ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಅಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿ ಹ್ಯಾರಿಯರ್ ಉತ್ಪಾದನೆ ಮಾಡುವ ಮೂಲಕ ಗ್ರಾಹಕರ ಆಕರ್ಷಣೆಗೆ ಕಾರಣವಾಗಿರುವ ಟಾಟಾ ಸಂಸ್ಥೆಯು ಭವಿಷ್ಯದ ಕಾರು ಮಾದರಿಗಳ ಮೇಲೆ ಭಾರೀ ನಿರೀಕ್ಷೆಯಿಟ್ಟುಕೊಂಡಿದ್ದು, ಗ್ರಾಹಕರ ಸೆಳೆಯುವ ಉದ್ದೇಶದೊಂದಿಗೆ ದೇಶದ ಪ್ರಮುಖ ನಗರಗಳಲ್ಲಿ 100ಕ್ಕೂ ಹೆಚ್ಚು ಹೊಸ ಕಾರು ಮಾರಾಟ ಮಳಿಗೆಗಳನ್ನು ತೆರೆಯಲು ಸಿದ್ದತೆ ನಡೆಸಿದೆ.

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಟಾಟಾ ಸಂಸ್ಥೆಯು ಪ್ರಸ್ತುತ ಮಾರುಕಟ್ಟೆಯಲ್ಲಿ 12 ವಿವಿಧ ಮಾದರಿಯ ಪ್ರಯಾಣಿಕ ಕಾರುಗಳ ಜೊತೆ ವಾಣಿಜ್ಯ ವಾಹನಗಳನ್ನು ಮಾರಾಟ ಮಾಡುತ್ತಿದ್ದು, ದೇಶಾದ್ಯಂತ 947 ಅಧಿಕೃತ ಮಾರಾಟ ಮಳಿಗೆಗಳನ್ನು ಹೊಂದಿದೆ. ಇದೀಗ ಹೊಸ ಕಾರು ಉತ್ಪನ್ನಗಳು ಮಾರುಕಟ್ಟೆಗೆ ಬರುತ್ತಿರುವುದರಿಂದ ಗ್ರಾಹಕರ ಬೇಡಿಕೆಯೆಂತೆ 2ನೇ ಮತ್ತು 3ನೇ ಹಂತದ ನಗರಗಳಲ್ಲಿನ ಕಾರು ಬೇಡಿಕೆಯ ಮೇಲೂ ಹೆಚ್ಚಿನ ಗಮನಹರಿಸುತ್ತಿರುವ ಟಾಟಾ ಸಂಸ್ಥೆಯು 100 ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ನೀಡುತ್ತಿದೆ.

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಮುಂಬರುವ ಮಾರ್ಚ್ ಕೊನೆಯಲ್ಲಿ ಹೊಸ ಮಾರಾಟ ಮಳಿಗೆಗಳಿಗೆ ಚಾಲನೆ ದೊರೆಯಲಿದ್ದು, ಕಾರು ಖರೀದಿ ಪ್ರಕ್ರಿಯೆಯು ಮತ್ತಷ್ಟು ಸುಲಭವಾಗುವುದಲ್ಲದೇ ಗ್ರಾಹಕರಿಗೆ ಬಿಡಿಭಾಗಗಳ ಸೇವೆಗಳಿಗೆ ಇದು ನೆರವಾಗಲಿದೆ.

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಇನ್ನು ಟಾಟಾ ಸಂಸ್ಥೆಯು ಸದ್ಯ ಆಲ್‌ಟ್ರೊಜ್, ನೆಕ್ಸಾನ್ ಎಲೆಕ್ಟ್ರಿಕ್, ಆಲ್‌ಟ್ರೊಜ್ ಎಲೆಕ್ಟ್ರಿಕ್ ಮತ್ತು ಗ್ರಾವಿಟಾಸ್ ಎಸ್‌ಯುವಿ ಕಾರುಗಳ ಬಿಡುಗಡೆಗೆ ಸಿದ್ದವಾಗುತ್ತಿದ್ದು, ಇದರ ಜೊತೆಗೆ ಫೇಸ್‌ಲಿಫ್ಟ್ ಮಾದರಿಗಳಾದ ನೆಕ್ಸಾನ್, ಹ್ಯಾರಿಯರ್, ಹೆಕ್ಸಾ, ಟಿಗೋರ್ ಮತ್ತು ಟಿಯಾಗೋ ಕಾರುಗಳನ್ನು ಸಹ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸುತ್ತಿದೆ.

