ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಟಾಟಾ ಸಂಸ್ಥೆಯು ಸದ್ಯ ಹ್ಯಾರಿಯರ್ ಎಸ್‌ಯುವಿ ಕಾರು ಮಾರಾಟದಲ್ಲಿ ಉತ್ತಮ ಮುನ್ನಡೆ ಸಾಧಿಸುತ್ತಿದ್ದು, ಹ್ಯಾರಿಯರ್ ಬಿಡುಗಡೆಯಾದ 6 ತಿಂಗಳ ನಂತರ ಮೊದಲ ಬಾರಿಗೆ ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರಿನಲ್ಲಿ ಕೆಲವು ಬದಲಾವಣೆಗಳನ್ನು ಪರಿಚಯಿಸಲಾಗಿದೆ. ಹ್ಯಾರಿಯರ್ ಕಾರಿನಲ್ಲಿ ಇದೇ ಮೊದಲು ಡ್ಯುಯಲ್ ಟೋನ್ ಆಯ್ಕೆಯೊಂದಿಗೆ ಪ್ಯಾನರೊಮಿಕ್ ಸನ್‌ರೂಫ್ ಆಯ್ಕೆಯನ್ನು ನೀಡಲಾಗಿದ್ದು, ಎಂಜಿ ಹೆಕ್ಟರ್ ಕಾರಿಗೆ ಪೈಪೋಟಿ ನೀಡುವ ತವಕದಲ್ಲದೆ.

ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಟಾಟಾ ಹ್ಯಾರಿಯರ್‌ಗೆ ಪೈಪೋಟಿಯಾಗಿ ಎಂಜಿ ಹೆಕ್ಟರ್ ಕಾರು ಬಿಡುಗಡೆಯಾಗಿದ್ದು, ಬೆಲೆಗಳಲ್ಲಿ ಹ್ಯಾರಿಯರ್‌ಗೆ ಸಮನಾಗಿರುವ ಹೆಕ್ಟರ್ ಕಾರು ಹಲವು ಹೊಸ ತಾಂತ್ರಿಕ ಸೌಲಭ್ಯಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ. ಇದರಿಂದ ಎಚ್ಚೆತ್ತುಕೊಂಡಿರುವ ಟಾಟಾ ಸಂಸ್ಥೆಯು ಗ್ರಾಹಕರ ಬೇಡಿಕೆಯೆಂತೆ ಹ್ಯಾರಿಯರ್ ಆವೃತ್ತಿಯನ್ನು ಉನ್ನತಿಕರಣಗೊಳಿಸಿದ್ದು, ಡ್ಯುಯಲ್ ಟೋನ್ ಬಣ್ಣದ ಜೊತೆಗೆ ಪ್ಯಾನರೊಮಿಕ್ ಸನ್‌ರೂಫ್ ಸೇರಿದಂತೆ ಆ್ಯಪಲ್ ಕಾರ್ ಪ್ಲೇ ಮತ್ತು ಆಂಡ್ರಾಯಿಡ್ ಆಟೋ ಸೌಲಭ್ಯಗಳನ್ನು ಸಹ ಕಡ್ಡಾಯವಾಗಿ ನೀಡುತ್ತಿದೆ.

ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಹ್ಯಾರಿಯರ್ ಕಾರು ಪ್ರಸ್ತುತ ಮಾರುಕಟ್ಟೆಯಲ್ಲಿ ಕ್ಯಾಲಿಸ್ಟೋ ಕಾಪರ್, ಟೆರಿಮಿಸ್ಟೋ ಗೋಲ್ಡ್, ಏರಿಯಲ್ ಸಿಲ್ವರ್, ಟೆಲಿಸ್ಟೊ ಗ್ರೇ ಮತ್ತು ಅಕ್ರಾಸ್ ವೈಟ್ ಎಂಬ ಐದು ಮೊನೊ ಟೋನ್ ಬಣ್ಣಗಳಲ್ಲಿ ಲಭ್ಯವಿದ್ದು, ಹೊಸದಾಗಿ ಕ್ಯಾಲಿಸ್ಟೋ ಕಾಪರ್ ಜೊತೆ ಬ್ಲ್ಯಾಕ್ ರೂಫ್, ಅಕ್ರಾಸ್ ವೈಟ್ ಜೊತೆ ಏರಿಯಲ್ ಸಿಲ್ವರ್, ಏರಿಯಲ್ ಸಿಲ್ವರ್ ಜೊತೆ ಬ್ಲ್ಯಾಕ್ ಡ್ಯುಯಲ್ ಟೋನ್ ಮತ್ತು ಪ್ಯಾನರೊಮಿಕ್ ಸನ್‌ರೂಫ್ ಆಯ್ಕೆಗಳನ್ನು ಪಡೆದುಕೊಂಡಿದೆ.

ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಟಾಟಾ ಸಂಸ್ಥೆಯು ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಕೇವಲ ಹ್ಯಾರಿಯರ್ ಟಾಪ್ ಎಂಡ್ ಮಾದರಿಯಾದ ಎಕ್ಸ್‌ಜೆಡ್ ಆವೃತ್ತಿಯಲ್ಲಿ ಮಾತ್ರವೇ ನೀಡಲಾಗಿದ್ದು, ಡ್ಯುಯಲ್ ಟೋನಿ ಬಣ್ಣವನ್ನು ಹೊಂದಿರುವ ಮಾದರಿಯು ಸಾಮಾನ್ಯ ಎಕ್ಸ್‌ಜೆಡ್ ಆವೃತ್ತಿಗಿಂತ ಬೆಲೆಯಲ್ಲಿ ರೂ. 20 ಸಾವಿರ ಹೆಚ್ಚುವರಿ ಬೆಲೆ ಪಡೆದುಕೊಂಡಿರಲಿವೆ. ಜೊತೆಗೆ ಪ್ಯಾನರೊಮಿಕ್ ಸನ್‌ರೂಫ್ ಸೌಲಭ್ಯವು ಕೂಡಾ ಗ್ರಾಹಕರ ಬೇಡಿಕೆ ಮೇರೆಗೆ ಮಾತ್ರವೇ ಜೋಡಣೆ ಮಾಡಲಾಗುತ್ತಿದ್ದು, ಇದಕ್ಕೂ ಕೂಡಾ ಹೆಚ್ಚುವರಿ ಹಣ ಪಾವತಿಸಬೇಕಾಗುತ್ತದೆ.

ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಇನ್ನು ಮಧ್ಯಮ ಗಾತ್ರದ ಎಸ್‌ಯುವಿ ಕಾರು ಮಾರಾಟದಲ್ಲಿ ಮುನ್ನುಗ್ಗುತ್ತಿರುವ ಟಾಟಾ ಹ್ಯಾರಿಯರ್ ಮಾದರಿಯು ಕಳೆದ ಜನವರಿಯಲ್ಲಿ ಬಿಡುಗಡೆಗೊಂಡ ತಿಂಗಳಿನಿಂದಲೂ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆಯನ್ನು ಕಾಯ್ದುಕೊಂಡು ಬಂದಿದೆ. ಇದೀಗ ಹೊಸ ಕಾರಿನಲ್ಲಿ ಡ್ಯುಯಲ್ ಟೋನ್ ಸನ್‌ರೂಫ್ ಜೊತೆಗೆ ಆ್ಯಪಲ್ ಕಾರ್ ಪ್ಲೇ ಸೌಲಭ್ಯವನ್ನು ಉನ್ನತಿಕರಿಸಲಾಗಿದ್ದು, ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಜೊತೆಗೆ ಆಂಡ್ರಾಯಿಡ್ ಆಟೋ ಸೌಲಭ್ಯವು ಮತ್ತಷ್ಟು ಗ್ರಾಹಕರನ್ನು ಸೆಳೆಯಲಿದೆ.

ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಹೋಂಡಾ ಸಿಟಿ ಮತ್ತು ಮಾರುತಿ ಸುಜುಕಿ ಸಿಯಾಜ್‌ಗೆ ಟಕ್ಕರ್ ನೀಡುತ್ತಿರುವ ಟೊಯೊಟಾ ಯಾರಿಸ್ ಖರೀದಿಗೆ ಈಗಲೇ ಟೆಸ್ಟ್ ಡ್ರೈವ್ ಮಾಡಿ..!

