Just In
Don't Miss!
- News
ಆಹಾರ ಸುರಕ್ಷಾ ಶೃಂಗ ಪ್ರಶಸ್ತಿ-2019: 2 ಪ್ರಶಸ್ತಿ ಗೆದ್ದ ಹೆರಿಟೇಜ್ ಫುಡ್ಸ್
- Sports
ಆಟದ ಮಧ್ಯೆ ಮಗುವಿಗೆ ಹಾಲುಣಿಸಿದ ಆಟಗಾರ್ತಿ; ಹೃದಯಗೆದ್ದ ಫೋಟೋ ವೈರಲ್
- Movies
ಡಿಸೆಂಬರ್ 18ಕ್ಕೆ ದುನಿಯಾ ವಿಜಯ್ ತಂಡದಿಂದ ಸರ್ಪ್ರೈಸ್
- Finance
ಶೈಕ್ಷಣಿಕ ಸಾಲ ಮನ್ನಾ ಆಗುತ್ತಾ? ಏನಂತಾರೆ FM ನಿರ್ಮಲಾ ಸೀತಾರಾಮನ್
- Technology
ಗೂಗಲ್ ಮ್ಯಾಪ್ ನಲ್ಲಿ ಪಾದಾಚಾರಿಗಳಿಗೆ ಅನುಕೂಲವಾಗುವ ಮತ್ತೊಂದು ಫೀಚರ್
- Lifestyle
ಕಬ್ಬಿಣಾಂಶದ ಕೊರತೆಯೇ? ಈ ಆಹಾರಗಳನ್ನು ಸೇವಿಸಿ
- Education
ಎಸ್ಎಸ್ಎಲ್ಸಿ ಪಾಸ್...ಚಾಲಕ ವೃತ್ತಿ ಅಂದ್ರೆ ನಂಗಿಷ್ಟ… ಹಾಗಿದ್ರೆ ಈ ಸಾರಿಗೆ ಸಂಸ್ಥೆ ನೇಮಕಾತಿಗೆ ಅರ್ಜಿ ಹಾಕ
- Travel
ಬೀಚ್ಗೆ ಹೋಗುವ ಮುನ್ನ ಈ ಸಂಗತಿಗಳು ನೆನಪಿನಲ್ಲಿರಲಿ
ಬಿಎಸ್-6 ಎಫೆಕ್ಟ್- ಆಲ್‌ಟ್ರೊಜ್ ಕಾರು ಬಿಡುಗಡೆ ಯೋಜನೆ ಮುಂದೂಡಿದ ಟಾಟಾ ಮೋಟಾರ್ಸ್
ಇದೇ ವರ್ಷ ಅಕ್ಟೋಬರ್ ಕೊನೆಯಲ್ಲಿ ಆಲ್‌ಟ್ರೊಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಯನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದ ಟಾಟಾ ಸಂಸ್ಥೆಯು ಬಿಡುಗಡೆಯ ಅವಧಿಯನ್ನು ಮುಂದೂಡಿದ್ದು, ಹೊಸ ಕಾರು ಬಿಡುಗಡೆ ವಿಳಂಬಕ್ಕೆ ಜಾರಿಗೆ ಬರುತ್ತಿರುವ ಬಿಎಸ್-6 ನಿಯಮವು ಪ್ರಮುಖ ಕಾರಣವಾಗಿದೆ.

ಟಾಟಾ ಸಂಸ್ಥೆಯು ಸದ್ಯ ಆಲ್‌ಟ್ರೊಜ್ ಕಾರು ಮಾದರಿಯಲ್ಲಿ ಬಿಎಸ್-4 ಎಂಜಿನ್ ಮಾದರಿಯನ್ನು ಜೋಡಣೆ ಮಾಡಿ ರೋಡ್ ಟೆಸ್ಟಿಂಗ್ ನಡೆಸುತ್ತಿದ್ದು, ಹೊಸ ಕಾರನ್ನು ಇದೀಗ ಬಿಡುಗಡೆ ಮಾಡಿದರೂ ಸಹ ಮುಂಬರುವ ಕೆಲವೇ ದಿನಗಳಲ್ಲಿ ಮತ್ತೊಂದು ಬಾರಿ ಎಂಜಿನ್ ಉನ್ನತೀಕರಣ ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ. ಹೀಗಾಗಿ ಸದ್ಯ ಆಲ್‌ಟ್ರೊಜ್ ಕಾರನ್ನು ಬಿಡುಗಡೆ ಮಾಡದಿರಲು ನಿರ್ಧರಿಸಿರುವ ಟಾಟಾ ಸಂಸ್ಥೆಯು 2020ರ ಆರಂಭದಲ್ಲಿ ಜಾರಿಗೆ ಬರಲಿರುವ ಬಿಎಸ್-6 ಎಂಜಿನ್‌ನೊಂದಿಗೆಯೇ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಈಗಾಗಲೇ ಹೊಸ ಕಾರು ಖರೀದಿಗೆ ಬುಕ್ಕಿಂಗ್ ಪ್ರಕ್ರಿಯೆಯನ್ನು ಆರಂಭಿಸಿದ್ದ ಟಾಟಾ ಸಂಸ್ಥೆಯು ಗ್ರಾಹಕರಿಗೆ ಹಣ ಹಿಂದಿರುಗಿಸಿದ್ದು, 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋ ನಂತರ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಾಗುವ ಭರವಸೆ ನೀಡಿದೆ.

