ಶೀಘ್ರದಲ್ಲೇ 300 ಫಾಸ್ಟ್ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ಟಿಯಾಗೋ ಎಲೆಕ್ಟ್ರಿಕ್ ಸೆಡಾನ್ ಕಾರು ಬಿಡುಗಡೆಯ ನಂತರ ಇದೀಗ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೆ ಸಿದ್ದವಾಗುತ್ತಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೆ ಹೆಚ್ಚಿನ ಗಮನಹರಿಸಿದ್ದು, 2020ರ ಮಾರ್ಚ್ ಹೊತ್ತಿಗೆ ದೇಶದ ವಿವಿಧ ನಗರಗಳಲ್ಲಿ ಬರೋಬ್ಬರಿ 300 ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡುವುದಾಗಿ ಹೇಳಿಕೊಂಡಿದೆ.

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ದೇಶಾದ್ಯಂತ ಸದ್ಯ ಎಲೆಕ್ಟ್ರಿಕ್ ವಾಹನ ಮಾರಾಟವು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದರೂ ಸಹ ಚಾರ್ಜಿಂಗ್ ಸ್ಟೆಷನ್‌ಗಳ ಕೊರತೆಯಿಂದಾಗಿ ಬಹುತೇಕ ಎಲೆಕ್ಟ್ರಿಕ್ ವಾಹನ ಖರೀದಿದಾರರು ಹಿಂದೇಟು ಹಾಕುತ್ತಿದ್ದಾರೆ. ಈ ವಿಚಾರವಾಗಿ ಮಹತ್ವದ ನಿರ್ಣಯ ಕೈಗೊಂಡಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ನೆಕ್ಸಾನ್ ಎಲೆಕ್ಟ್ರಿಕ್ ಬಿಡುಗಡೆ ಮುನ್ನ ದೇಶದ ಪ್ರಮುಖ ನಗರಗಳಲ್ಲಿ 300ಕ್ಕೂ ಹೆಚ್ಚು ಫಾಸ್ಟ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಿದ ನಂತರವೇ ಹೊಸ ನೆಕ್ಸಾನ್ ಇವಿ ಕಾರು ಮಾದರಿಯನ್ನು ಬಿಡುಗಡೆಗೊಳಿಸಲು ಯೋಜನೆ ರೂಪಿಸಿದೆ.

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ಪ್ರಸ್ತುತ ಮಾರುಕಟ್ಟೆಯಲ್ಲಿ ಹಲವಾರು ಎಲೆಕ್ಟ್ರಿಕ್ ವಾಹನಗಳು ಖರೀದಿಗೆ ಲಭ್ಯವಿದ್ದರೂ ಸಹ ಅವಶ್ಯಕತೆಗೆ ಅನುಗುಣವಾಗಿ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಇವಿ ವಾಹನ ಮಾರಾಟದಲ್ಲಿ ತೀವ್ರಗತಿಯ ಬೆಳವಣಿಗೆ ಸಾಧಿಸಲು ಸಾಧ್ಯವಾಗುತ್ತಿಲ್ಲ.

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಮೇಲಿನ ಖರೀದಿಗೆ ಮಾತ್ರವಲ್ಲದೇ ಚಾರ್ಜಿಂಗ್ ಸ್ಟೆಷನ್‌ಗಳ ನಿರ್ಮಾಣದ ಮೇಲೂ ಆಕರ್ಷಕ ಸಬ್ಸಡಿ ನೀಡುತ್ತಿದ್ದು, ಇದೀಗ ಟಾಟಾ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಸಂಸ್ಥೆಗಳು ಫೇಮ್-2 ಯೋಜನೆ ಅಡಿ ಚಾರ್ಜಿಂಗ್ ಸ್ಟೆಷನ್ ನಿರ್ಮಾಣಕ್ಕೆ ಮುಂದಾಗಿವೆ.

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ಇನ್ನು ಟಾಟಾ ಸಂಸ್ಥೆಯು ಟಿಗೋರ್ ಎಲೆಕ್ಟ್ರಿಕ್ ಸೆಡಾನ್ ಕಾರು ಮಾರಾಟದಲ್ಲಿ ಸದ್ಯ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಸರ್ಕಾರಿ ಅಧಿಕಾರಿಗಳಿಗೆ ಮಾತ್ರವಲ್ಲದೆ ಖಾಸಗಿ ಕಾರು ಬಳಕೆದಾರರಿಗೂ ಹೊಸ ಕಾರನ್ನು ಮಾರಾಟ ಮಾಡುತ್ತಿದೆ. ಆದರೆ ಸಮರ್ಪಕವಾದ ಚಾರ್ಜಿಂಗ್ ಸ್ಟೆಷನ್‌ಗಳು ಇಲ್ಲದಿರುವುದು ಟಿಗೋರ್ ಎಲೆಕ್ಟ್ರಿಕ್ ಕಾರು ಖರೀದಿಗೆ ಖಾಸಗಿ ಕಾರು ಬಳಕೆದಾದರು ಹಿಂದೇಟು ಹಾಕುತ್ತಿದ್ದು, ಮಾರ್ಗ ಮಧ್ಯದಲ್ಲಿ ಚಾರ್ಜ್ ಖಾಲಿ ಆದಲ್ಲಿ ತೊಂದರೆಗೆ ಸಿಲುಕುವ ಪರಿಸ್ಥಿತಿ ಎದುರಾಗುತ್ತಿದೆ.

