ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ದೇಶದ ಜನಪ್ರಿಯ ಕಾರು ಉತ್ಪಾದನಾ ಸಂಸ್ಥೆ ಟಾಟಾ ಇದೇ ತಿಂಗಳು 23ರಂದು ಹೊಸ ಮಾದರಿಯ 5 ಸೀಟರ್ ಹ್ಯಾರಿಯರ್ ಕಂಪ್ಯಾಕ್ಟ್ ಎಸ್‌ಯುವಿ ಕಾರನ್ನು ಪರಿಚಯಿಸುತ್ತಿದ್ದು, ಈ ಮಧ್ಯೆ ಮತ್ತೊಂದು ವಿನೂತನ ಮಾದರಿಯ 7 ಸೀಟರ್ ಹ್ಯಾರಿಯರ್ ಕಾರನ್ನು ಸಹ ಬಿಡುಗಡೆ ಮಾಡುವ ಇರಾದೆಯಲ್ಲಿದೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಸದ್ಯ 7 ಸೀಟರ್ ಹ್ಯಾರಿಯರ್ ಪರಿಚಯಿಸಲು ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಹೆಚ್7ಎಕ್ಸ್ ಕೋಡ್ ಆಧಾರದಲ್ಲಿ ಹೊಸ ಕಾರನ್ನು ಅಭಿವೃದ್ಧಿಗೊಳಿಸುತ್ತಿದ್ದು, ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಾಗಿ ನಮ್ಮ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ರಸ್ತೆಗಳಲ್ಲಿ ಈಗಾಗಲೇ ಹಲವು ಬಾರಿ ಸ್ಪಾಟ್ ಟೆಸ್ಟಿಂಗ್ ನಡೆಸಿ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಈ ಹಿಂದೆ ಫೆಬ್ರುವರಿಯಲ್ಲಿ ನಡೆದ 2018ರ ಆಟೋ ಎಕ್ಸ್‌ಪೋದಲ್ಲಿ 5 ಸೀಟರ್ ಸಾಮರ್ಥ್ಯದ ಹ್ಯಾರಿಯರ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಪ್ರದರ್ಶನ ಮಾಡಿದ್ದ ಟಾಟಾ ಸಂಸ್ಥೆಯು, ಇದೀಗ ಅದೇ ಮಾದರಿಯಲ್ಲಿ ಹೆಚ್7ಎಕ್ಸ್ ಎನ್ನುವ 7 ಸೀಟರ್ ಮಾದರಿಯನ್ನು ಸಹ ಬಿಡುಗಡೆಗೊಳಿಸಲು ಯೋಜನೆ ರೂಪಿಸುತ್ತಿದೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

7 ಸೀಟರ್ ಹ್ಯಾರಿಯರ್ ಬಿಡುಗಡೆಯ ಕುರಿತಾಗಿ ಆಟೋಕಾರ್ ಇಂಡಿಯಾ ಸುದ್ದಿಸಂಸ್ಥೆಯ ಜೊತೆ ಮಾತನಾಡಿರುವ ಟಾಟಾ ಮೋಟಾರ್ಸ್ ನಿರ್ದೇಶಕ ಗುಂಟೆರ್ ಬುಟ್ಸ್ಚೆಕ್ ಅವರು, 2019ರ ಅವಧಿಯಲ್ಲಿ ಹ್ಯಾರಿಯರ್ ಸೇರಿದಂತೆ ಒಟ್ಟು 4 ಹೊಸ ಕಾರು ಆವೃತ್ತಿಗಳನ್ನು ಹಂತಹಂತವಾಗಿ ಪರಿಚಯಿಸುತ್ತಿರುವುದಾಗಿ ಹೇಳಿಕೊಂಡಿದ್ದಾರೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಇನ್ನು ಹೆಚ್7ಎಕ್ಸ್ ಮಾದರಿಯು 6 ಪ್ಲಸ್ 1 ಆಸನ ಮಾದರಿಯ ಎಸ್‌ಯುವಿ ಕಾರು ಆವೃತ್ತಿಯಾಗಿದ್ದು, 2018ರ ಆಟೋ ಎಕ್ಸ್‌ಪೋ ಪ್ರದರ್ಶನವಾದ 5 ಸೀಟರ್ ಹ್ಯಾರಿಯರ್ ಮಾದರಿಯಲ್ಲೇ ಒಳ ಮತ್ತು ಹೊರ ವಿನ್ಯಾಸಗಳನ್ನು ಪಡೆದುಕೊಂಡಿದೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಹೊಸ ಕಾರು ಇಂಪ್ಯಾಕ್ಟ್ 2.0 ಡಿಸೈನ್ ಅಡಿ ನಿರ್ಮಾಣವಾಗಿದ್ದು, ಇನ್ನು ಕಾರಿನ ಉತ್ಪಾದನಾ ಆವೃತ್ತಿಯು ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಕಾರಿನ ವಿನ್ಯಾಸಗಳು

