ಕಾಮಿಕ್ ಮತ್ತು ಕರೋಕ್ ಸೇರಿ ಐದು ಹೊಸ ಕಾರುಗಳನ್ನು ಬಿಡುಗಡೆ ಮಾಡಲಿದೆ ಸ್ಕೋಡಾ
ಹೊಸ ಕಾರುಗಳ ಉತ್ಪಾದನೆದಲ್ಲಿ ಮತ್ತು ಮಾರಾಟ ವಿಭಾಗದಲ್ಲಿ ಮಹತ್ವದ ಬದಲಾವಣೆ ತಂದಿರುವ ಸ್ಕೋಡಾ ಇಂಡಿಯಾ ಸಂಸ್ಥೆಯು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಮಾರುಕಟ್ಟೆಯಲ್ಲಿನ ಬೇಡಿಕೆ ಅನುಗುಣವಾಗಿ ಮುಂಬರುವ 1 ವರ್ಷದಲ್ಲಿ ಐದು ಹೊಸ ಕಾರು ಮಾದರಿಗಳನ್ನು ಪರಿಚಯಿಸುವ ಸುಳಿವು ನೀಡಿದೆ.

ಸ್ಕೋಡಾ ಸಂಸ್ಥೆಯು ಭಾರತೀಯ ಮಾರುಕಟ್ಟೆಯಲ್ಲಿ ಕಾರು ಮಾರಾಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಫೋಕ್ಸ್‌ವ್ಯಾಗನ್ ಸಂಸ್ಥೆಯ ಜೊತೆಗೂಡಿ ಇಂಡಿಯಾ 2.0 ಎನ್ನುವ ಯೋಜನೆಗೆ ಚಾಲನೆ ನೀಡಿದ್ದು, ಕಾರು ಉತ್ಪಾದನೆಯಲ್ಲಿ ಸುಧಾರಿತ ತಂತ್ರಜ್ಞಾನ ಅಳವಡಿಕೆ ಮತ್ತು ಮಾರಾಟ ಮಳಿಗೆಗಳ ವಿಸ್ತರಣೆಗೆ ಹೆಚ್ಚಿನ ಒತ್ತು ನೀಡುತ್ತಿದೆ. ಹೀಗಾಗಿ ಹೊಸ ಯೋಜನೆ ಅಡಿ ಮತ್ತೈದು ಹೊಸ ಕಾರು ಮಾದರಿಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಸ್ಕೋಡಾ ಸಂಸ್ಥೆಯು ಇಂಡಿಯಾ 2.0 ಯೋಜನೆಗಾಗಿ ಬರೋಬ್ಬರಿ ರೂ.200 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಕಾರು ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆಗಾಗಿ ಫೋಕ್ಸ್‌ವ್ಯಾಗನ್ ಕೂಡಾ ಸ್ಕೋಡಾ ಜೊತೆ ಕೈಜೋಡಿಸಿದೆ.

ಹೊಸ ಯೋಜನೆ ಅಡಿಯಲ್ಲಿ ಕಾರು ಉತ್ಪಾದನೆಯಲ್ಲಿ ಬದಲಾವಣೆ ತರುವುದಲ್ಲದೇ ಮಾರುಕಟ್ಟೆಯಲ್ಲಿನ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ವಿವಿಧ ಮಾದರಿಯ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುತ್ತಿದ್ದು, ಮುಂದಿನ ಒಂದು ವರ್ಷದೊಳಗೆ ಕಾಮಿಕ್ ಮತ್ತು ಕರೋಕ್ ಸೇರಿದಂತೆ ಒಟ್ಟು ಐದು ಕಾರುಗಳು ರಸ್ತೆಗಿಳಿಯಲಿವೆ.

ಸದ್ಯ ಮಾರುಕಟ್ಟೆಯಲ್ಲಿ ಸ್ಕೋಡಾ ಸಂಸ್ಥೆಯು ದೇಶಿಯ ಮಾರುಕಟ್ಟೆಯಲ್ಲಿ ರ‍್ಯಾಪಿಡ್ ಸೆಡಾನ್, ಒಕ್ಟಿವಿಯಾ ಸೆಡಾನ್, ಸೂರ್ಪಬ್ ಸೆಡಾನ್ ಮತ್ತು ಕೊಡಿಯಾಕ್ ಎಸ್‌ಯುವಿ ಮಾದರಿಗಳನ್ನು ಮಾರಾಟ ಮಾಡುತ್ತಿದ್ದು, ಬಿಡುಗಡೆಯಾಗಲಿರುವ ಐದು ಕಾರುಗಳಲ್ಲಿ ಎರಡು ವಿದೇಶಿ ಮಾರುಕಟ್ಟೆಗಳಿಂದ ಆಮದು ಮಾಡಿಕೊಳ್ಳಲಾದ ಕಾರು ಮಾದರಿಗಳಾದರೆ ಇನ್ನುಳಿದ ಮೂರು ಹೊಸ ಕಾರುಗಳು ಇಂಡಿಯಾ 2.0 ಯೋಜನೆಯಡಿ ಭಾರತದಲ್ಲೇ ಸಿದ್ದಗೊಳ್ಳಲಿವೆ.

