ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ತಿಂಗಳು 19ರಂದು ನೆಕ್ಸಾನ್ ಎಲೆಕ್ಟ್ರಿಕ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಗೆ ಸಜ್ಜಾಗುತ್ತಿದ್ದು, ಇದರ ಬೆನ್ನಲ್ಲೇ ಆಲ್‌ಟ್ರೊಜ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆವೃತ್ತಿ ಕೂಡಾ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿರುವುದು ಕಂಡುಬಂದಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

ಜಿನೆವಾ ಆಟೋ ಮೇಳದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಂಡಿದ್ದ ಆಲ್‌ಟ್ರೊಜ್ ಸಾಮಾನ್ಯ ಕಾರಿನ ಜೊತೆಗೆ ಎಲೆಕ್ಟ್ರಿಕ್ ಆವೃತ್ತಿಯನ್ನು ಪ್ರದರ್ಶನಗೊಳಿಸಿದ್ದ ಟಾಟಾ ಸಂಸ್ಥೆಯು ಸದ್ಯ ನೆಕ್ಸಾನ್ ಇವಿ ಮಾದರಿಯನ್ನು ಬಿಡುಗಡೆಗೊಳಿಸುತ್ತಿದ್ದು, ತದನಂತರವಷ್ಟೇ ಆಲ್‌ಟ್ರೊಜ್ ಇವಿ ಕಾರನ್ನು ಮಾರುಕಟ್ಟೆಗೆ ಪರಿಚಯಿಸಲಿದೆ. ಸಾಮಾನ್ಯ ಆಲ್‌ಟ್ರೊಜ್ ಕಾರು ಮಾದರಿಗಿಂತಲೂ ವಿಭಿನ್ನ ಹೊಸ ವಿನ್ಯಾಸ ಹೊಂದಿರುವ ಹೊಸ ಕಾರು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಕಾರುಗಳಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

3,988-ಎಂಎಂ ಉದ್ದ, 1,754-ಎಂಎಂ ಅಗಲ, 1,505-ಎಂಎಂ ಎತ್ತರ ಮತ್ತು 2,501-ಎಂಎಂ ವೀಲ್ಹ್ ಬೇಸ್ ಹೊಂದಿರುವ ಆಲ್‌ಟ್ರೊಜ್ ಎಲೆಕ್ಟ್ರಿಕ್ ಕಾರು ಹಲವಾರು ವಿಶೇಷತೆಗಳನ್ನು ಹೊತ್ತುಬಂದಿದ್ದು, ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆ ಪಡೆದುಕೊಂಡಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 150 ಕಿ.ಮೀ ನಿಂದ 200 ಕಿ.ಮೀ ಮೈಲೇಜ್ ರೇಂಜ್ ಪಡೆದುಕೊಂಡಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರಿನ ಬೆಲೆಯು ರೂ.10 ಲಕ್ಷದೊಳಗೆ ನಿಗದಿಯಾಗುವ ಸಾಧ್ಯತೆಗಳಿವೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

ಇನ್ನು ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆಗಾಗಿ ಅಂತಿಮ ಹಂತದ ತಯಾರಿ ನಡೆಸುತ್ತಿರುವ ಟಾಟಾ ಸಂಸ್ಥೆಯು ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆ ಹೊಂದಿರುವ ಹೊಸ ಕಾರು ಹಲವು ವಿಶೇಷತೆಗಳಿಂದ ಕೂಡಿದೆ. ಕೈಗೆಟುಕುವ ಬೆಲೆಯಲ್ಲಿ ಖರೀದಿ ಲಭ್ಯವಾಗಲಿರುವ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಉತ್ತಮ ಬ್ಯಾಟರಿ ವೈಶಿಷ್ಟ್ಯತೆಯೊಂದಿಗೆ ಸಾಮಾನ್ಯ ನೆಕ್ಸಾನ್ ಫೇಸ್‌ಲಿಫ್ಟ್ ಮಾದರಿಯಲ್ಲೇ ಹಲವು ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

19ರಂದು ಅನಾವರಣಗೊಳ್ಳಲಿರುವ ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು 2020ರ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ನೆಕ್ಸಾನ್ ಎಲೆಕ್ಟ್ರಿಕ್ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅತ್ಯುತ್ತಮ ಎಂಜಿನ್ ದಕ್ಷತೆ ಹೊಂದಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

ಟಾಟಾ ನೆಕ್ಸಾನ್ ಇವಿ ಕಾರು ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ ಹ್ಯಾರಿಯರ್ ಕಾರಿನಲ್ಲಿರುವ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳು ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿವೆ ಎನ್ನಲಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ನೆಕ್ಸಾನ್ ಇವಿ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರ ಮಾರುಕಟ್ಟೆಗೆ ಬರಲಿದೆ ಎನ್ನಲಾಗಿದ್ದು, ಟಾಟಾ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ ಜಿಪ್‌ಟ್ರಾನ್ ತಂತ್ರಜ್ಞಾನವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದು ಎಲೆಕ್ಟ್ರಿಕ್ ಕಾರುಗಳನ್ನು ಅತಿ ಕಡಿಮೆ ಅವಧಿಯಲ್ಲಿ ಜನಪ್ರಿಯಗೊಳಿಸುವಲ್ಲಿ ಈ ತಂತ್ರಜ್ಞಾನವು ಸಾಕಷ್ಟು ಸಹಕಾರಿಯಾಗಲಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

ಜಿಪ್‌ಟ್ರಾನ್ ಪವರ್‌ಟ್ರೈನ್ ತಂತ್ರಜ್ಞಾನವು ಹಲವು ಸುಧಾರಿತ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ದಿಗೊಳಿಸಲಾಗಿದ್ದು, ಹೈ ವೊಲ್ಟೆಜ್ ಸಿಸ್ಟಂ, ದೀರ್ಘಕಾಲಿಕ ಬ್ಯಾಟರಿ ಸಾಮಾರ್ಥ್ಯ, ಅತಿಕಡಿಮೆ ಅವಧಿಯಲ್ಲಿ ಚಾರ್ಜಿಂಗ್ ಸಿಸ್ಟಂ ಮತ್ತು ಸೂಪಿರಿಯರ್ ಪರ್ಫಾಮೆನ್ಸ್ ವೈಶಿಷ್ಟ್ಯತೆಗಳನ್ನು ಈ ಪವರ್‌ಟ್ರೈನ್‌ನಲ್ಲಿ ಅಳವಡಿಸಲಾಗಿದೆ.

ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆಯ ನಂತರ ಅಲ್‌ಟ್ರೊಜ್ ಎಲೆಕ್ಟ್ರಿಕ್ ಬಿಡುಗಡೆಗೆ ಭರ್ಜರಿ ಸಿದ್ದತೆ

ಟಾಟಾ ಸಂಸ್ಥೆಯು ತನ್ನ ವಿನೂತನ ಜಿಪ್‌ಟ್ರಾನ್ ತಂತ್ರಜ್ಞಾನದ ಮೇಲೆ ಸುಮಾರು 8 ವರ್ಷಗಳ ವಾರಂಟಿ ನೀಡವುದಾಗಿ ಘೋಷಿಸಿದ್ದು, ಹೊಸ ಪವರ್‌ಟ್ರೈನ್‌ನಲ್ಲಿ ಮ್ಯಾಗ್ನೆಟ್ ಎಸಿ ಮೋಟಾರ್ ಜೋಡಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

Source: Sirish Chandran/Twitter

Most Read Articles

Kannada
English summary
Tata Altroz EV Spied testing in India. Read in Kannada.
Story first published: Saturday, December 14, 2019, 11:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X