ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಜಿನೆವಾ: ಕೆಲವು ದಿನಗಳ ಹಿಂದಷ್ಟೆ ಕ್ರ್ಯಾಶ್ ಟೆಸ್ಟಿಂಗ್‍ನಲ್ಲಿ ಟಾಟಾ ಮೋಟಾರ್ಸ್ ಸಂಸ್ಥೆಯ ನೆಕ್ಸಾನ್ ಕಾರು ಒಟ್ಟು 5ಕ್ಕೆ 5 ಅಂಕಗಳನ್ನು ಪಡೆದುಕೊಂಡಿದ್ದು, ಕ್ರ್ಯಾಶ್ ಟೆಸ್ಟಿಂಗ್‍ನಲ್ಲಿ ಕಂಪ್ಲೀಟ್ ಅಂಕಗಳನ್ನು ಪಡೆದ ಮೊದಲ ಭಾರಾತದ ಸೇಫೆಸ್ಟ್ ಕಾರು ಎಂಬ ಹೆಗ್ಗಳಿಕೆ ಪಾತ್ರವಾಗಿದೆ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಈ ನಿಟ್ಟಿನಲ್ಲಿ ಸಧ್ಯ ಜಿನೆವಾನಲ್ಲಿ ನಡೆಯುತ್ತಿರುವ 2019ರ ಜೆನೆವಾ ಮೋಟಾರ್ ಶೋನಲ್ಲಿ ತಮ್ಮ ಅಲ್‍ಟ್ರೋಜ್ ಪ್ರೀಮಿಯಂ ಹ್ಯಾಚ್‍ಬ್ಯಾಕ್, ಅಲ್‍ಟ್ರೋಜ್ ಎಲೆಕ್ಟ್ರಿಕ್ ಕಾರು, ಹೆಚ್2ಎಕ್ಸ್ (ಹಾರ್ನ್‍ಬಿಲ್) ಮತ್ತು ಹೆಚ್7ಎಕ್ಸ್ (ಬುಜ್ಜಾರ್ಡ್) ಎಂಬ ಕಾರುಗಳನ್ನು ಅನಾವರಣಗೊಳಿಸಿದ್ದು, ಇದರ ಜೊತೆಗೆ ಈ ಕಾರುಗಳಲ್ಲಿ ಪ್ರಯಾಣಿಕರ ಸುರಕ್ಷತೆಯ ಅನುಸಾರ ಹಲವಾರು ಸೇಫ್ಟಿ ಫೀಚರ್‍‍ಗಳನ್ನು ಅಳವಡಿಸಿ ಸೇಫ್ಟಿಯಲ್ಲಿ 5 ಸ್ಟಾರ್ ರೇಟಿಂಗ್ ಪಡೆಯುವ ಹಾಗೆ ಉತ್ಪನ್ನ ಮಾಡುತ್ತೇವೆ ಎಂದು ಟಾಟಾ ಮೋಟಾರ್ಸ್ ಹೇಳಿಕೊಂಡಿದೆ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಕಳೆದ ಮೂರು ವರ್ಷದಿಂದ ಮಾರಾಟದಲ್ಲಿ ಅಧಿಕ ಸಂಖ್ಯೆಯನ್ನು ಕಾಣುತ್ತಿರುವ ಟಾಟಾ ಮೋಟಾರ್ಸ್ ಭಾರತದಲ್ಲಿ ಶೇಕಡ 7ರಷ್ಟು ಪಾಲುದಾರೆಕಯನ್ನು ಹೊಂದಿದೆ. ಟಾಟಾ ಮೋಟಾರ್ಸ್ ಸಂಸ್ಥೆಯು ಮುಂದಿನ 3 ರಿಂದ 5ವರ್ಷಗಳೊಳಗೆ ತಮ್ಮದೇ ಸಂಸ್ಥೆಯ 'ಆಲ್ಫಾ' ಮತ್ತು 'ಒಮೊಗಾ' ಪ್ಲಾಟ್‍ಪಾರ್ಮ್‍ನ ಅಡಿಯಲ್ಲಿ ವಾಹನಗಳನ್ನು ಬಿಡುಗಡೆಗೊಳಿಸುವುದಾಗಿ ಸಹ ಹೇಳಿಕೊಂಡಿದೆ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಹೇಳಬೇಕೆಂದರೆ ಪ್ರತೀ ವರ್ಷಕ್ಕೆ ರಸ್ತೆ ಅಪಘಾತದಲ್ಲಿ ಸುಮಾರು 1.5 ಲಕ್ಷ ಮಂದಿ ಬಲಿಯಾಗುತ್ತಿದ್ದು, ಇವುಗಳು ವಾಹನ ತಯಾರಕ ಸಂಸ್ಥೆಗಳು ನಿರ್ಮಾಣ ಮಾಡುತ್ತಿರುವ ವಾಹನಗಳ ಗುಣಮಟ್ಟವನ್ನು ನಿರೂಪಿಸುತ್ತಿದೆ. ಈ ನಿಟ್ಟಿನಲ್ಲಿಯೆ ಹಲವಾರು ಮಾರುತಿ ಸುಜುಕಿ ಸಂಸ್ಥೆಯ ಕಾರುಗಳು ಕ್ರ್ಯಾಶ್ ಟೆಸ್ಟಿಂಗ್ ವೇಳೆ ಕಳಪೆ ರ್‍ಯಾಂಕಿಂಗ್ ಅನ್ನು ಪಡೆದುಕೊಂಡಿದೆ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಭಾರತದಲ್ಲಿ ಸದ್ಯ ಮಾರಾಟವಾಗುತ್ತಿರುವ 20ಕ್ಕೂ ಹೆಚ್ಚು ಕಾರುಗಳಲ್ಲಿ ಕನಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳಿಲ್ಲದಿರುವುದು ವಾಹನ ಸವಾರರಿಗೆ ಮಾರಕವಾಗಿ ಪರಿಣಮಿಸಿದ್ದು, ಅಪಘಾತದ ವೇಳೆ ಸುರಕ್ಷಾ ಸಾಧನಗಳು ಇಲ್ಲದಿರುವುದರಿಂದ ಸಾವುಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಎನ್ನುವುದು ಕಟು ಸತ್ಯ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಅಷ್ಟೆ ಅಲ್ಲದೇ, ದೇಶಿಯ ಸಂಸ್ಥೆಗಳ ವಾಹನ ಉತ್ಪಾದಕರ ಕಾರುಗಳಲ್ಲಿ ನೆಕ್ಸಾನ್ ಕ್ರ್ಯಾಶ್ ಟೆಸ್ಟಿಂಗ್‍ನಲ್ಲಿ ಸಂಪೂರ್ಣ ಅಂಕವನ್ನು ಪಡೆದ ಕಾರೆಂಬ ಹೆಗ್ಗಳಿಕೆ ಪಾತ್ರವಾಗಿದ್ದು, ಈ ಕುರಿತಾಗಿ ಮಹೀಂದ್ರಾ & ಮಹಿಂದ್ರಾ ಸಂಸ್ಥೆಯ ಅಧ್ಯಕ್ಷರಾದ ಆನಂದ್ ಮಹಿಂದ್ರಾರವರು ಟಾಟಾ ಮೋಟಾರ್ಸ್ ಅನ್ನು ಅಭಿನಂದಿಸಿದ್ದಾರೆ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಆನಂದ್ ಮಹೀಂದ್ರಾರವರು ಟಾಟಾ ಮೋಟಾರ್ಸ್ ಅನ್ನು ಅಭಿನಂದಿಸುತ್ತಾ ಮಾಡಿದ ಟ್ವೀಟ್‍ನಲ್ಲಿ ಟಾಟಾ ಮೋಟಾರ್ಸ್ ಸಂಸ್ಥೆಯು ಕ್ರ್ಯಾಶ್ ಟೆಸ್ಟಿಂಗ್‍ನಲ್ಲಿ ನೆಕ್ಸಾನ್ ಕಾರು ಗರಿಷ್ಠ ಮಟ್ಟದ ಐದು ಅಂಕಗಳನ್ನು ಪಡೆದ ಕಾರಣಕ್ಕೆ ಅಭಿನಂದಿಸಿದ್ದು, ಮುಂದಿನ ದಿನಗಳಲ್ಲಿ ಮಹೀಂದ್ರಾ ಸಂಸ್ಥೆಯು ಕೂಡಾ ಪ್ರಯಾಣಿಕರಿಗೆ ಸುರಕ್ಷೆತಯನ್ನು ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಈ ಮೂಲಕ ದೇಶಿಯ ವಾಹನ ತಯಾರಕ ಸಂಸ್ಥೆಗಳು ತಮ್ಮ ಗ್ರಾಹಕರ ಸುರಕ್ಷೆಯ ಸಲುವಾಗಿ ತಮ್ಮ ಉತ್ಪನ್ನಗಳಲ್ಲಿ ಹೆಚ್ಚಿನ ಸುರಕ್ಷತಾ ಉಪಕರಣಗಳನ್ನು ಅಳವಡಿಸುತ್ತಿರುವುದು ಸಂತೋಷದ ವಿಚಾರವಾಗಿದ್ದು, ಇನ್ನು ಮಾರುತಿ ಸುಜುಕಿ ಸಂಸ್ಥೆಯು ಕೂಡಾ ತಮ್ಮ ಕಾರುಗಳಲ್ಲಿ ಹೆಚ್ಚಿನ ಸುರಕ್ಷಾ ಉಪಕರಣಗಳನ್ನು ನೀಡಬೇಕಾಗಿ ಕೆಲವರು ಆಗ್ರಹಿಸಿದ್ದಾರೆ.

