Just In
- 50 min ago ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡುತ್ತವೆ!
- 2 hrs ago Hyundai: ಹಳೆಯ ಹ್ಯುಂಡೈ ಕ್ರೆಟಾವನ್ನು ಮರೆತುಬಿಡಿ... ಹೊಸ ಕ್ರೆಟಾ ಈಗ ಮತ್ತಷ್ಟು ಪ್ರೀಮಿಯಂ SUV
- 15 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 15 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
Don't Miss!
- News ಅಚ್ಚೇದಿನಗಳಲ್ಲ-ದೌರ್ಭಾಗ್ಯದ ದಿನಗಳು: ಕಾಂಗ್ರೆಸ್ ಜಾಹೀರಾತು
- Finance bangalore royal challengers ತಂಡದಿಂದ ನಗರದ ಎರಡು ಕೆರೆಗಳ ಪುನರುಜ್ಜೀವನ
- Movies ಪಶ್ಚಾತಾಪದ ಅಗ್ನಿಕುಂಡದಲ್ಲಿ ಪರಿಣಿತಿ ಚೋಪ್ರಾ ; ನನ್ನೆಲ್ಲ ಸೋಲುಗಳಿಗೆ ಆ ವ್ಯಕ್ತಿಗಳೇ ಕಾರಣ ಎಂದ ನಟಿ..!
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2019ರ ಐಪಿಎಲ್ ಫ್ಯಾನ್ ಕ್ಯಾಚ್ನಲ್ಲಿ ಗೆಲ್ಲಿರಿ ಟಾಟಾ ಹ್ಯಾರಿಯರ್
ಐಪಿಎಲ್ ಅಧಿಕೃತ ಪಾಲುದಾರ ಟಾಟಾ ಮೋಟಾರ್ಸ್ ತಾವು ಹೊಸದಾಗಿ ಬಿಡುಗಡೆಗೊಳಿಸಿದ ಟಾಟಾ ಹ್ಯಾರಿಯರ್ ಎಸ್ಯುವಿ ವಾಹನವನ್ನು 2019 ರ ಇಂಡಿಯನ್ ಪ್ರೀಮಿಯರ್ ಲೀಗ್ಗೆ ತಮ್ಮ ಪ್ರಮುಖ ಬ್ರಾಂಡ್ ಆಗಿ ಪ್ರಚಾರ ಮಾಡಲಿದ್ದಾರೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಸೋಮವಾರ (04-03-2019) ಪ್ರಕಟಿಸಿದೆ.
ನಾವು ಟಾಟಾ ಮೋಟಾರ್ಸ್ನೊಂದಿಗಿನ ನಮ್ಮ ಪಾಲುದಾರಿಕೆಯನ್ನು ಮುಂದುವರೆಸಲು ಮತ್ತು ಅವರು ಹೊಸದಾಗಿ ಬಿಡುಗಡೆ ಮಾಡಿದ ಹ್ಯಾರಿಯರ್ ಎಸ್ಯುವಿ, ಐಪಿಎಲ್ನ ಅಧಿಕೃತ ಪಾಲುದಾರರಾಗಿ 2019 ಅನ್ನು ಹೊಂದಲು ಉತ್ಸುಕರಾಗಿದ್ದೇವೆ. ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ನಟನಾ ಕಾರ್ಯದರ್ಶಿ ಅಮಿತಾಭ್ ಚೌಧರಿ ಹೇಳಿಕೊಂಡಿದ್ದಾರೆ.
ಇವುಗಳ ಜೊತೆಗೆ 2018ರ ಐಪಿಎಲ್ನಲ್ಲಿ ಫ್ಯಾನ್ ಕ್ಯಾಚ್ನ ಪ್ರಶಸ್ತಿಗಾಗಿ ಟಾಟಾ ನೆಕ್ಸಾನ್ ಕಾರನ್ನು ನೀಡಲಾಗಿತ್ತು, ಇದೀಗ ಅದರ ಸ್ಥಾನವನ್ನು ಟಾಟಾ ಹ್ಯಾರಿಯರ್ ಪಡೆದಿದ್ದು, ಒಬ್ಬ ಅದೃಷ್ಟ ಅಭಿಮಾನಿಯು ಈ ಬಾರಿ ಹ್ಯಾರಿಯರ್ ಕಾರನ್ನು ಗೆಲ್ಲುವ ಅವಕಾಶವನ್ನು ಬಿಸಿಸಿಐ ಮತ್ತು ಟಾಟಾ ಮೋಟಾರ್ಸ್ ನೀಡುತ್ತಿದೆ.
ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.
ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿದೆ.
ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.
ಹೀಗಾಗಿ ಗ್ರಾಹಕರ ಆಕರ್ಷಣೆ ಕಾರಣವಾಗಿರುವ ಹ್ಯಾರಿಯರ್ ಕಾರುಗಳು ಬಿಡುಗಡೆಯಾದ ಮೊದಲ 10 ದಿನಗಳಲ್ಲಿ 420 ಯುನಿಟ್ಗಳು ಮಾರಾಟಗೊಂಡಿದ್ದು, ಬೆಲೆ ಹೆಚ್ಚಳ ಎನ್ನಿಸಿದರೂ ಸಹ ಎಸ್ಯುವಿ ಪ್ರಿಯರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿವೆ.
ಇನ್ನು ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್ಟಿ ಮತ್ತು ಎಕ್ಸ್ಜೆಡ್ ಎಂಬ ನಾಲ್ಕು ವೇರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.12.69 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯ ಬೆಲೆಯನ್ನು ರೂ.16.25 ಲಕ್ಷಕ್ಕೆ ನಿಗದಿ ಮಾಡಲಾಗಿದೆ.
ಎಂಜಿನ್ ಸಾಮರ್ಥ್ಯ
ಹ್ಯಾರಿಯರ್ ಎಸ್ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ನೊಂದಿಗೆ 140-ಬಿಹೆಚ್ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.
ಜೆನಾನ್ ಪ್ರೊಜೆಕ್ಟರ್ ಹೆಡ್ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್, 60:40 ವಿಭಜಿತ ಸೀಟ್ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.
ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್ಬ್ಯಾಗ್ಗಳು, ಇಎಸ್ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.
ಒಟ್ಟಿನಲ್ಲಿ ಪ್ರೀಮಿಯಂ ಎಸ್ಯುವಿ ಕಾರುಗಳ ಸರಣಿಯಲ್ಲಿ ಟಾಟಾ ಹ್ಯಾರಿಯರ್ ಭಾರೀ ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಜೀಪ್ ಕಂಪಾಸ್, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್ಯುವಿ500 ಕಾರುಗಳಿಗೆ ಸಾಕಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.