ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ತಿಂಗಳು 5ರಂದು ಜಿನೆವಾ ಆಟೋ ಮೇಳದಲ್ಲಿ ತನ್ನ ಭವಿಷ್ಯದ 7 ಸೀಟರ್ ಎಸ್‌ಯುವಿ ಮಾದರಿಯಾದ ಹೆಚ್7ಎಕ್ಸ್ ಬಝರ್ಡ್ ಕಾರನ್ನು ಅನಾವರಣ ಮಾಡಿದಲ್ಲದೇ ಮುಂಬರುವ ಅಕ್ಟೋಬರ್ ಹೊತ್ತಿಗೆ ಭಾರತ ಸೇರಿದಂತೆ ವಿಶ್ವದ ಪ್ರಮುಖ ಬಿಡುಗಡೆಯ ಸುಳಿವು ನೀಡಿತ್ತು. ಆದ್ರೆ ಇದೀಗ ಟಾಟಾ ಸಂಸ್ಥೆಯು ಹೊಸ ಕಾರಿನ ಹೆಸರಿನಲ್ಲಿ ಬದಲಾವಣೆಗೆ ಮುಂದಾಗಿದೆ.

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಹೌದು, ಟಾಟಾ ಮೋಟಾರ್ಸ್ ಸಂಸ್ಥೆಯು ಹೊಸ ಕಾರಿಗೆ ಬಝರ್ಡ್ ಬದಲಾಗಿ ಕ್ಯಾಸಿನಿ ಎಂದು ಮರುನಾಮಕರಣಗೊಳಿಸುವ ಸಾಧ್ಯತೆಗಳಿದ್ದು, ಯುರೋಪ್ ಮಾರುಕಟ್ಟೆಯಲ್ಲಿ ಮಾತ್ರವೇ ಬಝರ್ಡ್ ಹೆಸರು ಮುಂದುವರಿಸುವುದಾಗಿ ಟಾಟಾ ಹೇಳಿಕೊಂಡಿದೆಯೆಂತೆ. ಆದರೂ ಈ ಬಗ್ಗೆ ಇನ್ನು ಯಾವುದೇ ರೀತಿಯ ಅಧಿಕೃತ ಮಾಹಿತಿ ಸಿಕ್ಕಿಲ್ಲವಾದರೂ ಮುಂದಿನ ದಿನಗಳಲ್ಲಿ ಈ ಬಗ್ಗೆ ಟಾಟಾ ಸ್ಪಷ್ಟನೆ ನೀಡಿದ ನಂತರವೇ ಈ ಗೊಂದಲಕ್ಕೆ ತೆರೆ ಬೀಳಲಿದೆ.

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಇನ್ನು ಟಾಟಾ ಈ ಹಿಂದೆ ಜನವರಿ ಆರಂಭದಲ್ಲಿ ಬಿಡುಗಡೆ ಮಾಡಿದ್ದ 5 ಸೀಟರ್ ಹ್ಯಾರಿಯರ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಹೋಲಿಕೆಯಲ್ಲೇ ಬಝರ್ಡ್ ಕಾರನ್ನು ವಿನೂತನ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿಗೊಳಿಸಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ದೇಶದ ವಿವಿಧಡೆ ಈಗಾಗಲೇ ಸ್ಪಾಟ್ ಟೆಸ್ಟಿಂಗ್ ನಡೆಸಿರುವ ಟಾಟಾ ಸಂಸ್ಥೆಯು ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಮತ್ತು ಮಹೀಂದ್ರಾ ಅಲ್ಟುರಾಸ್ ಜಿ4 ಕಾರುಗಳಿಗೆ ಪ್ರತಿಸ್ಪರ್ಧಿಯಾಗುವ ಸುಳಿವು ನೀಡಿದೆ.

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಅನಾವರಣಗೊಳಿಸಲಾಗಿರುವ ಬಝರ್ಡ್ ಕಾರು ಮಾದರಿಯು 6 ಪ್ಲಸ್ 1 ಆಸನ ಮಾದರಿಯ ಎಸ್‌ಯುವಿ ಕಾರು ಆವೃತ್ತಿಯಾಗಿದ್ದು, 5 ಸೀಟರ್ ಹ್ಯಾರಿಯರ್ ಮಾದರಿಯಲ್ಲೇ ಹೊಸ ಕಾರು ಕೂಡಾ ಒಳ ಮತ್ತು ಹೊರ ವಿನ್ಯಾಸಗಳನ್ನು ಪಡೆದುಕೊಂಡಿದೆ.

