ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

2020ರ ಏಪ್ರಿಲ್ 1ರಿಂದ ಬಿಎಸ್-6 ನಿಯಮ ಕಡ್ಡಾಯವಾಗಿ ಜಾರಿಗೆ ಬರುತ್ತಿದ್ದು, ಹೊಸ ಎಂಜಿನ್ ಆಯ್ಕೆಯಿಂದಾಗಿ ಕಾರು ಖರೀದಿದಾರರು ಡೀಸೆಲ್ ಕಾರುಗಳಿಂತಲೂ ಹೆಚ್ಚು ಪೆಟ್ರೋಲ್ ಕಾರುಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಹೌದು, ಬಿಎಸ್-6 ನಿಯಮ ಜಾರಿಯಾಗುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಬಿಎಸ್-4 ಎಂಜಿನ್‌ಗಳನ್ನು ಉನ್ನತೀಕರಿಸಲಾಗುತ್ತಿದ್ದು, ಹೊಸ ನಿಯಮ ಪಾಲನೆ ಮಾಡಲು ಸಾಧ್ಯವಿಲ್ಲದ ಬಹುತೇಕ ಡೀಸೆಲ್ ಎಂಜಿನ್ ಮಾದರಿಗಳನ್ನು ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಆಟೋ ಉತ್ಪಾದನಾ ಸಂಸ್ಥೆಗಳು ಡೀಸೆಲ್ ಕಾರು ಮಾದರಿಗಳ ಮೇಲೆ ಹೆಚ್ಚು ತಲೆಕೆಡಿಸಿಕೊಳ್ಳದೆ ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಮಾದರಿಗಳನ್ನು ಹೆಚ್ಚಿಸುತ್ತಿವೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಇದರಿಂದ ಗ್ರಾಹಕರು ಕೂಡಾ ಬಿಎಸ್-6 ಜಾರಿ ನಂತರ ದುಬಾರಿಯಾಗಲಿರುವ ಡೀಸೆಲ್ ಎಂಜಿನ್ ಆಯ್ಕೆಯಿಂದ ದೂರವಾಗುತ್ತಿದ್ದು, ಪೆಟ್ರೋಲ್ ಮತ್ತು ಪೆಟ್ರೋಲ್ ಹೈಬ್ರಿಡ್ ಮಾದರಿಗಳ ಮೇಲೆ ಹೆಚ್ಚು ಗಮನಹರಿಸುತ್ತಿದ್ದಾರೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಜೊತೆಗೆ ಮುಂಬರುವ ದಿನಗಳಲ್ಲಿ ಜಾರಿ ಬರಲಿರುವ ಸ್ಕ್ರ್ಯಾಪಿಂಗ್ ನೀತಿ ಕೂಡಾ ಕಾರು ಮಾದರಿಯ ಆಯ್ಕೆಯಲ್ಲಿನ ಬದಲಾವಣೆಗೆ ಪ್ರಮುಖ ಕಾರಣವಾಗಿದ್ದು, ಡೀಸೆಲ್ ಕಾರುಗಳಿಂತ ಪೆಟ್ರೋಲ್ ಮತ್ತು ಹೈಬ್ರಿಡ್ ಕಾರುಗಳಿಗೆ ಆಯಸ್ಸು ಹೆಚ್ಚು ಎನ್ನುವುದು ಕೂಡಾ ಒಂದು ಪ್ರಮುಖ ಕಾರಣವಾಗಿದೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಈ ಹಿಂದೆ ಕಾರು ಖರೀದಿದಾರರು ಹೆಚ್ಚಿನ ಮಟ್ಟದ ಮೈಲೇಜ್ ನೀಡುತ್ತೆ ಎನ್ನುವ ಕಾರಣಕ್ಕಾಗಿಯೇ ಡೀಸೆಲ್ ಎಂಜಿನ್ ಕಾರುಗಳನ್ನೇ ಹೆಚ್ಚು ಆಯ್ಕೆ ಮಾಡುತ್ತಿದ್ದರು. ಆದರೆ ಬದಲಾದ ಮಾರುಕಟ್ಟೆಯ ಸನ್ನಿವೇಶದಿಂದಾಗಿ ಪೆಟ್ರೋಲ್ ಕಾರುಗಳು ಸಹ ಡೀಸೆಲ್ ಕಾರುಗಳಿಗೆ ಸಮನಾಗಿ ಮಾರಾಟವಾಗುತ್ತಿದ್ದು, ಬೆಲೆಯಲ್ಲೂ ಕೂಡಾ ಪೆಟ್ರೋಲ್ ಕಾರುಗಳು ವ್ಯಯಕ್ತಿಕ ಕಾರು ಖರೀದಿದಾರರನ್ನು ಗಮನಸೆಳೆಯುತ್ತಿವೆ. ಹೀಗಾಗಿ ವಾಣಿಜ್ಯ ಬಳಕೆಗಾಗಿ ಮಾತ್ರವೇ ಹೆಚ್ಚಿನ ಗ್ರಾಹಕರು ಡೀಸೆಲ್ ಕಾರುಗಳನ್ನು ಮತ್ತು ವ್ಯಯಕ್ತಿಕ ಬಳಕೆಗೆ ಪೆಟ್ರೋಲ್ ಕಾರುಗಳ ಆಯ್ಕೆ ಹೆಚ್ಚುತ್ತಿದೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಇದೇ ಕಾರಣಕ್ಕೆ ಈ ಹಿಂದೆ ಡೀಸೆಲ್ ಕಾರುಗಳ ಮೇಲೆ ಹೆಚ್ಚು ಜನಪ್ರಿಯವಾಗಿದ್ದ ಕೆಲವು ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆಗಳು ಇದೀಗ ಪೆಟ್ರೋಲ್ ಕಾರುಗಳ ಆಯ್ಕೆ ಹೆಚ್ಚಿಸುತ್ತಿದ್ದು, ಇದು ಮಾಲಿನ್ಯ ತಡೆಯಲು ಪ್ರಯತ್ನಿಸುತ್ತಿರುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗೆ ಸಾಕಷ್ಟು ಪೂರಕವಾಗಿದೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಇನ್ನು ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳ ಬಿಡುಗಡೆ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದ್ದು, ಡೆಡ್‌ಲೈನ್‌ಗೂ ಮುನ್ನವೇ ಮಾರುತಿ ಸುಜುಕಿ, ಹ್ಯುಂಡೈ ಸಂಸ್ಥೆಗಳು ಹೊಸ ಕಾರುಗಳನ್ನು ಬಿಡುಗಡೆ ಮಾಡಿದ್ದಲ್ಲಿ ಮಹೀಂದ್ರಾ, ಟಾಟಾ ಮೋಟಾರ್ಸ್, ಫೋರ್ಡ್, ರೆನಾಲ್ಟ್ ಸೇರಿದಂತೆ ಬಹುತೇಕ ಆಟೋ ಉತ್ಪಾದನಾ ಸಂಸ್ಥೆಗಳು ತಮ್ಮ ಹೊಸ ಬಿಎಸ್-6 ಎಂಜಿನ್ ಪ್ರೇರಿತ ವಾಹನಗಳನ್ನು ಬಿಡುಗಡೆಗೊಳಿಸುವ ನಿಟ್ಟಿನಲ್ಲಿ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿವೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಇದರಲ್ಲಿ ನೆಕ್ಸ್ಟ್ ಜನರೇಷನ್ ಸ್ಕಾರ್ಪಿಯೋ, ಬಲೆರೊ, ಎಕ್ಸ್‌ಯುವಿ300, ಟಿಯುವಿ300, ಟಿಯುವಿ300 ಪ್ಲಸ್ ಪ್ರಮುಖವಾಗಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ಮಾದರಿಗಿಂತಲೂ ಹೊಸ ಆವೃತ್ತಿಯು ಸಾಕಷ್ಟು ವಿಭಿನ್ನತೆ ಹೊಂದಿರಲಿವೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಅದಕ್ಕಿಂತಲೂ ಮುಖ್ಯವಾಗಿ ಸ್ಕಾರ್ಪಿಯೋ, ಎಕ್ಸ್‌ಯುವಿ500, ಎಕ್ಸ್‌ಯುವಿ300, ಟಿಯುವಿ300 ಪ್ಲಸ್ ಮತ್ತು ಥಾರ್ ನ್ಯೂ ಜನರೇಷನ್ ಕಾರುಗಳಲ್ಲಿ ಬಿಎಸ್-6 ಎಂಜಿನ್ ಅಳವಡಿಸಿರುವುದು ಮಾಲಿನ್ಯ ತಡೆಯುವಲ್ಲಿ ಸಾಕಷ್ಟು ಸಹಕಾರಿಯಾಗಲಿದ್ದು, ಶೇ.25ರಷ್ಚು ಹೊಗೆ ಉಗುಳುವ ಪ್ರಮಾಣ ಕಡಿಮೆಯಾಗಿದ್ದಲ್ಲಿ ಶೇ. 10ರಷ್ಟು ಮೈಲೇಜ್ ಪ್ರಮಾಣದಲ್ಲೂ ಏರಿಕೆಯಾಗಲಿದೆ.

