ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಡೀಸೆಲ್ ಕಾರುಗಳಲ್ಲಿ ಆಟೋಮ್ಯಾಟಿಕ್ ಆವೃತ್ತಿಗೆ ಉತ್ತಮ ಬೇಡಿಕೆ ಕಂಡುಬರುತ್ತಿದ್ದು, ಟಾಟಾ ಸಂಸ್ಥೆಯು ತನ್ನ ಜನಪ್ರಿಯ ಹ್ಯಾರಿಯರ್ ಮಾದರಿಯಲ್ಲೂ ಆಟೋಮ್ಯಾಟಿಕ್ ವರ್ಷನ್ ಬಿಡುಗಡೆ ಮಾಡುತ್ತಿದೆ. ಈ ಸಂಬಂಧ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಮುಂಬರುವ ಕೆಲವೇ ದಿನಗಳಲ್ಲಿ ಬಿಡುಗಡೆಯಾಗುವ ಸುಳಿವು ನೀಡಿದೆ.

ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಟಾಟಾ ಸಂಸ್ಥೆಯು ಸದ್ಯ ಹ್ಯಾರಿಯರ್ ಎಸ್‌ಯುವಿ ಕಾರು ಮಾರಾಟದಲ್ಲಿ ಉತ್ತಮ ಮುನ್ನಡೆ ಸಾಧಿಸುತ್ತಿದ್ದು, ಹ್ಯಾರಿಯರ್ ಬಿಡುಗಡೆಯಾದ 6 ತಿಂಗಳ ನಂತರ ಮೊದಲ ಬಾರಿಗೆ ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಹ್ಯಾರಿಯರ್ ಕಾರಿನಲ್ಲಿ ಈ ಡ್ಯುಯಲ್ ಟೋನ್ ಆಯ್ಕೆಯೊಂದಿಗೆ ಪ್ಯಾನರೊಮಿಕ್ ಸನ್‌ರೂಫ್ ಆಯ್ಕೆಯನ್ನು ನೀಡಲಾಗಿದ್ದು, ಇದೀಗ ಡೀಸೆಲ್ ಮಾದರಿಯಲ್ಲಿ ಆಟೋಮ್ಯಾಟಿಕ್ ಆವೃತ್ತಿಯನ್ನು ಹೊರತರಲಾಗುತ್ತಿದೆ.

ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಮಾಹಿತಿಗಳ ಪ್ರಕಾರ ಹ್ಯಾರಿಯರ್ ಡೀಸೆಲ್ ಕಾರು 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆಯಾಗಲಿರುವ ಬಿಎಸ್-6 ವೈಶಿಷ್ಟ್ಯತೆಯೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಆವೃತ್ತಿಯಲ್ಲಿ ಬಿಡುಗಡೆಯಾಗುವ ನೀರಿಕ್ಷೆಯಿದ್ದು, ಸಾಮಾನ್ಯ ಮಾದರಿಗಿಂತ ಆಟೋಮ್ಯಾಟಿಕ್ ಆವೃತ್ತಿಯು ರೂ.1 ಲಕ್ಷದಿಂದ ರೂ. 1.50 ಲಕ್ಷ ಹೆಚ್ಚುವರಿ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ.

ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್‌ಗೆ ಎಂಜಿ ಹೆಕ್ಟರ್ ಭರ್ಜರಿ ಪೈಪೋಟಿ ನೀಡುತ್ತಿದ್ದು, ಬೆಲೆಗಳಲ್ಲಿ ಹ್ಯಾರಿಯರ್‌ಗೆ ಸಮನಾಗಿರುವ ಹೆಕ್ಟರ್ ಕಾರು ಹಲವು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ.

ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಇದರಿಂದ ಎಚ್ಚೆತ್ತುಕೊಂಡಿರುವ ಟಾಟಾ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಹ್ಯಾರಿಯರ್ ಆವೃತ್ತಿಯನ್ನು ಉನ್ನತಿಕರಣಗೊಳಿಸುತ್ತಿದ್ದು, ಡ್ಯುಯಲ್ ಟೋನ್ ಬಣ್ಣದ ಜೊತೆಗೆ ಪ್ಯಾನರೊಮಿಕ್ ಸನ್‌ರೂಫ್, ಬ್ಲ್ಯಾಕ್ ಅಲಾಯ್ ವೀಲ್ಹ್ ಸೇರಿದಂತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯಗಳನ್ನು ಸಹ ಕಡ್ಡಾಯವಾಗಿ ನೀಡುತ್ತಿದೆ. ಜೊತೆಗೆ ಡ್ಯುಯಲ್ ಟೋನ್ ಖರೀದಿ ಮಾಡಿದ್ದಲ್ಲಿ ಹೆಚ್ಚುವರಿಯಾಗಿ ರೂ.20 ಸಾವಿರ ಪಾವತಿ ಮಾಡಬೇಕಾಗಿದ್ದು, ಗ್ರಾಹಕರ ಆಯ್ಕೆಯನ್ನು ಹೆಚ್ಚಿಸಿದೆ.

ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಟಾಟಾ ಹ್ಯಾರಿಯರ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.13 ಲಕ್ಷದಿಂದ ಹೈ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಹೊಂದಿದೆ.

MOST READ: ಹೆದ್ದಾರಿಗಳಲ್ಲಿ ಬೇಕಾಬಿಟ್ಟಿಯಾಗಿ ಚಲಿಸುವ ಭಾರೀ ಗಾತ್ರದ ವಾಹನಗಳಿಗೆ 5 ಸಾವಿರ ದಂಡ

ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

MOST READ: ಅಪಘಾತದ ವೇಳೆ ಏರ್‌ಬ್ಯಾಗ್ ಇದ್ರು ಫ್ಲಾಪ್- ಟೊಯೊಟಾ ವಿರುದ್ಧ ಕಾರು ಮಾಲೀಕನ ಆಕ್ರೋಶ..!

ಬಿಡುಗಡೆಗೆ ಸಜ್ಜಾದ ಟಾಟಾ ಹ್ಯಾರಿಯರ್ ಬಿಎಸ್-6 ಪ್ರೇರಿತ ಡೀಸೆಲ್ ಆಟೋಮ್ಯಾಟಿಕ್

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

Source: Rushlane

Most Read Articles

Kannada
English summary
Tata Harrier automatic BS6 diesel spied with Black alloys. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X