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಹೆಕ್ಸಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯವನ್ನು ಹೊಂದಿರುವ ಬಝರ್ಡ್ ಕಾರು, 2,741-ಎಂಎಂ ನಷ್ಟು ವೀಲ್ಹ್ ಬೆಸ್ ಸೌಲಭ್ಯದೊಂದಿಗೆ ಹ್ಯಾರಿಯರ್ ಕಾರಿಗಿಂತ 62-ಎಂಎಂ ಉದ್ದವಾಗಿದೆ ಎನ್ನಲಾಗಿದೆ. ಇದು ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಸಹಕಾರಿಯಾಗಲಿದ್ದು, ಎಸ್‌ಯುವಿ ಕಾರುಗಳ ಪ್ರಮುಖ ಆಕರ್ಷಣೆಯಾದ ಫುಟ್ ಬೋರ್ಡ್, ರೂಫ್ ರೈಲ್ಸ್ ಮತ್ತು 18-ಇಂಚಿನ ಅಲಾಯ್ ಚಕ್ರಗಳು ಗ್ರಾಹಕರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಮತ್ತೊಂದು ವಿಚಾರ ಅಂದ್ರೆ, ಹೊಸ ಕಾರು ಇಂಪ್ಯಾಕ್ಟ್ 2.0 ಡಿಸೈನ್ ಅಡಿ ನಿರ್ಮಾಣವಾಗಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಕಾರಿನ ವಿನ್ಯಾಸಗಳು

ಬಝರ್ಡ್ ಎಸ್‍ಯುವಿ ಕಾರು ಐಷಾರಾಮಿ ಒಳವಿನ್ಯಾಸದೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಪ್ರೀಮಿಯಂ ಆಡಿಯೊ ಸಿಸ್ಟಂ ಹಾಗೂ ಇನ್ನು ಹಲವಾರು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರಲಿದೆ. ಜೊತೆಗೆ ಹೊಸ ಕಾರು ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದ್ದು, ಇದೇ ತಂತ್ರವನ್ನು ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡಾ ಇದನ್ನು ನಾವು ಕಾಣಬಹುದಾಗಿದೆ.

MOST READ: ಅಪಘಾತದಲ್ಲಿ ಹ್ಯಾರಿಯರ್ ಕಾರು ಪುಡಿಪುಡಿಯಾದ್ರು ಪ್ರಯಾಣಿಕರಿಗೆ ಏನೂ ಆಗಲಿಲ್ಲ..!

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಎಂಜಿನ್ ಸಾಮರ್ಥ್ಯ

ಬಝರ್ಡ್ ಕಾರುಗಳಲ್ಲಿ 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಸಹಾಯದಿಂದ 170-ಬಿಹೆಚ್‍ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಹ್ಯುಂಡೈನಿಂದ ಎರವಲು ಪಡೆಯಲಾಗಿರುವ ಸಿಕ್ಸ್ ಸ್ಪೀಡ್ ಮ್ಯಾನುವಲ್ ಮತ್ತು ಸಿಕ್ಸ್ ಸ್ಪಿಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಸೌಲಭ್ಯ ಪಡೆದುಕೊಳ್ಳಲಿದೆ.

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)

ಟಾಟಾ ಸಂಸ್ಥೆಯು ಸದ್ಯ ನಾಲ್ಕು ವಿವಿಧ ಮಾದರಿಯ ಕಾರುಗಳ ಬಿಡುಗಡೆಗಾಗಿ ಯೋಜನೆ ರೂಪಿಸಿದ್ದು, ಇದರಲ್ಲಿ ಮೊದಲಿಗೆ ಆಲ್‌ಟ್ರೊಜ್ ಕಾರು ಬಿಡುಗಡೆಯಾದ ನಂತರವಷ್ಟೇ ಬಝರ್ಡ್ ಕಾರು ಮಾರುಕಟ್ಟೆಗೆ ಪ್ರವೇಶ ಪಡೆಯಲಿದೆ.

MOST READ: ಭದ್ರತೆಗಾಗಿ ಮತ್ತೊಂದು ದುಬಾರಿ ಕಾರು ಖರೀದಿಸಿದ ಉದ್ಯಮಿ ಮುಕೇಶ್ ಅಂಬಾನಿ..!

ಭಾರತದಲ್ಲಿ 'ಕ್ಯಾಸಿನಿ' ಹೆಸರಿನಲ್ಲಿ ಬಿಡುಗಡೆಯಾಗಲಿದೆ ಟಾಟಾ 7 ಸೀಟರ್ ಎಸ್‌ಯುವಿ

ಮೂಲಗಳ ಪ್ರಕಾರ, ಬಝರ್ಡ್ ಕಾರು 2019ರ ಅಂತ್ಯದಲ್ಲಿ ಇಲ್ಲವೇ 2020ರ ಆರಂಭದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು, ಕಾರಿನ ಬೆಲೆಯು ಮಾರುಕಟ್ಟೆಯಲ್ಲಿರುವ ಪ್ರತಿಸ್ಪರ್ಧಿ ಎಸ್‌ಯುವಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ದೊರೆಯಲಿದೆ. ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಆವೃತ್ತಿಯು ರೂ.21 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.23 ಲಕ್ಷ ಬೆಲೆ ಹೊಂದಿರಬಹುದು ಎಂದು ನೀರಿಕ್ಷಿಸಲಾಗಿದೆ.

Source:financialexpress

Kannada
English summary
Tata H7X to be called Cassini, not Buzzard in India. Read in Kannada.
Story first published: Wednesday, March 20, 2019, 10:53 [IST]
X

ತಕ್ಷಣದ ಆಟೊ ಸುದ್ದಿಗಳನ್ನು ಡ್ರೈವ್ಸ್ಪಾರ್ಕ್ನಲ್ಲಿ ಪಡೆದುಕೊಳ್ಳಿ- Kannada DriveSpark

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more