ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಸ್ಕೋಡಾ ಕಂಪನಿಯ ಹೊಸ ಕಾಮಿಕ್ ಭಾರತದಲ್ಲಿ ಸ್ಪಾಟ್ ಟೆಸ್ಟ್ ಮಾಡಲಾಗಿದೆ. ಸ್ಕೋಡಾ ಕಾಮಿಕ್ ಸ್ಪಾಟ್ ಟೆಸ್ಟ್ ನಡೆಸುತ್ತಿರುವ ಸ್ಪೈ ಚಿತ್ರವನು ಓವರ್‍‍ಡ್ರೈವ್ ಬಹಿರಂಗಪಡಿಸಿದೆ. ಸ್ಕೋಡಾ ಕಾಮಿಕ್ ತನ್ನ ಇಂಡಿಯಾ 2.0 ಯೋಜನೆಯಡಿಯಲ್ಲಿ ಮೊದಲ ವಾಹನವಾಗಬಹುದು.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಸ್ಕೋಡಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬರ್ನ್ಹಾರ್ಡ್ ಮೇಯರ್ ಅವರು ಮಾತನಾಡಿ, ಇತ್ತೀಚಿಗೆ ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯು ಹೆಚ್ಚಾಗಿ ಎಸ್‍‍ಯುವಿಗಳನ್ನು ಬಿಡುಗಡೆಗೊಳಿಸಲು ಚಿಂತಿಸಿದೆ. ಸ್ಕೋಡಾ ಇಂಡಿಯಾ 2.0 ಯೋಜನೆಯಡಿಯಲ್ಲಿ ಮುಂದಿನ ಎರಡು ವರ್ಷಗಳಲ್ಲಿ ಆರು ಹೊಸ ಮಾದರಿಗಳನ್ನು ಬಿಡುಗಡೆಗೊಳಿಸಲು ಸಾಧ್ಯತೆಗಳಿವೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಸ್ಪಾಟ್ ಟೆಸ್ಟ್ ನಲ್ಲಿ ಕಂಡುಬಂದ ಸ್ಕೋಡಾ ಕಾಮಿಕ್ ದೇಶಿಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ. ಈ ಕಾರಿನ ವಿನ್ಯಾಸವು ಆಕರ್ಷಕರವಾಗಿದೆ. ಈ ಕಾರಿನಲ್ಲಿ ಸ್ಕೋಡಾ ಇತರ ಕಾರಿನ ಮಾದರಿಯ ಶಾರ್ಪ್ ಲೈನ್‍‍ಗಳನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಹೊಸ ಸ್ಕೋಡಾ ಕಾಮಿಕ್‍‍ನ ಇಂಟಿರಿಯರ್‍‍ನಲ್ಲಿ ವರ್ಚುವಲ್ ಕಾಕ್‍‍ಪಿಟ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, 9.2 ಇಂಚಿನ ಇನ್ಫೋಟೇನ್‍‍ಮೆಂಟ್ ಸಿಸ್ಟಂ, ಡೋರ್ ಎಡ್ಜ್ ಪ್ರೊಟೆಕ್ಟರ್ ಮತ್ತು ಅಂಬ್ರೆಲಾ ಪ್ರೊಟೆಕ್ಟರ್ ಅನ್ನು ಹೊಂದಿದೆ. ಮುಂಭಾಗದ ಮತ್ತು ಹಿಂಭಾಗದ ಪ್ರಯಾಣಿಕರಿಗೆ ಆರ್ಮ್ ರೆಸ್ಟ್ ಮತ್ತು ಕ್ಲೈಮೇಟ್ ಕಂಟ್ರೋಲ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಸ್ಕೋಡಾ ಕಾಮಿಕ್ ಯುರುಪಿಯನ್ ಮಾದರಿಯಲ್ಲಿ ಮೂರು ರೀತಿಯ ಎಂಜಿನ್ ಆಯ್ಕೆಗಳನ್ನು ನೀಡಿದೆ. ಇದರಲ್ಲಿ 1.0 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ , 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮತ್ತು 1.6 ಲೀಟರ್ ಡೀಸೆಲ್ ಎಂಜಿನ್ ಅನ್ನು ಹೊಂದಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಭಾರತದಲ್ಲಿ ಬಿಡುಗಡೆಗೊಳಿಸುವ ಕಾರಿನಲ್ಲಿ ಯಾವ ಎಂಜಿನ್ ಆಯ್ಕೆಯನ್ನು ಹೊಂದಿರಲಿದೆ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದರೆ ಕಾಮಿಕ್ ಸ್ಕೋಡಾ ಕಂಪನಿಯ ಸರಣಿಯ ರಾಪಿಡ್ ಕಾರಿನ ಎಂಜಿನ್ ಅನ್ನು ಹೊಂದಿರುವ ಸಾಧ್ಯತೆಗಳಿದೆ.

