'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಟಾಟಾ ಸಂಸ್ಥೆಯು ಹ್ಯಾರಿಯರ್ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ನಂತರ ಮತ್ತಷ್ಟು ಹೊಸ ಕಾರುಗಳನ್ನು ಬಿಡುಗಡೆಯ ಯೋಜನೆಯಲ್ಲಿದ್ದು, ಇದರಲ್ಲಿ 45ಎಕ್ಸ್ ಕೋಡ್‌ನೆಮ್ ಆಧಾರದ ಮೇಲೆ ಟೆಸ್ಟಿಂಗ್ ಮಾಡುತ್ತಿರುವ ಪ್ರೀಮಿಯಂ ಕಾರಿಗೆ ಅಧಿಕೃತ ಹೆಸರನ್ನು ಅಂತಿಮಗೊಳಿಸಿದೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಜೆಎಲ್ಆರ್ ಸಂಸ್ಥೆಯ ಜೊತೆಗೂಡಿ ಕಾರು ನಿರ್ಮಾಣದಲ್ಲಿ ಭಾರೀ ಬದಲಾವಣೆ ತರುತ್ತಿರುವ ಟಾಟಾ ಸಂಸ್ಥೆಯು ಮುಂದಿನ ತಿಂಗಳು ಮಾರ್ಚ್‌ನಲ್ಲಿ ಆರಂಭವಾಗುವ ಜೀನೆವಾ ಆಟೋ ಮೇಳ ದಲ್ಲಿ ಮತ್ತೆ ನಾಲ್ಕು ಹೊಸ ಕಾರು ಮಾದರಿಗಳ ಉತ್ಪಾದನಾ ಆವೃತ್ತಿಗಳನ್ನು ಪ್ರದರ್ಶನ ಮಾಡುತ್ತಿದೆ. ಇದರಲ್ಲಿ ಬಿಡುಗಡೆಯ ನೀರಿಕ್ಷೆಯಲ್ಲಿರುವ 45ಎಕ್ಸ್ ಹೆಸರಿನ ಪ್ರೀಮಿಯಂ ಕಾರಿನ ಟೀಸರ್ ಅನ್ನು ಬಿಡುಗಡೆ ಮಾಡುವ ಮೂಲಕ ಹೊಸ ಕಾರಿನ ಅಧಿಕೃತ ಹೆಸರನ್ನು ಆಲ್‌ಟ್ರೊಜ್ ಎಂದು ಕರೆದಿದೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಕಳೆದ ವಾರ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವೈಶಿಷ್ಟ್ಯತೆಗಳನ್ನು ಹೊಂದಿರುವ ಆಲ್‌ಟ್ರೊಜ್ ಕಾರಿನ ಅಧಿಕೃತ ಹೆಸರು ಇಂಗ್ಲಿಷ್ ವರ್ಣಮಾಲೆ 'A'ನಿಂದ ಆರಂಭವಾಗುವ ಬಗ್ಗೆ ಸುಳಿವು ನೀಡಿದ್ದ ಟಾಟಾ, ಅಂತಿಮವಾಗಿ Altroz(ಆಲ್‌ಟ್ರೊಜ್) ನಾಮಕರಣ ಮಾಡಿದೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಆಲ್ಬಾಟ್ರೊಸ್ ಎನ್ನುವ ಸಮುದ್ರ ಹಕ್ಕಿಯ ಚಾಣಕ್ಷತೆಯ ಆಧಾರದ ಮೇಲೆ ಹೊಸ ಕಾರಿನ ಕಾರಿನ ಹೆಸರನ್ನು ಆಲ್‌ಟ್ರೊಜ್ ಎಂದು ಕರೆದಿರುವ ಟಾಟಾ ಸಂಸ್ಥೆಯು, ಬಲಿಷ್ಠತೆ, ಪರ್ಫಾಮೆನ್ಸ್ ಮತ್ತು ದಕ್ಷತೆಯಲ್ಲಿ ಇತರೆ ಅರ್ಬನ್ ಕಾರುಗಳಿಂತಲೂ ಉತ್ತಮವಾಗಿರಲಿವೆ ಎಂದಿದೆ.

