Just In
- 5 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 5 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 7 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 7 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್ಎಸ್ 245 ಟೀಸರ್
ಸ್ಕೋಡಾ ಇಂಡಿಯಾ ತನ್ನ ಹೊಸ ಆಕ್ಟೀವಿಯಾ ವಿಆರ್ಎಸ್ 245 ಕಾರಿನ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಆಕ್ಟೀವಿಯಾ ವಿಆರ್ಎಸ್ ಕಾರ್ ಅನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲಾಗುವುದು.
ಈ ಹೊಸ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಲ್ಲಿ ಒಂದಾಗಿದೆ. ಸ್ಕೋಡಾ ಅಕ್ಟೀವಿಯಾ ವಿಆರ್ಎಸ್ ಕಾರ್ ಅನ್ನು ಮೊದಲ ಬಾರಿಗೆ 2017ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು.
ಆಕ್ಟೀವಿಯಾ ವಿಆರ್ಎಸ್ ಮಾದರಿಯು ಬಿಡುಗಡೆಯಾದ ಮೊದಲ ವಾರದಲ್ಲಿ 250 ಯುನಿಟ್ಗಳು ಮಾರಾಟವಾಗಿದ್ದವು. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಆಕ್ಟೀವಿಯಾ ವಿಆರ್ಎಸ್ ಒಂದಾಗಿದೆ.
ವಿಆರ್ಎಸ್ ಮಾದರಿಯು ಪ್ರಸ್ತುತ ತಲೆಮಾರಿನ ಸ್ಕೋಡಾ ಆಕ್ಟೀವಿಯಾವನ್ನು ಆಧರಿಸಿದೆ ಎಂದು ಟೀಸರ್ನಿಂದ ಬಹಿರಂಗವಾಗಿದೆ. ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್ನಲ್ಲಿ ವಿಆರ್ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್ಲ್ಯಾಂಪ್ಗಳನ್ನು ಒಳಗೊಂಡಿದೆ.
ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಸ್ಕೋಡಾ ಆಕ್ಟೀವಿಯಾ ವಿಆರ್ಎಸ್ 245 ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆರ್ವಿಎಂಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್ಗಳು, ವೈಡರ್ ಏರ್ ಡ್ಯಾಮ್ಗಳು ಮತ್ತು ಫ್ರಂಟ್ ಬಂಪರ್ಗಳನ್ನು ಹೊಂದಿದೆ.
ಈ ಸೆಡಾನ್ 30 ಎಂಎಂ ಅಗಲದ ರೇರ್ ಟ್ರ್ಯಾಕ್ನಲ್ಲಿ 15 ಎಂಎಂ ಕಡಿಮೆ ಇರುತ್ತದೆ. ವಾಹನವು ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್ಲ್ಯಾಂಪ್ಗಳನ್ನು ಒಳಗೊಂಡಿದೆ. ಇಂಟಿರಿಯರ್ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್ನೆಟ್ ಕನೆಕ್ಟಿವಿಟಿ ಫೀಚರ್ಸ್ಗಳೊಂದಿಗೆ ಎಂಟು ಇಂಚಿನ ಟಚ್ಸ್ಕ್ರೀನ್ ಇನ್ಫೋಟೇನ್ಮೆಂಟ್ ಸಿಸ್ಟಂ ಅನ್ನು ಅಳವಡಿಸಿದೆ.
ಮುಂಬರುವ ಸ್ಕೋಡಾ ಆಕ್ಟೀವಿಯಾ ವಿಆರ್ಎಸ್ 2.0 ಲೀಟರ್ ಟರ್ಬೋಜಾರ್ಜ್ಡ್ ಟಿಎಸ್ಐ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 245 ಬಿಹೆಚ್ಪಿ ಪವರ್ ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 7 ಸ್ಪೀಡ್ ಡಿಎಸ್ಜಿ ಆಟೋಮ್ಯಾಟಿಕ್ ಗೇರ್ಬಾಕ್ಸ್ ಅನ್ನು ಅಳವಡಿಸಲಾಗಿದೆ.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!
ಈ ಸೆಡಾನ್ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಮುಂದಿನ ಎರಡು ವರ್ಷಗಳಲ್ಲಿ ಸ್ಕೋಡಾ ಭಾರತದಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಆರು ಕಾರುಗಳಲ್ಲಿ ಸ್ಕೋಡಾ ಆಕ್ಟೀವಿಯಾ ವಿಆರ್ಎಸ್ ಕೂಡ ಒಂದಾಗಿದೆ.
MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!
ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್ ಪೋದಲ್ಲಿ ಈ ಕಾರ್ ಅನ್ನು ಅನಾವರಣಗೊಳಿಸುವ ಸಾಧ್ಯತೆಗಳಿವೆ. ಸ್ಕೋಡಾ 2.0 ಯೋಜನೆಯಡಿಯಲ್ಲಿ ಈ ಕಾರ್ ಅನ್ನು ಕೂಡ ಬಿಡುಗಡೆ ಮಾಡಲಿದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!
ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿದೆ. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಬಹುನೀರಿಕ್ಷಿತ ಸ್ಕೋಡಾ ಆಕ್ಟೀವಿಯಾ ವಿಆರ್ಎಸ್ ಕಾರು ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ. ಶೀಘ್ರದಲ್ಲೇ ಸ್ಕೋಡಾ ಆಕ್ಟೀವಿಯಾ ವಿಆರ್ಎಸ್ ಕಾರ್ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.