MOST READ: ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ಆಟೋ ಚಾಲಕರು ಗರಂ - ಆರ್‍‍ಟಿಒ ಹೇಳಿದ್ದೇನು.?

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

2017ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಿದ್ದ ಟಾಟಾ ಜನಪ್ರಿಯ ನೆಕ್ಸಾನ್ ಎಸ್‌ಯುವಿ ಕಾರುಗಳು ಸದ್ಯ ಮಾರಾಟದಲ್ಲಿ ಹೊಸ ದಾಖಲೆ ಸೃಷ್ಠಿಸುತ್ತಿದ್ದು, ಇದರೊಂದಿಗೆ ಸುರಕ್ಷತೆಯಲ್ಲೂ ಹೊಸ ಭರವಸೆ ಮೂಡಿಸುವ ಮೂಲಕ ಪ್ರತಿಷ್ಠಿತ ಗ್ಲೋಬಲ್ ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ತನ್ನದಾಗಿಸಿಕೊಂಡಿದೆ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಹೊಸ ಕಾರುಗಳ ಸುರಕ್ಷಾ ವಿಚಾರಕ್ಕೆ ಸಂಬಂಧಿಸಿದಂತೆ ಗ್ಲೋಬಲ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಮ್ (ಎನ್‌ಸಿಎಪಿ) ಏಜೆನ್ಸಿಯು ನಡೆಸುವ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಖರೀದಿಗೆ ಅತ್ಯುತ್ತಮ ಎನಿಸಿರುವ ಟಾಟಾ ನೆಕ್ಸಾನ್ ಎಸ್‌ಯುವಿ ಕಾರುಗಳು ಪೂರ್ಣ ಪ್ರಮಾಣದ 5 ಸ್ಟಾರ್ ರೇಟಿಂಗ್ ತನ್ನದಾಗಿಸಿಕೊಂಡಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಸದ್ಯ ಹೊಸ ಮೈಲಿಗಲ್ಲಿಗೆ ಕಾರಣವಾಗಿದೆ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಇದು ಭಾರತೀಯ ಆಟೋ ಉತ್ಪಾದನಾ ಸಂಸ್ಥೆಯೊಂದು ನಿರ್ಮಾಣ ಮಾಡಿದ ಕಾರೊಂದು 5 ಸ್ಟಾರ್ ರೇಟಿಂಗ್ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಐಷಾರಾಮಿ ಕಾರುಗಳನ್ನು ಹೊರತುಪಡಿಸಿ ಮಧ್ಯಮ ಗಾತ್ರದ ಕಾರುಗಳಲ್ಲಿ ಪೂರ್ಣ ಪ್ರಮಾಣದ ಸುರಕ್ಷಾ ರೇಟಿಂಗ್ ಬಂದಿದ್ದು ನೆಕ್ಸಾನ್ ಕಾರಿಗೆ ಮಾತ್ರ ಎನ್ನುವುದು ಬಹುಮುಖ್ಯ ವಿಚಾರ.

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಏನಿದು ಕ್ರ್ಯಾಶ್ ಟೆಸ್ಟಿಂಗ್?

ಹೊಸ ಕಾರು ಮಾದರಿಗಳ ಸುರಕ್ಷತೆ ಕುರಿತಂತೆ ಪರೀಕ್ಷೆ ನಡೆಸುವ ಗ್ಲೋಬಲ್ ಎನ್‌ಸಿಎಪಿ ಮತ್ತು ಏಷಿಯಾ ಎನ್‌ಸಿಎಪಿ ಹಾಗೂ ಲ್ಯಾಟಿನ್ ಎನ್‌ಸಿಎಪಿ ಸಂಸ್ಥೆಗಳು ಹೊಸ ಕಾರುಗಳಲ್ಲಿನ ಸುರಕ್ಷಾ ವೈಶಿಷ್ಟ್ಯತೆಗಳಿಗೆ ರೇಟಿಂಗ್ ನೀಡುತ್ತವೆ.

MOST READ: ತುಕ್ಕು ಹಿಡಿದಿದ್ದ ಅಂಬಾಸಿಡರ್ ಕಾರು ಹೇಗೆ ಐಷಾರಾಮಿ ಕಾರಾಗಿ ಪರಿವರ್ತನೆಯಾಗಿದೆ ನೀವೆ ನೋಡಿ...

ಸೇಫ್ಟಿ ಪರವಾಗಿ 5 ಸ್ಟಾರ್ ರೇಟಿಂಗ್ ಹೊಂದಿರುವ ವಾಹನಗಳನ್ನೆ ನೀಡುತ್ತೇವೆ - ಟಾಟಾ ಮೋಟಾರ್ಸ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ಪಡೆದರೆ ಅದು ಹೆಚ್ಚು ಸುರಕ್ಷಿತ ಕಾರು ಎಂದರ್ಥ. ಜೊತೆಗೆ 4, 3, 2, 1, 0 ಸ್ಟಾರ್ ರೇಟಿಂಗ್ ಬಂದಲ್ಲಿ ಅನುಕ್ರಮವಾಗಿ ಉತ್ತಮ, ಖರೀದಿಗೆ ಯೋಗ್ಯ, ಸಾಧರಣ, ಅಸುರಕ್ಷಿತ ಕಾರು ಎಂದು ಕರೆಯಲಾಗುತ್ತದೆ.

Source: ETAuto

Most Read Articles

Kannada
English summary
Tata Motors to build 5-star rating cars as per Global NCAP standards. Read In Kannada
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X