ಆಲ್‌ಟ್ರೊಜ್ ಬಿಡುಗಡೆಗೂ ಮುನ್ನ ಮತ್ತೊಂದು ಹೊಸ ಟೀಸರ್ ಅನಾವರಣ
ಬಹುನೀರಿಕ್ಷಿತ ಟಾಟಾ ಆಲ್‌ಟ್ರೊಜ್ ಕಾರು ಮಾದರಿಯು ಇದೇ ವರ್ಷ ಡಿಸೆಂಬರ್ ಆರಂಭದಲ್ಲಿ ಅನಾವರಣಗೊಳ್ಳಲಿದ್ದು, ಅನಾವರಣಕ್ಕೂ ಮುನ್ನ ಹೊಸ ಕಾರಿನ ವಿನ್ಯಾಸಗಳ ಕುರಿತಾಗಿ ಮತ್ತೊಂದು ವಿಭಿನ್ನವಾದ ಟೀಸರ್ ಒಂದನ್ನು ಬಿಡುಗಡೆ ಮಾಡಲಾಗಿದೆ.

ಹ್ಯಾರಿಯರ್ ಎಸ್‌ಯುವಿ ಬಿಡುಗಡೆಯ ಯಶಸ್ವಿ ನಂತರ ಭವಿಷ್ಯದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆಯಿಡುತ್ತಿರುವ ಟಾಟಾ ಸಂಸ್ಥೆಯು ಭಾರತೀಯ ಆಟೋ ಉದ್ಯಮದಲ್ಲಿ ಭಾರೀ ಬದಲಾವಣೆಗೆ ಕಾರಣವಾಗಿದ್ದು, ಹಲವು ವಿಶೇಷತೆಗಳನ್ನು ಹೊತ್ತುಬಂದಿರುವ ಆಲ್‌ಟ್ರೊಜ್ ಕಾರು ಹ್ಯಾಚ್‌ಬ್ಯಾಕ್ ಪ್ರಿಯರ ನೆಚ್ಚಿನ ಆಯ್ಕೆಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದು.

ಮಾಹಿತಿಗಳ ಪ್ರಕಾರ, ಡಿಸೆಂಬರ್ ಆರಂಭದಲ್ಲಿ ಆಲ್‌ಟ್ರೊಜ್ ಕಾರಿನ ಉತ್ಪಾದನಾ ಆವೃತ್ತಿಯು ಅನಾವರಣಗೊಳ್ಳಲಿದ್ದು, ತದನಂತರ 2020ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋ ಪ್ರದರ್ಶನಕ್ಕೂ ಮುನ್ನ ಹೊಸ ಕಾರು ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ.
ಈ ಮೊದಲು ಬಿಎಸ್-4 ಎಂಜಿನ್ ಅನ್ನೇ ಜೋಡಣೆ ಮಾಡಿ ರೋಡ್ ಟೆಸ್ಟಿಂಗ್ ನಡೆಸಿದ್ದ ಟಾಟಾ ಸಂಸ್ಥೆಯು ಕೊನೆಯ ಹಂತದಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದ್ದು, 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಲಿರುವ ಬಿಎಸ್-6 ನಿಯಮ ಅನುಸಾರವೇ ಹೊಸ ಕಾರನ್ನು ಅನಾವರಣಗೊಳಿಸಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ.

