Just In
- 1 hr ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 13 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 16 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 16 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
Don't Miss!
- News ಸಿದ್ದರಾಮಯ್ಯರು ಸಿಎಂ ಆದಾಗ ವಿಜೃಂಭಿಸುವ ದೇಶದ್ರೋಹಿಗಳು: ಶೋಭಾ ಕರಂದ್ಲಾಜೆ ಹೇಳಿದ್ದೇನು?
- Finance Zero Shadow Day: ಬೆಂಗಳೂರಿನಲ್ಲಿ ಇಂದು ಪ್ರಕೃತಿಯ ಅಚ್ಚರಿ
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ಯುಯಲ್ ಟೋನ್ ವರ್ಷನ್ ಬಿಡುಗಡೆ- ಬೇಡಿಕೆಯಲ್ಲಿ ಮುನ್ನಡೆ ಕಾಯ್ದಕೊಂಡ ಟಾಟಾ ಹ್ಯಾರಿಯರ್
ಟಾಟಾ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಡ್ಯುಯಲ್ ಟೋನ್ ವರ್ಷನ್ ಹ್ಯಾರಿಯರ್ ಎಸ್ಯುವಿ ಮಾದರಿಯನ್ನು ಕಳೆದ ತಿಂಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದು, ಜೂನ್ ಅವಧಿಯಲ್ಲಿನ ಹೊಸ ಕಾರು ಮಾರಾಟ ಪಟ್ಟಿಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಮುನ್ನಡೆ ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್ಗೆ ಪೈಪೋಟಿಯಾಗಿ ಎಂಜಿ ಹೆಕ್ಟರ್ ಕಾರು ಬಿಡುಗಡೆಯಾಗಿದ್ದು, ಬೆಲೆಗಳಲ್ಲಿ ಹ್ಯಾರಿಯರ್ಗೆ ಸಮನಾಗಿರುವ ಹೆಕ್ಟರ್ ಕಾರು ಹಲವು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಟಾಟಾ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಹ್ಯಾರಿಯರ್ ಆವೃತ್ತಿಯನ್ನು ಉನ್ನತಿಕರಣಗೊಳಿಸಿದ್ದು, ಡ್ಯುಯಲ್ ಟೋನ್ ಸನ್ರೂಫ್ ಸೌಲಭ್ಯದಿಂದಾಗಿ ಜೂನ್ ಅವಧಿಯಲ್ಲಿ ಜೀಪ್ ಕಂಪಾಸ್ ಮತ್ತು ಎಕ್ಸ್ಯುವಿ500 ಹಿಂದಿಕ್ಕಿರುವ ಹ್ಯಾರಿಯರ್ 1,216 ಯುನಿಟ್ ಮಾರಾಟಗೊಂಡಿವೆ.
ಹ್ಯಾರಿಯರ್ ಕಾರುಗಳು ಪ್ರಸ್ತುತ ಮಾರುಕಟ್ಟೆಯಲ್ಲಿ ಕ್ಯಾಲಿಸ್ಟೋ ಕಾಪರ್, ಟೆರಿಮಿಸ್ಟೋ ಗೋಲ್ಡ್, ಏರಿಯಲ್ ಸಿಲ್ವರ್, ಟೆಲಿಸ್ಟೊ ಗ್ರೇ ಮತ್ತು ಅಕ್ರಾಸ್ ವೈಟ್ ಎಂಬ ಐದು ಮೊನೊ ಟೋನ್ ಬಣ್ಣಗಳಲ್ಲಿ ಲಭ್ಯವಿದ್ದು, ಹೊಸದಾಗಿ ಕ್ಯಾಲಿಸ್ಟೋ ಕಾಪರ್ ಜೊತೆ ಬ್ಲ್ಯಾಕ್ ರೂಫ್, ಅಕ್ರಾಸ್ ವೈಟ್ ಜೊತೆ ಏರಿಯಲ್ ಸಿಲ್ವರ್ ಮತ್ತು ಏರಿಯಲ್ ಸಿಲ್ವರ್ ಜೊತೆ ಬ್ಲ್ಯಾಕ್ ಸನ್ ರೂಫ್ ಆಯ್ಕೆಗಳನ್ನು ಪಡೆದುಕೊಂಡಿದೆ.
ಟಾಟಾ ಸಂಸ್ಥೆಯು ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಕೇವಲ ಹ್ಯಾರಿಯರ್ ಎಂಡ್ ಮಾದರಿಯಾದ ಎಕ್ಸ್ಜೆಡ್ ಆವೃತ್ತಿಯಲ್ಲಿ ಮಾತ್ರವೇ ನೀಡಲಾಗಿದ್ದು, ಡ್ಯುಯಲ್ ಬಣ್ಣವನ್ನು ಹೊಂದಿರುವ ಮಾದರಿಯು ಸಾಮಾನ್ಯ ಎಕ್ಸ್ಜೆಡ್ ಆವೃತ್ತಿಗಿಂತ ಬೆಲೆಯಲ್ಲಿ ರೂ. 20 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಂಡಿರಲಿವೆ.
ಇನ್ನು ಮಧ್ಯಮ ಗಾತ್ರದ ಎಸ್ಯುವಿ ಕಾರು ಮಾರಾಟದಲ್ಲಿ ಮುನ್ನುಗ್ಗುತ್ತಿರುವ ಟಾಟಾ ಹ್ಯಾರಿಯರ್ ಮಾದರಿಯು ಕಳೆದ ಜನವರಿಯಲ್ಲಿ ಬಿಡುಗಡೆಗೊಂಡ ತಿಂಗಳಿನಿಂದಲೂ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆಯನ್ನು ಕಾಯ್ದುಕೊಂಡು ಬಂದಿದೆ. ಇದೀಗ ಹೊಸ ಕಾರಿನಲ್ಲಿ ಡ್ಯುಯಲ್ ಟೋನ್ ಸನ್ರೂಫ್ ಜೊತೆಗೆ ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನು ಉನ್ನತಿಕರಿಸಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯಿಡ್ ಆಟೋ ಸೌಲಭ್ಯವು ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ.
ಟಾಟಾ ಹ್ಯಾರಿಯರ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್ಇ, ಎಕ್ಸ್ಎಂ, ಎಕ್ಸ್ಟಿ ಮತ್ತು ಎಕ್ಸ್ಜೆಡ್ ಎಂಬ ನಾಲ್ಕು ವೇರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.13 ಲಕ್ಷದಿಂದ ಹೈ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಹೊಂದಿದೆ. ಜೊತೆಗೆ ಡ್ಯುಯಲ್ ಟೋನ್ ಖರೀದಿ ಮಾಡಿದ್ದಲ್ಲಿ ಹೆಚ್ಚುವರಿಯಾಗಿ ರೂ.20 ಸಾವಿರ ಪಾವತಿ ಮಾಡಬೇಕಾಗುತ್ತೆ.
ಎಂಜಿನ್ ಸಾಮರ್ಥ್ಯ
ಹ್ಯಾರಿಯರ್ ಎಸ್ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ನೊಂದಿಗೆ 140-ಬಿಹೆಚ್ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.
ಜೆನಾನ್ ಪ್ರೊಜೆಕ್ಟರ್ ಹೆಡ್ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್, 60:40 ವಿಭಜಿತ ಸೀಟ್ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.
ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್ಬ್ಯಾಗ್ಗಳು, ಇಎಸ್ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.