Just In
- 4 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 5 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 5 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 6 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಪಾಟ್ ಟೆಸ್ಟಿಂಗ್ ವೇಳೆ ಕಾರು ಮಾಲೀಕರನ್ನು ಸೆಳೆದ ಟಾಟಾ ಆಲ್ಟ್ರೋಜ್
ಟಾಟಾ ಮೋಟಾರ್ಸ್ ವಿನೂತನ ವಿನ್ಯಾಸದ ಆಲ್ಟ್ರೋಜ್ ಕಾರು ಸದ್ಯ ಭಾರತೀಯ ಆಟೋ ಉದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಬಿಡುಗಡೆಯ ಉದ್ದೇಶದಿಂದ ದೇಶದ ವಿವಿಧಡೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ. ನಿನ್ನೆ ಕೂಡಾ ಪುಣೆ ಹೊರವಲಯದಲ್ಲೂ ಯಾವುದೇ ಮರೆಮಾಚದೇ ಆಲ್ಟ್ರೋಜ್ ಕಾರು ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿರುವುದು ಕಂಡುಬಂದಿದ್ದು, ಹೊಸ ಕಾರಿನ ಕಾರ್ಯಕ್ಷಮತೆಯು ಕಾರು ಮಾಲೀಕರು ಆಕರ್ಷಣೆಗೆ ಕಾರಣವಾಗಿದೆ.
ವಿನೂತನ ವಿನ್ಯಾಸದ ಹ್ಯಾರಿಯರ್ ಬಿಡುಗಡೆಯ ಯಶಸ್ವಿ ನಂತರ ಭವಿಷ್ಯದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆಯಿಸುತ್ತಿರುವ ಟಾಟಾ ಸಂಸ್ಥೆಯು ಭಾರತೀಯ ಆಟೋ ಉದ್ಯಮದಲ್ಲಿ ಭಾರೀ ಬದಲಾವಣೆಗೆ ಮುಂದಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಆಲ್ಟ್ರೊಜ್ ಹ್ಯಾಚ್ಬ್ಯಾಕ್ ಕಾರನ್ನು ಸಹ ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಪರಿಚಯಿಸುವ ಸುಳಿವು ನೀಡಿದೆ.
ಆಲ್ಬಾಟ್ರೊಸ್ ಎನ್ನುವ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್ಟ್ರೊಜ್ ಕಾರನ್ನು ನಿರ್ಮಾಣ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಮಾರುಕಟ್ಟೆಗೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಿದೆ.
ಇದಕ್ಕೆ ಕಾರಣ, ಆಲ್ಟ್ರೊಜ್ ಕಾರಿನ ಎಂಜಿನ್ ಪರ್ಫಾಮೆನ್ಸ್ ಗುಣಲಕ್ಷಣಗಳು ಇತರೆ ಹ್ಯಾಚ್ಬ್ಯಾಕ್ ಆವೃತ್ತಿಗಳಿಂತಲೂ ಉತ್ತಮವಾಗಿರುವುದಲ್ಲದೇ ಪ್ರೀಮಿಯಂ ಸೌಲಭ್ಯಗಳನ್ನು ಹೊತ್ತುಬರುತ್ತಿರುವುದು ಸ್ಪಾಟ್ ಟೆಸ್ಟಿಂಗ್ ವೇಳೆ ಖಚಿತವಾಗಿದೆ.
ಆಲ್ಟ್ರೊಜ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಎರಡು ಎಂಜಿನ್ ಆಯ್ಕೆಗಳು ಇರಲಿದ್ದು, ಡೀಸೆಲ್ ಆವೃತ್ತಿಯಲ್ಲಿ ಒಂದು ಆಯ್ಕೆ ಮಾತ್ರ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಮತ್ತು 1.5-ಲೀಟರ್ ಎಂಜಿನ್ ಮಾದರಿಗಳು ಅಭಿವೃದ್ಧಿಯಾಗುತ್ತಿದ್ದು, ಡೀಸೆಲ್ ಮಾದರಿಯಲ್ಲಿ 1.5-ಲೀಟರ್ ಎಂಜಿನ್ ಲಭ್ಯವಾಗಲಿದೆ.
ಪೆಟ್ರೋಲ್ ಆವೃತ್ತಿಗಾಗಿ ಆಯ್ಕೆ ಮಾಡಲಾಗಿರುವ 1.2-ಲೀಟರ್ ಎಂಜಿನ್ ಮಾದರಿಯನ್ನು ಟಿಯಾಗೋದಿಂದ ಎರವಲು ಪಡೆದಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಮಾದರಿಗಳನ್ನು ನೆಕ್ಸಾನ್ ಎಸ್ಯುವಿಯಿಂದ ಎರವಲು ಪಡೆದಿರುವ ಟಾಟಾ ಸಂಸ್ಥೆಯು ಎಂಜಿನ್ ಪರ್ಫಾಮೆನ್ಸ್ನಲ್ಲಿ ಕೆಲವು ಗಮನಸೆಳೆಯಬಹುದಾದ ಬದಲಾವಣೆಗಳನ್ನು ಮಾಡಿದೆ.
ಪ್ರಮುಖ ವಿಚಾರ ಅಂದ್ರೆ, ಟಾಟಾ ಸಂಸ್ಥೆಯು ಸದ್ಯ ಜೆಎಲ್ಆರ್ ಸಂಸ್ಥೆಯ ಜೊತೆಗೂಡಿ ಕಾರು ನಿರ್ಮಾಣದಲ್ಲಿ ಭಾರೀ ಬದಲಾವಣೆ ತರುತ್ತಿದ್ದು, ಹ್ಯಾರಿಯರ್ ಕಾರು ಮಾದರಿಯಲ್ಲೇ ಹೊಸ ಆಲ್ಟ್ರೊಜ್ ಕಾರನ್ನು ಸಹ ಇಂಪ್ಯಾಕ್ಟ್ ಡಿಸೈನ್ 2.0 ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಅಭಿವೃದ್ಧಿಗೊಳಿಸಿದೆ.
ಇದು ಕಾರಿನ ತೂಕವನ್ನು ಕಡಿತಗೊಳಿಸುವಲ್ಲಿ ಸಾಕಷ್ಟು ನೆರವಾಗಿದ್ದು, ಇದು ನೇರವಾಗಿ ಕಾರಿನ ಎಂಜಿನ್ ಪರ್ಫಾಮೆನ್ಸ್ ಪರಿಣಾಮ ಬೀರುವುದಲ್ಲದೇ ಮೈಲೇಜ್ ಪ್ರಮಾಣ ಕೂಡಾ ಹೆಚ್ಚಳವಾಗಲಿದೆ.
ಆದ್ರೆ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ವರ್ಷ ಜೂನ್ ಅಥವಾ ಜುಲೈ ಅಂತ್ಯಕ್ಕೆ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 5 ಲಕ್ಷದಿಂದ ರೂ.7 ಲಕ್ಷ ಮತ್ತು ಆಲ್ಟ್ರೊಜ್ ಎಲೆಕ್ಟ್ರಿಕ್ ವರ್ಷನ್ ಕಾರಿನ ಬೆಲೆಯು ರೂ.10 ಲಕ್ಷದೊಳಗೆ ಬೆಲೆ ನಿಗದಿಯಾಗಬಹುದು ಎಂದಿದೆ.
Source: Team BHP