7 ಸೀಟರ್ ಸೌಲಭ್ಯದೊಂದಿಗೆ ರಸ್ತೆಗಿಳಿಯಲಿದೆ ಟಾಟಾ ಬಝರ್ಡ್ ಎಸ್‌ಯುವಿ..!
ಟಾಟಾ ಸಂಸ್ಥೆಯು ಜೀನೆವಾದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರಿಯ ಆಟೋ ಮೇಳದಲ್ಲಿ ತನ್ನ ಭವಿಷ್ಯದ ವಾಹನಗಳನ್ನು ಪ್ರದರ್ಶನ ಮಾಡಿದ್ದು, ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಸೇರಿದಂತೆ ಒಟ್ಟು ನಾಲ್ಕು ವಿನೂತನ ಮಾದರಿಯ ಕಾರುಗಳನ್ನು ಅನಾವರಣಗೊಳಿಸಿದೆ. ಇದರಲ್ಲಿ 7 ಸೀಟರ್ ಸೌಲಭ್ಯದೊಂದಿಗೆ ಬಿಡುಗಡೆಯಾಗಲಿರುವ ಬಝರ್ಡ್ ಕಾರು ಕೂಡಾ ಹಲವು ವಿಶೇಷತೆಗಳೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಡಲಿದೆ.

ಟಾಟಾ ಈ ಹಿಂದೆ ಜನವರಿ ಆರಂಭದಲ್ಲಿ ಬಿಡುಗಡೆ ಮಾಡಿದ್ದ 5 ಸೀಟರ್ ಹ್ಯಾರಿಯರ್ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಹೋಲಿಕೆಯನ್ನೇ ಹೊಂದಿರುವ ಬಝರ್ಡ್ ಕಾರು ಹಲವು ವಿನೂತನ ವೈಶಿಷ್ಟ್ಯತೆಗಳೊಂದಿಗೆ ಅಭಿವೃದ್ಧಿಗೊಂಡಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತು ದೇಶದ ವಿವಿಧಡೆ ಈಗಾಗಲೇ ಸ್ಪಾಟ್ ಟೆಸ್ಟಿಂಗ್ ನಡೆಸಿರುವ ಟಾಟಾ ಸಂಸ್ಥೆಯು, ಟೊಯೊಟಾ ಫಾರ್ಚೂನರ್, ಫೋರ್ಡ್ ಎಂಡೀವರ್ ಮತ್ತು ಮಹೀಂದ್ರಾ ಅಲ್ಟುರಾಸ್ ಜಿ4 ಕಾರುಗಳಿಗೆ ಪ್ರತಿಸ್ಪರ್ಧಿಯಾಗುವ ಸುಳಿವು ನೀಡಿದೆ.

ಬಝರ್ಡ್ ಕಾರು ಮಾದರಿಯು 6 ಪ್ಲಸ್ 1 ಆಸನ ಮಾದರಿಯ ಎಸ್‌ಯುವಿ ಕಾರು ಆವೃತ್ತಿಯಾಗಿದ್ದು, 5 ಸೀಟರ್ ಹ್ಯಾರಿಯರ್ ಮಾದರಿಯಲ್ಲೇ ಹೊಸ ಕಾರು ಕೂಡಾ ಒಳ ಮತ್ತು ಹೊರ ವಿನ್ಯಾಸಗಳನ್ನು ಪಡೆದುಕೊಂಡಿದೆ.

ಹೀಗಾಗಿ ಸದ್ಯ ಮಾರುಕಟ್ಟೆಯಲ್ಲಿರುವ ಹೆಕ್ಸಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ತಾಂತ್ರಿಕ ಸೌಲಭ್ಯವನ್ನು ಹೊಂದಿರುವ ಬಝರ್ಡ್ ಕಾರು, 2,741-ಎಂಎಂ ನಷ್ಟು ವೀಲ್ಹ್ ಬೆಸ್ ಸೌಲಭ್ಯದೊಂದಿಗೆ ಹ್ಯಾರಿಯರ್ ಕಾರಿಗಿಂತ 62-ಎಂಎಂ ಉದ್ದವಾಗಿದೆ ಎನ್ನಲಾಗಿದೆ.

ಇದು ಮೂರನೇ ಸಾಲಿನಲ್ಲಿ ಕೂರುವ ಪ್ರಯಾಣಿಕರಿಗೆ ಸಹಕಾರಿಯಾಗಲಿದ್ದು, ಎಸ್‌ಯುವಿ ಕಾರುಗಳ ಪ್ರಮುಖ ಆಕರ್ಷಣೆಯಾದ ಫುಟ್ ಬೋರ್ಡ್, ರೂಫ್ ರೈಲ್ಸ್ ಮತ್ತು 18-ಇಂಚಿನ ಅಲಾಯ್ ಚಕ್ರಗಳು ಗ್ರಾಹಕರನ್ನು ಸೆಳೆಯುವುದರಲ್ಲಿ ಯಾವುದೇ ಅನುಮಾನವಿಲ್ಲ.

ಮತ್ತೊಂದು ವಿಚಾರ ಅಂದ್ರೆ, ಹೊಸ ಕಾರು ಇಂಪ್ಯಾಕ್ಟ್ 2.0 ಡಿಸೈನ್ ಅಡಿ ನಿರ್ಮಾಣವಾಗಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍ಗಳಿಂದ ಸಜ್ಜುಗೊಂಡಿದೆ.

