ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಸ್ಕೋಡಾ ಆಟೋ ಇಂಡಿಯಾ ಹೊಸ ಕರೋಕ್ ಎಸ್‍‍‍ಯುವಿಯನ್ನು ಭಾರತದಲ್ಲಿ 2020ರ ಏಪ್ರಿಲ್‍‍ನಲ್ಲಿ ಬಿಡುಗಡೆಗೊಳಿಸಲಿದೆ. ಮುಂದಿನ ವರ್ಷ ನಡೆಯಲಿರುವ ದೆಹಲಿ ಆಟೋ ಎಕ್ಸ್ ಪೋದಲ್ಲಿ ಈ ಕಾರ್ ಅನ್ನು ಅನಾವರಣಗೊಳಿಸುವ ನಿರೀಕ್ಷೆಗಳಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಬಿಡುಗಡೆಗೊಳಿಸುವ ಮಾಹಿತಿಯನ್ನು ಸ್ಕೋಡಾ ಆಟೋ ಇಂಡಿಯಾದ, ಸೇಲ್ಸ್ ಸರ್ವಿಸ್ ಆಂಡ್ ಮಾರ್ಕೆಟಿಂಗ್ ಡೈರಕ್ಟರ್ ಝಾಕ್ ಹೋಲಿಸ್ ಅವರು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಹೊಸ ಸ್ಕೋಡಾ ಕರೋಕ್ ಆರಂಭದಲ್ಲಿ (ಸಿಬಿ‍ಯು) ಕಂಪ್ಲೀಟ್ ಬಿಲ್ಟ್ ಯುನಿಟ್ ಆಗಿ ಲಭ್ಯವಿರುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಬಿಡುಗಡೆಯ ಸಮಯದಲ್ಲಿ ಪೆಟ್ರೋಲ್ ಎಂಜಿನ್‍‍ನೊಂದಿಗೆ ಮಾತ್ರ ಈ ಕಾರ್ ಲಭ್ಯವಿರುತ್ತದೆ ಎಂದು ಹೋಲಿಸ್ ಖಚಿತ ಪಡಿಸಿದ್ದಾರೆ. ಮುಂಬರುವ ಸ್ಕೋಡಾ ಕರೋಕ್ ಎಸ್‍‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಈ ಎಸ್‍ಯುವಿಯ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್ ಲೆದರ್ ಅಪ್‍‍ಹೋಲೆಸ್ಟರಿ ಸೀಟುಗಳನ್ನು ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಸ್ಕೋಡಾ ಕರೋಕ್ ಎಸ್‍‍ಯುವಿ ಹಲವಾರು ಆಧುನಿಕ ಫೀಚರ್ಸ್‍‍ಗಳನ್ನು ಹೊಂದಿರಲಿದೆ. ಈ ಹೊಸ ಎಸ್‍‍ಯುವಿಯ ಕ್ಯಾಬಿನ್ ಬ್ಲಾಕ್ ಮತ್ತು ಬೀಜ್ ಬಣ್ಣಗಳಲ್ಲಿ ಲಭ್ಯವಿರಲಿದೆ. ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿರುವ ಕರೋಕ್ ಎಸ್‍‍ಯುವಿಯ ಎಂಜಿನ್‍‍ಗಳ ಆಯ್ಕೆಗಳ ಮಾಹಿತಿಯನ್ನು ಹೋಲಿಸ್ ಅವರು ಬಹಿರಂಗಪಡಿಸಲಿಲ್ಲ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಈ ಎಸ್‍ಯುವಿಯು 1.0 ಲೀಟರ್ ಟಿಎಸ್ಐ ಪೆಟ್ರೀಲ್ ಎಂಜಿನ್ 113 ಬಿ‍‍ಹೆಚ್‍‍ಪಿ ಪವರ್ ಮತ್ತು 175 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಧ್ಯತೆಗಳಿದೆ. ಇನ್ನೂ 1.5 ಲೀಟರ್ ಟಿ‍ಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಈ ಎಂಜಿನ್ 148 ಬಿ‍‍ಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಕಂಪನಿಯು ಹೊಸ ಕರೋಕ್ ಎಸ್‍‍ಯುವಿಯನ್ನು ಡೀಸೆಲ್ ಎಂಜಿನ್‍‍ನಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಸ್ಕೋಡಾ ಕರೋಕ್ ಎಸ್‍‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ. ಸ್ಕೋಡಾ ಕರೋಕ್ ಎಸ್‍‍ಯುವಿಯು ಭಾರತದಲ್ಲಿ ಬಿಡುಗಡೆಯಾದ ಬಳಿಕ ಎಂಜಿ ಹೆಕ್ಟರ್, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಟಕ್ಸನ್ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಸ್ಕೋಡಾ, ಹೊಸ ಆಕ್ಟೀವಿಯಾ ಆರ್‍ಎಸ್ 245 ಕಾರ್ ಅನ್ನು ದೆಹಲಿ ಆಟೋ ಎಕ್ಸ್ ಪೋದಲ್ಲಿ 2020ರಲ್ಲಿ ಅನಾವರಣಗೊಳಿಸಲು ಸಜ್ಜಾಗಿದೆ. ಭಾರತದಲ್ಲಿ ಆಕ್ಟೀವಿಯಾ ಆರ್‍ಎಸ್ ಕಾರಿನ 200 ಯುನಿ‍‍ಟ್‍ಗಳನ್ನು ಮಾತ್ರ ಬಿಡುಗಡೆಗೊಳಿಸಲಿದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್

ಈ ಕಾರಿನ ಬುಕ್ಕಿಂಗ್ ಮುಂದಿನ ವರ್ಷ ನಡೆಯಲಿರುವ ದೆಹಲಿ ಆಟೋ ಎಕ್ಸ್ ಪೋದಲ್ಲಿ ಆರಂಭವಾಗಲಿದೆ. ದೇಶಿಯ ಮಾರುಕಟ್ಟೆಯಲ್ಲಿ ಒಂದು ಕಾಲದಲ್ಲಿ ಪ್ರಾಬಲ್ಯ ಮೆರೆಯುತ್ತಿದ್ದ ಸ್ಕೋಡಾ ನಿಧಾನವಾಗಿ ತನ್ನ ಬೇಡಿಕೆಯನ್ನು ಕಳೆದುಕೊಂಡಿದೆ. ಇದರಿಂದ ಮತ್ತೆ ಭಾರತದ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಲು ಸಜ್ಜಾಗುತ್ತಿದೆ. ಸ್ಕೋಡಾ ಮುಂದಿನ ಎರಡು ವರ್ಷಗಳಲ್ಲಿ ಆರು ಕಾರುಗಳನ್ನು ಬಿಡುಗಡೆಗೊಳಿಸುತ್ತಿದೆ.

Article Published On: Monday, December 16, 2019, 15:54 [IST]
English summary
Skoda Karoq India Launch Confirmed For April 2020 - Read in Kannada
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+