ಸೆಲ್ಫ್ ಡ್ರೈವಿಂಗ್ ಕಾರು ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಟ್ಯಾಕ್ಸಿ ಚಾಲಕರಿಗೆ ಅಚ್ಚುಮೆಚ್ಚಿನ ಕಾರುಗಳೆಂದರೆ ಹ್ಯಾಚ್‍ಬ್ಯಾಕ್‍ನಲ್ಲಿ ಟಾಟಾ ಇಂಡಿಕ ಅಥವಾ ನಿಸ್ಸಾನ್ ಮೈಕ್ರಾ, ಸೆಡಾನ್ ಕಾರುಗಳಲ್ಲಿ ಮಾರುತಿ ಸುಜುಕಿ ಡಿಜೈರ್ ಹಾಗು ಎಂಪಿವಿ ಕಾರುಗಳಲ್ಲಿ ಮಾರುತಿ ಸುಜುಕಿ ಎರ್ಟಿಗಾ ಅಂತಾನೇ ಹೇಳ್ಬೋದು. ಆದ್ರೆ ಎಂಪಿವಿ ಮಾದರಿಯ ಟ್ಯಾಕ್ಸಿ ಸೆಗ್ಮೆಂಟ್‍ನಲ್ಲಿ ಇದೀಗ ಮಹೀಂದ್ರಾ ಮರಾಜೊ ಕೂಡಾ ಕಾಲಿಟ್ಟಿದೆ. ಆದರೆ ಟ್ಯಾಕ್ಸಿ ಸೆಗ್ಮೆಂಟ್ ಕಾರುಗಳಲ್ಲಿ ಎಸ್‍ಯುವಿ ಕಾರುಗಳನ್ನು ಬಳಸುವುದು ತುಂಬಾನೆ ಕಡಿಮೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಆದುದರಿಂದಾಗಿ ಎಸ್‍ಯುವಿ ವಾಹನಗಳನ್ನು ನೀವು ಟ್ಯಾಕ್ಸಿಗಳಾಗಿ ನೋಡಲು ಸಾಧ್ಯವಾಗುವುದಿಲ್ಲ. ಆದರೆ ಇದೇ ವರ್ಷದ ಮೊದಲಿನಲ್ಲಿ ಬಿಡುಗಡೆಯಾದ ಟಾಟಾ ಹ್ಯಾರಿಯರ್ ಸ್ವಂತ ಬಳಕೆಯ ವಾಹನವಾಗಿ ಮಿಂಚುತ್ತಿದ್ದು, ಇದೀಗ ಸೆಲ್ಫ್ ಡ್ರೈವಿಂಗ್ ಉದ್ಯಮದಲ್ಲಿಯು ಸಹ ಮಿಂಚಲು ಮುಂದಾಗಿದೆ. ಹೌದು, ಹೊಸ ಟಾಟಾ ಹ್ಯಾರಿಯರ್ ಎಸ್‍ಯುವಿ ಕಾರನ್ನು ರಾಜಸ್ಥಾನದಲ್ಲಿ ಸೆಲ್ಫ್ ಡ್ರೈವಿಂಗ್ ಸರ್ವೀಸಿಂಗ್‍‍ಗಾಗಿ ಬಳಸುತ್ತಿದ್ದು, ಈ ಕುರಿತದ ಚಿತ್ರವೊಂದು ಸೋರಿಕೆಯಾಗಿದೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ರಾಜಸ್ಥಾನದಲ್ಲಿ ಸೆಲ್ಫ್ ಡ್ರೈವಿಂಗ್ ಕಾರಿನ ಅವತಾರದಲ್ಲಿ ಮಿಂಚಿನ ಟಾಟಾ ಹ್ಯಾರಿಯರ್ ಹಳದಿ ಬಣ್ಣದ ನೋಂದಣಿ ಸಂಖ್ಯೆಯನ್ನು ಹೊಂದಿದ್ದು, ಇದು ಜೂಮ್‍ಕಾರ್ ಮತ್ತು ಡ್ರೈವ್‍ಜಿ ಎಂಬ ಸೆಲ್ಪ್ ಡ್ರೈವಿಂಗ್ ಆಧಾರಿತ ಆಪ್‍ಗಳಂತೆಯೆ ಜನಪ್ರಿಯವಾದ ಆರಿಕ್ಸ್ ಎಂಬ ಸಂಸ್ಥೆಯಲ್ಲಿ ಸೆಲ್ಪ್ ಡ್ರೈವಿಂಗ್ ಕಾರಾಗಿ ಅಟ್ಯಾಚ್ ಮಾಡಲಾಗಿದೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಹಾಗೆಯೆ ಸೆಲ್ಫ್ ಡ್ರೈವಿಂಗ್ ಕಾರಿನ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಕಾರು ಎಕ್ಸ್ಇ ವೇರಿಯೆಂಟ್‍ನ ಮೇಲ್ಭಾಗದಲ್ಲಿ ಸ್ಥಾನವನ್ನು ಪಡೆದಿರುವ ಎಕ್ಸ್ಎಂ ವೇರಿಯೆಂಟ್ ಆಗಿದ್ದು, ಟ್ಯಾಕ್ಸಿ ಬಳಕೆಗೆ ಬೇಕಾದ ಎಲ್ಲಾ ಉಪಕರಣಗಳು ಈ ಕಾರಿನಲ್ಲಿದೆಯೆ ಎಂಬ ಪ್ರಶ್ನೆಗಳು ಹಲವರಲ್ಲಿ ಮೂಡಿ ಬಂದಿದೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಟಾಟಾ ಹ್ಯಾರಿಯರ್ ಬೆಲೆ

ಸದ್ಯ ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.13.0 ಲಕ್ಷ ಮತ್ತು ಹೈ ಎಂಡ್ ಮಾದರಿಯ ಬೆಲೆಯನ್ನು ರೂ.16.55 ಲಕ್ಷ ಬೆಲೆ ಹೊಂದಿದೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಇನ್ನು ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ಎಸ್‌ಯುವಿ ಮಾದರಿಯ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿರುವುದು ಬೇಡಿಕೆ ಹೆಚ್ಚಳಕ್ಕೆ ಕಾರಣವಾಗಿದೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್‌ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಟಾಕ್ಸಿ ಅವತಾರದಲ್ಲಿ ಕಾಣಿಸಿಕೊಂಡ ಟಾಟಾ ಹ್ಯಾರಿಯರ್ ಎಸ್‍ಯುವಿ

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

Source: Team BHP

More from DriveSpark

Article Published On: Monday, July 1, 2019, 13:15 [IST]
English summary
Tata Harrier Hits The Taxi Circuit In Rajasthan. Read In Kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+