ಬಿಡುಗಡೆಯಾಗಲಿರುವ ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ?

ಟಾಟಾ ಸಂಸ್ಥೆಯ ಕಳೆದ ಎರಡು ದಿನಗಳ ಹಿಂದಷ್ಟೇ ಜಿನೆವಾ ಆಟೋ ಮೇಳದಲ್ಲಿ ತನ್ನ ಭವಿಷ್ಯದ ಕಾರು ಮಾದರಿಗಳನ್ನು ಪ್ರದರ್ಶನ ಮಾಡಿದ್ದು, ಇದರಲ್ಲಿ ಆಲ್‌ಟ್ರೊಜ್ ಕಾರು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ ಆಯ್ಕೆಗಳಲ್ಲಿ ಮಾತ್ರವಲ್ಲವೇ ಎಲೆಕ್ಟ್ರಿಕ್ ವರ್ಷನ್ ಕೂಡಾ ಬಿಡುಗಡೆಯಾಗಲಿದ್ದು, ಹೊಸ ಕಾರಿನ ಬೆಲೆ ಮಾಹಿತಿ ಕೂಡಾ ಬಹಿರಂಗಗೊಂಡಿದೆ.

ಬಿಡುಗಡೆಯಾಗಲಿರುವ ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ?

ದೇಶಿಯ ಮಾರುಕಟ್ಟೆಯಲ್ಲಿ ಸದ್ಯ ಭಾರೀ ಜನಪ್ರಿಯತೆಯೊಂದಿಗೆ ಮಾರಾಟದಲ್ಲಿ ಮುನ್ನುಗ್ಗುತ್ತಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರತಿಸ್ಪರ್ಧಿಯಾಗಿ ಟಾಟಾ ಆಲ್‌ಟ್ರೊಜ್ ಕಾರು ಬಿಡುಗಡೆಯಾಗುತ್ತಿದ್ದು, ಗ್ರಾಹಕರು ನೀರಿಕ್ಷೆ ಮಾಡಿದ್ದಕ್ಕಿಂತೂ ಕಡಿಮೆ ಬೆಲೆಯಲ್ಲಿ ಹೊಸ ಕಾರು ರಸ್ತೆಗಿಳಿಯುವುದು ಪಕ್ಕಾ ಆಗಿದೆ.

ಬಿಡುಗಡೆಯಾಗಲಿರುವ ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ?

ಹೌದು, ಆಲ್‌ಟ್ರೊಜ್ ಕಾರಿನ ಬಿಡುಗಡೆಯ ಕುರಿತಂತೆ ಮಾತನಾಡಿರುವ ಟಾಟಾ ಎಲೆಕ್ಟ್ರಿಕ್ ಮೊಬಿಲಿಟಿ ನಿರ್ದೇಶಕ ಶೈಲೇಜ್ ಚಂದ್ರ ಅವರು, ಆಲ್‌ಟ್ರೊಜ್ ಕಾರು ಮುಂದಿನ 5 ವರ್ಷಗಳ ಅವಧಿಯಲ್ಲಿ ಭಾರತದಲ್ಲಿ ಬಹುದೊಡ್ಡ ಬದಲಾವಣೆ ಕಾರಣವಾಗಲಿದ್ದು, ಎಲೆಕ್ಟ್ರಿಕ್ ವರ್ಷನ್ ಕೂಡಾ ಹೊಸ ನೀರಿಕ್ಷೆ ಹುಟ್ಟುಹಾಕಲಿದೆ ಎಂದಿದ್ದಾರೆ.

ಬಿಡುಗಡೆಯಾಗಲಿರುವ ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ?

