Just In
- 30 min ago ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- 1 hr ago ಭೂಮಿಯ ಸ್ವರ್ಗ: 1.50 ಕೋಟಿಯ ಟೊಯೊಟಾ ವೆಲ್ಫೈರ್ಗೆ ಮನಸೋತ ಖ್ಯಾತ ನಟ.. ಈ ಕಾರಿನಲ್ಲಿ ಏನಿದೆ?
- 1 hr ago ಬರಲಿದೆ ಮತ್ತೊಂದು ಫ್ಯಾಮಿಲಿ ಎಲೆಕ್ಟ್ರಿಕ್ ಸ್ಕೂಟರ್: ಕಡಿಮೆ ಖರ್ಚಿನಲ್ಲಿ ಓಡಾಡಬಹುದು!
- 2 hrs ago ಮಾರುತಿ ಸ್ವಿಫ್ಟ್ ಖರೀದಿಸುತ್ತಿದ್ದೀರಾ? ಸ್ವಲ್ಪ ಕಾಯಿರಿ... ಹೊಸ ಸ್ವಿಫ್ಟ್ ಬರುತ್ತಿದೆ! 35 ಕಿ.ಮೀ ಮೈಲೇಜ್
Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Movies "ಸದಾ ನನ್ನ ಹಿಂಭಾಗವನ್ನೇ ಜೂಮ್ ಮಾಡ್ತಾರೆ"; ನೋರಾ ಫತೇಹಿ ಆಕ್ರೋಶ
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್ ಕಾರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್..!
ಟಾಟಾ ಸಂಸ್ಥೆಯು ಕಳೆದ ಜನವರಿಯಲ್ಲಿ ತನ್ನ ಬಹುನೀರಿಕ್ಷಿತ ಹ್ಯಾರಿಯರ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಬಿಡುಗಡೆ ಮಾಡಿದ್ದು, ಕಾರಿನ ವಿನ್ಯಾಸ ಮತ್ತು ಅತ್ಯುತ್ತಮ ಎಂಜಿನ್ ಆಯ್ಕೆಯಿಂದಾಗಿ ಹೊಸ ಕಾರು ಖರೀದಿಗೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಠಿಯಾಗಿದೆ.
ಟಾಟಾ ಸಂಸ್ಥೆಯು ಗ್ರಾಹಕರ ನೀರಿಕ್ಷೆಯೆಂತೆ ಹ್ಯಾರಿಯರ್ ಕಾರಿನಲ್ಲಿ ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಒದಗಿಸಿದ್ದು, ಇದುವರೆಗೆ ಸುಮಾರು 14 ಸಾವಿರಕ್ಕೂ ಹೆಚ್ಚು ಗ್ರಾಹಕರು ಹೊಸ ಕಾರು ಖರೀದಿಗಾಗಿ ಬುಕ್ಕಿಂಗ್ ಮಾಡಿದ್ದಾರೆ. ಹೀಗಾಗಿ ಬೇಡಿಕೆ ತಕ್ಕಂತೆ ಉತ್ಪಾದನೆ ಸಾಧ್ಯವಾಗದ ಹಿನ್ನಲೆಯಲ್ಲಿ ಬುಕ್ಕಿಂಗ್ ನಂತರ ಹೊಸ ಕಾರು ಪಡೆದುಕೊಳ್ಳಲು ಗ್ರಾಹಕರು ಕನಿಷ್ಠ 4 ತಿಂಗಳ ಕಾಲ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ.
ಇನ್ನು ಇಂಪ್ಯಾಕ್ಟ್ ಡಿಸೈನ್ 2.0 ತಂತ್ರಜ್ಞಾನ ಆಧಾರದ ಮೇಲೆ ಹ್ಯಾರಿಯರ್ ಕಾರುಗಳನ್ನು ನಿರ್ಮಾಣ ಮಾಡಲಾಗಿದ್ದು, ಹೊಸ ಕಾರುಗಳಲ್ಲಿ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್ (OMEGA)" ಆರ್ಕಿಟೆಕ್ಚರ್ ಬಳಕೆ ಮಾಡಿರುವುದೇ ಹೊಸ ಕಾರಿನ ವಿನ್ಯಾಸಕ್ಕೆ ಮೆರಗು ತಂದಿವೆ.