ಈಗಾಗಲೇ 2018ರಲ್ಲೇ ಆಲ್‌ಟ್ರೊಜ್ ಕಾರನ್ನು ಪ್ರದರ್ಶನ ಮಾಡಿ ಕಾರು ಪ್ರಿಯರಲ್ಲಿ ಕುತೂಹಲ ಹುಟ್ಟುಹಾಕಿರುವ ಟಾಟಾ ಸಂಸ್ಥೆಯು ಹೊಸ ಕಾರಿನ ವಿನ್ಯಾಸಗಳನ್ನು ಇಂಪ್ಯಾಕ್ಟ್ ಡಿಸೈನ್ 2.0 ಡಿಸೈನ್ ಆಧರಿತ ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ನಿರ್ಮಾಣ ಮಾಡಿದೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಮಾರುಕಟ್ಟೆಯಲ್ಲಿ ಸದ್ಯ ಮಾರಾಟವಾಗುತ್ತಿರುವ ನೆಕ್ಸಾನ್ ಎಸ್‌ಯುವಿ ಮಾದರಿಗಳಿಂತಲೂ ವಿಶೇಷ ಹೊರ ವಿನ್ಯಾಸಗಳನ್ನು ಪಡೆದುಕೊಂಡಿರುವ ಆಲ್‌ಟ್ರೊಜ್ ಪ್ರಿಮಿಯಂ ಹ್ಯಾಚ್‌ಬ್ಯಾಕ್ ಕಾರುಗಳು ಶಾರ್ಪ್ ಎಡ್ಜ್‌ ಮತ್ತು ಸ್ಪೋರ್ಟಿ ಲುಕ್ ಸೌಲಭ್ಯವು ಕಾರಿನ ಅಂದ ಹೆಚ್ಚಿಸಿವೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಆದ್ರೆ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು, ಹೊಸ ಕಾರಿನ ಎಂಜಿನ್ ವೈಶಿಷ್ಟ್ಯತೆಗಳ ಬಗೆಗೆ ಸಂದರ್ಶನವೊಂದರಲ್ಲಿ ಕೆಲವು ಮಾಹಿತಿಗಳನ್ನು ಹಂಚಿಕೊಳ್ಳುವ ಮೂಲಕ ವಿವಿಧ ಮಾದರಿಯ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ವರದಿಗಳ ಪ್ರಕಾರ, ಆಲ್‌ಟ್ರೊಜ್ ಕಾರು ಮಾದರಿಯು ಪೆಟ್ರೋಲ್ ಎಂಜಿನ್‌ನೊಂದಿಗೆ 48ಕೆವಿ ಮೈಲ್ಡ್ ಹೈಬ್ರಿಡ್(ಎಲೆಕ್ಟ್ರಿಕ್ ಮೋಟಾರ್) ತಂತ್ರಜ್ಞಾನ ಬಳಕೆ ಮಾಡಲಾಗುತ್ತಿದೆ ಎನ್ನಲಾಗಿದ್ದು, ಇದು ಕಾರಿನ ಇಂಧನ ದಕ್ಷತೆಯನ್ನು ಹೆಚ್ಚಿಸುವಲ್ಲಿ ಸಾಕಷ್ಟು ಅನುಕೂಲಕರವಾಗಲಿದೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಹೀಗಾಗಿ ಜೋಡಣೆ ಮಾಡಲು ಉದ್ದೇಶಿಸಿರುವ 1.2-ಲೀಟರ್, ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಜೊತೆಗೆ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಅಳವಡಿಕೆ ಮಾಡಿದ್ದಲ್ಲಿ ಕಾರಿನ ಮೈಲೇಜ್ ಹೆಚ್ಚಳದ ಜೊತೆಗೆ ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ಸಹ ತಗ್ಗಿಸಲು ನೆರವಾಗಲಿದೆ.

MOST READ: ಏರ್ ಶೋ ವೇಳೆ ಅಗ್ನಿ ದುರಂತ- ಕಾರು ಮಾಲೀಕರಿಗೆ ಧೈರ್ಯ ತುಂಬಿದ ಟೊಯೊಟಾ..!

