ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

ಟಾಟಾ ಮೋಟಾರ್ಸ್ ಹೊಚ್ಚ ಹೊಸ 7 ಸೀಟರ್ ಎಸ್‌ಯುವಿ ಕಾರು ಗ್ರಾವಿಟಾಸ್ ಹೆಸರಿನೊಂದಿಗೆ ಮಾರುಕಟ್ಟೆ ಪ್ರವೇಶಿಸಲು ಭರ್ಜರಿ ಸಿದ್ದತೆ ನಡೆಸಿದ್ದು, ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ಸಿದ್ದತೆ ನಡೆಸಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

ಜಿನೆವಾ ಆಟೋ ಮೇಳದಲ್ಲಿ ಬಝರ್ಡ್ ಹೆಸರಿನೊಂದಿಗೆ ಪ್ರದರ್ಶನಗೊಂಡಿದ್ದ ಟಾಟಾ ಬಹುನೀರಿಕ್ಷಿತ 7 ಸೀಟರ್ ಎಸ್‌ಯುವಿ ಮಾದರಿಯು ಭಾರತದಲ್ಲಿ ಗ್ರಾವಿಟಾಸ್ ಹೆಸರಿನೊಂದಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, 2020ರ ಫೆಬ್ರುವರಿ 7ರಿಂದ ನಡೆಯಲಿರುವ ದೆಹಲಿ ಆಟೋ ಮೇಳದಲ್ಲಿ ಪ್ರದರ್ಶನಗೊಂಡ ನಂತರವಷ್ಟೇ ಮಾರುಕಟ್ಟೆಗೆ ಹೊಸ ಕಾರು ಅಧಿಕೃತವಾಗಿ ಖರೀದಿಗೆ ಲಭ್ಯವಾಗಲಿದೆ ಎನ್ನಲಾಗಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

ಹ್ಯಾರಿಯರ್ ವಿನ್ಯಾಸವನ್ನು ಪಡೆದಿರುವ ಗ್ರಾವಿಟಾಸ್ ಕಾರು ಗ್ರಾಹಕರ ಬೇಡಿಕೆಯೆಂತೆ ವಿಶೇಷ ತಾಂತ್ರಿಕ ಸೌಲಭ್ಯವನ್ನು ಪಡೆದುಕೊಂಡಿದ್ದು, ಎಸ್‌ಯುವಿ ಆವೃತ್ತಿಗಳಲ್ಲಿ ಮುಂಚೂಣಿಯಲ್ಲಿರುವ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಟೊಯೊಟಾ ಫಾರ್ಚೂನರ್‌ ಕಾರಿಗೂ ಗ್ರಾವಿಟಾಸ್ ಪ್ರಬಲ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್‌ನೊಂದಿಗೆ ಹ್ಯಾರಿಯರ್‌ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

ಟಾಟಾ ಹೊಸ ಎಸ್‍ಯುವಿ ಕಾರು ಇಂಪ್ಯಾಕ್ಟ್ 2.0 ಡಿಸೈನ್ ಅಡಿ ನಿರ್ಮಾಣವಾಗಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ. ಇನ್ನು ಗ್ರಾವಿಟಾಸ್ ಕಾರು ಹ್ಯಾರಿಯರ್‍‍ನಂತೆಯೇ ಎಕ್ಸ್ಇ, ಎಕ್ಸ್ಎಂ, ಎಕ್ಸ್ ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೆರಿಯೆಂಟ್‍‍ಗಳಲ್ಲಿ ಬಿಡುಗಡೆಯಾಗಲಿದ್ದು, 18-ಇಂಚಿನ ಅಲಾಯ್ ವ್ಹೀಲ್ಸ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ವಿಭಿನ್ನವಾದ ಬೂಟ್ ಲಿಡ್ ಮತ್ತು ಟೈಲ್ ಲ್ಯಾಂಪ್ಸ್ ಅನ್ನು ಹೊಂದಿರಲಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

ಸ್ಪಾಟ್ ಟೆಸ್ಟಿಂಗ್ ವೇಳೆ ಕಾಣಿಸಿಕೊಂಡ ಟಾಟಾ ಗ್ರಾವಿಟಾಸ್ ಕಾರು ಹ್ಯಾರಿಯರ್ ಕಾರಿಗಿಂತಲೂ ವಿಭಿನ್ನವಾದ ಸ್ಪೋರ್ಟಿ ಸ್ಪಾಯ್ಲರ್, ಎಲ್ಇಡಿ ಟೈಲ್‍ಲೈಟ್ಸ್ ಅನ್ನು ಪಡೆದುಕೊಂಡಿದ್ದು, ಬಿಎಸ್ 6 ಎಂಜಿನ್ ಪ್ರೇರಿತ ಹ್ಯಾರಿಯರ್ ಕಾರಿನೊಂದಿಗೆ ಸದ್ಯ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

ಎಂಜಿನ್ ಸಾಮರ್ಥ್ಯ

ಗ್ರಾವಿಟಾಸ್ ಕಾರು ಸದ್ಯಕ್ಕೆ ಬಿಎಸ್6 ಆಧಾರಿತ 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾತ್ರ ಬಿಡುಗಡೆಯಾಗಲಿದ್ದು, ತದನಂತರವಷ್ಟೇ ಹ್ಯಾರಿಯರ್ ಮತ್ತು ಗ್ರಾವಿಟಾಸ್ ಕಾರುಗಳ ಪೆಟ್ರೋಲ್ ಮಾದರಿಯು ಬಿಡುಗಡೆಯಾಗಲಿದೆ.

MOST READ: ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉತ್ಪಾದನೆಗಾಗಿ ರೂ.2,800 ಕೋಟಿ ಹೂಡಿಕೆ ಮಾಡಲಿದೆ ಬಿವೈಡಿ

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

2.0-ಲೀಟರ್ ಡೀಸೆಲ್ ಮಾದರಿಯು 170-ಬಿಹೆಚ್‍ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಹ್ಯುಂಡೈನಿಂದ ಎರವಲು ಪಡೆಯಲಾಗಿರುವ ಸಿಕ್ಸ್ ಸ್ಪೀಡ್ ಮ್ಯಾನುವಲ್ ಮತ್ತು ಸಿಕ್ಸ್ ಸ್ಪಿಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಸೌಲಭ್ಯ ಪಡೆದುಕೊಳ್ಳಲಿದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ರೋಡ್ ಟೆಸ್ಟಿಂಗ್‌ನಲ್ಲಿ ಕಂಡುಬಂದ ಟಾಟಾ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ

2020ರ ಫೆಬ್ರುವರಿ ಕೊನೆಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಲ್ಲಿರುವ ಗ್ರಾವಿಟಾಸ್ ಕಾರು ಪ್ರತಿಸ್ಪರ್ಧಿ ಎಸ್‌ಯುವಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ದೊರೆಯಲಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಆವೃತ್ತಿಯು ರೂ.18 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.22 ಲಕ್ಷ ಬೆಲೆ ಹೊಂದಿರಬಹುದು ಎಂದು ನೀರಿಕ್ಷಿಸಲಾಗಿದೆ.

Source: Rushlane

Article Published On: Tuesday, December 3, 2019, 14:46 [IST]
English summary
Tata Gravitas SUV Spotted Testing Ahead Of India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+