ಹ್ಯಾರಿಯರ್ ಖರೀದಿ ಮೇಲೆ ಭರ್ಜರಿ ವಾರಂಟಿ ಪ್ಯಾಕೇಜ್ ಘೋಷಿಸಿದ ಟಾಟಾ
ಸತತ ವಾಹನ ಮಾರಾಟ ಕುಸಿತ ಮತ್ತು ಹೊಸ ಕಾರು ಉತ್ಪನ್ನಗಳ ಪ್ರತಿಸ್ಪರ್ಧೆಯಿದ್ದ ಎಚ್ಚೆತ್ತುಕೊಂಡಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಹ್ಯಾರಿಯರ್ ಕಾರಿನ ಖರೀದಿ ಮೇಲೆ ಆಕರ್ಷಕ ವಾರಂಟಿ ಪ್ಯಾಕೇಜ್ ಘೋಷಿಸಿದೆ.

ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಪೈಪೋಟಿಯಾಗಿ ಹ್ಯಾರಿಯರ್ ಮೇಲೆ ಭರ್ಜರಿ ವಾರಂಟಿ ಯೋಜನೆಗಳನ್ನು ಘೋಷಣೆ ಮಾಡಿರುವ ಟಾಟಾ ಸಂಸ್ಥೆಯು ಕಂಪ್ಯಾಕ್ಟ್ ಎಸ್‌ಯುವಿ ಪ್ರಿಯರನ್ನು ಸೆಳೆಯುವ ತವಕದಲ್ಲಿದ್ದು, 5 ವರ್ಷ ಕಾಲ ಅಥವಾ ಅನಿಯಮಿತ ಕಿ.ಮೀ ವಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಈ ಹಿಂದಿನ 2 ವರ್ಷಗಳ ವಾರಂಟಿ ಯೋಜನೆಯನ್ನು 5 ವರ್ಷಕ್ಕೆ ವಿಸ್ತರಿಸಿರುವ ಟಾಟಾ, ಪೆಂಟಾಕೇರ್ ಮೂಲಕ ಕಾರು ಮಾರಾಟ ಹೆಚ್ಚಿಸುವ ನೀರಿಕ್ಷೆಯಲ್ಲಿದೆ.

ಸದ್ಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್ ಕಾರಿಗೆ ಕಿಯಾ ಸೆಲ್ಟೊಸ್ ಮತ್ತು ಎಂಜಿ ಹೆಕ್ಟರ್ ಕಾರುಗಳು ಭಾರೀ ಪೈಪೋಟಿ ನೀಡುತ್ತಿದ್ದು, ಗ್ರಾಹಕರನ್ನು ಸೆಳೆಯಲು ಅನಿವಾರ್ಯವಾಗಿ ವಾರಂಟಿ ಯೋಜನೆಗಳಲ್ಲಿ ಮಹತ್ವದ ಬದಲಾವಣೆ ತಂದಿದೆ.

ಹೊಸದಾಗಿ ಹ್ಯಾರಿಯರ್ ಕಾರು ಖರೀದಿ ಮಾಡುವ ಗ್ರಾಹಕರಿಗೆ 5 ವರ್ಷ ಅಥವಾ ಅನ್ ಲಿಮಿಟೆಡ್ ಕಿ.ಮೀ ವಾರಂಟಿ ನೀಡಲಾಗಿದ್ದು, ಈಗಾಗಲೇ ಕಾರು ಖರೀದಿ ಮಾಡಿರುವ ಗ್ರಾಹಕರು ಕೂಡಾ ಹೆಚ್ಚುವರಿ ಮೊತ್ತ ಪಾವತಿಸಿ ಹೊಸ ವಾರಂಟಿ ಯೋಜನೆಯನ್ನು ಪಡೆದುಕೊಳ್ಳಬಹುದಾಗಿದೆ.

