ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಬಹುನೀರಿಕ್ಷಿತ ಆಲ್‌ಟ್ರೊಜ್ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆವೃತ್ತಿಯನ್ನು ಅನಾವರಣಗೊಳಿಸಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಹೊಸ ಕಾರಿನ ಬಿಡುಗಡೆಗೆ ಸಿದ್ದತೆ ನಡೆಸಿದ್ದು, ಆಲ್‌ಟ್ರೊಜ್ ಕಾರು ಗ್ರಾಹಕರ ನೀರಿಕ್ಷೆಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬರುವ ಸುಳಿವು ನೀಡಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಆಲ್ಬಾಟ್ರೊಸ್ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್‌ಟ್ರೊಜ್ ಕಾರು ಆವೃತ್ತಿಯನ್ನು ನಿರ್ಮಾಣ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಹೊಸ ಕಾರನ್ನು ಅಭಿವೃದ್ದಿಗೊಳಿಸಿದ್ದು, 2020ರ ಜನವರಿ ಕೊನೆಯ ವಾರದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರು ಖರೀದಿಗೆ ಇಂದಿನಿಂದಲೇ ರೂ.21 ಸಾವಿರ ಮುಂಗಡ ಪಾವತಿಸಿ ಅಧಿಕೃತವಾಗಿ ಬುಕ್ಕಿಂಗ್ ದಾಖಲಿಸಬಹುದಾಗಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಹ್ಯಾರಿಯರ್ ಕಾರು ಬಿಡುಗಡೆಯ ಯಶಸ್ವಿ ನಂತರ ಕಾರು ಮಾರಾಟದಲ್ಲಿ ಮಹತ್ವದ ಬದಲಾಣೆ ಪರಿಚಯಿಸುತ್ತಿರುವ ಟಾಟಾ ಸಂಸ್ಥೆಯು ಸುಧಾರಿತ ತಂತ್ರಜ್ಞಾನ ಪ್ರೇರಿತ ಆಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಕಾರನ್ನು ಸಿದ್ದಗೊಳಿಸಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಇಂಪ್ಯಾಕ್ಟ್ 2.0 ಡಿಸೈನ್‌ನಿಂದಾಗಿ ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಎನ್ನಿಸುವ ಆಲ್‌ಟ್ರೊಜ್ ಕಾರು ಗ್ರೆ ಮತ್ತು ಬ್ಲ್ಯಾಕ್ ಬಣ್ಣದ ಕ್ಯಾಬಿನ್, ಡ್ಯಾಶ್‌ಬೋರ್ಡ್ ಸುತ್ತಲು ಸಿಲ್ವರ್ ಆಕ್ಸೆಂಟ್, ಫಾಲೋ ಮೀ ಹೆಡ್‌ಲ್ಯಾಂಪ್, ಹೈ ಎಂಡ್ ಆವೃತ್ತಿಯಲ್ಲಿ ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೋಡಣೆ ಹೊಂದಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಹಾಗೆಯೇ ಸ್ಟ್ಯಾಂಡರ್ಡ್ ಆಗಿ ಹೊಸ ಕಾರಿನಲ್ಲಿ 7-ಇಂಚಿನ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯಿಡ್ ಆಟೋ, ಮಡಿಕೆ ಮಾಡಬಹುದಾದ ಮಲ್ಟಿ ಇನ್‌ಫಾರ್ಮ್‌ಮೆಷನ್ ಡಿಸ್‌‌ಪ್ಲೇ, ಎತ್ತರವನ್ನು ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕನ ಆಸನ, ಎರಡು ಬದಿಯಲ್ಲೂ ಸೆಂಟರ್ ಆರ್ಮ್ ರೆಸ್ಟ್, 12 ವೊಲ್ಟ್ ಚಾರ್ಜಿಂಗ್ ಪೋರ್ಟ್ಸ್, ನಾಲ್ಕು ಬಾಗಿಲುಗಳಲ್ಲೂ ಬಾಟಲ್ ಹೋಲ್ಡರ್ಸ್, ಕೀ ಲೆಸ್ ಎಂಟ್ರಿ, ಹಿಂಬದಿಯ ಸವಾರರಿಗೂ ಎಸಿ ವೆಂಟ್ಸ್ ಸೇರಿದಂತೆ ಹಲವಾರು ಹೊಸ ಫೀಚರ್ಸ್‌ಗಳು ಆಲ್‌ಟ್ರೊಜ್ ಕಾರಿನಲ್ಲಿವೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಎಂಜಿನ್ ಸಾಮರ್ಥ್ಯ