ಹೆಚ್‍7ಎಕ್ಸ್ ಎಸ್‍ಯುವಿ ಕಾರುಗಳು ಐಷಾರಾಮಿ ಒಳವಿನ್ಯಾಸದೊಂದಿಗೆ ವಿಶಾಲವಾದ ಕ್ಯಾಬಿನ್ ಸ್ಪೆಸ್ ಹೊಂದಿದ್ದು, ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲರ್, ಪ್ರೀಮಿಯಂ ಆಡಿಯೊ ಸಿಸ್ಟಂ ಹಾಗೂ ಇನ್ನು ಹಲವಾರು ವೈಶಿಷ್ಟ್ಯತೆಗಳನ್ನು ಪಡೆದುಕೊಂಡಿರಲಿದೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಟಾಟಾ ಹೆಚ್7ಎಕ್ಸ್ ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದ್ದು, ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡ ಈ ಪ್ಲಾಟ್‍‍ಫಾರ್ಮ್ ಅನ್ನು ಕಾಣಬಹುದಾಗಿದೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಎಂಜಿನ್ ಸಾಮರ್ಥ್ಯ

ಟಾಟಾ ಹೆಚ್7ಎಕ್ಸ್ ಕಾರುಗಳು 2.0-ಲೀಟರ್ ಟರ್ಬೋ ಚಾರ್ಜ್ಡ್ ಡೀಸೆಲ್ ಎಂಜಿನ್ ಸಹಾಯದಿಂದ 190-ಬಿಹೆಚ್‍ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಜೆಡ್ಎಫ್ 9 ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ನೊಂದಿಗೆ ಜೋಡಿಸಿರಬಹುದು ಎನ್ನಲಾಗಿದೆ.

MOST READ: ಭಾರತದಲ್ಲಿ ನ್ಯಾನೋ ಬರುವುದಕ್ಕೂ ಮುನ್ನ ಬಂದು ಹೋದ 'ಮೀರಾ' ಕಾರಿನ ಕಥೆ ಗೊತ್ತಾ?

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಇದಲ್ಲದೆ ಟಾಟಾ ಹೆಚ್7ಎಕ್ಸ್ ಕಾರುಗಳು ಐಷಾರಾಮಿ ಕಾರುಗಳ ಮಾದರಿಯಲ್ಲೇ ಆಲ್ ವೀಲ್ ಡ್ರೈ ಸಿಸ್ಟಂ ಮತ್ತು ವಿವಿಧ ಡ್ರೈವಿಂಗ್ ಮೋಡ್‍‍ಗಳನ್ನು ಪಡೆದಿರಲಿದ್ದು, ಆಫ್ ರೋಡಿಂಗ್‌ನಲ್ಲೂ ಸರಾಗ ಚಾಲನೆಗಾಗಿ ಆಫ್ ರೋಡ್ ಡ್ರೈವಿಂಗ್ ಮೋಡ್ ಅನ್ನು ಸಹ ಪಡೆದಿರಲಿದೆ.

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಹೀಗಾಗಿ ಪ್ರಸ್ತುತ ಈ ಕಾರನ್ನು ಭಾರತೀಯ ರಸ್ತೆಗಳಲ್ಲಿ ಪರಿಶೀಲಿಸಲಾಗುತ್ತಿದ್ದು, ಇದೇ ಹಣಕಾಸು ವರ್ಷದ ಅವಧಿಯೊಳಗೆ ಬಿಡುಗಡೆಗೊಳ್ಳಲಿರುವ ಹೊಸ ಕಾರಿನ ಬೆಲೆಯ ಕುರಿತು ನಿಖರ ಮಾಹಿತಿ ಇಲ್ಲವಾದರೂ ಎಕ್ಸ್‌ಶೋರೂಂ ಪ್ರಕಾರ ರೂ. 19 ಲಕ್ಷದಿಂದ ರೂ. 24 ಲಕ್ಷದ ವರೆಗೆ ಇರಬಹುದೆಂದು ಅಂದಾಜಿಸಲಾಗಿದೆ.

MOST READ: ಒಂದು ಬಾರಿ ಚಾರ್ಜ್‍ಗೆ 312 ಕಿ.ಮೀ ಮೈಲೇಜ್ ನೀಡುವ ಈ ಕಾರಿನ ಬೆಲೆ ಎಷ್ಟು ಗೊತ್ತಾ.?

ವರ್ಷದ ಕೊನೆಯಲ್ಲಿ ಬಿಡುಗಡೆಯಾಗಲಿದೆಯೆಂತೆ 7 ಸೀಟರ್ ಟಾಟಾ ಹ್ಯಾರಿಯರ್..!

ಒಟ್ಟಿನಲ್ಲಿ ಟಾಟಾ ಸಂಸ್ಥೆಯು ಹೆಚ್7ಎಕ್ಸ್ ಎಸ್‍ಯುವಿ ಮೂಲಕ ಗ್ರಾಹಕರಲ್ಲಿ ಹೆಚ್ಚಿನ ನಿರೀಕ್ಷೆಯನ್ನು ಹುಟ್ಟುಹಾಕುತ್ತಿದ್ದು, ಬಿಡುಗಡೆಗೊಂಡ ನಂತರ ಈ ಕಾರು ಫಾರ್ಚೂನರ್, ಎಂಡೀವರ್ ಮತ್ತು ಹೋಂಡಾ ಸಿಆರ್‌ವಿ ಕಾರುಗಳಿಗೆ ಪೈಪೋಟಿಯನ್ನು ನೀಡಲಿದೆ ಎನ್ನಲಾಗಿದೆ.

Article Published On: Wednesday, January 9, 2019, 14:25 [IST]
English summary
Tata Harrier 7-Seater (H7X) Launch Confirmed For 2019. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+