ಬಿಎಸ್-6 ಎಫೆಕ್ಟ್- ಡೀಸೆಲ್ ಕಾರುಗಳಿಂತ ಪೆಟ್ರೋಲ್ ಕಾರುಗಳಿಗೆ ಹೆಚ್ಚಿದ ಬೇಡಿಕೆ..!

ಜೊತೆಗೆ ಬಿಎಸ್-4 ಕಾರುಗಳ ಬೆಲೆಗೂ ಬಿಎಸ್-6 ಕಾರುಗಳ ಬೆಲೆ ಹೊಲಿಕೆ ಮಾಡಿದ್ದಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿರುವ ಪೆಟ್ರೋಲ್ ಕಾರುಗಳು ಹೊಸ ನಿಯಮ ಜಾರಿನಂತರ ರೂ.10 ಸಾವಿರದಿಂದ ರೂ.30 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದ್ದರೆ ಡೀಸೆಲ್ ಎಂಜಿನ್ ಕಾರುಗಳ ಬೆಲೆಯು ರೂ.90 ಸಾವಿರದಿಂದ ರೂ.2.50 ಲಕ್ಷದ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿವೆ. ಈ ಎಲ್ಲಾ ಕಾರಣಗಳಿಂದ ಹೊಸ ಕಾರು ಖರೀದಿದಾರರು ಡೀಸೆಲ್‌ಗಿಂತ ಹೆಚ್ಚು ಪೆಟ್ರೋಲ್ ಕಾರುಗಳೇ ಬೆಸ್ಟ್ ಎನ್ನುತ್ತಿದ್ದಾರೆ.

Most Read Articles

Kannada
English summary
SUV Customers preffer Petrol Variants than Diesel models nearing BSVI Deadline. Read in Kannada.
Story first published: Saturday, November 30, 2019, 20:10 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X