Just In
- 9 hrs ago
ಡಕಾರ್ ರ್ಯಾಲಿ 2021: 43ನೇ ಆವೃತ್ತಿಯನ್ನು ಗೆದ್ದ ಹೋಂಡಾ ರೈಡರ್ ಕೆವಿನ್ ಬೆನೆವಿಡೆಸ್
- 10 hrs ago
ಸಿವಿ ವಾಹನ ಮಾದರಿಗಳಿಗಾಗಿ ಹೊಸ ಮಾದರಿಯ ಟೈರ್ ಬಿಡುಗಡೆ ಮಾಡಿದ ಬ್ರಿಡ್ಜ್ಸ್ಟೋನ್
- 10 hrs ago
ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
- 11 hrs ago
ಎರಡನೇ ಬಾರಿ ರೋಲ್ಸ್ ರಾಯ್ಸ್ ಕುಲಿನನ್ ಕಾರು ಖರೀದಿಸಿದ ಮುಖೇಶ್ ಅಂಬಾನಿ
Don't Miss!
- News
ರೈತರ ಪ್ರತಿಭಟನೆ: ಜನವರಿ 19ಕ್ಕೆ ಕೇಂದ್ರ ಮತ್ತು ರೈತ ಸಂಘಟನೆಗಳ ನಡುವೆ ಮತ್ತೊಂದು ಸುತ್ತಿನ ಸಭೆ
- Lifestyle
ಶನಿವಾರದ ಭವಿಷ್ಯ: ಮಕರ ರಾಶಿಯವರೇ ಆರ್ಥಿಕ ದೃಷ್ಟಿಯಿಂದ ಒಳ್ಳೆಯದು
- Sports
ಭಾರತ vs ಆಸ್ಟ್ರೇಲಿಯಾ, 4ನೇ ಟೆಸ್ಟ್ ಪಂದ್ಯ, 2ನೇ ದಿನ, Live ಸ್ಕೋರ್
- Education
ECIL Recruitment 2021: ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ವಾಕ್ ಇನ್ ಇಂಟರ್ವ್ಯೂ
- Movies
'ಸರಣಿ ಅಪರಾಧಿ' ಎಂದ ಬಿಎಂಸಿ ವಿರುದ್ಧ ಸೋನು ಸೂದ್ ಹೋರಾಟ
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 15ರ ಚಿನ್ನ, ಬೆಳ್ಳಿ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಬಹುನೀರಿಕ್ಷಿತ ಟಾಟಾ ಆಲ್ಟ್ರೊಜ್ ಕಾರು
ಟಾಟಾ ಮೋಟಾರ್ಸ್ ತನ್ನ ಬಹುನೀರಿಕ್ಷಿತ ಆಲ್ಟ್ರೊಜ್ ಹ್ಯಾಚ್ಬ್ಯಾಕ್ ಆವೃತ್ತಿಯನ್ನು ಮುಂದಿನ ವರ್ಷದ ಜನವರಿ 22ರಂದು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಟಾಟಾ ಕಂಪನಿಯು ಹೊಸ ಕಾರಿನ ಖರೀದಿಗೆ ಅಧಿಕೃತ ಬುಕ್ಕಿಂಗ್ ಅನ್ನು ಆರಂಭಿಸಿದೆ.

ಆಲ್ಟ್ರೊಜ್ ಹೊಸ ಕಾರು ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ. ಹಲವಾರು ಹೊಸ ವಿಶೇಷತೆ ಫೀಚರ್ಸ್ಗಳನ್ನು ಹೊಂದಿರುವುದರಿಂದ ಈ ಹ್ಯಾಚ್ಬ್ಯಾಕ್ ಮಾದರಿಯು ಹೆಚ್ಚಿನ ಕಾರು ಪ್ರಿಯರನ್ನು ಸೆಳಯಬಹುದು. ಈಗಾಗಲೇ ಹೊಸ ಆಲ್ಟ್ರೊಜ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭಿಸಲಾಗಿದೆ.

ಟಾಟಾ ಸಂಸ್ಥೆಯು ಡೀಲರ್ಸ್ಗಳ ಬಳಿ ಹೊಸ ಕಾರು ಖರೀದಿಗೆ ಗ್ರಾಹಕರು ರೂ.21 ಸಾವಿರ ಪಾವತಿಸಿ ಬುಕ್ಕಿಂಗ್ ಮಾಡಬಹುದಾಗಿದೆ. ಇನ್ನು ಟಾಟಾ ಸಂಸ್ಥೆಯು ಆಲ್ಟ್ರೊಜ್ ಕಾರು ಬಿಡುಗಡೆಗಾಗಿ ಭರ್ಜರಿ ತಯಾರಿ ನಡೆಸಿದ್ದು, ಪೂರ್ಣ ಪ್ರಮಾಣದಲ್ಲಿ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸಲಾಗಿದೆ.

ಆಲ್ಟ್ರೊಜ್ ಹೊಸ ಕಾರು ಬಿಎಸ್-6 ಎಂಜಿನ್ ಅನ್ನು ಹೊಂದಿರಲಿದೆ. ಹಲವಾರು ಹೊಸ ವಿಶೇಷತೆ ಫೀಚರ್ಸ್ಗಳನ್ನು ಹೊಂದಿರುವುದರಿಂದ ಈ ಹ್ಯಾಚ್ಬ್ಯಾಕ್ ಮಾದರಿಯು ಹೆಚ್ಚಿನ ಸಂಖ್ಯೆಯಲ್ಲಿ ಕಾರು ಪ್ರಿಯರನ್ನು ಸೆಳೆಯಬಹುದು.

