ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಟಾಟಾ ಸಂಸ್ಥೆಯು ಆಲ್‌ಟ್ರೊಜ್ ಕಾರು ಬಿಡುಗಡೆಗಾಗಿ ಭರ್ಜರಿ ತಯಾರಿ ನಡೆಸಿದ್ದು, ಪೂರ್ಣ ಪ್ರಮಾಣದಲ್ಲಿ ರೋಡ್ ಟೆಸ್ಟಿಂಗ್ ಪೂರ್ಣಗೊಳಿಸಲಾದ ಮೊದಲ ಉತ್ಪಾದನಾ ಆವೃತ್ತಿಯನ್ನು ಪುಣೆ ಕಾರು ಉತ್ಪಾದನಾ ಘಟಕದಲ್ಲಿ ಅನಾವರಣಗೊಳಿಸಲಾಗಿದೆ.

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಹೊಸ ಆಲ್‌ಟ್ರೊಜ್ ಕಾರು ಈ ಹಿಂದೆ ಜಿನೆವಾ ಆಟೋ ಮೇಳದಲ್ಲಿ ಪ್ರದರ್ಶನ ಮಾಡಲಾದ ಆವೃತ್ತಿಯೆಂತೆ ಬಹುತೇಕ ತಾಂತ್ರಿಕ ಅಂಶಗಳನ್ನು ಉತ್ಪಾದನಾ ಆವೃತ್ತಿಯಲ್ಲೂ ಪಡೆದುಕೊಂಡಿದ್ದು, ಹೊಸ ಕಾರು ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ. ಹ್ಯಾರಿಯರ್ ಬಿಡುಗಡೆ ಯಶಸ್ವಿ ನಂತರ ಟಾಟಾ ಸಂಸ್ಥೆಯು ಭಾರತೀಯ ಆಟೋ ಉದ್ಯಮದಲ್ಲಿ ಭಾರೀ ಬದಲಾವಣೆಗೆ ಕಾರಣವಾಗಿದ್ದು, ಹಲವು ವಿಶೇಷತೆಗಳನ್ನು ಹೊತ್ತುಬಂದಿರುವ ಆಲ್‌ಟ್ರೊಜ್ ಕಾರು ಹ್ಯಾಚ್‌ಬ್ಯಾಕ್ ಪ್ರಿಯರ ನೆಚ್ಚಿನ ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಆಲ್ಬಾಟ್ರೊಸ್ ಎನ್ನುವ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್‌ಟ್ರೊಜ್ ಕಾರನ್ನು ನಿರ್ಮಾಣ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಮಾರುಕಟ್ಟೆಗೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಿದೆ.

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಇದಕ್ಕೆ ಕಾರಣ, ಹ್ಯಾಚ್‌ಬ್ಯಾಕ್ ಸೆಗ್ಮೆಂಟ್ ಕಾರುಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಆಲ್‌ಟ್ರೊಜ್‌ನಲ್ಲಿ ಗ್ರೆ ಮತ್ತು ಬ್ಲ್ಯಾಕ್ ಬಣ್ಣದ ಕ್ಯಾಬಿನ್, ಡ್ಯಾಶ್‌ಬೋರ್ಡ್ ಸುತ್ತಲು ಸಿಲ್ವರ್ ಆಕ್ಸೆಂಟ್, ಹೈ ಎಂಡ್ ಆವೃತ್ತಿಯಲ್ಲಿ ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೋಡಿಸಲಾಗಿದೆ.

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಹಾಗೆಯೇ ಸ್ಟ್ಯಾಂಡರ್ಡ್ ಆಗಿ ಹೊಸ ಕಾರಿನಲ್ಲಿ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಮಡಿಕೆ ಮಾಡಬಹುದಾದ ಡಿಸ್‌‌ಪ್ಲೇ, ಎತ್ತರವನ್ನು ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕನ ಆಸನ, ಎರಡು ಬದಿಯಲ್ಲೂ ಸೆಂಟರ್ ಆರ್ಮ್ ರೆಸ್ಟ್, 12 ವೊಲ್ಟ್ ಚಾರ್ಜಿಂಗ್ ಪೋರ್ಟ್ಸ್, ಬಾಗಿಲುಗಳಲ್ಲಿ ಬಾಟಲ್ ಹೋಲ್ಡರ್ಸ್, ಹಿಂಬದಿಯ ಸವಾರರಿಗೂ ಎಸಿ ವೆಂಟ್ಸ್ ಸೇರಿದಂತೆ ಹಲವಾರು ಹೊಸ ಫೀಚರ್ಸ್‌ಗಳು ಆಲ್‌ಟ್ರೊಜ್ ಕಾರಿನಲ್ಲಿವೆ.