ಕಾರಿನ ವಿನ್ಯಾಸಗಳು
ಬಝರ್ಡ್ ಎಸ್‍ಯುವಿ ಕಾರು ಐಷಾರಾಮಿ ಒಳವಿನ್ಯಾಸದೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಪ್ರೀಮಿಯಂ ಆಡಿಯೊ ಸಿಸ್ಟಂ ಹಾಗೂ ಇನ್ನು ಹಲವಾರು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರಲಿದೆ.

ಜೊತೆಗೆ ಹೊಸ ಕಾರು ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದ್ದು, ಇದೇ ತಂತ್ರವನ್ನು ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡಾ ಇದನ್ನು ನಾವು ಕಾಣಬಹುದಾಗಿದೆ.

ಎಂಜಿನ್ ಸಾಮರ್ಥ್ಯ
ಬಝರ್ಡ್ ಕಾರುಗಳಲ್ಲಿ 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಸಹಾಯದಿಂದ 170-ಬಿಹೆಚ್‍ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಹ್ಯುಂಡೈನಿಂದ ಎರವಲು ಪಡೆಯಲಾಗಿರುವ ಸಿಕ್ಸ್ ಸ್ಪೀಡ್ ಮ್ಯಾನುವಲ್ ಮತ್ತು ಸಿಕ್ಸ್ ಸ್ಪಿಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಸೌಲಭ್ಯ ಪಡೆದುಕೊಳ್ಳಲಿದೆ.
MOST READ: ಕೇವಲ 2 ಸೆಕೆಂಡುಗಳಲ್ಲಿ 100ಕಿ.ಮಿ ವೇಗದಲ್ಲಿ ಚಲಿಸುತ್ತೆ ಮಹೀಂದ್ರಾ ಒಡೆತನದ ಈ ಹೈಪರ್ ಕಾರು

ಕಾರಿನ ಬೆಲೆ ಮತ್ತು ಬಿಡುಗಡೆಯ ಅವಧಿ(ಅಂದಾಜು)
ಟಾಟಾ ಸಂಸ್ಥೆಯು ಸದ್ಯ ನಾಲ್ಕು ವಿವಿಧ ಮಾದರಿಯ ಕಾರುಗಳ ಬಿಡುಗಡೆಗಾಗಿ ಯೋಜನೆ ರೂಪಿಸಿದ್ದು, ಇದರಲ್ಲಿ ಮೊದಲಿಗೆ ಆಲ್‌ಟ್ರೊಜ್ ಕಾರು ಬಿಡುಗಡೆಯಾದ ನಂತರವಷ್ಟೇ ಬಝರ್ಡ್ ಕಾರು ಮಾರುಕಟ್ಟೆಗೆ ಪ್ರವೇಶ ಪಡೆಯಲಿದೆ.

ಮೂಲಗಳ ಪ್ರಕಾರ, ಬಝರ್ಡ್ ಕಾರು 2019ರ ಅಂತ್ಯದಲ್ಲಿ ಇಲ್ಲವೇ 2020ರ ಆರಂಭದಲ್ಲಿ ಬಿಡುಗಡೆಯಾಗುವ ನೀರಿಕ್ಷೆಗಳಿದ್ದು,ಕಾರಿನ ಬೆಲೆಯು ಮಾರುಕಟ್ಟೆಯಲ್ಲಿರುವ ಪ್ರತಿಸ್ಪರ್ಧಿ ಎಸ್‌ಯುವಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ದೊರೆಯಲಿದೆ. ಎಕ್ಸ್‌ಶೋರೂಂ ಪ್ರಕಾರ ಆರಂಭಿಕ ಆವೃತ್ತಿಯು ರೂ.21 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.25 ಲಕ್ಷ ಬೆಲೆ ಹೊಂದಿರಬಹುದು ಎಂದು ನೀರಿಕ್ಷಿಸಲಾಗಿದೆ.
MOST READ: ಮಂಗಳೂರಿನಲ್ಲಿ ತಪ್ಪಿದ ಭೀಕರ ಅಪಘಾತ- ಎಬಿಎಸ್ ಇಲ್ಲವಾಗಿದ್ರೆ ಕಥೆ ಅಷ್ಟೇ..!

ಒಟ್ಟಿನಲ್ಲಿ ಜೆಎಲ್ಆರ್(ಜಾಗ್ವಾರ್,ಲ್ಯಾಂಡ್ ರೋವರ್, ರೇಂಜ್ ರೋವರ್) ಸಂಸ್ಥೆಯೊಂದಿಗೆ ಜೊತೆಗೂಡಿ ಭಾರತೀಯ ಆಟೋ ಉದ್ಯಮದಲ್ಲಿ ಬಹುದೊಡ್ಡ ಬದಲಾವಣೆ ತರುತ್ತಿರುವ ಟಾಟಾ ಸಂಸ್ಥೆಯು ಅಲ್‌ಟ್ರೊಜ್, ಆಲ್‌ಟ್ರೊಜ್ ಎಲೆಕ್ಟ್ರಿಕ್, ಹೆಚ್‌ಎಕ್ಸ್2 ಮೈಕ್ರೋ ಎಸ್‌ಯುವಿ ಮತ್ತು ಬಝರ್ಡ್ ಮೂಲಕ ಹೊಸ ಬದಲಾವಣೆಗೆ ಕಾರಣವಾಗಲಿದೆ.


Click it and Unblock the Notifications