ಮಾಹಿತಿಗಳ ಪ್ರಕಾರಹ್ಯಾರಿಯರ್ ಕಾರನ್ನು ಈ ಹಿಂದೆ 90 ದಿನದೊಳಗೆ ಖರೀದಿ ಮಾಡಿದ್ದಲ್ಲಿ ರೂ.25,960, 91 ದಿನದಿಂದ 180 ದಿನಗೊಳಗಾಗಿ ಖರೀದಿ ಮಾಡಿದ್ದಲ್ಲಿ ರೂ.28,556 ಮತ್ತು 180 ದಿನಗಳ ಹಿಂದಿನ ದಿನದಂದ ಖರೀದಿ ಮಾಡಿರುವ ಗ್ರಾಹಕರು ರೂ.31,152 ಪಾವತಿಸಿ ಹೊಸ ವಾರಂಟಿ ಯೋಜನೆಯನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಹೊಸ ವಾರಂಟಿ ಯೋಜನೆಯಲ್ಲಿ ವಾಹನದ ಪ್ರಮುಖ ಬಿಡಿಭಾಗಗಳ ಮೇಲೆ ಗರಿಷ್ಠ ಖಾತ್ರಿ ದೊರೆಯಲಿದ್ದು, ಮಾಲೀಕರಿಗೆ ಇದು ಒಂದು ಬಾರಿ ಹೊರೆಯಾದರೂ ಭವಿಷ್ಯದಲ್ಲಿ ಹೆಚ್ಚು ಹಣ ಪಾವತಿಸುವ ತೊಂದರೆ ತಪ್ಪಲಿದೆ.

ಇನ್ನು ಟಾಟಾ ಮೋಟಾರ್ಸ್ ಸಂಸ್ಥೆಯು ಹ್ಯಾರಿಯರ್‌ನಲ್ಲಿ ಹೊಸದಾಗಿ ಡಾರ್ಕ್ ಎಡಿಷನ್ ಬಿಡುಗಡೆ ಮಾಡಿದ್ದು, ಹೊಸ ಕಾರು ಸಂಪೂರ್ಣ ಕಪ್ಪು ಬಣ್ಣದ ವಿನ್ಯಾಸ ಹೊಂದಿದ್ದು, ಈ ಹಿಂದನಂತೆಯೇ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಖರೀದಿಗೆ ಲಭ್ಯವಿರುವ ಸಾಮಾನ್ಯ ಹ್ಯಾರಿಯರ್ ಆವೃತ್ತಿಗಿಂತಲೂ ವಿಶೇಷ ಬಣ್ಣದ ಆಯ್ಕೆ ಹೊಂದಿರುವ ಡಾರ್ಕ್ ಎಡಿಷನ್ ಹ್ಯಾರಿಯರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.16.76 ಲಕ್ಷಕ್ಕೆ ಬಿಡುಗಡೆಗೊಂಡಿದ್ದು, ಹ್ಯಾರಿಯರ್ ಟಾಪ್ ಎಂಡ್ ಮಾದರಿಯಾದ ಎಕ್ಸ್‌ಜೆಡ್ ಆವೃತ್ತಿಯಲ್ಲಿ ಡಾರ್ಕ್ ಎಡಿಷನ್ ಖರೀದಿ ಮಾಡಬಹುದಾಗಿದ್ದು, ಸಾಮಾನ್ಯ ಬಣ್ಣದ ಟಾಪ್ ಎಂಡ್ ಮಾದರಿಗಿಂತ ಡಾರ್ಕ್ ಎಡಿಷನ್ ರೂ.19 ಸಾವಿರ ಹೆಚ್ಚುವರಿ ಬೆಲೆ ಪಡೆದಿದೆ.
MOST READ: ಕೊಹ್ಲಿಗೆ ಟೋಪಿ ಹಾಕಿದ ಕಾಲ್ ಸೆಂಟರ್ ಕಿಲಾಡಿ- ಠಾಣೆಯಲ್ಲೇ ಅನಾಥವಾಗಿ ಬಿದ್ದ ರೂ. 3 ಕೋಟಿ ಕಾರು..!

ಡಾರ್ಕ್ ಎಡಿಷನ್ ಜೊತೆಗೆ ಡ್ಯುಯಲ್ ಟೋನ್ ಸನ್‌ರೂಫ್, ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನು ಉನ್ನತಿಕರಿಸಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯಿಡ್ ಆಟೋ ಸೌಲಭ್ಯವು ಮತ್ತಷ್ಟು ಗ್ರಾಹಕರನ್ನು ಸೆಳೆಯುತ್ತಿದೆ. ಟಾಟಾ ಹ್ಯಾರಿಯರ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.
MOST READ: ಟ್ರಾಫಿಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಈ ಸ್ಕೂಟರ್ ಮಾಲೀಕ ಮಾಡಿದ್ದೇನು ಗೊತ್ತಾ?

ವೆರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.13 ಲಕ್ಷದಿಂದ ಹೈ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಹೊಂದಿದ್ದು, ಇದೀಗ ಡಾರ್ಕ್ ಎಡಿಷನ್ ಮಾದರಿಯು ರೂ. 16.75 ಲಕ್ಷ ಬೆಲೆ ಹೊಂದಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸಿಸ್ಟ್ ಪಡೆದುಕೊಂಡಿದೆ.


Click it and Unblock the Notifications