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಸ್ಕೋಡಾ ರಾಪಿಡ್ ಸೆಡಾನ್ ಎರಡು ಎಂಜಿನ್ ಆಯ್ಕೆಗಳನ್ನು ಹೊಂದಿರಲಿದೆ. ಇದರಲ್ಲಿ 1.6 ಲೀಟರ್ ಪೆಟ್ರೋಲ್ ಎಂಜಿನ್ 104 ಬಿ‍‍ಹೆಚ್‍‍ಪಿ ಪವರ್ ಮತ್ತು 153 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಹೆ 5 ಸ್ಪೀಡ್ ಮ್ಯಾನುವಲ್ ಮತ್ತು 6 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಹೊಂದಿರುತ್ತದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಇನ್ನೂ 1.5 ಲೀಟರ್ ಎಂಜಿನ್ 109 ಬಿ‍ಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 5 ಸ್ಪೀಡ್ ಮ್ಯಾನುವಲ್ ಮತ್ತು 7 ಸ್ಪೀಡ್ ಡಿಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಹೊಂದಿರಲಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಸ್ಕೋಡಾ ಕಾಮಿಕ್ ಬೆಲೆಯ ಬಗ್ಗೆ ಯಾವುದೇ ಮಾಹಿತಿಗಳು ಇಲ್ಲ. ಆದರೆ ಭಾರತದ ಎಕ್ಸ್ ಶೋರೂಂ ಪ್ರಕಾರ ಸ್ಕೋಡಾ ಕಾಮಿಕ್ ಬೆಲೆಯು ರೂ.12 ಲಕ್ಷ ಮತ್ತು 15 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸಬಹುದು.

MOST READ: ಸದ್ದಿಲ್ಲದೇ ಕಾರುಗಳನ್ನು ರಿಕಾಲ್ ಮಾಡುತ್ತಿದೆ ಮಾರುತಿ

ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ ಸ್ಕೋಡಾ ಕಾಮಿಕ್

ಸ್ಕೋಡಾ ಕಂಪನಿಯ ಹೊಸ ಸ್ಕೋಡಾ ಕಾಮಿಕ್ ಭಾರತದಲ್ಲಿ ಸ್ಪಾಟ್ ಟೆಸ್ಟ್ ಮಾಡಲಾಗಿದೆ. ಸ್ಕೋಡಾ ಕಂಪನಿಯು ಈ ಎಸ್‍ಯುವಿಯನ್ನು ಭಾರತದಲ್ಲಿ ಮುಂದಿನ ವರ್ಷ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ. ಸ್ಕೋಡಾ ಕಾಮಿಕ್ ತನ್ನ ಇಂಡಿಯಾ 2.0 ಯೋಜನೆಯಡಿಯ ಮೊದಲ ವಾಹನವಾಗಬಹುದು.

More from DriveSpark

Article Published On: Monday, December 2, 2019, 19:37 [IST]
English summary
Spy Pics: Skoda Kamiq Spotted Testing Ahead Of India Launch - Read in Kannada
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+