಮತ್ತು ಮಾರಾಟ ಮಳಿಗೆಗಳ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಹೊಸ ಯೋಜನೆ ಅಡಿ ಒಟ್ಟು ಆರು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದು, 2020ರ ಕೊನೆಯಲ್ಲಿ ಕಾಮಿಕ್ ಹೆಸರಿನ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದೆ.

ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಇಂಡಿಯಾ 2.0 ಯೋಜನೆಗಾಗಿ ಬರೋಬ್ಬರಿ ರೂ.200 ಕೋಟಿ ಬಂಡವಾಳ ಹೂಡಿಕೆ ಮಾಡಿರುವ ಸ್ಕೋಡಾ ಸಂಸ್ಥೆಯು ಕಾಮಿಕ್ ಕಂಪ್ಯಾಕ್ಟ್ ಎಸ್‌ಯುವಿ, ಟಿ-ರಾಕ್, ಕರೋಕ್ ಎಸ್‌ಯುವಿ ಸೇರಿದಂತೆ ಒಟ್ಟು ಆರು ಹೊಸ ಕಾರು ಮಾದರಿಗಳನ್ನು ರಸ್ತೆಗಿಳಿಸಲಿದೆ.

ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಸ್ಕೋಡಾ ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ರ‍್ಯಾಪಿಡ್ ಸೆಡಾನ್, ಒಕ್ಟಿವಿಯಾ ಸೆಡಾನ್, ಸೂರ್ಪಬ್ ಸೆಡಾನ್ ಮತ್ತು ಕೊಡಿಯಾಕ್ ಎಸ್‌ಯುವಿ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಆರು ಕಾರುಗಳಲ್ಲಿ ಎರಡು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳಲಾದ ಕಾರು ಮಾದರಿಗಳಾದರೆ ಇನ್ನುಳಿದ ನಾಲ್ಕು ಮಾದರಿಗಳು ಇಂಡಿಯಾ 2.0 ಯೋಜನೆಯಡಿ ಭಾರತದಲ್ಲೇ ನಿರ್ಮಾಣವಾಗಲಿವೆ.

ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಕೇಂದ್ರ ಸರ್ಕಾರವು ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದ್ದು, 2,500 ಕಾರುಗಳನ್ನು ಯಾವುದೇ ಹೆಚ್ಚುವರಿ ತೆರಿಗೆ ಇಲ್ಲದೇ ವಿದೇಶಿ ಮಾರುಕಟ್ಟೆಗಳಿಂದ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಮಾಡುವ ಅವಕಾಶ ಒದಗಿಸಿದೆ. ಈ ಹಿನ್ನಲೆಯಲ್ಲಿ ಬಹುತೇಕ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಕೆಲವು ಕಾರು ಮಾದರಿಗಳನ್ನು ಹೊಸ ನೀತಿಯಡಿ ಆಮದು ಮಾಡಿಕೊಂಡು ಮಾರಾಟ ಮಾಡಲು ನಿರ್ಧರಿಸಿವೆ.

ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಸ್ಕೋಡಾ ಇಂಡಿಯಾ ಕೂಡಾ ಇದೇ ನಿಟ್ಟಿನಲ್ಲಿ ಯುರೋಪ್ ಮಾರುಕಟ್ಟೆಯಿಂದ ಎರಡು ಐಷಾರಾಮಿ ಕಾರು ಆವೃತ್ತಿಗಳನ್ನು ಆಮದು ಮಾಡಿಕೊಳ್ಳಲಿದ್ದು, ಇನ್ನುಳಿದ ನಾಲ್ಕು ಕಾರು ಮಾದರಿಗಳಾದ ಕಾಮಿಕ್, ಕರೋಕ್, ಫೇಸ್‌ಲಿಫ್ಟ್ ಸೂಪರ್ಬ್ ಮತ್ತು ಹೊಸ ತಲೆಮಾರಿನ ರ‍್ಯಾಪಿಡ್ ಸೆಡಾನ್ ಕಾರುಗಳನ್ನು ಇಲ್ಲಿಯೇ ಉತ್ಪಾದನೆ ಮಾಡಿ ಮಾರಾಟ ಮಾಡಲಿದೆ.

ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಹೊಸ ಕಾರುಗಳ ಬಿಡುಗಡೆಯ ಕುರಿತಂತೆ ಓದುಗರೊಬ್ಬರ ಪ್ರಶ್ನೆಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯೆಸಿರುವ ಸ್ಕೋಡಾ ಇಂಡಿಯಾ ಅಧ್ಯಕ್ಷ ಜಾಕ್ ಹೊಲಿಸ್ ಅವರು ಮುಂದಿನ ಎರಡು ವರ್ಷದೊಳಗಾಗಿ ಆರು ಹೊಸ ಕಾರುಗಳು ಮಾರಾಟಕ್ಕೆ ಸಿದ್ದವಾಗುತ್ತಿದ್ದು, ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಯೋಜನೆಯು ಹೊಸ ಭರವಸೆಗೆ ಕಾರಣವಾಗಿದೆ ಎಂದಿದ್ದಾರೆ.

MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?

ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಇನ್ನು ಇಂಡಿಯಾ 2.0 ಯೋಜನೆಗಾಗಿ ಸ್ಕೋಡಾ ಸಂಸ್ಥೆಯು ರೂ.200 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದಲ್ಲಿ ಫೋಕ್ಸ್‌ವ್ಯಾಗನ್ ಸಂಸ್ಥೆಯು 1 ಬಿಲಿಯನ್ ಯುರೋ(ರೂ.8 ಸಾವಿರ ಕೋಟಿ) ಬಂಡವಾಳ ಹೂಡಿಕೆಯೊಂದಿಗೆ ಹಲವು ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದೆ.

MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?

ಮುಂದಿನ 2 ವರ್ಷಗಳ ಅವಧಿಯಲ್ಲಿ ಬಿಡುಗಡೆಯಾಗಲಿವೆ ಸ್ಕೋಡಾದ 6 ಹೊಸ ಕಾರುಗಳು..!

ಹೀಗಾಗಿ ಭಾರತದಲ್ಲಿ ಬಿಡುಗಡೆಯಾಗಲಿರುವ ಸ್ಕೋಡಾ ಕಾರುಗಳು ಭಾರೀ ಸದ್ದು ಮಾಡುವ ನೀರಿಕ್ಷೆಯಲ್ಲಿದ್ದು, ಬೆಲೆ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಳ್ಳುತ್ತಿದೆ. ಇದರಲ್ಲಿ ಮುಂದಿನ ತಿಂಗಳು ಬಿಡುಗಡೆಯಾಗಲಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಆವೃತ್ತಿಯು ರೂ.12 ಲಕ್ಷದಿಂದ ರೂ.16 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಿದ್ದಲ್ಲಿ ಹೊಸ ಸಂಚಲನ ಮೂಡಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

Most Read Articles

Kannada
Read more on ಸ್ಕೋಡಾ skoda
English summary
Skoda Confirms launch of Six new models to India in Next two years. Read in Kannada.
Story first published: Monday, December 2, 2019, 15:52 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X