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಇನ್ನು ಆಲ್‌ಟ್ರೊಜ್ ಕಾರು ಬಿಎಸ್-6 ಮಾದರಿಯ ಎಂಜಿನ್ ಹೊಂದಿದ್ದು, ಪೆಟ್ರೋಲ್ ಆವೃತ್ತಿಯಲ್ಲಿ ಎರಡು ಎಂಜಿನ್ ಆಯ್ಕೆಗಳು ಮತ್ತು ಡೀಸೆಲ್‌ ಆವೃತ್ತಿಯಲ್ಲಿ ಮಾತ್ರ ಒಂದೇ ಆಯ್ಕೆ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಮಾಹಿತಿಗಳ ಪ್ರಕಾರ, ಟಿಯಾಗೋ ಜೆಟಿಪಿ ಕಾರಿನಲ್ಲಿ ಬಳಕೆ ಮಾಡಿರುವ 1.2-ಲೀಟರ್ ಪೆಟ್ರೋಲ್ ಟರ್ಬೋ ಮತ್ತು 1.5-ಲೀಟರ್ ಡೀಸೆಲ್ ಟರ್ಬೋ ಎಂಜಿನ್ ಮಾದರಿಗಳೇ ಆಲ್‌ಟ್ರೊಜ್ ಕಾರಿನಲ್ಲೂ ಬಳಕೆಯಾಗುವ ಸಾಧ್ಯತೆಗಳಿದ್ದು, ಬಿಎಸ್-6 ವೈಶಿಷ್ಟ್ಯತೆಯೊಂದಿಗೆ ಉನ್ನತೀಕರಿಸಲಾಗಿದೆ.

MOST READ: ಸಂಚಾರಿ ನಿಯಮಗಳ ಉಲ್ಲಂಘನೆ ತಡೆಗಾಗಿ ಬೆಂಗಳೂರು ಪೊಲೀಸರಿಂದ ಹೊಸ ಐಡಿಯಾ..!

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಈ ಮೊದಲು ಬಿಎಸ್-4 ಎಂಜಿನ್ ಅನ್ನೇ ಜೋಡಣೆ ಮಾಡಿ ರೋಡ್ ಟೆಸ್ಟಿಂಗ್ ನಡೆಸಿದ್ದ ಟಾಟಾ ಸಂಸ್ಥೆಯು ಕೊನೆಯ ಹಂತದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದು, 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಲಿರುವ ಬಿಎಸ್-6 ನಿಯಮ ಅನುಸಾರವೇ ಹೊಸ ಕಾರನ್ನು ಅನಾವರಣಗೊಳಿಸಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

MOST READ: ಕಲ್ಯಾಣ್ ಜ್ಯುವೆಲ್ಲರ್ಸ್ ಮಾಲೀಕನ ಬಳಿಯಿರುವ ಐಷಾರಾಮಿ ಕಾರು ಕಲೆಕ್ಷನ್ ಹೇಗಿದೆ ಗೊತ್ತಾ?

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಟಾಟಾ ಸಂಸ್ಥೆಯು ಹೊಸ ಕಾರಿನ ಎಂಜಿನ್ ಪರ್ಫಾಮೆನ್ಸ್‌ನಲ್ಲಿ ಕೆಲವು ಗಮನಸೆಳೆಯಬಹುದಾದ ಬದಲಾವಣೆಗಳನ್ನು ಮಾಡಿದ್ದು, ಪ್ರಮುಖ ವಿಚಾರ ಅಂದ್ರೆ ಹೊಸ ಆಲ್‌ಟ್ರೊಜ್ ಕಾರನ್ನು ಸಹ ಇಂಪ್ಯಾಕ್ಟ್ ಡಿಸೈನ್ 2.0 ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಅಭಿವೃದ್ಧಿಗೊಳಿಸಲಾಗಿದೆ.

MOST READ: ಗ್ರಾವಿಟಾಸ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಹೊಸ 7 ಸೀಟರ್ ಎಸ್‌ಯುವಿ ಕಾರು

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಕಾರು ಬಿಡುಗಡೆಯ ಅವಧಿ ಮತ್ತು ಬೆಲೆ(ಎಕ್ಸ್‌ಶೋರೂಂ ಪ್ರಕಾರ)

ಮುಂದಿನ ತಿಂಗಳು ಡಿಸೆಂಬರ್ ಆರಂಭದಲ್ಲಿ ಅನಾವರಣಗೊಳ್ಳಲಿರುವ ಆಲ್‌ಟ್ರೊಜ್ ಕಾರು 2020ರ ಜನವರಿ ಅಂತ್ಯಕ್ಕೆ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 8.50 ಲಕ್ಷಕ್ಕೆ ನಿಗದಿಯಾಗಬಹುದು ಎಂದು ಅಂದಾಜಿಸಲಾಗಿದೆ.

ಟಾಟಾ ಆಲ್‌ಟ್ರೊಜ್ ಮೊದಲ ಉತ್ಪಾದನಾ ಆವೃತ್ತಿ ಅನಾವರಣ

ಇದರೊಂದಿಗೆ ಟಾಟಾ ಸಂಸ್ಥೆಯು ಹೊಸ ಆಲ್‌ಟ್ರೊಜ್ ಕಾರಿಲ್ಲೂ ಈ ಹಿಂದಿನ ನೆಕ್ಸಾನ್ ಮತ್ತು ಹ್ಯಾರಿಯರ್ ಮಾದರಿಯಲ್ಲೇ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ 5 ಸ್ಟಾರ್ ರೇಟಿಂಗ್ ಒದಗಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ. ಇದರಿಂದ ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಎನ್ನಿಸಲಿರುವ ಹೊಸ ಆಲ್‌ಟ್ರೊಜ್ ಕಾರು ಹ್ಯುಂಡೈ ಐ20, ಮಾರುತಿ ಬಲೆನೊ ಮತ್ತು ಟೊಯೊಟಾ ಗ್ಲಾಂಝಾ ಕಾರುಗಳಿಗೆ ಟಕ್ಕರ್ ನೀಡಲಿದೆ.

Article Published On: Thursday, November 28, 2019, 10:51 [IST]
English summary
Tata Altroz Production Begins: First Hatchback Rolls Out Of Assembly Line. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+