Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಯ ಸನಿಹದಲ್ಲಿರುವ ಟಾಟಾ ಆಲ್‌ಟ್ರೋಜ್ ಸದ್ದು ಜೋರು..!
ಟಾಟಾ ಮೋಟಾರ್ಸ್ ವಿನೂತನ ವಿನ್ಯಾಸದ ಆಲ್‌ಟ್ರೋಜ್ ಕಾರು ಸದ್ಯ ಭಾರತೀಯ ಆಟೋ ಉದ್ಯಮದ ಪ್ರಮುಖ ಆಕರ್ಷಣೆಯಾಗಿದ್ದು, ಬಿಡುಗಡೆಯ ಉದ್ದೇಶದಿಂದ ದೇಶದ ವಿವಿಧಡೆ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ. ಎಂಜಿನ್ ಕಾರ್ಯಕ್ಷಮತೆಯಲ್ಲಿ ಹ್ಯಾಚ್‌ಬ್ಯಾಕ್ ಕಾರು ಮಾಲೀಕರ ಆಕರ್ಷಣೆಗೆ ಕಾರಣವಾಗಿರುವ ಹೊಸ ಕಾರಿನ ಟೀಸರ್ ಇದೀಗ ಬಿಡುಗಡೆಯಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಅಧಿಕೃತವಾಗಿ ಬಿಡುಗಡೆಯ ಸುಳಿವು ನೀಡಿದೆ.

ವಿನೂತನ ವಿನ್ಯಾಸದ ಹ್ಯಾರಿಯರ್ ಎಸ್‌ಯುವಿ ಬಿಡುಗಡೆಯ ಯಶಸ್ವಿ ನಂತರ ಭವಿಷ್ಯದಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳ ಉತ್ಪಾದನೆಯಲ್ಲಿ ಮಹತ್ವದ ಹೆಜ್ಜೆಯಿಡುತ್ತಿರುವ ಟಾಟಾ ಸಂಸ್ಥೆಯು ಭಾರತೀಯ ಆಟೋ ಉದ್ಯಮದಲ್ಲಿ ಭಾರೀ ಬದಲಾವಣೆಗೆ ಮುಂದಾಗಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಕಾರನ್ನು ಸಹ ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆಗೆ ಪರಿಚಯಿಸುವ ಇರಾದೆಯಲ್ಲಿದೆ.

ಆಲ್ಬಾಟ್ರೊಸ್ ಎನ್ನುವ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್‌ಟ್ರೊಜ್ ಕಾರನ್ನು ನಿರ್ಮಾಣ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಮಾರುಕಟ್ಟೆಗೆ ಪ್ರವೇಶ ಪಡೆಯುವುದು ಬಹುತೇಕ ಖಚಿತವಾಗಿದೆ.

ಆಲ್‌ಟ್ರೊಜ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಎರಡು ಎಂಜಿನ್ ಆಯ್ಕೆಗಳು ಇರಲಿದ್ದು, ಡೀಸೆಲ್ ಆವೃತ್ತಿಯಲ್ಲಿ ಒಂದು ಆಯ್ಕೆ ಮಾತ್ರ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಮತ್ತು 1.5-ಲೀಟರ್ ಎಂಜಿನ್ ಮಾದರಿಗಳು ಅಭಿವೃದ್ಧಿಯಾಗುತ್ತಿದ್ದು, ಡೀಸೆಲ್ ಮಾದರಿಯಲ್ಲಿ 1.5-ಲೀಟರ್ ಎಂಜಿನ್ ಲಭ್ಯವಾಗಲಿದೆ.

