ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಕಾರುಗಳ ಮಾರಾಟದಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಟಾಟಾ ಸಂಸ್ಥೆಯು ಹ್ಯಾರಿಯರ್ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಹ್ಯಾರಿಯರ್ ಬಿಡುಗಡೆ ಮಾಡಿದ 6 ತಿಂಗಳ ನಂತರ ಮೊದಲ ಬಾರಿಗೆ ಹೊಸ ಕಾರಿನ ಬಣ್ಣಗಳ ಆಯ್ಕೆಯಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಅಧಿಕೃತವಾಗಿಯೇ ನೀಡಲು ಸಜ್ಜಾಗುತ್ತಿದೆ.

ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಇತ್ತೀಚೆಗೆ ಹಲವಾರು ಮಾಡಿಫೈ ಸಂಸ್ಥೆಗಳು ಟಾಟಾ ಹ್ಯಾರಿಯರ್‌ನಲ್ಲಿ ಗ್ರಾಹಕರ ಬೇಡಿಕೆ ಅನ್ವಯ ಆಕರ್ಷಕ ಡ್ಯುಯಲ್ ಟೋನ್ ಪ್ರೇರಿತ ಬಣ್ಣದ ಆಯ್ಕೆಗಳು ನೀಡುವ ಮೂಲಕ ಟಾಟಾ ಸಂಸ್ಥೆಗೂ ಅಚ್ಚರಿ ಮೂಡಿಸಿದ್ದವು. ಇದರಿಂದ ಟಾಟಾ ಸಂಸ್ಥೆಯೇ ಇದೀಗ ಹ್ಯಾರಿಯರ್ ಕಾರಿನಲ್ಲಿ ಅಧಿಕೃತವಾಗಿಯೇ ಡ್ಯುಯಲ್ ಟೋನ್ ಬಣ್ಣದ ಸನ್‌ರೂಫ್ ಸೌಲಭ್ಯಗಳನ್ನು ಪಡೆದುಕೊಳ್ಳಲಿದ್ದು, ಸದ್ಯ ಮಾರುಕಟ್ಟೆಯಲ್ಲಿರುವ ಕ್ಯಾಲಿಸ್ಟೋ ಕಾಪರ್, ಟೆರಿಮಿಸ್ಟೋ ಗೋಲ್ಡ್, ಏರಿಯಲ್ ಸಿಲ್ವರ್, ಟೆಲಿಸ್ಟೊ ಗ್ರೇ ಮತ್ತು ಅಕ್ರಾಸ್ ವೈಟ್ ಮೊನೊ ಟೋನ್ ಬಣ್ಣಗಳೊಂದಿಗೆ ಕ್ಯಾಲಿಸ್ಟೋ ಕಾಪರ್ ಜೊತೆ ಬ್ಲ್ಯಾಕ್ ರೂಫ್, ಅಕ್ರಾಸ್ ವೈಟ್ ಜೊತೆ ಏರಿಯಲ್ ಸಿಲ್ವರ್ ಮತ್ತು ಏರಿಯಲ್ ಸಿಲ್ವರ್ ಜೊತೆ ಬ್ಲ್ಯಾಕ್ ರೂಫ್ ಆಯ್ಕೆಗಳನ್ನು ಪಡೆದುಕೊಳ್ಳಲಿದೆ.

ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಇನ್ನು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಮುನ್ನುಗ್ಗುತ್ತಿರುವ ಟಾಟಾ ಹ್ಯಾರಿಯರ್ ಮಾದರಿಯು ಕಳೆದ ಜನವರಿಯಲ್ಲಿ ಬಿಡುಗಡೆಗೊಂಡ ತಿಂಗಳಿನಿಂದಲೂ ಮಾರಾಟದಲ್ಲಿ ಉತ್ತಮ ಬೇಡಿಕೆಯನ್ನು ಕಾಯ್ದುಕೊಂಡು ಬಂದಿದೆ. ಕಳೆದ ತಿಂಗಳ ಹಿಂದಷ್ಟೇ ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನು ಹೊಸ ಹ್ಯಾರಿಯಲ್‌ನಲ್ಲೂ ಇದೀಗ ಉನ್ನತಿಕರಿಸಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯಿಡ್ ಆಟೋ ಸೌಲಭ್ಯವನ್ನು ನೀಡಲಾಗಿದೆ.

ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ಎಸ್‌ಯುವಿ ಮಾದರಿಯ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿರುವುದು ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್‌ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.

ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಸದ್ಯ ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.13 ಲಕ್ಷದಿಂದ ಹೈ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಹೊಂದಿದೆ.

ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಗ್ರಾಹಕ ಬೇಡಿಕೆಯೆಂತೆ ಹ್ಯಾರಿಯರ್‌ನಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ನೀಡಿದ ಟಾಟಾ

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

Most Read Articles

Kannada
English summary
Tata Harrier To Get Dual-Tone Colours Soon — Colours Above All.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X