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಪ್ರಸ್ತುತ ಮಾರುಕಟ್ಟೆಯಲ್ಲಿ ಕೇವಲ ಐಷಾರಾಮಿ ಕಾರುಗಳಲ್ಲಿ ಮಾತ್ರವೇ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವನ್ನು ಬಳಕೆ ಮಾಡಲಾಗುತ್ತಿದ್ದು, ಈ ಹೊಸ ಸೌಲಭ್ಯವಿದಲ್ಲಿ ಕಾರು ಸ್ಟಾರ್ಟ್ ಆಗುವ ಸಂದರ್ಭ ಮತ್ತು ನಿಗದಿತ ಪ್ರಮಾಣದ ದೂರದ ತನಕ ಪೆಟ್ರೋಲ್ ಎಂಜಿನ್‌ಗೆ ಬದಲಾಗಿ ಎಲೆಕ್ಟ್ರಿಕ್ ಮೋಟಾರ್ ಸಹಾಯದೊಂದಿಗೆ ಚಲಿಸುತ್ತೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ತದನಂತರ ಆಟೋ ಮೂಡ್ ಮೂಲಕ ತನ್ನಷ್ಟೇ ತಾನೇ ಎಲೆಕ್ಟ್ರಿಕ್ ಮೋಟಾರ್‌ನಿಂದ ಪೆಟ್ರೋಲ್ ಎಂಜಿನ್‌ಗೆ ವರ್ಗಾವಣೆಗೊಳ್ಳುವ ಕಾರಿನ ಎಂಜಿನ್ ಅನವಶ್ಯಕವಾಗಿ ಇಂಧನ ವ್ಯರ್ಥವಾಗುವುದನ್ನು ತಪ್ಪಿಸುತ್ತೆ. ಈ ಮೂಲಕ ಕಾರಿನ ಮೈಲೇಜ್ ಪ್ರಮಾಣವು ಹೆಚ್ಚಾಗುವುದಲ್ಲದೇ ಮಾಲಿನ್ಯ ಪ್ರಮಾಣ ಕೂಡಾ ತಗ್ಗುವುದು.

MOST READ: ಕಾರು ಖರೀದಿಸಲು ಬಂದ ಮಹಿಳೆ ಮಾಡಿದ ಎಡವಟ್ಟಿನಿಂದ ಡೀಲರ್ಸ್ ಕಕ್ಕಾಬಿಕ್ಕಿ

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಜೊತೆಗೆ ಹೊಸ ಕಾರಿನ ಬ್ಯಾನೆಟ್ ಹಾಗೂ ಹಿಂಭಾಗದ ವಿಂಡೋಗಳು ಕೂಡಾ ವಿಭಿನ್ನ ರಚನೆ ಹೊಂದಿದ್ದು, ಕಟರ್ ಫ್ರೀ ಡಿಸೈನ್‌ನೊಂದಿಗೆ ಸ್ಲಿಕ್ ಹೆಡ್‌ಲ್ಯಾಂಪ್, ಆಲ್ ವೀಲ್ಹ್ ಡಿಸ್ಕ್ ಬ್ರೇಕ್, ಎಬಿಎಸ್ ಸೇರಿದಂತೆ ಎಲ್ಇಡಿ ಟೈಲ್ ಲೈಟ್ಸ್, ಫಾಗ್ ಲ್ಯಾಂಪ್ ಮತ್ತು ವಿನೂತನ ಗ್ರೀಲ್‌ಗಳು ಈ ಕಾರಿಗೆ ಮತ್ತಷ್ಟು ಮೆರಗು ತಂದಿವೆ.

'ಆಲ್‌ಟ್ರೊಜ್' ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ ಕಾರು..!

ಹಾಗೆಯೇ ಆಲ್‌ಟ್ರೊಜ್ ಮಾದರಿಯಲ್ಲಿ ಎಲೆಕ್ಟ್ರಿಕ್ ವರ್ಷನ್ ಮಾದರಿಯನ್ನು ಸಹ ಹೊರತರಲು ನಿರ್ಧರಿಸಿರುವ ಟಾಟಾ ಸಂಸ್ಥೆಯು ಇದುವರೆಗೂ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಟ್ಟಿಲ್ಲ. ಹೀಗಾಗಿ ಜಿನೇವಾ ಆಟೋ ಮೇಳದಲ್ಲಿ ಪ್ರದರ್ಶನಗೊಳ್ಳಲಿರುವ ಹೊಸ ಆಲ್‌ಟ್ರೊಜ್ ಕಾರು ಹೇಗಿರಲಿದೆ ಎನ್ನುವುದು ಸ್ಪಷ್ಟವಾಗಲಿದೆ.

Most Read Articles

Kannada
English summary
Tata 'Altroz' Is The Official Name Of The 45X Concept — Production-Spec Version Unveil At Geneva. Read in Kannada.
Story first published: Monday, February 25, 2019, 16:20 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X