ಇಲ್ಲಿ ಇನ್ನೊಂದು ವಿಶೇಷ ಅಂದ್ರೆ, ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಜೊತೆ ಕೈಜೋಡಿಸಿರುವ ಜೆಎಲ್ಆರ್ ಕೂಡಾ "ಅಪ್ಟಿಮಲ್ ಮಾಡ್ಯೂಲರ್ ಎಫಿಷಿಯೆಂಟ್ ಗ್ಲೋಬಲ್ ಅಡ್ವಾನ್ಸ್" ಆರ್ಕಿಟೆಕ್ಚರ್ ತಂತ್ರವನ್ನೇ ಬಳಕೆ ಮಾಡುತ್ತಿದ್ದು, ಇದೇ ಕಾರಣಕ್ಕೆ ಟಾಟಾ ಕಾರುಗಳಲ್ಲೂ ಜೆಎಲ್ಆರ್ ಹೊಸ ಪ್ರಯೋಗ ಮಾಡಿರುವುದು ಹ್ಯಾರಿಯರ್ ವಿನ್ಯಾಸಕ್ಕೆ ಐಷಾರಾಮಿ ಕಳೆ ಬಂದಿದೆ.
ಹೊಸ ಡಿಸೈನ್ ತಂತ್ರಜ್ಞಾನದಿಂದಾಗಿ ಕಾರು ಸಾಕಷ್ಟು ಸ್ಟೈಲಿಷ್ ಆಗಿ ಕಾಣುವಂತಾಗಿದ್ದು, ಕಾರಿನ ಮುಂಭಾಗದಲ್ಲಿ ಹನಿಕೊಂಬ್ ಗ್ರೀಲ್ ಮತ್ತು ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಪಾಲಿಜೊನಲ್ ಮಾದರಿಯ ಎಲ್ಇಡಿ ಲೈಟ್ಸ್ ಮಾದರಿಯು ಕಾರಿಗೆ ಸ್ಪೋರ್ಟಿ ಲುಕ್ ನೀಡಿವೆ.
ಸದ್ಯ ಟಾಟಾ ಹ್ಯಾರಿಯರ್ ಕಾರುಗಳು ಎಕ್ಸ್ಇ, ಎಕ್ಸ್ಎಂ, ಎಕ್ಸ್ಟಿ ಮತ್ತು ಎಕ್ಸ್ಜೆಡ್ ಎಂಬ ನಾಲ್ಕು ವೇರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.12.69 ಲಕ್ಷಕ್ಕೆ ಮತ್ತು ಹೈ ಎಂಡ್ ಮಾದರಿಯ ಬೆಲೆಯನ್ನು ರೂ.16.25 ಲಕ್ಷಕ್ಕೆ ನಿಗದಿ ಮಾಡಲಾಗಿದೆ.
ಎಂಜಿನ್ ಸಾಮರ್ಥ್ಯ
ಹ್ಯಾರಿಯರ್ ಎಸ್ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ನೊಂದಿಗೆ 140-ಬಿಹೆಚ್ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.
MOST READ: ನೋ ಪಾರ್ಕಿಂಗ್ನಲ್ಲಿದ್ದ ಹೋಂಡಾ ಡಿಯೋ ಸ್ಕೂಟರ್ ಪೀಸ್ ಪೀಸ್ ಮಾಡಿದ ಪೊಲೀಸ್..!
ಜೆನಾನ್ ಪ್ರೊಜೆಕ್ಟರ್ ಹೆಡ್ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್, 60:40 ವಿಭಜಿತ ಸೀಟ್ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.
ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್ಬ್ಯಾಗ್ಗಳು, ಇಎಸ್ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.
MOST READ: ರೂ.10 ಲಕ್ಷದೊಳಗೆ ಬಿಡುಗಡೆಯಾಗಲಿದೆ ಜೀಪ್ ರೆನೆಗೆಡ್ ಕಂಪ್ಯಾಕ್ಟ್ ಎಸ್ಯುವಿ!
ಒಟ್ಟಿನಲ್ಲಿ ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಕಾರುಗಳ ಸರಣಿಯಲ್ಲಿ ಟಾಟಾ ಹ್ಯಾರಿಯರ್ ನೀರಿಕ್ಷೆಗೂ ಮೀರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ನೀರಿಕ್ಷೆಯಲ್ಲಿರುವ ಪೆಟ್ರೋಲ್ ವರ್ಷನ್ ಒಂದು ಬಂದಲ್ಲಿ ಮತ್ತಷ್ಟು ಬೇಡಿಕೆಯೊಂದಿಗೆ ಜೀಪ್ ಕಂಪಾಸ್, ಹ್ಯುಂಡೈ ಕ್ರೆಟಾ ಮತ್ತು ಮಹೀಂದ್ರಾ ಎಕ್ಸ್ಯುವಿ500 ಕಾರುಗಳಿಗೂ ಸಾಕಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.