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

2020ರ ಜನವರಿಯಿಂದ ಹೊಸ ಕಾರು ಮಾದರಿಗಳ ಜೊತೆಗೆ 2020ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿರುವ ಬಿಎಸ್-6 ನಿಯಮದಂತೆ ಹೊಸ ಮಾದರಿಯ ವಾಹನಗಳ ಮಾರಾಟವು ಆರಂಭಿಸಲಿದ್ದು, ಹೊಸ ಉತ್ಪನ್ನಗಳಿಗೆ ಅನುಗುವಾಗಿ ಕಾರು ಮಾರಾಟ ಮಳಿಗೆಗಳನ್ನು ಸಹ ಹೆಚ್ಚಿಸುತ್ತಿದೆ. ಇದು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಮತ್ತು ಮಹೀಂದ್ರಾ ಸಂಸ್ಥೆಗಳಿಗೆ ಪೈಪೋಟಿಯಾಗಲಿದ್ದು, ಆಲ್‌ಟ್ರೊಜ್ ಮತ್ತು ನೆಕ್ಸಾನ್ ಎಲೆಕ್ಟ್ರಿಕ್ ಕಾರು ಮಾದರಿಯ ಮೇಲೆ ಭಾರೀ ನೀರಿಕ್ಷೆಯಿಟ್ಟುಕೊಳ್ಳಲಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಆಲ್ಬಾಟ್ರೊಸ್ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಆಲ್‌ಟ್ರೊಜ್ ಕಾರು ಆವೃತ್ತಿಯನ್ನು ನಿರ್ಮಾಣ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಮಾರುಕಟ್ಟೆಯಲ್ಲಿ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಿ ಹೊಸ ಕಾರನ್ನು ಅಭಿವೃದ್ದಿಗೊಳಿಸಿದೆ.

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

2020ರ ಜನವರಿ ಕೊನೆಯ ವಾರದಲ್ಲಿ ಬಿಡುಗಡೆಯಾಗಲಿರುವ ಹೊಸ ಆಲ್‌ಟ್ರೊಜಿ ಕಾರು ಖರೀದಿಗೆ ಇಂದಿನಿಂದಲೇ ರೂ.21 ಸಾವಿರ ಮುಂಗಡ ಪಾವತಿಸಿ ಅಧಿಕೃತವಾಗಿ ಬುಕ್ಕಿಂಗ್ ದಾಖಲಿಸಬಹುದಾಗಿದ್ದು, ಸುಧಾರಿತ ತಂತ್ರಜ್ಞಾನ ಪ್ರೇರಿತ ಆಲ್ಫಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಹೊಸ ಕಾರನ್ನು ಸಿದ್ದಗೊಳಿಸಿದೆ.

MOST READ: ಪಾರ್ಕಿಂಗ್ ವೇಳೆ ಸಿಬ್ಬಂದಿ ಎಡವಟ್ಟು- ಮೊದಲ ಮಹಡಿಯಿಂದ ಜಿಗಿದ ಕಿಯಾ ಸೆಲ್ಟೊಸ್

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಹೊಸ ಕಾರಿನಲ್ಲಿ 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಎರಡು ಕಾರು ಮಾದರಿಗಳಲ್ಲೂ ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದೆ.

MOST READ: ಕಾರು ಖರೀದಿದಾರರ ನೆಚ್ಚಿನ ಬಣ್ಣ ಯಾವುದು ಗೊತ್ತಾ?

