Just In
Don't Miss!
- Lifestyle
'ಮಂಗಳವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ '
- News
ಕೋವಿಡ್ ಲಸಿಕೆ ಪಡೆದುಕೊಂಡಿದ್ದ ಆರೋಗ್ಯ ಇಲಾಖೆ ಉದ್ಯೋಗಿ ಹೃದಯಾಘಾತದಿಂದ ಸಾವು
- Sports
ಐಎಸ್ಎಲ್: ಅಂಕ ಹಂಚಿಕೊಂಡ ಈಸ್ಟ್ ಬೆಂಗಾಲ್ ಮತ್ತು ಚೆನ್ನೈಯಿನ್
- Finance
ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ, ಮೆಣಸು, ಕಾಫೀ ಜ. 18ರ ದರ
- Movies
ಶಿವಲಿಂಗಕ್ಕೆ ಅಪಮಾನ: ನಟಿಯ ವಿರುದ್ಧ ಮಾಜಿ ರಾಜ್ಯಪಾಲ ದೂರು
- Education
IIMB Recruitment 2021: ಪ್ರಾಜೆಕ್ಟ್ ಎಕ್ಸಿಕ್ಯುಟಿವ್- ಡೆವಲಪ್ಮೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪರ್ಫಾಮೆನ್ಸ್ ಪ್ರಿಯರ ಆಕರ್ಷಣೆಗೆ ಕಾರಣವಾದ ಟಾಟಾ ಆಲ್‌ಟ್ರೊಜ್..!
ಹ್ಯಾರಿಯರ್ ಬಿಡುಗಡೆಯ ಯಶಸ್ವಿ ನಂತರ ಭವಿಷ್ಯದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆಯಿಸುತ್ತಿರುವ ಟಾಟಾ ಸಂಸ್ಥೆಯು ಭಾರತೀಯ ಆಟೋ ಉದ್ಯಮದಲ್ಲಿ ಭಾರೀ ಬದಲಾವಣೆಗೆ ಮುಂದಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಮಾದರಿಯು ಹಲವು ವಿಶೇಷತೆಗಳಿಗೆ ಕಾರಣವಾಗಿದೆ.

ಆಲ್ಬಾಟ್ರೊಸ್ ಎನ್ನುವ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್‌ಟ್ರೊಜ್ ಕಾರನ್ನು ನಿರ್ಮಾಣ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಮಾರುಕಟ್ಟೆಗೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಿದೆ. ಇದಕ್ಕೆ ಕಾರಣ, ಆಲ್‌ಟ್ರೊಜ್ ಕಾರಿನ ಎಂಜಿನ್ ಪರ್ಫಾಮೆನ್ಸ್ ಗುಣಲಕ್ಷಣಗಳು ಇತರೆ ಹ್ಯಾಚ್‌ಬ್ಯಾಕ್ ಆವೃತ್ತಿಗಳಿಂತಲೂ ಉತ್ತಮವಾಗಿರುವುದಲ್ಲದೇ ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತುಬರಲಿದೆ.

ಹೌದು, ಆಲ್‌ಟ್ರೊಜ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಎರಡು ಎಂಜಿನ್ ಆಯ್ಕೆಗಳು ಇರಲಿದ್ದು, ಡೀಸೆಲ್ ಆವೃತ್ತಿಯಲ್ಲಿ ಒಂದು ಆಯ್ಕೆ ಮಾತ್ರ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಮತ್ತು 1.5-ಲೀಟರ್ ಎಂಜಿನ್ ಮಾದರಿಗಳು ಅಭಿವೃದ್ಧಿಯಾಗುತ್ತಿದ್ದು, ಡೀಸೆಲ್ ಮಾದರಿಯಲ್ಲಿ 1.5-ಲೀಟರ್ ಎಂಜಿನ್ ಲಭ್ಯವಾಗಲಿದೆ.

ಪೆಟ್ರೋಲ್ ಆವೃತ್ತಿಗಾಗಿ ಆಯ್ಕೆ ಮಾಡಲಾಗಿರುವ 1.2-ಲೀಟರ್ ಎಂಜಿನ್ ಮಾದರಿಯನ್ನು ಟಿಯಾಗೋದಿಂದ ಎರವಲು ಪಡೆದಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಮಾದರಿಗಳನ್ನು ನೆಕ್ಸಾನ್ ಎಸ್‌ಯುವಿಯಿಂದ ಎರವಲು ಪಡೆದಿರುವ ಟಾಟಾ ಸಂಸ್ಥೆಯು ಎಂಜಿನ್ ಪರ್ಫಾಮೆನ್ಸ್‌ನಲ್ಲಿ ಕೆಲವು ಗಮನಸೆಳೆಯಬಹುದಾದ ಬದಲಾವಣೆಗಳನ್ನು ಮಾಡಿದೆ.

ಪ್ರಮುಖ ವಿಚಾರ ಅಂದ್ರೆ, ಟಾಟಾ ಸಂಸ್ಥೆಯು ಸದ್ಯ ಜೆಎಲ್ಆರ್ ಸಂಸ್ಥೆಯ ಜೊತೆಗೂಡಿ ಕಾರು ನಿರ್ಮಾಣದಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಹ್ಯಾರಿಯರ್ ಕಾರು ಮಾದರಿಯಲ್ಲೇ ಹೊಸ ಆಲ್‌ಟ್ರೊಜ್ ಕಾರನ್ನು ಸಹ ಇಂಪ್ಯಾಕ್ಟ್ ಡಿಸೈನ್ 2.0 ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಅಭಿವೃದ್ಧಿಗೊಳಿಸಿರುವುದು ಕಾರಿನ ತೂಕವನ್ನು ಕಡಿತಗೊಳಿಸುವಲ್ಲಿ ಸಾಕಷ್ಟು ನೆರವಾಗಿದೆ. ಇದು ನೆರವಾಗಿ ಕಾರಿನ ಎಂಜಿನ್ ಪರ್ಫಾಮೆನ್ಸ್ ಪರಿಣಾಮ ಬೀರುವುದಲ್ಲದೇ ಮೈಲೇಜ್ ಪ್ರಮಾಣ ಕೂಡಾ ಹೆಚ್ಚಳವಾಗಲಿದೆ.
MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಹೊಸ ರೂಲ್ಸ್

ಆದ್ರೆ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ವರ್ಷ ಜೂನ್ ಅಥವಾ ಜುಲೈ ಅಂತ್ಯಕ್ಕೆ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5 ಲಕ್ಷದಿಂದ ರೂ.7 ಲಕ್ಷ ಮತ್ತು ಆಲ್‌ಟ್ರೊಜ್ ಕಾರಿನ ಬೆಲೆಯು ರೂ.10 ಲಕ್ಷದೊಳಗೆ ಬೆಲೆ ನಿಗದಿಯಾಗಬಹುದು ಎಂದಿದೆ.