ಆಲ್ಬಾಟ್ರೊಸ್ ಎನ್ನುವ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್‌ಟ್ರೊಜ್ ಕಾರನ್ನು ನಿರ್ಮಾಣ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಮಾರುಕಟ್ಟೆಗೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಿದೆ. ಆಲ್‌ಟ್ರೊಜ್ ಕಾರು ಬಿಎಸ್-6 ಮಾದರಿಯ ಪೆಟ್ರೋಲ್ ಆವೃತ್ತಿಯಲ್ಲಿ ಎರಡು ಎಂಜಿನ್ ಆಯ್ಕೆಗಳು ಇರಲಿದ್ದು, ಡೀಸೆಲ್ ಆವೃತ್ತಿಯಲ್ಲಿ ಒಂದು ಆಯ್ಕೆ ಮಾತ್ರ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಟಾಟಾ ಸಂಸ್ಥೆಯು ಹೊಸ ಕಾರಿನ ಎಂಜಿನ್ ಪರ್ಫಾಮೆನ್ಸ್‌ನಲ್ಲಿ ಕೆಲವು ಗಮನಸೆಳೆಯಬಹುದಾದ ಬದಲಾವಣೆಗಳನ್ನು ಮಾಡಿದ್ದು, ಪ್ರಮುಖ ವಿಚಾರ ಅಂದ್ರೆ ಹೊಸ ಆಲ್‌ಟ್ರೊಜ್ ಕಾರನ್ನು ಸಹ ಇಂಪ್ಯಾಕ್ಟ್ ಡಿಸೈನ್ 2.0 ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಅಭಿವೃದ್ಧಿಗೊಳಿಸಲಾಗಿದೆ.

ಇದು ಕಾರಿನ ತೂಕವನ್ನು ಕಡಿತಗೊಳಿಸುವಲ್ಲಿ ಸಾಕಷ್ಟು ನೆರವಾಗಿದ್ದು, ಇದು ನೇರವಾಗಿ ಕಾರಿನ ಎಂಜಿನ್ ಪರ್ಫಾಮೆನ್ಸ್ ಸುಧಾರಣೆಯಾಗುವುದಲ್ಲದೇ ಮೈಲೇಜ್ ಪ್ರಮಾಣ ಕೂಡಾ ಹೆಚ್ಚಳವಾಗಿರುವುದು ಸ್ಪಾಟ್ ಟೆಸ್ಟಿಂಗ್ ವೇಳೆ ಖಚಿತವಾಗಿದೆ.
MOST READ: ನಮ್ಮ ಬೆಂಗಳೂರಿನಲ್ಲಿ K-1000 ರ‍್ಯಾಲಿ- ಗೌರವ್ ಗಿಲ್ ಔಟ್, ಚೇತನ್ ಶಿವರಾಮ್ ಶೈನ್..!

ಆದ್ರೆ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ಅಧಿಕೃತ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು 2020ರ ಫೆಬ್ರುವರಿಯಲ್ಲಿ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 6.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.8.50 ಲಕ್ಷಕ್ಕೆ ನಿಗದಿಯಾಗಬಹುದು ಎಂದು ಅಂದಾಜಿಸಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ 800ಕಿ.ಮೀ ಮೈಲೇಜ್ ನೀಡಬಲ್ಲ ಎಲೆಕ್ಟ್ರಿಕ್ ಪಿಕ್ಅಪ್ ಟ್ರಕ್ ಅನಾವರಣ

ಇದರೊಂದಿಗೆ ಟಾಟಾ ಸಂಸ್ಥೆಯು ಹೊಸ ಆಲ್‌ಟ್ರೋಜ್ ಕಾರುನ್ನು ಸಹ ಈ ಹಿಂದಿನ ನೆಕ್ಸಾನ್ ಮತ್ತು ಹ್ಯಾರಿಯರ್ ಮಾದರಿಯಲ್ಲೇ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರಯಾಣಿಕರ ಸುರಕ್ಷತೆಯಲ್ಲಿ 5 ಸ್ಟಾರ್ ರೇಟಿಂಗ್ ಒದಗಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ. ಇದರಿಂದ ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಎನ್ನಿಸಲಿರುವ ಹೊಸ ಆಲ್‌ಟ್ರೋಜ್ ಕಾರು ಹ್ಯುಂಡೈ ಐ20 ಮತ್ತು ಮಾರುತಿ ಬಲೆನೊ ಕಾರುಗಳಿಗೆ ಟಕ್ಕರ್ ನೀಡಲಿದೆ.


Click it and Unblock the Notifications