ಪೆಟ್ರೋಲ್ ಆವೃತ್ತಿಗಾಗಿ ಆಯ್ಕೆ ಮಾಡಲಾಗಿರುವ 1.2-ಲೀಟರ್ ಎಂಜಿನ್ ಮಾದರಿಯನ್ನು ಟಿಯಾಗೋದಿಂದ ಎರವಲು ಪಡೆದಿದ್ದಲ್ಲಿ 1.5-ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಮಾದರಿಗಳನ್ನು ನೆಕ್ಸಾನ್ ಎಸ್‌ಯುವಿಯಿಂದ ಎರವಲು ಪಡೆದಿರುವ ಟಾಟಾ ಸಂಸ್ಥೆಯು ಎಂಜಿನ್ ಪರ್ಫಾಮೆನ್ಸ್‌ನಲ್ಲಿ ಕೆಲವು ಗಮನಸೆಳೆಯಬಹುದಾದ ಬದಲಾವಣೆಗಳನ್ನು ಮಾಡಿದೆ. ಪ್ರಮುಖ ವಿಚಾರ ಅಂದ್ರೆ ಹೊಸ ಆಲ್‌ಟ್ರೊಜ್ ಕಾರನ್ನು ಸಹ ಇಂಪ್ಯಾಕ್ಟ್ ಡಿಸೈನ್ 2.0 ಅಡ್ವಾನ್ಸ್ ಆಕ್ಟಿಟೆಕ್ಕರ್ ವಿನ್ಯಾಸದೊಂದಿಗೆ ಅಭಿವೃದ್ಧಿಗೊಳಿಸಲಾಗಿದೆ.

ಇದು ಕಾರಿನ ತೂಕವನ್ನು ಕಡಿತಗೊಳಿಸುವಲ್ಲಿ ಸಾಕಷ್ಟು ನೆರವಾಗಿದ್ದು, ಇದು ನೇರವಾಗಿ ಕಾರಿನ ಎಂಜಿನ್ ಪರ್ಫಾಮೆನ್ಸ್ ಪರಿಣಾಮ ಬೀರುವುದಲ್ಲದೇ ಮೈಲೇಜ್ ಪ್ರಮಾಣ ಕೂಡಾ ಹೆಚ್ಚಳವಾಗಿರುವುದು ಸ್ಪಾಟ್ ಟೆಸ್ಟಿಂಗ್ ವೇಳೆ ಖಚಿತವಾಗಿದೆ.

ಆದ್ರೆ ಕಾರಿನ ಒಳವಿನ್ಯಾಸಗಳ ಬಗ್ಗೆ ಯಾವುದೇ ತಾಂತ್ರಿಕ ಮಾಹಿತಿಗಳನ್ನು ಬಿಟ್ಟುಕೊಡದ ಟಾಟಾ ಮೋಟಾರ್ಸ್ ಸಂಸ್ಥೆಯು ಇದೇ ವರ್ಷ ಅಗಸ್ಟ್ ಅಥವಾ ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಗೊಳಿಸುವ ಸುಳಿವು ನೀಡಿದ್ದು, ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5 ಲಕ್ಷದಿಂದ ರೂ.7 ಲಕ್ಷ ಮತ್ತು ಆಲ್‌ಟ್ರೊಜ್ ಎಲೆಕ್ಟ್ರಿಕ್ ವರ್ಷನ್ ಕಾರಿನ ಬೆಲೆಯು ರೂ.10 ಲಕ್ಷದೊಳಗೆ ಬೆಲೆ ನಿಗದಿಯಾಗಬಹುದು ಅಂದಾಜಿಸಲಾಗಿದೆ.
MOST READ: ನಿಮ್ಮ ವಾಹನಗಳ ಮೈಲೇಜ್ ಕಡಿತವಾಗುತ್ತಿರುವುದಕ್ಕೆ ಅಸಲಿ ಕಾರಣ ಏನು ಗೊತ್ತಾ?

ಇದರೊಂದಿಗೆ ಟಾಟಾ ಸಂಸ್ಥೆಯು ಹೊಸ ಆಲ್‌ಟ್ರೋಜ್ ಕಾರುನ್ನು ಸಹ ಈ ಹಿಂದಿನ ನೆಕ್ಸಾನ್ ಮತ್ತು ಹ್ಯಾರಿಯರ್ ಮಾದರಿಯಲ್ಲೇ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದ್ದು, ಪ್ರಯಾಣಿಕರ ಸುರಕ್ಷತೆಯಲ್ಲಿ 5 ಸ್ಟಾರ್ ರೇಟಿಂಗ್ ಒದಗಿಸುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದೆ. ಇದರಿಂದ ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಎನ್ನಿಸಲಿರುವ ಹೊಸ ಆಲ್‌ಟ್ರೋಜ್ ಕಾರು ಹ್ಯುಂಡೈ ಐ20 ಮತ್ತು ಮಾರುತಿ ಬಲೆನೊ ಕಾರುಗಳಿಗೆ ಟಕ್ಕರ್ ನೀಡಲಿದೆ.