ಜೊತೆಗೆ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರಿನ ಬೆಲೆಯು ರೂ.10 ಲಕ್ಷದೊಳಗೆ ಇರಲಿದೆ ಎನ್ನುವ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಅತಿ ಕಡಿಮೆ ಬೆಲೆಯಲ್ಲಿ ಅತ್ಯುತ್ತಮ ಪ್ರೀಮಿಯಂ ಸೌಲಭ್ಯಗಳೊಂದಿಗೆ ಹೊಂದಿರುವ ಕಾರು ಮಾದರಿ ಇದಾಗಿರಲಿದೆ ಎಂದಿದ್ದಾರೆ. ಹೀಗಾಗಿ ಇದು ಬಲೆನೊ ಮತ್ತು ಐ20 ಕಾರುಗಳಿಗೆ ತೀವ್ರ ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

ಬಿಡುಗಡೆಯಾಗಲಿರುವ ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ?

ಇನ್ನು ಹೊಸ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರು ಪ್ರತಿ ಚಾರ್ಜ್‌ಗೆ 250-300 ಕಿ.ಮಿ ಮೈಲೇಜ್ ರೇಂಜ್ ಬ್ಯಾಟರಿ ಸೌಲಭ್ಯ ಹೊಂದಿರಲಿದ್ದು, ಫಾಸ್ಟ್ ಚಾರ್ಜಿಂಗ್ ಸೌಲಭ್ಯದ ಮೂಲಕ ಕೇವಲ 60 ನಿಮಿಷಗಳಲ್ಲಿ ಶೇ.80 ಚಾರ್ಜ್ ಮಾಡಬಹುದಾದ ಗುಣಮಟ್ಟದ ಬ್ಯಾಟರಿ ಜೋಡಣೆ ಮಾಡಲಿದೆ.

MOST READ: ಬ್ರೇಕ್ ಫೇಲ್ ಆದಾಗ ಜೀವ ಉಳಿಸಿಕೊಳ್ಳಲು ಈ ಟಿಪ್ಸ್ ಖಂಡಿತ ನಿಮ್ಮ ಸಹಾಯಕ್ಕೆ ಬರುತ್ತೆ..!

ಬಿಡುಗಡೆಯಾಗಲಿರುವ ಟಾಟಾ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರಿನ ಬೆಲೆ ಎಷ್ಟಿರಲಿದೆ ಗೊತ್ತಾ?

ಸದ್ಯ ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ಕಾರುಗಳನ್ನು ಉತ್ತೇಜಿಸುವ ಸಂಬಂಧ ಬರೋಬ್ಬರಿ 10 ಸಾವಿರ ಕೋಟಿ ಬಿಡುಗಡೆ ಮಾಡಿದ್ದು, ಎಲೆಕ್ಟ್ರಿಕ್ ಕಾರುಗಳಿ ಸಬ್ಸಡಿ ಸೇರಿದಂತೆ ತ್ವರಿತ ಗತಿಯಲ್ಲಿ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣಕ್ಕಾಗಿ ಬೃಹತ್ ಯೋಜನೆಗಳನ್ನು ರೂಪಿಸುತ್ತಿದೆ. ಹೀಗಾಗಿ ಟಾಟಾ ಆಲ್‌ಟ್ರೊಜ್ ಕಾರು ಗ್ರಾಹಕರ ಆಕರ್ಷಣೆಗೆ ಕಾರಣವಾಗಲಿದ್ದು, 2020ರ ಆರಂಭದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವರ್ಷನ್ ಆಲ್‌ಟ್ರೊಜ್ ಬಿಡುಗಡೆಯಾದ ನಂತವಷ್ಟೇ ಎಲೆಕ್ಟ್ರಿಕ್ ಕಾರು ಕೂಡಾ ಗ್ರಾಹಕರ ಕೈ ಸೇರಲಿದೆ.

MOST READ: ಬರೋಬ್ಬರಿ ಮೂರುವರೆ ಕೋಟಿ ಬೆಲೆಬಾಳುವ ಲಂಬೋರ್ಗಿಸಿ ಕಾರ್ ಗಿಫ್ಟ್ ಕೊಟ್ಟ ಅಪ್ಪು..!

Source: Autocar India

Most Read Articles

Kannada
English summary
Tata Altroz EV Price Expectations For India — To Be Offered With A Premium Price Tag. Read in Kannada.
Story first published: Saturday, March 9, 2019, 13:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X