ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ವರ್ಷದ ಆರಂಭದಲ್ಲಿ ಬಿಡುಗಡೆಗೊಂಡಿದ್ದ ಟಾಟಾ ಹ್ಯಾರಿಯರ್ ಮಾದರಿಯು ಮೊದಲ ಬಾರಿಗೆ ಗ್ರಾಹಕರ ಬೇಡಿಕೆ ಮೇರೆಗೆ ಉನ್ನತಿಕರಣಗೊಂಡಿದ್ದು, ಹ್ಯಾರಿಯರ್ ಟಾಪ್ ಎಂಡ್ ಮಾದರಿಗಳಾದ ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಆವೃತ್ತಿಗಳಲ್ಲಿ ಕೆಲವು ಬದಲಾವಣೆಗಳನ್ನು ತರಲಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಸದ್ಯ ಮಾರುಕಟ್ಟೆಗಳಲ್ಲಿ ಮಧ್ಯಮ ಗಾತ್ರದ ಹೊಸ ಕಾರುಗಳಲ್ಲಿ ಸಾಮಾನ್ಯವಾಗಿ ಒದಗಿಸಲಾಗುತ್ತಿರುವ ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನು ಹೊಸ ಹ್ಯಾರಿಯಲ್‌ನಲ್ಲೂ ಇದೀಗ ಉನ್ನತಿಕರಿಸಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯಿಡ್ ಆಟೋ ಸೌಲಭ್ಯವನ್ನು ನೀಡಲಾಗಿದೆ. ಇದು ಎಸ್‌ಯುವಿ ಪ್ರಿಯರ ಆಕರ್ಷಣೆಗೆ ಕಾರಣವಾಗಲಿದ್ದು, ಸ್ಮಾರ್ಟ್‌ಫೋನ್ ಕನೆಕ್ವಿಟಿ ಮೂಲಕ ಇನ್ಪೋಟೈನ್‌ಮೆಂಟ್ ಸೌಲಭ್ಯವನ್ನು ನಿಯಂತ್ರಣ ಮಾಡಬಹುದಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಹ್ಯಾರಿಯರ್ ಕಾರಿನಲ್ಲಿ ಉನ್ನತಿಕರಿಸಲಾಗಿರುವ ಹೊಸ ಸೌಲಭ್ಯಕ್ಕೆ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸದ ಟಾಟಾ ಸಂಸ್ಥೆಯು, ದೇಶದ ಎಲ್ಲಾ ಟಾಟಾ ಅಧಿಕೃತ ಡೀಲರ್ಸ್‌ಗಳಲ್ಲೂ ಹೊಸ ಆಯ್ಕೆಯನ್ನು ಪಡೆದುಕೊಳ್ಳಬಹುದಾಗಿ ತನ್ನ ಗ್ರಾಹಕರಿಗೆ ಸಂದೇಶ ರವಾನಿಸಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಇನ್ನು ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ಎಸ್‌ಯುವಿ ಮಾದರಿಯ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿರುವುದು ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್‌ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಸದ್ಯ ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.12.69 ಲಕ್ಷ ಮತ್ತು ಹೈ ಎಂಡ್ ಮಾದರಿಯ ಬೆಲೆಯನ್ನು ರೂ.16.25 ಲಕ್ಷ ಬೆಲೆ ಹೊಂದಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಅಪ್‌ಡೆಟ್‌

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

Article Published On: Thursday, May 2, 2019, 16:44 [IST]
English summary
Tata Harrier Features Apple CarPlay — Tata’s First Official Update. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+