ಆಲ್ಟ್ರೊಜ್ ಎನ್ನುವ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್ಟ್ರೊಜ್ ಕಾರನ್ನು ನಿರ್ಮಾಣ ಮಾಡಲಾಗಿದೆ. ಟಾಟಾ ಆಲ್ಟ್ರೊಜ್ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಆಲ್ಟ್ರೊಜ್ನಲ್ಲಿ ಗ್ರೇ ಮತ್ತು ಬ್ಲ್ಯಾಕ್ ಬಣ್ಣದ ಕ್ಯಾಬಿನ್, ಡ್ಯಾಶ್ಬೋರ್ಡ್ ಸುತ್ತಲು ಸಿಲ್ವರ್ ಆಕ್ಸೆಂಟ್, ಹೈ ಎಂಡ್ ಆವೃತ್ತಿಯಲ್ಲಿ ಸೆಮಿ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್ ಜೋಡಿಸಲಾಗಿದೆ. ಸ್ಟ್ಯಾಂಡರ್ಡ್ ಆಗಿ ಹೊಸ ಕಾರಿನಲ್ಲಿ ಟಚ್ ಸ್ಕ್ರೀನ್ ಇನ್ಪೋಟೇನ್ಮೆಂಟ್ ಸಿಸ್ಟಂಗಳಿವೆ.

ಇದರ ಜೊತೆಗೆ ಡಿಸ್ಪ್ಲೇ, ಎಡ್ಜಂಜಸ್ಟ್ ಬಲ್ ಡ್ರೈವರ್ ಸೀಟ್, ಎರಡು ಬದಿಯಲ್ಲೂ ಸೆಂಟರ್ ಆರ್ಮ್ ರೆಸ್ಟ್, 12 ವೊಲ್ಟ್ ಚಾರ್ಜಿಂಗ್ ಪೋರ್ಟ್ಸ್, ಬಾಟಲ್ ಹೋಲ್ಡರ್ಸ್, ಹಿಂಬದಿಯ ಸವಾರರಿಗೂ ಎಸಿ ವೆಂಟ್ಸ್ ಸೇರಿದಂತೆ ಹಲವಾರು ಹೊಸ ಫೀಚರ್ಸ್ಗಳಿವೆ.

ಆಲ್ಟ್ರೊಜ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಎರಡು ಎಂಜಿನ್ ಆಯ್ಕೆಗಳು ಮತ್ತು ಡೀಸೆಲ್ ಆವೃತ್ತಿಯಲ್ಲಿ ಒಂದೇ ಆಯ್ಕೆಯಲ್ಲಿ ಲಭ್ಯವಾಗಲಿದೆ. ಟಿಯಾಗೋ ಜೆಟಿಪಿ ಕಾರಿನಲ್ಲಿ ಬಳಕೆ ಮಾಡಿರುವ 1.2-ಲೀಟರ್ ಪೆಟ್ರೋಲ್ ಟರ್ಬೋ ಮತ್ತು 1.5-ಲೀಟರ್ ಡೀಸೆಲ್ ಟರ್ಬೋ ಎಂಜಿನ್ ಮಾದರಿಯಲ್ಲಿ ಇರಲಿದೆ.
MOST READ: ಬೈಕ್ ಚಲಾಯಿಸಿದ್ದು ಮಗ, ದಂಡ ಬಿದ್ದಿದ್ದು ಅಪ್ಪನಿಗೆ..!

ಈ ಮೊದಲು ಬಿಎಸ್-4 ಎಂಜಿನ್ ಅನ್ನು ಅಳವಡಿಸಿ ಟೆಸ್ಟ್ ನಡೆಸಿದ್ದ ಟಾಟಾ ಸಂಸ್ಥೆಯು ಕೊನೆಯ ಹಂತದಲ್ಲಿ ನಿರ್ಧಾರವನ್ನು ಬದಲಿಸಿತ್ತು. 2020ರ ಏಪ್ರಿಲ್ 1ರಿಂದ ಜಾರಿಯಾಗಲಿರುವ ಬಿಎಸ್-6 ನಿಯಮ ಅನುಸಾರವಾಗಿ ಹೊಸ ಕಾರ್ ಅನ್ನು ಬಿಡುಗಡೆಗೊಳಿಸುತ್ತಿದೆ.
MOST READ: ಬೈಕ್ ಸವಾರನ ಪ್ರಾಣ ಉಳಿಸಿದ ಆಪಲ್ ವಾಚ್..!

ಹೊಸ ಕಾರಿನ ಎಂಜಿನ್ ಪರ್ಫಾಮೆನ್ಸ್ನಲ್ಲಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಹೊಸ ಆಲ್ಟ್ರೊಜ್ ಕಾರು ಇಂಪ್ಯಾಕ್ಟ್ ಡಿಸೈನ್ 2.0 ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸವನ್ನು ಹೊಂದಿರಲಿದೆ.

ಹೊಸ ಕಾರಿನ ಆರಂಭಿಕ ಬೆಲೆಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 6.50 ಲಕ್ಷದಿಂದ, ಟಾಪ್ ಎಂಡ್ ಮಾದರಿಯ ಬೆಲೆಯು ರೂ. 8.50 ಲಕ್ಷಗಳಾಗಿರಬಹುದು. ಹೊಸ ಆಲ್ಟ್ರೊಜ್ ಕಾರಿನಲ್ಲಿ ಹೆಚ್ಚಿನ ಸುರಕ್ಷತಾ ಫೀಚರ್ಸ್ಗಳನ್ನು ಅಳವಡಿಸಲಾಗಿದೆ.