ಟಾಟಾ ಹ್ಯಾರಿಯರ್ ಕಾರುಗಳು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೇರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವೇರಿಯೆಂಟ್‍ಗಳಿಗೆ ಅನುಗುಣವಾಗಿ ಕಾರಿನ ಬೆಲೆಗಳು ಆರಂಭಿಕವಾಗಿ ರೂ.13 ಲಕ್ಷದಿಂದ ಹೈ ಎಂಡ್ ಮಾದರಿಯು ರೂ.16.56 ಲಕ್ಷ ಬೆಲೆ ಹೊಂದಿದೆ. ಜೊತೆಗೆ ಡ್ಯುಯಲ್ ಟೋನ್ ಖರೀದಿ ಮಾಡಿದ್ದಲ್ಲಿ ಹೆಚ್ಚುವರಿಯಾಗಿ ರೂ.20 ಸಾವಿರ ಪಾವತಿ ಮಾಡಬೇಕಾಗುತ್ತೆ.

ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಎಂಜಿನ್ ಸಾಮರ್ಥ್ಯ

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(2 ಸಾವಿರ ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಶಕ್ತಿಯನ್ನು ಉತ್ಪಾದಿಸುವ ಶಕ್ತಿಯೊಂದಿಗೆ ಪರ್ಫಾಮೆನ್ಸ್ ಪ್ರಿಯರ ಗಮನಸೆಳೆಯುತ್ತವೆ.

ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಜೆನಾನ್ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್ಸ್, ಫ್ರಂಟ್ ಫಾಗ್ ಲ್ಯಾಂಪ್ಸ್ ಮತ್ತು ಕಾರ್ನರಿಂಗ್ ಲೈಟ್ಸ್, ಶಾರ್ಕ್ ಫಿನ್ ಆ್ಯಂಟೆನಾ, 7 ಇಂಚಿನ ಡಿಜಿಟಲ್ ಇನ್ಸ್ಟ್ರೂಮೆಂಟ್ ಕ್ಲಸ್ಟರ್, 8.8 ಇಂಚಿನ ಟಚ್‍ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಂ, 9 ಜೆಬಿಎಲ್ ಸ್ಪೀಕರ್ಸ್‍, 60:40 ವಿಭಜಿತ ಸೀಟ್‍ಗಳು ಮತ್ತು ನಾರ್ಮಲ್, ವೆಟ್ ಮತ್ತು ರಫ್ ಎಂಬ ಮೂರು ಟೆರೈನ್ ರೆಸ್ಪಾನ್ಸ್ ಮೊಡ್ಸ್ ಸೌಲಭ್ಯವಿದೆ.

ಟಾಟಾ ಹ್ಯಾರಿಯರ್‌ನಲ್ಲಿ ಮೊದಲ ಬಾರಿಗೆ ಪ್ಯಾನರೊಮಿಕ್ ಸನ್‌ರೂಫ್ ಬಳಕೆ

ಹಾಗೆಯೇ ಸುರಕ್ಷತೆಗಾಗಿ ಹೆಚ್ಚಿನ ಆಯ್ಕೆಗಳಿದ್ದು, ಆರು ಏರ್‍‍ಬ್ಯಾಗ್‍ಗಳು, ಇಎಸ್‍ಪಿ ಮತ್ತು ಐಎಸ್ಒ ಚೈಲ್ಡ್ ಸೀಟ್ ಮೌಂಟ್ಸ್, ಹಿಲ್-ಹೋಲ್ಡ್, ಹಿಲ್ ಡಿಸ್ಸೆಂಟ್ ರೋಲ್-ಓವರ್, ಕಾರ್ನರಿಂಗ್ ಸ್ಟ್ಯಾಬಿಲಿಟಿ ಕಂಟ್ರೋಲ್ ಟ್ರಾಕ್ಷನ್, ಕಂಟ್ರೋಲ್ ಹೈಡ್ರಾಲಿಕ್ ಬ್ರೇಕ್ ಅಸ್ಸಿಸ್ಟ್ ಪಡೆದುಕೊಂಡಿದೆ.

Most Read Articles

Kannada
English summary
Tata Introduces Panoramic Sunroof For The Harrier — Official After Market Accessory.
Story first published: Tuesday, July 30, 2019, 14:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X