ಕೇಂದ್ರ ಸರ್ಕಾರವು ವಿದೇಶಿ ಆಟೋ ಉತ್ಪಾದನಾ ಸಂಸ್ಥೆಗಳಿಗೆ ಕೆಲವು ವಿನಾಯ್ತಿಗಳನ್ನು ನೀಡಿದ್ದು, 2,500 ಕಾರುಗಳನ್ನು ಯಾವುದೇ ಹೆಚ್ಚುವರಿ ತೆರಿಗೆ ಇಲ್ಲದೇ ವಿದೇಶಿ ಮಾರುಕಟ್ಟೆಗಳಿಂದ ಭಾರತಕ್ಕೆ ಆಮದು ಮಾಡಿಕೊಂಡು ಮಾರಾಟ ಮಾಡುವ ಅವಕಾಶ ಒದಗಿಸಿದೆ.

ಈ ಹಿನ್ನಲೆಯಲ್ಲಿ ಬಹುತೇಕ ಐಷಾರಾಮಿ ಕಾರು ಉತ್ಪಾದನಾ ಸಂಸ್ಥೆಗಳು ವಿದೇಶಿ ಮಾರುಕಟ್ಟೆಯಲ್ಲಿ ಭಾರೀ ಜನಪ್ರಿಯತೆ ಹೊಂದಿರುವ ಕೆಲವು ಕಾರು ಮಾದರಿಗಳನ್ನು ಹೊಸ ಆಮದು ನೀತಿಯಡಿ ಮಾರಾಟ ಮಾಡಲು ನಿರ್ಧರಿಸಿವೆ.

ಸ್ಕೋಡಾ ಇಂಡಿಯಾ ಕೂಡಾ ಇದೇ ನಿಟ್ಟಿನಲ್ಲಿ ಯುರೋಪ್ ಮಾರುಕಟ್ಟೆಯಿಂದ ಎರಡು ಐಷಾರಾಮಿ ಕಾರು ಆವೃತ್ತಿಗಳನ್ನು ಆಮದು ಮಾಡಿಕೊಳ್ಳಲಿದ್ದು, ಇನ್ನುಳಿದ ಮೂರು ಕಾರು ಮಾದರಿಗಳಾದ ಕಾಮಿಕ್, ಕರೋಕ್ ಮತ್ತು ಹೊಸ ತಲೆಮಾರಿನ ರ‍್ಯಾಪಿಡ್ ಸೆಡಾನ್ ಕಾರುಗಳನ್ನು ಇಲ್ಲಿಯೇ ಉತ್ಪಾದನೆ ಮಾಡಿ ಮಾರಾಟ ಮಾಡಲಿದೆ.
MOST READ: ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಬಯಲಾಯ್ತು ಚೀನಿ ಕಂಪನಿಯ ಎಂಜಿ ಕಾರಿನ ಅಸಲಿಯತ್ತು..!

ಈ ಕುರಿತಂತೆ ಸುದ್ದಿಮಾಧ್ಯಮಗಳ ಸಂದರ್ಶನದಲ್ಲಿ ಮಾತನಾಡಿದ ಸ್ಕೋಡಾ ಇಂಡಿಯಾ ಅಧ್ಯಕ್ಷ ಜಾಕ್ ಹೊಲಿಸ್ ಅವರು ಮುಂದಿನ ಒಂದು ವರ್ಷದೊಳಗಾಗಿ ಐದು ಹೊಸ ಕಾರುಗಳು ಮಾರಾಟಕ್ಕೆ ಸಿದ್ದವಾಗುತ್ತಿದ್ದು, ಫೋಕ್ಸ್‌ವ್ಯಾಗನ್ ಜೊತೆಗಿನ ಇಂಡಿಯಾ 2.0 ಯೋಜನೆಯು ಹೊಸ ಭರವಸೆಗೆ ಕಾರಣವಾಗಿದೆ ಎಂದಿದ್ದಾರೆ.
MOST READ: ರೂ. 5 ಲಕ್ಷದೊಳಗೆ ದೊರೆಯುವ ಟಾಪ್ ಕಾರ್‍ಗಳು

ಇನ್ನು 2.0-ಇಂಡಿಯಾ ಯೋಜನೆಗಾಗಿ ಸ್ಕೋಡಾ ಸಂಸ್ಥೆಯು ರೂ.200 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದಲ್ಲಿ ಫೋಕ್ಸ್‌ವ್ಯಾಗನ್ ಸಂಸ್ಥೆಯು 1 ಬಿಲಿಯನ್ ಯುರೋ(ರೂ.8 ಸಾವಿರ ಕೋಟಿ) ಬಂಡವಾಳ ಹೂಡಿಕೆಯೊಂದಿಗೆ ಹಲವು ಅಭಿವೃದ್ದಿ ಯೋಜನೆಗಳಿಗೆ ಚಾಲನೆ ನೀಡಿದೆ.
Source: ET Auto


Click it and Unblock the Notifications