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ಈ ಹಿನ್ನಲೆಯಲ್ಲಿ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆಗೂ ಮುನ್ನ ಅಗತ್ಯ ಪ್ರಮಾಣದ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಿದ ನಂತರವೇ ಹೊಸ ಕಾರು ಬಿಡುಗಡೆಗೆ ಮುಂದಾಗಿದ್ದು, ಇದು ಎಲೆಕ್ಟ್ರಿಕ್ ಕಾರು ಖರೀದಿದಾರರನ್ನು ಆಕರ್ಷಿಸುವುದರಲ್ಲಿ ಎರಡು ಮಾತಿಲ್ಲ.

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ನೆಕ್ಸಾನ್ ಎಲೆಕ್ಟ್ರಿಕ್ ಕಾರು ಸದ್ಯ ಅನಾವರಣಗೊಂಡಿದ್ದು, ಹೊಸ ಕಾರು ಖರೀದಿಗೆ ಬುಕ್ಕಿಂಗ್ ಕೂಡಾ ಆರಂಭವಾಗಿದೆ. 2020ರ ಫೆಬ್ರುವರಿ 5ರಿಂದ ಆರಂಭವಾಗಲಿರುವ ದೆಹಲಿ ಆಟೋ ಮೇಳದಲ್ಲಿ ಭಾಗಿ ನಂತರ ಅಧಿಕೃತವಾಗಿ ಮಾರಾಟಕ್ಕೆ ಲಭ್ಯವಾಗಲಿರುವ ಹೊಸ ಕಾರು ಅತ್ಯುತ್ತಮ ತಂತ್ರಜ್ಞಾನ ಪ್ರೇರಣೆಯೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

MOST READ: ಅರ್ಜಿ ಸಲ್ಲಿಸಿದ ದಿನವೇ ಸಿಗಲಿದೆ ಡ್ರೈವಿಂಗ್ ಲೈಸೆನ್ಸ್ ಟೆಸ್ಟ್..!

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ಹೊಸ ತಂತ್ರಜ್ಞಾನ ಪ್ರೇರಿತ ಜಿಪ್‌ಟ್ರಾನ್ ಪವರ್‌ಟ್ರೈನ್ ಬಳಕೆ ಮಾಡಲಾಗಿರುವ ನೆಕ್ಸಾನ್ ಕಾರು ಅತ್ಯುತ್ತಮ ಬ್ಯಾಟರಿ ಆಯ್ಕೆ ಪಡೆದುಕೊಂಡಿದ್ದು, ಉತ್ತಮ ಪರ್ಫಾಮೆನ್ಸ್ ಜೊತೆಗೆ ಮೈಲೇಜ್ ವಿಚಾರದಲ್ಲೂ ಗ್ರಾಹಕರನ್ನು ಸೆಳೆಯಲಿದೆ.

MOST READ: ವಾಹನ ಡೀಲರ್‍‍ಗಳ ಟ್ರೇಡ್ ಸರ್ಟಿಫಿಕೇಟ್ ಅಮಾನತುಗೊಳಿಸಿದ ಸಾರಿಗೆ ಇಲಾಖೆ..!

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿ 30.2 ಕಿ.ವ್ಯಾಟ್ ಲೀಥಿಯಂ ಐಯಾನ್ ಬ್ಯಾಟರಿ ಜೊತೆಗೆ ಹಲವಾರು ಪ್ರೀಮಿಂ ಫೀಚರ್ಸ್‌ಗಳನ್ನು ಜೋಡಣೆ ಮಾಡಲಾಗಿದ್ದು, ಒಂದು ಬಾರಿ ಚಾರ್ಜ್‌ ಮಾಡಿದರೆ ಗರಿಷ್ಠ 300 ಕಿ.ಮೀವರೆಗೂ ಚಲಿಸುತ್ತದೆ.

MOST READ: ಗಂಡನಿಗೆ ಸರ್‍‍ಪ್ರೈಸ್ ಗಿಫ್ಟ್ ನೀಡಿದ ಹೆಂಡತಿ..!

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ಹಾಗೆಯೇ ಜಿಪ್‌ಟ್ರಾನ್ ಪವರ್‌ಟ್ರೈನ್ ಮೇಲೆ 8 ವರ್ಷಗಳ ವಾರಂಟಿ ಘೋಷಿಸಲಾಗಿದ್ದು, ಹೊಸ ಕಾರಿನಲ್ಲಿ ನ್ಯೂಟ್ರಲ್ ಇನ್, ರಿವರ್ಸ್, ಸ್ಪೋಟ್ಸ್ ಮತ್ತು ಡ್ರೈವ್ ಎನ್ನುವ ನಾಲ್ಕು ಚಾಲನಾ ಮೋಡ್‌ಗಳನ್ನು ನೀಡಿರುವುದು ಗ್ರಾಹಕರ ಆದ್ಯತೆ ಮೇರೆಗೆ ಕಾರು ಚಾಲನೆಯು ಮತ್ತಷ್ಟು ಸುಲಭವಾಗಲಿದೆ.

ಶೀಘ್ರದಲ್ಲೇ 300 ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೆಷನ್‌ಗಳಿಗೆ ಚಾಲನೆ ನೀಡಲಿದೆ ಟಾಟಾ ಮೋಟಾರ್ಸ್

ಈ ಮೂಲಕ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗಲಿರುವ ಮಹೀಂದ್ರಾ ಇಎಕ್ಸ್‌ಯುವಿ300 ಮತ್ತು ಎಂಜಿ ಜೆಡ್‌ಎಸ್ ಎಲೆಕ್ಟ್ರಿಕ್ ಎಸ್‌ಯುವಿಗಳಿಗೆ ಪೈಪೋಟಿ ನೀಡಲಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರಿನ ಬೆಲೆಯು ರೂ.15 ಲಕ್ಷದಿಂದ ರೂ.17 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

Article Published On: Monday, December 23, 2019, 13:24 [IST]
English summary
Tata Motors has revealed that the company is setting up 300 fast charging stations across the country.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+