ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ದೇಶಿಯ ವಾಹನ ತಯಾರಕ ಸಂಸ್ಥೆಯಾದ ಟಾಟಾ ಮೋಟಾರ್ಸ್ ಬಹು ದಿನಗಳ ಹಿಂದಷ್ಟೆ ಎಸ್‍ಯುವಿ ಕಾರುಗಳ ಪಟ್ಟಿಯಲ್ಲಿ ಸದ್ದು ಮಾಡಲು ವಿಶೇಷ ವಿನ್ಯಾಸವನ್ನು ಪಡೆದ ಹ್ಯಾರಿಯರ್ ಕಾರನ್ನು ಬಿಡುಗಡೆ ಮಾಡಲಾಗಿದ್ದು, ಸಧ್ಯಕ್ಕೆ ಮಾರುಕಟ್ಟೆಯಲ್ಲಿರುವ ಮಹೀಂದ್ರಾ ಎಕ್ಸ್‌ಯುವಿ500 ಹಾಗು ಜೀಪ್ ಕಂಪಾಸ್ ಕಾರುಗಳಿಗೆ ಪೈಪೋಟಿ ನೀಡುತ್ತಿದೆ.

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಟಾಟಾ ಹ್ಯಾರಿಯರ್ ಕಾರು ಮಾರುಕಟ್ಟೆಯಲ್ಲಿ ಹೆಚ್ಚಿನ ಜನಪ್ರೀಯತೆಯನ್ನು ಪಡೆದುಕೊಂಡಿದ್ದು, ಈ ವರ್ಷದ ಐಪಿಲ್ 2019ಕ್ಕೆ ಅಫಿಷಿಯಲ್ ಕಾರಾಗಿ ಸದ್ದು ಮಾಡಿತ್ತು. ಮೇ 2019ರಲ್ಲಿ ಈ ಟಾಟಾ ಹ್ಯಾರಿಯರ್ ಕಾರು ತನ್ನ ಎದುರಾಳಿಗಳನ್ನು ಮಾರಾಟದಲ್ಲಿ ಹಿಂದಿಕ್ಕಿದೆ. ಈ ನಿಟ್ಟಿನಲ್ಲಿ ಗಾಡಿವಾಡಿ ವರದಿ ಪ್ರಕಾರ ಕಳೆದ ಮೇ ತಿಂಗಳಿನಲ್ಲಿ 1,779 ಯೂನಿಟ್ ಟಾಟಾ ಹ್ಯಾರಿಯರ್ ಕಾರುಗಳು ಮಾರಾಟವಾದರೆ, 1,195 ಯೂನಿಟ್ ಮಹೀಂದ್ರಾ ಎಕ್ಸ್‌ಯುವಿ 500 ಕಾರುಗಳು ಹಾಗು 977 ಯೂನಿಟ್ ಜೀಪ್ ಕಂಪಾಸ್ ಕಾರುಗಳು ಮಾರಾಟಗೊಂಡಿದೆ.

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿದೆ.

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್‌ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಸದ್ಯ ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.12.69 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯ ಬೆಲೆಯನ್ನು ರೂ.16.25 ಲಕ್ಷಕ್ಕೆ ನಿಗದಿ ಮಾಡಲಾಗಿದೆ.

MOST READ: ಮಾರುಕಟ್ಟೆಯಿಂದ ಹೊರ ಬಂದರೂ ಸೇನೆಯಿಂದ ಭಾರೀ ಬೇಡಿಕೆ ಪಡೆಯುತ್ತಿರುವ ಮಾರುತಿ ಸುಜುಕಿ ಜಿಪ್ಸಿ

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

MOST READ: ವಾಹನ ಚಾಲಕರೇ ಇತ್ತ ಗಮನಿಸಿ - ಓವರ್‍‍ಸ್ಪೀಡಿಂಗ್ ಮಾಡುವವರನ್ನು ತಡೆಯಲು ಪೊಲೀಸರ ಕೈಗೆ ಹೊಸ ಅಸ್ತ್ರ

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

MOST READ: ರಾಜ್ಯದೆಲ್ಲೆಡೆ ಎಂಬತ್ತೊಂಬತ್ತು ಸಾವಿರಕ್ಕು ಹೆಚ್ಚಿನ ಡ್ರೈವಿಂಗ್ ಲೈಸೆನ್ಸ್ ರದ್ದು

ಟಾಟಾ ಹ್ಯಾರಿಯರ್ ಕಾರಿಗೆ ಮಾರುಕಟ್ಟೆಯಲ್ಲಿ ಫುಲ್ ಡಿಮ್ಯಾಂಡ್

ಒಟ್ಟಿನಲ್ಲಿ ಪ್ರೀಮಿಯಂ ಕಂಪ್ಯಾಕ್ಟ್ ಎಸ್‍ಯುವಿ ಕಾರುಗಳ ಸರಣಿಯಲ್ಲಿ ಟಾಟಾ ಹ್ಯಾರಿಯರ್ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನೀರಿಕ್ಷೆಯಲ್ಲಿರುವ ಪೆಟ್ರೋಲ್ ವರ್ಷನ್ ಒಂದು ಬಂದಲ್ಲಿ ಮತ್ತಷ್ಟು ಬೇಡಿಕೆಯೊಂದಿಗೆ ಜೀಪ್ ಕಂಪಾಸ್, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೂ ಸಾಕಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Most Read Articles

Kannada
English summary
Tata Harrier Beats Mahindra XUV500 And Jeep Compass In Sales May 2019. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X