ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಟಾಟಾ ಸಂಸ್ಥೆಯು ಸದ್ಯ ಹ್ಯಾರಿಯರ್ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಕೆಲವು ತಾಂತ್ರಿಕ ಬದಲಾವಣೆಗಳನ್ನು ತರುತ್ತಿದೆ. ಯಾವುದೇ ಹೆಚ್ಚುವರಿ ಶುಲ್ಕಗಳಲ್ಲಿದೆ ಅಪ್‌ಡೆಟ್‌ಗಾಗಿ ತನ್ನ ಗ್ರಾಹಕರನ್ನು ಆಹ್ವಾನಿಸಿದ್ದು, ಸಾಫ್ಟ್‌ವೇರ್ ಮತ್ತು ಇನ್ಪೋಟೈನ್‌ಮೆಂಟ್ ಸಿಸ್ಟಂನಲ್ಲಿ ಕೆಲವು ಹೊಸ ಬದಲಾವಣೆಗಳನ್ನು ಪರಿಚಯಿಸುತ್ತಿದೆ.

ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಹೌದು, ಟಾಟಾ ಸಂಸ್ಥೆಯು ಈಗಾಗಲೇ ಮಾರಾಟಗೊಂಡಿರುವ ಹ್ಯಾರಿಯರ್ ಕಾರುಗಳಲ್ಲಿನ ಕೆಲವು ತಾಂತ್ರಿಕ ಸೌಲಭ್ಯಗಳನ್ನು ಬದಲಾವಣೆಗೊಳಿಸಲು ಮುಂದಾಗಿದ್ದು, ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೇ ಕ್ಲಚ್ ಪೆಡಲ್‌ನ ರಿಟರ್ನ್ ಸ್ಪ್ರಿಂಗ್, ಟೈಲ್ ಗೇಟ್ ಸ್ವಿಚ್, ಕ್ಲಚ್ ಕಮ್‌ಪ್ರೆಶಿಂಗ್ ಸ್ಪ್ರಿಂಗ್, ಸಾಫ್ಟ್‌ವೇರ್ ಅಪ್‌ಡೆಟ್ ಮತ್ತು ಇನ್ಪೋಟೈನ್‌ಮೆಂಟ್ ಸಿಸ್ಟಂನಲ್ಲಿ ಕೆಲವು ಬದಲಾವಣೆ ತರಲು ಸಿದ್ದತೆ ನಡೆಸಿದೆ. ಈ ಸಂಬಂಧ ಈಗಾಗಲೇ ಹ್ಯಾರಿಯರ್ ಕಾರು ಮಾಲೀಕರಿಗೆ ಮಾಹಿತಿ ನೀಡಿರುವ ಟಾಟಾ ಸಂಸ್ಥೆಯು ನಿಗದಿತ ಅವಧಿಯಲ್ಲಿ ಕೆಲವು ತಾಂತ್ರಿಕ ಅಂಶಗಳನ್ನು ಉನ್ನತಿಕರಿಸಿ ಕೊಡಲಾಗುವುದೆಂದು ಹೇಳಿದೆ.

ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಇನ್ನು ಹ್ಯಾರಿಯರ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಕ್ಯಾಲಿಸ್ಟೋ ಕಾಪರ್, ಟೆರಿಮಿಸ್ಟೋ ಗೋಲ್ಡ್, ಏರಿಯಲ್ ಸಿಲ್ವರ್, ಟೆಲಿಸ್ಟೊ ಗ್ರೇ ಮತ್ತು ಅಕ್ರಾಸ್ ವೈಟ್ ಎಂಬ ಐದು ಮೊನೊ ಟೋನ್ ಬಣ್ಣಗಳಲ್ಲಿ ಲಭ್ಯವಿದ್ದು, ಹೊಸದಾಗಿ ಕ್ಯಾಲಿಸ್ಟೋ ಕಾಪರ್ ಜೊತೆ ಬ್ಲ್ಯಾಕ್ ರೂಫ್, ಅಕ್ರಾಸ್ ವೈಟ್ ಜೊತೆ ಏರಿಯಲ್ ಸಿಲ್ವರ್ ಮತ್ತು ಏರಿಯಲ್ ಸಿಲ್ವರ್ ಜೊತೆ ಬ್ಲ್ಯಾಕ್ ಸನ್ ರೂಫ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಟಾಟಾ ಸಂಸ್ಥೆಯು ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಕೇವಲ ಹ್ಯಾರಿಯರ್ ಎಂಡ್ ಮಾದರಿಯಾದ ಎಕ್ಸ್‌ಜೆಡ್ ಆವೃತ್ತಿಯಲ್ಲಿ ಮಾತ್ರವೇ ನೀಡಲಾಗಿದ್ದು, ಡ್ಯುಯಲ್ ಬಣ್ಣವನ್ನು ಹೊಂದಿರುವ ಮಾದರಿಯು ಸಾಮಾನ್ಯ ಎಕ್ಸ್‌ಜೆಡ್ ಆವೃತ್ತಿಗಿಂತ ಬೆಲೆಯಲ್ಲಿ ರೂ. 20 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಂಡಿರಲಿವೆ.

ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಸದ್ಯ ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಮುನ್ನುಗ್ಗುತ್ತಿರುವ ಟಾಟಾ ಹ್ಯಾರಿಯರ್ ಮಾದರಿಯು ಕಳೆದ ಜನವರಿಯಲ್ಲಿ ಬಿಡುಗಡೆಗೊಂಡ ತಿಂಗಳಿನಿಂದಲೂ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆಯನ್ನು ಕಾಯ್ದುಕೊಂಡು ಬಂದಿದೆ. ಇದೀಗ ಹೊಸ ಕಾರಿನಲ್ಲಿ ಡ್ಯುಯಲ್ ಟೋನ್ ಸನ್‌ರೂಫ್ ಜೊತೆಗೆ ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನು ಉನ್ನತಿಕರಿಸಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯಿಡ್ ಆಟೋ ಸೌಲಭ್ಯವು ಮತ್ತಷ್ಟು ಗ್ರಾಹಕರನ್ನು ಸೆಳೆಯುತ್ತಿದೆ.

ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಟಾಟಾ ಹ್ಯಾರಿಯರ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.13 ಲಕ್ಷದಿಂದ ಹೈ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಹೊಂದಿದೆ. ಜೊತೆಗೆ ಡ್ಯುಯಲ್ ಟೋನ್ ಖರೀದಿ ಮಾಡಿದ್ದಲ್ಲಿ ಹೆಚ್ಚುವರಿಯಾಗಿ ರೂ.20 ಸಾವಿರ ಪಾವತಿ ಮಾಡಬೇಕಾಗುತ್ತೆ.

ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಹ್ಯಾರಿಯರ್ ಅಪ್‌ಡೆಟ್‌ಗಾಗಿ ಗ್ರಾಹಕರನ್ನು ಆಹ್ವಾನಿಸಿದ ಟಾಟಾ ಮೋಟಾರ್ಸ್

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

Article Published On: Thursday, July 11, 2019, 15:23 [IST]
English summary
Tata Motors Offering Updates To The Harrier — Free Of Cost To The Customers. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+