ಇನ್ನು ಹ್ಯಾರಿಯರ್ ಎಸ್‌ಯುವಿ ಬಿಡುಗಡೆಯ ಯಶಸ್ವಿ ನಂತರ ಭವಿಷ್ಯದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆಯಿಡುತ್ತಿರುವ ಟಾಟಾ ಸಂಸ್ಥೆಯು ಭಾರತೀಯ ಆಟೋ ಉದ್ಯಮದಲ್ಲಿ ಭಾರೀ ಬದಲಾವಣೆಗೆ ಮುಂದಾಗಿದ್ದು, ಹೊಸ ಕಾರು ಹಲವು ವಿಶೇಷತೆಗಳನ್ನು ಹೊತ್ತುಬರುವ ನೀರಿಕ್ಷೆಯಲ್ಲಿದೆ.

ಆಲ್ಬಾಟ್ರೊಸ್ ಎನ್ನುವ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್‌ಟ್ರೊಜ್ ಕಾರನ್ನು ನಿರ್ಮಾಣ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಮಾರುಕಟ್ಟೆಗೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಿದೆ. ಆಲ್‌ಟ್ರೊಜ್ ಕಾರು ಬಿಎಸ್-6 ಮಾದರಿಯ ಪೆಟ್ರೋಲ್ ಆವೃತ್ತಿಯಲ್ಲಿ ಎರಡು ಎಂಜಿನ್ ಆಯ್ಕೆಗಳು ಇರಲಿದ್ದು, ಡೀಸೆಲ್ ಆವೃತ್ತಿಯಲ್ಲಿ ಒಂದು ಆಯ್ಕೆ ಮಾತ್ರ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಮತ್ತು 1.5-ಲೀಟರ್ ಎಂಜಿನ್ ಮಾದರಿಗಳು ಅಭಿವೃದ್ಧಿಯಾಗುತ್ತಿದ್ದು, ಡೀಸೆಲ್ ಮಾದರಿಯಲ್ಲಿ 1.5-ಲೀಟರ್ ಎಂಜಿನ್ ಲಭ್ಯವಾಗಲಿದೆ. ಪೆಟ್ರೋಲ್ ಆವೃತ್ತಿಗಾಗಿ ಆಯ್ಕೆ ಮಾಡಲಾಗಿರುವ 1.2-ಲೀಟರ್ ಎಂಜಿನ್ ಮಾದರಿಯನ್ನು ಟಿಯಾಗೋದಿಂದ ಎರವಲು ಪಡೆದಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಮಾದರಿಗಳನ್ನು ನೆಕ್ಸಾನ್ ಎಸ್‌ಯುವಿಯಿಂದ ಎರವಲು ಪಡೆಯಲಾಗಿದೆ.

ಟಾಟಾ ಸಂಸ್ಥೆಯು ಹೊಸ ಕಾರಿನ ಎಂಜಿನ್ ಪರ್ಫಾಮೆನ್ಸ್‌ನಲ್ಲಿ ಕೆಲವು ಗಮನಸೆಳೆಯಬಹುದಾದ ಬದಲಾವಣೆಗಳನ್ನು ಮಾಡಿದ್ದು, ಪ್ರಮುಖ ವಿಚಾರ ಅಂದ್ರೆ ಹೊಸ ಆಲ್‌ಟ್ರೊಜ್ ಕಾರನ್ನು ಸಹ ಇಂಪ್ಯಾಕ್ಟ್ ಡಿಸೈನ್ 2.0 ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಅಭಿವೃದ್ಧಿಗೊಳಿಸಲಾಗಿದೆ.

ಇದು ಕಾರಿನ ತೂಕವನ್ನು ಕಡಿತಗೊಳಿಸುವಲ್ಲಿ ಸಾಕಷ್ಟು ನೆರವಾಗಿದ್ದು, ಇದು ನೇರವಾಗಿ ಕಾರಿನ ಎಂಜಿನ್ ಪರ್ಫಾಮೆನ್ಸ್ ಸುಧಾರಣೆಯಾಗುವುದಲ್ಲದೇ ಮೈಲೇಜ್ ಪ್ರಮಾಣ ಕೂಡಾ ಹೆಚ್ಚಳವಾಗಿರುವುದು ಸ್ಪಾಟ್ ಟೆಸ್ಟಿಂಗ್ ವೇಳೆ ಖಚಿತವಾಗಿದೆ.
MOST READ: ಸಾಮಾನ್ಯ ಪೆಟ್ರೋಲ್ ಕಾರಿಗಿಂತಲೂ ಶೇ.80 ರಷ್ಟು ಅಗ್ಗ ಹ್ಯುಂಡೈ ಕೊನಾ ರನ್ನಿಂಗ್ ಕಾಸ್ಟ್..!

ಆದ್ರೆ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ಅಧಿಕೃತ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು 2020ರ ಫೆಬ್ರುವರಿಯಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8 ಲಕ್ಷಕ್ಕೆ ನಿಗದಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಇದರೊಂದಿಗೆ ಟಾಟಾ ಸಂಸ್ಥೆಯು ಹೊಸ ಆಲ್‌ಟ್ರೋಜ್ ಕಾರುನ್ನು ಸಹ ಈ ಹಿಂದಿನ ನೆಕ್ಸಾನ್ ಮತ್ತು ಹ್ಯಾರಿಯರ್ ಮಾದರಿಯಲ್ಲೇ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರಯಾಣಿಕರ ಸುರಕ್ಷತೆಯಲ್ಲಿ 5 ಸ್ಟಾರ್ ರೇಟಿಂಗ್ ಒದಗಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ. ಇದರಿಂದ ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಎನ್ನಿಸಲಿರುವ ಹೊಸ ಆಲ್‌ಟ್ರೋಜ್ ಕಾರು ಹ್ಯುಂಡೈ ಐ20 ಮತ್ತು ಮಾರುತಿ ಬಲೆನೊ ಕಾರುಗಳಿಗೆ ಟಕ್ಕರ್ ನೀಡಲಿದೆ.