ಮಾರಾಟದಲ್ಲಿ ಮಹೀಂದ್ರಾ ಎಕ್ಸ್‌ಯುವಿ500 ಕಾರನ್ನು ಹಿಂದಿಕ್ಕಿದ ಟಾಟಾ ಹ್ಯಾರಿಯರ್
ಟಾಟಾ ಮೋಟಾರ್ಸ್ 2018ರ ಫೆಬ್ರುವರಿ ತಿಂಗಳಿನಲ್ಲಿ ನಡೆದ ಆಟೋ ಮೊಬೈಲ್ ಎಕ್ಸ್ ಸ್ಪೋ ಮೇಳದಲ್ಲಿ ತಮ್ಮ ಟಾಟಾ ಹ್ಯಾರಿಯರ್ ಕಾರನ್ನು ಹೆಚ್5ಎಕ್ಸ್ ಎಂಬ ಹೆಸರಿನಲ್ಲಿ ಪ್ರದರ್ಷನ ಮಾಡಿ ಗ್ರಾಹಕರಲ್ಲಿ ಹೆಚ್ಚು ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ನಂತರ ಆದ್ದೂರಿಯಾಗಿ 2019ರ ಜನವರಿ ತಿಂಗಳಿನಲ್ಲಿ ಟಾಟಾ ಹ್ಯಾರಿಯರ್ ಕಾರನ್ನು ಬಿಡುಗಡೆ ಮಾಡಲಾಗಿತ್ತು.

ಬಿಡುಗಡೆಗೊಂಡು ಸುಮಾರು ಎರಡು ತಿಂಗಳಾದರೂ ಸಹ ಟಾಟಾ ಹ್ಯಾರಿಯರ್ ಕಾರುಗಳು ತನ್ನ ಎದುರಾಳಿಯಾದ ಮಹೀಂದ್ರಾ ಎಕ್ಸ್‌ಯುವಿ500, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಕ್ರೆಟಾ ಕಾರುಗಳಿಗೆ ತೀವ್ರ ಪೈಪೋಟಿ ನೀಡುತ್ತಿದೆ. ಏಕೆಂದರೆ ಕಳೆದ ಮಾರ್ಚ್ 2019ರಲ್ಲಿ ಟಾಟಾ ಹ್ಯಾರಿಯರ್ ಕಾರು 500 ಯೂನಿಟ್ ಮಹೀಂದ್ರಾ ಎಕ್ಸ್‌ಯುವಿ500 ಕಾರಿಗಿಂತಲೂ ಮತ್ತು 1000 ಟಾಟಾ ಹ್ಯಾರಿಯರ್ ಕಾರುಗಳಿಗಿಂತಲೂ ಹೆಚ್ಚಿನದಾಗಿ ಮಾರಾಟ ಮಾಡಿ ಒಂದೇ ತಿಂಗಳಿನಲ್ಲಿ ಸುಮಾರು 2,492 ಯೂನಿಟ್ ಕಾರುಗಳು ಮಾರಾಟಗೊಂಡಿದೆ.

ಆದರೆ ಸೆಗ್ಮೆಂಟ್ ಕಿಂಗ್ ಎನಿಸಿಕೊಂಡಿರುವ ಹ್ಯುಂಡೈ ಕ್ರೆಟಾ ಮಾತ್ರ ಮಾರ್ಚ್ ತಿಂಗಳಿನಲ್ಲಿ ಸುಮಾರು 11,000 ಯೂನಿಟ್ ಮಾರಾಟವಾಗಿದೆ ಎಂದರೆ ನೀವು ನಂಬಲೇಬೇಕು. ಟಾಟಾ ಹ್ಯಾರಿಯರ್ ಕಾರು ಮಹೀಂದ್ರಾ ಎಕ್ಸ್‌ಯುವಿ500 ಮತ್ತು ಜೀಪ್ ಕಾರುಗಳನ್ನು ಹಿಂದಿಕ್ಕಲು ಒಂದು ಕಾರಣ ಇದೆ. ಅದೇನೆಂದರೆ ಆಕರ್ಷಕ ಬೆಲೆ.

ಏಕೆಂದರೆ ಮಾರುಕಟ್ಟೆಯಲ್ಲಿ ಮಹೀಂದ್ರಾ ಎಕ್ಸ್‌ಯುವಿ500 ಕಾರು ರೂ. 12.69 ಲಕ್ಷದ ಪ್ರಾರಂಭಿಕ ಬೆಲೆ ಮತ್ತು ಜೀಪ್ ಕಂಪಾಸ್ ಕಾರುಗಳು ರೂ. 15.40 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ. ಆದರೆ ಟಾಟಾ ಹ್ಯಾರಿಯರ್ ಮಾತ್ರ ರೂ. 12.69 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ.

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿದೆ.

ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್‌ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.

ಇನ್ನು ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.12.69 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯ ಬೆಲೆಯನ್ನು ರೂ.16.25 ಲಕ್ಷಕ್ಕೆ ನಿಗದಿ ಮಾಡಲಾಗಿದೆ.

ಎಂಜಿನ್ ಸಾಮರ್ಥ್ಯ
ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.


Click it and Unblock the Notifications








