ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ಸ್ಕೋಡಾ ಇಂಡಿಯಾ ತನ್ನ ಹೊಸ ಆಕ್ಟೀವಿಯಾ ವಿಆರ್‍ಎಸ್ 245 ಕಾರಿನ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಆಕ್ಟೀವಿಯಾ ವಿ‍ಆರ್‍ಎಸ್ ಕಾರ್ ಅನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆಗೊಳಿಸಲಾಗುವುದು.

ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ಈ ಹೊಸ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಕಾರುಗಳಲ್ಲಿ ಒಂದಾಗಿದೆ. ಸ್ಕೋಡಾ ಅಕ್ಟೀವಿಯಾ ವಿ‍ಆರ್‍ಎಸ್ ಕಾರ್ ಅನ್ನು ಮೊದಲ ಬಾರಿಗೆ 2017ರಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು.

ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ಆಕ್ಟೀವಿಯಾ ವಿಆರ್‍ಎಸ್ ಮಾದರಿಯು ಬಿಡುಗಡೆಯಾದ ಮೊದಲ ವಾರದಲ್ಲಿ 250 ಯು‍‍ನಿ‍‍ಟ್‍ಗಳು ಮಾರಾಟವಾಗಿದ್ದವು. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಆಕ್ಟೀವಿಯಾ ವಿಆರ್‍ಎಸ್ ಒಂದಾಗಿದೆ.

ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ವಿ‍ಆರ್‍ಎಸ್ ಮಾದರಿಯು ಪ್ರಸ್ತುತ ತಲೆಮಾರಿನ ಸ್ಕೋಡಾ ಆಕ್ಟೀವಿಯಾವನ್ನು ಆಧರಿಸಿದೆ ಎಂದು ಟೀಸರ್‍‍ನಿಂದ ಬಹಿರಂಗವಾಗಿದೆ. ಇಂಟಿಗ್ರೇಟೆಡ್ ಡೇಟೈಮ್ ರನ್ನಿಂಗ್ ಲೈಟ್, ಟ್ರೆಪೆಜ್ ಆಕರಾದ ಎಕ್ಸಾಸ್ಟ್ ಟಿಪ್ಸ್ ಮತ್ತು ಮುಂಭಾಗದಲ್ಲಿ ಬ್ಲ್ಯಾಕ್ ಗ್ರಿಲ್‍‍ನಲ್ಲಿ ವಿ‍ಆರ್‍ಎಸ್ ಬ್ಯಾಡ್ಜ್ ಹೊಂದಿರುವ ಡ್ಯುಯಲ್ ಸ್ಪ್ಲಿಟ್ ಹೆಡ್‍‍ಲ್ಯಾಂಪ್‍‍ಗಳನ್ನು ಒಳಗೊಂಡಿದೆ.

ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಬ್ಲ್ಯಾಕ್ ಗ್ರಿಲ್, ಮ್ಯಾಚಿಂಗ್ ಒಆ‍‍ರ್‍‍ವಿಎಂ‍ಗಳು ದೊಡ್ಡದಾದ 19 ಇಂಚಿನ ಅಲಾಯ್ ವ್ಹೀಲ್‍‍ಗಳು, ವೈಡರ್ ಏ‍‍ರ್ ಡ್ಯಾಮ್‍‍ಗಳು ಮತ್ತು ಫ್ರಂಟ್ ಬಂಪರ್‍‍ಗಳನ್ನು ಹೊಂದಿದೆ.

ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ಈ ಸೆಡಾನ್ 30 ಎಂಎಂ ಅಗಲದ ರೇರ್ ಟ್ರ್ಯಾಕ್‍ನಲ್ಲಿ 15 ಎಂಎಂ ಕಡಿಮೆ ಇರುತ್ತದೆ. ವಾಹನವು ಬೂಟ್ ಲಿಡ್ ಸ್ಪಾಯ್ಲರ್ ಮತ್ತು ಹಿಂಭಾಗದಲ್ಲಿ ಸಿ - ಆಕಾರಾದ ಟೇಲ್‍‍ಲ್ಯಾಂಪ್‍‍ಗಳನ್ನು ಒಳಗೊಂಡಿದೆ. ಇಂಟಿರಿಯರ್‍‍ನಲ್ಲಿ ಎಲೆಕ್ಟ್ರಾನಿಕಾನಿಕಲ್ ಅಡ್ಜಂಟಬಲ್ ಫ್ರಂಟ್ ಸೀಟ್ ಮುಂಭಾಗದ ಸೀಟ್‍ ಅಲ್ಕಾಂಟರ್ ಲೆದರ್, ಸ್ಟ್ಯಾಂಡರ್ಡ್ ಲ್ಯಾಪ್ ಟೈಮರ್ ಮತ್ತು ಇಂಟರ್‍‍ನೆಟ್ ಕನೆಕ್ಟಿವಿಟಿ ಫೀಚರ್ಸ್‍‍ಗಳೊಂದಿಗೆ ಎಂಟು ಇಂಚಿನ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್‍ ಸಿಸ್ಟಂ ಅನ್ನು ಅಳವಡಿಸಿದೆ.

ಮುಂಬರುವ ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್‍ 2.0 ಲೀಟರ್ ಟರ್ಬೋಜಾರ್ಜ್ಡ್ ಟಿ‍ಎಸ್ಐ ಸಿಲಿಂಡರ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 245 ಬಿ‍‍ಹೆಚ್‍‍ಪಿ ಪವರ್ ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 7 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಮತ್ತು 7 ಸ್ಪೀಡ್ ಡಿ‍ಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ಈ ಸೆಡಾನ್ 6.6 ಸೆಕೆಂಡುಗಳಲ್ಲಿ 0 ದಿಂದ 100 ಕಿ.ಮೀ ವೇಗವನ್ನು ಕ್ರಮಿಸುತ್ತದೆ. ಮುಂದಿನ ಎರಡು ವರ್ಷಗಳಲ್ಲಿ ಸ್ಕೋಡಾ ಭಾರತದಲ್ಲಿ ಬಿಡುಗಡೆ ಮಾಡಲು ಯೋಜಿಸಿರುವ ಆರು ಕಾರುಗಳಲ್ಲಿ ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ ಕೂಡ ಒಂದಾಗಿದೆ.

MOST READ: ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿದ ಸಚಿವ ನಿತಿನ್ ಗಡ್ಕರಿ ..!

ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ಮುಂದಿನ ವರ್ಷ ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್ ಪೋದಲ್ಲಿ ಈ ಕಾರ್ ಅನ್ನು ಅನಾವರಣಗೊಳಿಸುವ ಸಾಧ್ಯತೆಗಳಿವೆ. ಸ್ಕೋಡಾ 2.0 ಯೋಜನೆಯಡಿಯಲ್ಲಿ ಈ ಕಾರ್ ಅನ್ನು ಕೂಡ ಬಿಡುಗಡೆ ಮಾಡಲಿದೆ.

MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಬಿಡುಗಡೆಯಾಯ್ತು ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ 245 ಟೀಸರ್

ಉತ್ತಮ ಕಾರ್ಯಕ್ಷಮತೆಯನ್ನು ಹೊಂದಿರುವ ಸೆಡಾನ್ ಆಗಿದೆ. ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಬಹುನೀರಿಕ್ಷಿತ ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ ಕಾರು ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ. ಶೀಘ್ರದಲ್ಲೇ ಸ್ಕೋಡಾ ಆಕ್ಟೀವಿಯಾ ವಿಆರ್‍ಎಸ್ ಕಾರ್ ದೇಶಿಯ ಮಾರುಕಟ್ಟೆಗೆ ಲಗ್ಗೆ ಇಡಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda Octavia VRS 245 Official Teaser Released: Launching In India Next Year - Read in Kannada
Story first published: Wednesday, December 4, 2019, 12:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X