ಮಾರಾಟದಲ್ಲಿ ನಿಸ್ಸಾನ್ ಕಿಕ್ಸ್ ಹಾಗು ಮಹೀಂದ್ರಾ ಎಕ್ಸ್‌ಯುವಿ500 ಕಾರನ್ನು ಹಿಂದಿಕ್ಕಿದ ಟಾಟಾ ಹ್ಯಾರಿಯರ್
ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ವರ್ಷದ ಜನವರಿಯಲ್ಲಿ ತಮ್ಮ ಹೊಸ ಹ್ಯಾರಿಯರ್ ಎಸ್‍ಯುವಿ ಕಾರನ್ನು ಬಿಡುಗಡೆಗೊಳಿಸಿದ್ದು, ಮಾರುಕಟ್ಟಯಲ್ಲಿ ಸುರಕ್ಷತೆಯ ವಿಚಾರಕ್ಕೆ ಹೆಚ್ಚಾಗಿಯೆ ಸದ್ದು ಮಾಡುತ್ತಿದೆ. ಅಶ್ಟೆ ಅಲ್ಲದೆಯೆ ಮಾರಾಟದಲ್ಲಿಯು ಸಹ ಮುನ್ನುಗುತ್ತಿದೆ.

ಹೌದು, ಜನವರಿಯಲ್ಲಿ ಬಿಡುಗಡೆಗೊಂಡ ಟಾಟಾ ಹ್ಯಾರಿಯರ್ ಕಾರು ತಿಂಗಳಿನಿಂದ ತಿಂಗಳಿಕೆ ಮಾರಾಟದಲ್ಲಿ ಏರ್ಕೆಯನ್ನು ಕಾಣುತ್ತಿದ್ದು, ಕಳೆದ ಏಪ್ರಿಲ್ ತಿಂಗಳಿನಲ್ಲಿ ಸುಮಾರು 2075ಕ್ಕು ಹೆಚ್ಚಿನ ಕಾರುಗಳು ಮಾರಾಟವಾಗಿದೆ. ಇದು ಟಾಟಾ ಹ್ಯಾರಿಯರ್ ಕಾರಿನ ಮಾರಾಟದ ಸಂಖ್ಯೆಯಾದರೆ ಇನ್ನು ಇದರ ಎದುರಾಳಿಯಾದ ನಿಸ್ಸಾನ್ ಕಿಕ್ಸ್ 701 ಯೂನಿಟ್, ಜೀಪ್ ಕಂಪಾಸ್ 1441 ಯೂನಿಟ್ ಮತ್ತು ಮಹೀಂದ್ರಾ ಎಕ್ಸ್‌ಯುವಿ500 1508 ಯೂನಿಟ್‍ಗಳು ಮಾರಾಟವಾಗಿದೆ.

| Tata Harrier
| Mahindra XUV500
| Jeep Compass | |
| February-2019 | 1,449 | 1,806 | 1,304 |
| March-2019
| 2,492 | 1,916 | 1,441 |
| April-2019 | 2,075 | 1,508 | 1,204 |
| Total
| 6,016 | 5,230 | 3,949 |
Source: Autopunditz

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿದೆ.

ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್‌ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.

ಸದ್ಯ ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.12.69 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯ ಬೆಲೆಯನ್ನು ರೂ.16.25 ಲಕ್ಷಕ್ಕೆ ನಿಗದಿ ಮಾಡಲಾಗಿದೆ.

ಎಂಜಿನ್ ಸಾಮರ್ಥ್ಯ
ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

ಒಟ್ಟಿನಲ್ಲಿ ಪ್ರೀಮಿಯಂ ಕಂಪ್ಯಾಕ್ಟ್ ಎಸ್‍ಯುವಿ ಕಾರುಗಳ ಸರಣಿಯಲ್ಲಿ ಟಾಟಾ ಹ್ಯಾರಿಯರ್ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನೀರಿಕ್ಷೆಯಲ್ಲಿರುವ ಪೆಟ್ರೋಲ್ ವರ್ಷನ್ ಒಂದು ಬಂದಲ್ಲಿ ಮತ್ತಷ್ಟು ಬೇಡಿಕೆಯೊಂದಿಗೆ ಜೀಪ್ ಕಂಪಾಸ್, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೂ ಸಾಕಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.


Click it and Unblock the Notifications








