ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಕಂಪ್ಯಾಕ್ಟ್ ಎಸ್‌ಯುವಿಗಳಲ್ಲಿ ಭಾರೀ ನೀರಿಕ್ಷೆ ಹುಟ್ಟುಹಾಕಿದ್ದ ಟಾಟಾ ಹ್ಯಾರಿಯರ್ ಕಾರುಗಳು ಕಳೆದ ತಿಂಗಳು 23ರಂದು ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಬಿಡುಗಡೆಯಾದ ಕೇವಲ 10 ದಿನಗಳಲ್ಲಿ ನೀರಿಕ್ಷೆಗೂ ಮೀರಿ ಹೆಚ್ಚಿನ ಮಟ್ಟದ ಬೇಡಿಕೆಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಭಾರತೀಯ ಗ್ರಾಹಕರೊಂದಿಗೆ ಭಾವನಾತ್ಮಕ ನಂಟು ಹೊಂದಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ವಾಹನ ಉತ್ಪನ್ನಗಳಲ್ಲಿ ಕಾಲಕ್ಕೆ ತಕ್ಕಂತೆ ಹೊಸತನಗಳನ್ನು ಹುಟ್ಟುಹಾಕುವ ಮೂಲಕ ಗ್ರಾಹಕರ ವಿಶ್ವಾಸ ಗಳಿಸುತ್ತಿದ್ದು, ಇದೀಗ ಬಿಡುಗಡೆಯಾಗಿರುವ ಹ್ಯಾರಿಯರ್ ಎಸ್‌ಯುವಿ ಮಾದರಿಯು ಕೂಡಾ ಟಾಟಾ ಸಂಸ್ಥೆಗೆ ಮತ್ತಷ್ಟು ಜನಪ್ರಿಯತೆ ತಂದುಕೊಡುವ ನೀರಿಕ್ಷೆಯಲ್ಲಿದೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿದೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್‌ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಹೀಗಾಗಿ ಗ್ರಾಹಕರ ಆಕರ್ಷಣೆ ಕಾರಣವಾಗಿರುವ ಹ್ಯಾರಿಯರ್ ಕಾರುಗಳು ಬಿಡುಗಡೆಯಾದ ಮೊದಲ 10 ದಿನಗಳಲ್ಲಿ 420 ಯುನಿಟ್‌ಗಳು ಮಾರಾಟಗೊಂಡಿದ್ದು, ಬೆಲೆ ಹೆಚ್ಚಳ ಎನ್ನಿಸಿದರೂ ಸಹ ಎಸ್‌ಯುವಿ ಪ್ರಿಯರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿವೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಇನ್ನು ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.12.69 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯ ಬೆಲೆಯನ್ನು ರೂ.16.25 ಲಕ್ಷಕ್ಕೆ ನಿಗದಿ ಮಾಡಲಾಗಿದೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

MOST READ: ಟೊಯೊಟಾ ಇನೋವಾ ಜನಪ್ರಿಯತೆಗೆ ಇದಕ್ಕಿಂತ ಮತ್ತೊಂದು ಸಾಕ್ಷಿ ಬೇಕಾ?

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

ಬಿಡುಗಡೆಯಾಗಿ ಕೇವಲ 10 ಹತ್ತು ದಿನಗಳಲ್ಲಿ ಉತ್ತಮ ಬೇಡಿಕೆ ಗಿಟ್ಟಿಸಿಕೊಂಡ ಹ್ಯಾರಿಯರ್

ಒಟ್ಟಿನಲ್ಲಿ ಪ್ರೀಮಿಯಂ ಎಸ್‍ಯುವಿ ಕಾರುಗಳ ಸರಣಿಯಲ್ಲಿ ಟಾಟಾ ಹ್ಯಾರಿಯರ್ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಜೀಪ್ ಕಂಪಾಸ್, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೆ ಸಾಕಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.

Article Published On: Sunday, February 3, 2019, 13:00 [IST]
English summary
Tata Harrier’s Sales Hit 420 Units In Just 10 Days. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+