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಕಾರಿನ ಬೆಲೆಯು ರೂ.8 ಲಕ್ಷ ಬೆಲೆ ಅಂದಾಜಿಸಲಾಗಿದ್ದು, ಎಕ್ಸ್‌ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ವೆರಿಯೆಂಟ್‌‌ಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಹಾಗೆಯೇ ನೆಕ್ಸಾನ್ ಎಲೆಕ್ಟ್ರಿಕ್ ಕೂಡಾ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಲಿದ್ದು, ಹೊಸ ಕಾರು ಪ್ರತಿ ಚಾರ್ಜ್‌ಗೆ 300ಕಿ.ಮೀ ಮೈಲೇಜ್ ಹಿಂದಿರುಗಿಸುವ ಸಾಮರ್ಥ್ಯ ಹೊಂದಿದೆ. ಜೊತೆಗೆ ಹ್ಯಾರಿಯರ್ ಕಾರಿನಲ್ಲಿರುವ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳು ನೆಕ್ಸಾನ್ ಎಲೆಕ್ಟ್ರಿಕ್ ಕಾರಿನಲ್ಲಿವೆ ಎನ್ನಲಾಗಿದೆ.

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಇದೇ ತಿಂಗಳು 19ರಂದು ಅನಾವರಣಗೊಳ್ಳಲಿರುವ ಹೊಸ ನೆಕ್ಸಾನ್ ಎಲೆಕ್ಟ್ರಿಕ್ ಕಾರು 2020ರ ಆರಂಭದಲ್ಲಿ ಅಧಿಕೃತವಾಗಿ ಖರೀದಿಗೆ ಲಭ್ಯವಿರಲಿದ್ದು, ನೆಕ್ಸಾನ್ ಎಲೆಕ್ಟ್ರಿಕ್ ಜಿಪ್‌ಟ್ರಾನ್ ತಂತ್ರಜ್ಞಾನ ಪ್ರೇರಣೆಯೊಂದಿಗೆ ಅತ್ಯುತ್ತಮ ಎಂಜಿನ್ ದಕ್ಷತೆ ಹೊಂದಿದೆ.

ಎಲೆಕ್ಟ್ರಿಕ್ ಕಾರು ಮಾರಾಟಕ್ಕೆ ಭರ್ಜರಿ ಸಿದ್ದತೆ- 100 ಹೊಸ ಮಾರಾಟ ಮಳಿಗೆಗಳನ್ನು ತೆರೆಯಲಿದೆ ಟಾಟಾ

ಪ್ರಸ್ತುತ ಮಾರುಕಟ್ಟೆಯಲ್ಲಿ ಇತರೆ ಎಲೆಕ್ಟ್ರಿಕ್ ಕಾರುಗಳಿಂತಲೂ ಅತ್ಯುತ್ತಮ ತಂತ್ರಜ್ಞಾನ ಹೊಂದಿರುವ ನೆಕ್ಸಾನ್ ಇವಿ ಕಾರು ಎಕ್ಸ್‌ಶೋರೂಂ ಪ್ರಕಾರ ರೂ.15 ಲಕ್ಷದಿಂದ ರೂ.17 ಲಕ್ಷ ಬೆಲೆ ಅಂತರ ಮಾರುಕಟ್ಟೆಗೆ ಬರಲಿದೆ ಎನ್ನಲಾಗಿದ್ದು, ಟಾಟಾ ಸಂಸ್ಥೆಯು ತನ್ನ ಎಲೆಕ್ಟ್ರಿಕ್ ಕಾರುಗಳಲ್ಲಿ ಬಳಕೆ ಮಾಡಲು ಉದ್ದೇಶಿಸಿರುವ ಜಿಪ್‌ಟ್ರಾನ್ ತಂತ್ರಜ್ಞಾನವು ಸಾಕಷ್ಟು ಚರ್ಚೆಗೆ ಕಾರಣವಾಗಿದೆ

Most Read Articles

Kannada
English summary
Tata Motors will open 100 new dealerships in March 2020. Read in Kannada.
Story first published: Saturday, December 14, 2019, 18:55 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X