ಜನವರಿ ಕೊನೆಯಲ್ಲಿ ಆರಂಭದಲ್ಲಿ ಬಿಡುಗಡೆಯಾಗಲಿರುವ ಆಲ್‌ಟ್ರೊಜ್ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಎರಡು ಕಾರು ಮಾದರಿಗಳಲ್ಲೂ ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಮಾಹಿತಿಗಳ ಪ್ರಕಾರ, ಮೊದಲ ಹಂತವಾಗಿ ಮ್ಯಾನುವಲ್ ಗೇರ್‌ಬಾಕ್ಸ್ ಪ್ರೇರಿತ ಟ್ರಾನ್ಸ್‌ಮಿಷನ್ ಆಯ್ಕೆಯನ್ನು ಮಾತ್ರವೇ ನೀಡಿರುವ ಟಾಟಾ ಮೋಟಾರ್ಸ್ ಸಂಸ್ಥೆಯು 2020ರ ಮಾರ್ಚ್ ಅಥವಾ ಏಪ್ರಿಲ್ ಹೊತ್ತಿಗೆ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಜೊತೆಗೆ ಪೆಟ್ರೋಲ್ ಟರ್ಬೋ ಎಂಜಿನ್ ಮಾದರಿಯನ್ನು ಬಿಡುಗಡೆಗೊಳಿಸುವ ಸುಳಿವು ನೀಡಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಇನ್ನು ಬಿಡುಗಡೆಯಾಗಲಿರುವ ಸಾಮಾನ್ಯ 1.2-ಲೀಟರ್ ಪೆಟ್ರೋಲ್ ಆವೃತ್ತಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲವು.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಆಲ್‌ಟ್ರೊಜ್ ವೆರಿಯೆಂಟ್‌ ಮತ್ತು ಬಣ್ಣಗಳು

ಎಕ್ಸ್‌ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ವೆರಿಯೆಂಟ್‌‌ಗಳನ್ನು ಹೊಂದಿರುವ ಆಲ್‌ಟ್ರೊಜ್‌ನಲ್ಲಿ ಹೈ-ಸ್ಟ್ರೀಟ್ ಗೋಲ್ಡ್, ಸ್ಕೈಲೈನ್ ಸಿಲ್ವರ್, ಡೌನ್‌ಟೌನ್ ರೆಡ್, ಮಿಡ್‌ಟೌನ್ ಗ್ರೇ ಮತ್ತು ಅವೆನ್ಯೂ ವೈಟ್ ಎನ್ನುವ ಐದು ಬಣ್ಣಗಳ ಆಯ್ಕೆ ಹೊಂದಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಇದರೊಂದಿಗೆ ಟಾಟಾ ಸಂಸ್ಥೆಯು ಹೊಸ ಆಲ್‌ಟ್ರೊಜ್ ಕಾರಿನಲ್ಲೂ ಈ ಹಿಂದಿನ ನೆಕ್ಸಾನ್ ಮತ್ತು ಹ್ಯಾರಿಯರ್ ಮಾದರಿಯಲ್ಲೇ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರಯಾಣಿಕರ ಸುರಕ್ಷತೆಗಾಗಿ 5 ಸ್ಟಾರ್ ರೇಟಿಂಗ್ ಒದಗಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಹೊಸ ಕಾರಿನಲ್ಲಿ ಡ್ಯಯಲ್ ಏರ್‌ಬ್ಯಾಗ್, ಎಬಿಎಸ್ ಮತ್ತು ಇಬಿಡಿ, ರಿಯರ್ ಪಾರ್ಕಿಂಗ್ ಸೆನ್ಸಾರ್, ಐಸೊಫಿಕ್ಸ್ ಚೈಲ್ಡ್ ಮೌಂಟ್ ಸೀಟ್, ಫ್ರಂಟ್ ಫಾಗ್ ಲೈಟ್ ಜೊತೆ ಕಾರ್ನಿಂಗ್ ಫಂಕ್ಷನ್ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಆಲ್‌ಟ್ರೊಜ್ ಬೆಲೆ(ಅಂದಾಜು)

ಸದ್ಯ ಅನಾವರಣಗೊಂಡಿರುವ ಆಲ್‌ಟ್ರೊಜ್ ಕಾರು 2020ರ ಜನವರಿ ಕೊನೆಯ ವಾರದಲ್ಲಿ ಅಧಿಕೃತವಾಗಿ ಖರೀದಿ ಲಭ್ಯವಾಗಲಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಕಾರಿನ ಬೆಲೆಯು ರೂ.8 ಲಕ್ಷ ಬೆಲೆ ಅಂದಾಜಿಸಲಾಗಿದೆ.

ಡ್ಯುಯಲ್ ಕ್ಲಚ್ ಟ್ರಾನ್ಸ್‌ಮಿಷನ್‌ನೊಂದಿಗೆ ಟರ್ಬೋ ಪೆಟ್ರೋಲ್ ಎಂಜಿನ್ ಪಡೆಯಲಿದೆ ಟಾಟಾ ಆಲ್‌ಟ್ರೊಜ್

ಈ ಮೂಲಕ ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಎನ್ನಿಸಲಿರುವ ಆಲ್‌ಟ್ರೊಜ್ ಕಾರು ಹ್ಯಾಚ್‌ಬ್ಯಾಕ್ ಪ್ರಿಯರ ಆಯ್ಕೆಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಐ20, ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.

Most Read Articles

Kannada
English summary
According to report, the Tata is planning to launch Altroz car with DCT Automatic gearbox option in the near future.
Story first published: Wednesday, December 4, 2019, 17:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X