Just In
- 1 hr ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 1 hr ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 2 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 3 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೊದಲ ಬಾರಿಗೆ ಬೆಲೆಯಲ್ಲಿ ಏರಿಕೆ ಕಂಡ ಟಾಟಾ ಹ್ಯಾರಿಯರ್
ಟಾಟಾ ಮೋಟಾರ್ಸ್ ಸಂಸ್ಥೆಯು ತಮ್ಮ ಹೊಸ ಹ್ಯಾರಿಯರ್ ಎಸ್ಯುವಿ ಕಾರನ್ನು ಇದೇ ವರ್ಷದ ಪ್ರಾರಂಭದಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಕಾರು ತನ್ನಲ್ಲಿರುವ ವೈಶಿಷ್ಟ್ಯತೆ ಮತ್ತು ತನ್ನ ವಿನ್ಯಾಸಕ್ಕೆ ಜನಪ್ರೀಯತೆಯನ್ನು ಪಡೆಯುತ್ತಿದೆ. ಬಿಡುಗಡೆಗೊಂಡ ಪ್ರಾರಂಭದಲ್ಲಿ ಎಕ್ಸ್ ಶೋರುಂ ಪ್ರಕಾರ ರೂ. 12.7 ಲಕ್ಷದ ಬೆಲೆಯನ್ನು ಪಡೆದುಕೊಂಡಿದ್ದ ಈ ಕಾರು ಇದೀಗ ಬೆಲೆಯಲ್ಲಿ ಏರಿಕೆಯನ್ನು ಕಂಡಿದೆ.
ಟಾಟಾ ಮೋಟಾರ್ಸ್ ಸಂಸ್ಥೆಯು ತಮ್ಮ ಹ್ಯಾರಿಯರ್ ಎಸ್ಯುವಿ ಕಾರಿನ ಬೆಲೆಯಲ್ಲಿ ಏರಿಕೆಯನ್ನು ಮಾಡಲಾಗಿದ್ದು, ಇದು ಬಿಡುಗಡೆಗೊಂಡಾಗಿನಿಂದಲೂ ಮೊದಲನೆಯ ಬಾರಿ ಈ ಕಾರಿನ ಬೆಲೆಯಲ್ಲಿ ಏರಿಕೆಯನ್ನು ಮಾಡಲಾಗಿದೆ. ಎಕ್ಸ್ ಶೋರುಂ ಪ್ರಕಾರ ರೂ. 12.7 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದ್ದ ಈ ಕಾರು ಇದೀಗ ಎಕ್ಸ್ ಶೋರುಂ ಪ್ರಕಾರ ರೂ. 13 ಲಕ್ಷದ ಪ್ರಾರಂಭಿಕ ಬೆಲೆಯನ್ನು ಪಡೆದುಕೊಂಡಿದೆ.
ರಶ್ಲೇನ್ ವರದಿ ಪ್ರಕಾರ ಟಾಟಾ ಹ್ಯಾರಿಯರ್ ಕಾರು ಒಟ್ಟು ನಾಲ್ಕು ವೇರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ಬೆಲೆ ಏರಿಕೆಯ ನಂತರ ಎಕ್ಸ್ಎಂ ವೇರಿಯೆಂಟ್ ಎಕ್ಸ್ ಶೋರುಂ ಪ್ರಕಾರ ರೂ. 14.06 ಲಕ್ಷ, ಎಕ್ಸ್ಟಿ ವೇರಿಯೆಂಟ್ ರೂ. 15.25 ಲಕ್ಷ ಹಾಗು ಟಾಪ್ ಎಂಡ್ ಮಾಡಲ್ ಆದ ಎಕ್ಸ್ಜೆಡ್ ವೇರಿಯೆಂಟ್ ರೂ. 16.56 ಲಕ್ಷದ ಬೆಲೆಯನ್ನು ಪಡೆದುಕೊಂಡಿದೆ.
ಸಧ್ಯ ಮಾರುಕಟ್ಟೆಗೆ ಇನ್ನು ಕೆಲವೇ ದಿನಗಳಲ್ಲಿ ಲಗ್ಗೆಯಿಡಲಿರುವ ಎಂಜಿ ಮೋಟಾರ್ನ ಮೊದಲ ಎಸ್ಯುವಿ ಹೆಕ್ಟರ್ ಕಾರು ಬಿಡುಗಡೆಯಾಗಲಿದ್ದು, ಈ ಕಾರಿನ ಬೆಲೆಗೆ ತಕ್ಕ ಹಾಗೆ ಇದಕ್ಕೆ ಎದುರಾಳಿಯಾಗಿ ಹ್ಯಾರಿಯರ್ ಕಾರಿನ ಬೆಲೆಯಲ್ಲಿ ಏರಿಕೆಯನ್ನು ಮಾಡಲಾಗಿದೆ. ಇನ್ನುಳಿದಂತೆ ಹ್ಯಾರಿಯರ್ ಕಾರು ಮಾರುಕಟ್ಟೆಯಲ್ಲಿರುವ ಜೀಪ್ ಕಂಪಾಸ್ ಮತ್ತು ಮಹೀಂದ್ರಾ ಎಕ್ಸ್ಯುವಿ500 ಕಾರುಗಳಿಗೆ ಪೈಪೋಟಿ ನೀಡುತ್ತಿದೆ.
ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.
ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿದೆ.
ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.
ಎಂಜಿನ್ ಸಾಮರ್ಥ್ಯ
ಹ್ಯಾರಿಯರ್ ಎಸ್ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ನೊಂದಿಗೆ 140-ಬಿಹೆಚ್ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.
ಜೆನಾನ್ ಪ್ರೊಜೆಕ್ಟರ್ ಹೆಡ್ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್, 60:40 ವಿಭಜಿತ ಸೀಟ್ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.
ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್ಬ್ಯಾಗ್ಗಳು, ಇಎಸ್ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.